ಲೇಖಕ: admin

ನಾಪೋಕ್ಲು  ಆ.3 :  ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಕೊಳಕೇರಿ ದರ್ಗಾ ಷರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ವಲಿಯುಲ್ಲಾಹಿರವರ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2024 ಫೆ.16ರಿಂದ 20 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕೊಳಕೇರಿ ಸುನ್ನಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ವರದಿ :ಝಕರಿಯ ನಾಪೋಕ್ಲು   

Read More

ಸೋಮವಾರಪೇಟೆ ಆ.3 : ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲೂ ಮುಂದೆ ಇರಬೇಕು ಎಂದು ಮಡಿಕೇರಿ ಶಾಸಕ ಡಾ.ಮಂತರ್‍ಗೌಡ ಹೇಳಿದರು. ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ನಡೆದ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತೀ ಬುದ್ದಿವಂತರು ಮಾತ್ರ ಉನ್ನತ ಹುದ್ದೆಯನ್ನು ಪಡೆಯಲು ಸಾಧ್ಯ ಎಂಬ ಭ್ರಮೆ ಯಾರಿಗೂ ಬೇಡ, ನಾನು ಕೂಡ ಎವರೆಜ್ ಸ್ಟೂಡೆಂಟ್ ಆಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗ ಮಾಡಿದ್ದೇನೆ. ಆದ್ದರಿಂದ ಯಾರಿಗೂ ಕೀಳರಿಮೆ ಬೇಡ, ನಿರಂತರ ಕಲಿಕೆಯಿಂದ ಸಾಧನೆ ಮಾಡಬಹುದು ಎಂದು ಹೇಳಿದರು. ಗ್ರಾಮೀಣ ಮಕ್ಕಳಿಗೂ ಉನ್ನತ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ. ಆರ್ಥಿಕ ಸಮಸ್ಯೆಯಿಂದ ಯಾವ ಮಕ್ಕಳ ವಿದ್ಯಾಭ್ಯಾಸ ನಿಲ್ಲಬಾರದು, ಇಂತಹ ಸಂಕಷ್ಟದ ಸಮಯದಲ್ಲಿ ಬಡಕುಟುಂಬದ ಮಕ್ಕಳಿಗೆ ಆರ್ಥಿಕ ಸಹಾಯ ಮಾಡುವುದು ನಮ್ಮೆಲ್ಲರ ಕರ್ತವ್ಯ…

Read More

ಮಡಿಕೇರಿ ಆ.3 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ  ಮಡಿಕೇರಿ ಆಕಾಶವಾಣಿಯಿಂದ ನಿವೃತ್ತಿ ಹೊಂದಿದ ಕೂಪದಿರ ಶಾರದಾ ನಂಜಪ್ಪ ಅವರನ್ನು ಆಕಾಶವಾಣಿಯಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಗೌರವ ಕಾರ್ಯದರ್ಶಿ ರೇವತಿ ರಮೇಶ್, ನಿರ್ದೇಶಕರುಗಳಾದ ವಿ.ಟಿ ಮಂಜುನಾಥ್, ಶೋಭಾ ಸುಬ್ಬಯ್ಯ, ಶ್ವೇತಾ ರವೀಂದ್ರ, ಸದಸ್ಯರುಗಳಾದ ಚೊಕ್ಕಾಡಿ ಪ್ರೇಮಾ ರಾಘವಯ್ಯ, ಸುಂದರಿ ಮಾಚಯ್ಯ, ಕಸ್ತೂರಿ ಗೋವಿಂದಮಯ್ಯ ಉಪಸ್ಥಿತರಿಧ್ದರು. ಮಡಿಕೇರಿ ಎಫ್ಎಂ ರೇಡಿಯೋ ಸ್ಟೇಷನ್ ನಲ್ಲಿ ಕೂಪದಿರ ಶಾರದಾ ನಂಜಪ್ಪ ಕಳೆದ 30 ವಷ೯ಗಳಲ್ಲಿ ರೇಡಿಯೋ ಮೂಲಕ ಸಂಮೋಹನದ ರೀತಿಯಲ್ಲಿ ಕೊಡಗಿನ ಮನೆ ಮನಗಳನ್ನೂ ತಲುಪಿದ್ದಾರೆ. ಸಂಹವನ ಮಾಧ್ಯಮದ ದೊಡ್ಡ ಶಕ್ತಿಯಾಗಿ ಶಾರದಾ ತಮಗೆ ಅರಿವಿಲ್ಲದಂತೆಯೇ ಬೆಳೆದಿದ್ದಾರೆ. ನೊಂದ ಮನಸ್ಸುಗಳಿಗೆ ತಮ್ಮ ಮಧುರ ಸ್ವರದ ಮೂಲಕವೇ ಸಾಂತ್ವನ ಹೇಳಿದ್ದಾರೆ. ವಿಶಿಷ್ಟ ಶೈಲಿಯ ಮಾತುಗಳ ಮೂಲಕ ಎಂಥವರಲ್ಲಿಯೂ ಸಂಭ್ರಮ ಉಂಟಾಗುವಂತೆ ಮಾಡಿದ್ದಾರೆ, 30…

Read More

ಸುಂಟಿಕೊಪ್ಪ ಆ.3 :  ನಾಕೂರು ಶಿರಂಗಾಲ ಗ್ರಾ.ಪಂ ಯ 2 ಅವಧಿಯ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆ  ಗ್ರಾ.ಪಂ.ಸಭಾಂಗಣದಲ್ಲಿ  ನಡೆಯಿತು. 2ನೇ ಅವಧಿಗೆ ಅಧ್ಯಕ್ಷರ ಸ್ಥಾನವನ್ನು ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನವು ಬಿಸಿಎಂ(ಎ) ಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಜಗನ್ನಾಥ್ ಹಾಗೂ ಕೆ.ಎಂ.ಸುಭಾಫ್ ಸ್ಪರ್ಧಿಸಿದ್ದು, ಜಗನ್ನಾಥ್ 7 ಮತಗಳನ್ನು ಪಡೆದರೆ ಕೆ.ಎಂ.ಸುಭಾಷ್ 1 ಮತಗಳನ್ನಷ್ಟೇಗಳಿಸುವ ಮೂಲಕ ಪರಾಜಯಗೊಂಡರು. ಅಧ್ಯಕ್ಷರಾಗಿ ಹಾಲಿ ಗ್ರಾ.ಪಂ ಅಧ್ಯಕ್ಷ ಮಂದೋಡಿ ಜಗನ್ನಾಥ್ ಪುನರಾಯ್ಕೆಯಾದರು ಹಾಗೂ ಉಪಾಧ್ಯಕ್ಷ ರಾಗಿ ಸತೀಶ್ ಅವಿರೋಧವಾಗಿ ಆಯ್ಕೆಯಾದರು. ನಾಕೂರು ಶಿರಂಗಾಲ ಗ್ರಾ.ಪಂ ನಲ್ಲಿ 8 ಸದಸ್ಯರ ಬಲ ಹೊಂದಿದ್ದು, ಸದಸ್ಯರುಗಳಾದ ಜಗನ್ನಾಥ್, ಬಿ.ಜಿ.ರಮೇಶ್, ಕೊಳಂಬೆ ಸುಭಾಷ್, ಸತೀಶ, ಅರುಣ ಕುಮಾರಿ,ಪ್ರೇಮ,ಸೀತೆ ಹಾಗೂ ‌ರಾಧಮಣಿ ಚುನಾವಣೆಯಲ್ಲಿ ಭಾಗವಹಿಸಿದ್ದರು. ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾಗಿ ವರದರಾಜು ಕಾರ್ಯನಿರ್ವಹಿಸಿದ್ದರು. ನಾಕೂರು ಶಿರಂಗಾಲ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗೂಳಪ್ಪ ಕೂತಿನ್, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ನಾಪೋಕ್ಲು ಆ.2 : ಮರಂದೋಡ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ರಸ್ತೆಯಂಚಿಗೆ ಸರಿದು ಪಲ್ಟಿಯಾದ ಘಟನೆ ನಡೆದಿದೆ. ನಾಪೋಕ್ಲುವಿನಿಂದ ವಿರಾಜಪೇಟೆಗೆ ಸಿಲ್ವರ್ ಮರಗಳನ್ನು ಸಾಗಿಸುತ್ತಿದ್ದ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದು, ಸ್ಥಳೀಯರ ನೆರವಿನಿಂದ ಪಿಕಪ್ ನ್ನು ಮತ್ತೊಂದು ಪಿಕಪ್‍ನ ಸಹಕಾರದಿಂದ ಮೇಲಕ್ಕೆತ್ತಲಾಯಿತು. ಪಿಕಪ್ನಲ್ಲಿ ಚಾಲಕ ಸೇರಿದಂತೆ ಮೂರಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಚೋಯಮಾದಂಡ ಹರೀಶ್ ಪಿಕಪ್ ಒಳಗಿದ್ದವರನ್ನು ರಕ್ಷಿಸಿದ್ದಾರೆ. ಕಳೆದ ವಾರ ಇದೇ ಮರಂದೋಡ ಗ್ರಾಮದಲ್ಲಿ ಮಳೆಯಿಂದಾಗಿ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿತ್ತು. ಕಿರಿದಾದ ರಸ್ತೆಯಲ್ಲಿ ವಾಹನಗಳು ಸಂಚರಿಸುವಾಗ ಅಪಘಾತಕ್ಕೆ ಈಡಾಗುತ್ತಿವೆ.ಸುಗಮ ಸಂಚಾರಕ್ಕೆ ರಸ್ತೆಯನ್ನು ವಿಸ್ತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಆ.2 : ಕೊಡಗು ಜಿಲ್ಲಾ ಸರ್ವೋದಯ ಸಮಿತಿಯ ಸಭೆ ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆಯಿತು. ಗಾಂಧಿ ಸ್ಮಾರಕ ಭವನ ನಿರ್ಮಾಣ ಕಾರ್ಯದ ಕುರಿತು ಚರ್ಚಿಸಲಾಯಿತು. ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಟಿ.ಪಿ.ರಮೇಶ್ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಸರ್ವೋದಯ ಸಮಿತಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದ್ದು, ಜಿಲ್ಲೆಯಲ್ಲಿ ಗಾಂಧಿ ವಿಚಾರಧಾರೆಗಳ ಕುರಿತು ಬೆಳಕು ಚೆಲ್ಲುತ್ತಾ ಸಾಗಿರುವುದು ಶ್ಲಾಘನೀಯ ಎಂದರು. ಗಾಂಧಿ ಮೈದಾನದ ಗಾಂಧಿ ಸ್ಮಾರಕ ಭವನದ ಕುರಿತು ಸಭೆಗೆ ಮಾಹಿತಿ ನೀಡಿದ ಅವರು ಸ್ಮಾರಕ ಭವನ ನಿರ್ಮಾಣಕ್ಕೆ ಸಕಾಲದಲ್ಲಿ ಸ್ಪಂದಿಸಿದ ಸರ್ಕಾರ ಈಗಾಗಲೇ ರೂ.50 ಲಕ್ಷ ಬಿಡುಗಡೆ ಮಾಡಿದೆ. ಇದು ಸರ್ವೋದಯ ಸಮಿತಿಯ ನಿರಂತರ ಕಾರ್ಯ ಚಟುವಟಿಕೆಯ ಫಲ ಎಂದು ತಿಳಿಸಿದರು. ಸ್ಮಾರಕ ಭವನ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸುವ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಲಾಗಿದ್ದು, ಕಾಮಗಾರಿ ಶೀಘ್ರ ಆರಂಭಗೊಳ್ಳಲಿದೆ ಎಂದು ರಮೇಶ್ ಹೇಳಿದರು. ಸಭೆಯಲ್ಲಿ ಪ್ರಮುಖರಾದ ಕಾನೆಹಿತ್ಲು ಮೊಣ್ಣಪ್ಪ, ಕೆ.ಟಿ.ಬೇಬಿ ಮ್ಯಾಥ್ಯೂ, ಎಂ.ಎಂ.ಲಿಯಾಕತ್ ಆಲಿ,…

Read More

ಮಡಿಕೇರಿ ಆ.2 : ಸೌರಮಾನ ಕೊಡವ ಪಂಚಾಂಗದಂತೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ 28ನೇ ವರ್ಷದ “ಕಕ್ಕಡ ಪದ್‍ನೆಟ್” ನ್ನು ಅರ್ಥಪೂರ್ಣವಾಗಿ ಆಚರಿಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮುಖ ನಿರ್ಣಯಗಳನ್ನು ಮಂಡಿಸಲಾಯಿತು. ಕೊಡವ ಜನಾಂಗಕ್ಕೆ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಎಸ್‍ಟಿ ಟ್ಯಾಗ್ ಮತ್ತು ಕೋವಿ ಹಕ್ಕಿನ ಕುರಿತು ಕರ್ನಾಟಕ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಶಕ್ತಿಯ ರಿಟ್ ಅರ್ಜಿಯನ್ನು ಸಲ್ಲಿಸಿದ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರನ್ನು ಅಭಿನಂದಿಸಲು ಮತ್ತು ಸ್ವಾಮಿ ಅವರ ಜನ್ಮದಿನದಂದು ಕೊಡವ ಸಮೂಹವನ್ನು ಜಾಗೃತಿಗೊಳಿಸಲು ಸುದೀರ್ಘ ಪಾದಯಾತ್ರೆಯನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಸ್ವಾಮಿ ಅವರ ಜನ್ಮದಿನವಾದ ಸೆ.15 ರಂದು ಯೋಗಕ್ಷೇಮಕ್ಕಾಗಿ ತಲಕಾವೇರಿ ಹಾಗೂ ಪಾಡಿ ಶ್ರೀ ಇಗ್ಗತ್ತಪ್ಪ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ನಂತರ ಪಾದಯಾತ್ರೆ ಆರಂಭಗೊಳ್ಳಲಿದೆ. ರಾಜ್ಯದ ದಾಖಲೆಯಲ್ಲಿ ಜಾನಪದ “ಕೊಡವ” ನಾಮಕರಣದ ಪುನರುಜ್ಜೀವನಕ್ಕಾಗಿ ಸಿಎನ್‍ಸಿ ಹೆಮ್ಮೆ ವ್ಯಕ್ತಪಡಿಸಿತು. ಶಾಸ್ತ್ರೀಯ ಕೊಡವ…

Read More

ಮಡಿಕೇರಿ ಆ.2: 2022-23 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ಅನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ವತಿಯಿಂದ ನಡೆಸಲಾಗುವುದು. 2022-23 ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ಸಾಲುಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು ಅರ್ಹರಾಗಿದ್ದಾರೆ. ಫಲಿತಾಂಶ ತಿರಸ್ಕರಿಸಲು ಈ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ. ಪರೀಕ್ಷೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ https://kseab.karnataka.gov.in ಪ್ರಕಟಿಸಲಾಗಿದೆ. ಈ ಅವಕಾಶವನ್ನು ಅರ್ಹ ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

Read More

ಮಡಿಕೇರಿ ಆ.2 : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ 2023 ರ ಆಗಸ್ಟ್ 29 ರಿಂದ ಸೆಪ್ಟೆಂಬರ್, 02 ರವರೆಗೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳಿಗೆ ಆಡಿಯೋ ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರವು ಬೆಂಗಳೂರಿನ ಅಕಾಡೆಮಿ ಕಚೇರಿಯಲ್ಲಿ(ಯು.ಆರ್.ರಾವ್ ವಿಜ್ಞಾನ ಭವನ ತೋಟಗಾರಿಕಾ ವಿಜ್ಞಾನಗಳ ಕಾಲೇಜು ಮಹಾದ್ವಾರ, ಜಿಕೆವಿಕೆ ಆವರಣ, ದೊಡ್ಡಬೆಟ್ಟ ಹಳ್ಳಿ ಬಸ್ ನಿಲ್ದಾಣ, ವಿದ್ಯಾರಣ್ಯಪುರ, ಬೆಂಗಳೂರು-560097) ನಡೆಯಲಿದೆ. ಆಸಕ್ತರು ಗೂಗಲ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸುವುದು (https://forms.gle/2qH2JmtMfCBFq7zv5). ಹೆಚ್ಚಿನ ವಿವರಗಳನ್ನು ಅಕಾಡೆಮಿಯ ವೆಬ್‍ಸೈಟ್ (kstacademy.in) ನಲ್ಲಿ ಮತ್ತು ಅಕಾಡೆಮಿಯ ದೂ.ಸಂ.080-29721550 ಮೂಲಕ ಪಡೆಯಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್   ತಿಳಿಸಿದ್ದಾರೆ.

Read More

ಮಡಿಕೇರಿ ಆ.2 : ಇದೇ ಆಗಸ್ಟ್, 15 ರಂದು ಸಂಭ್ರಮ ಮತ್ತು ಸಡಗರದೊಂದಿಗೆ ಅರ್ಥಪೂರ್ಣವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಜಿಲ್ಲಾಧಿಕಾರಿ ವೆಂಕಟ್‍ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಳೆದ ಬಾರಿಯಂತೆ ನಗರದ ಕೋಟೆ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ನಿರ್ಧರಿಸಲಾಯಿತು. ಸ್ವಾಗತ, ಧ್ವಜಾರೋಹಣ, ವೇದಿಕೆ, ಕವಾಯತು, ಉಪಾಹಾರ, ಭಾಷಣ, ಬಹುಮಾನ ಹೀಗೆ ವಿವಿಧ ಉಪ ಸಮಿತಿಗಳು ಕಳೆದ ಬಾರಿಯಂತೆ ತಮ್ಮ ಕೆಲಸಗಳನ್ನು ಚಾಚುತಪ್ಪದೆ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದರು. ಸ್ವಾಗತ ಸಮಿತಿಯವರು ಶಿಷ್ಟಾಚಾರದಂತೆ ಆಹ್ವಾನ ಪತ್ರ ತಲುಪಿಸುವುದು ಮತ್ತಿತರ ಕಾರ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹೇಳಿದರು. ಧ್ವಜಾರೋಹಣ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವುದು, ವೇದಿಕೆ ಸಮಿತಿಯವರು ಕಳೆದ ಬಾರಿಯಂತೆ ವಾಟರ್ ಪ್ರೂಫ್ ಶಾಮಿಯಾನ ನಿರ್ಮಾಣ ಮಾಡುವುದು ಮತ್ತಿತರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು. ಕವಾಯತನ್ನು ನಿಗಧಿತ ಸಮಯಕ್ಕೆ ಸರಿಯಾಗಿ ಆಯೋಜಿಸುವುದು, ರಿಹರ್ಸಲ್ ಮಾಡಿಕೊಳ್ಳುವಂತೆ ಸೂಚಿಸಿದರು. ವಿದ್ಯಾರ್ಥಿಗಳಿಗೆ ಬೆಳಗಿನ ಉಪಹಾರವನ್ನು ಸಂಬಂಧಪಟ್ಟ ಸಮಿತಿಯವರು…

Read More