ಮಡಿಕೇರಿ ಆ.2 : ಬಡವರು, ಕಾರ್ಮಿಕರು ಹಾಗೂ ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಡಯಾಲಿಸಿಸ್ ಕೇಂದ್ರದ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕೆಂದು ಎಐಟಿಯುಸಿ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಡಯಾಲಿಸಿಸ್ ಕೇಂದ್ರದ ನೌಕರರು ಬುಧವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಆರಂಭಿಸಿರುವುದರಿಂದ ಕಾರ್ಮಿಕ ವರ್ಗವೇ ಹೆಚ್ಚಾಗಿರುವ ಕೊಡಗು ಜಿಲ್ಲೆಯ ಆಸ್ಪತ್ರೆಗಳಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಸ್ಥಗಿತಗೊಳಿಸಿ ಧರಣಿ ನಡೆಸಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ಕರೆ ನೀಡಿದೆ. ಕಳೆದ ಎರಡು ವರ್ಷಗಳಿಂದ ಸರಿಯಾಗಿ ವೇತನ ಪಾವತಿಯಾಗದೆ ಇರುವುದು ಹಾಗೂ ಕೆಲವು ಸೌಲಭ್ಯಗಳನ್ನು ನೀಡದೆ ಇರುವುದನ್ನು ಖಂಡಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರುಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ. ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜಿಲ್ಲಾಸ್ಪತ್ರೆ, ವಿರಾಜಪೇಟೆ ಮತ್ತು ಸೋಮವಾರಪೇಟೆ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವಿದ್ದು, ಮುಷ್ಕರದಿಂದ ರೋಗಿಗಳು ಪರದಾಡುವ ಪರಿಸ್ಥಿತಿ ಉದ್ಭವಿಸಿದೆ. ರಾಜ್ಯವ್ಯಾಪಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು,…
ಲೇಖಕ: admin
ಮಡಿಕೇರಿ ಆ.2 : ಆಟಿ ಅಥವಾ ಕಕ್ಕಡ ಆಚರಣೆಯ 18 ನೇ ದಿನ ಆಗಸ್ಟ್ 3. ಕಕ್ಕಡ ಆರಂಭವಾಗಿ 18 ದಿನ ತುಂಬುತ್ತಿದ್ದಂತೆ 18 ಔಷಧೀಯ ಗುಣಗಳನ್ನು ಹೊಂದಿರುವ ಮದ್ದು ಸೊಪ್ಪಿನ ಪಾಯಸ ಅಥವಾ ರುಚಿ ರುಚಿಯಾದ ವಿವಿಧ ಖಾದ್ಯಗಳನ್ನು ಮಾಡಿ ಸೇವಿಸುವುದು ವಿಶೇಷ. ಕೊಡಗಿನ ಮನೆ ಮನೆಗಳಲ್ಲಿ ಮದ್ದು ಸೊಪ್ಪಿನ ಪಾಯಸ ಘಮಘಮಿಸುತ್ತದೆ. ತುಳುನಾಡಿನಲ್ಲಿ ಆಟಿ 18 ಹೇಗೋ, ಹಾಗೇ ಕೊಡಗಿನಲ್ಲಿ ಕಕ್ಕಡ 18 ಕೂಡ ಒಂದು ವಿಶಿಷ್ಠ ಆಚರಣೆಯಾಗಿದೆ. ಹೇಳಿ ಕೇಳಿ ಹಸಿರ ಕಾನನದ ಗೂಡಾದ ಕೊಡಗಿನಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ ಹಸಿರ ಗಿಡಗಳಿಗೇನು ಕೊರತೆ ಇಲ್ಲ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಯಥೇಚ್ಛವಾಗಿ ಸಿಗುವ ಮರ ಕೆಸ, ಕಣಿಲೆ, ಅಣಬೆ, ಮದ್ದು ಸೊಪ್ಪು ಮಳೆ ಚಳಿ ಗಾಳಿಗೆ ಮಾನವನ ದೇಹವನ್ನು ಬೆಚ್ಚಗಿಡಲು ಸಹಕಾರಿಯಾಗಿದೆ ಮಾತ್ರವಲ್ಲ ಇವುಗಳಲ್ಲಿ ಔಷಧೀಯ ಗುಣಗಳಿವೆ ಎನ್ನುವುದು ಹಿರಿಯರ ನಂಬಿಕೆ. ನಾಟಿ ಕೋಳಿ, ಏಡಿ, ಹೊಳೆ ಮೀನು ಕೂಡ ಕಕ್ಕಡ ತಿಂಗಳಿನಲ್ಲಿ ಮಾಂಸಹಾರಿಗಳ ಹೊಟ್ಟೆಯನ್ನು…
ಮಡಿಕೇರಿ ಆ.2 : ಅಧಿಕ ಸದಸ್ಯರನ್ನು ಹೊಂದಿರುವ ಸಿದ್ದಾಪುರ ಗ್ರಾ.ಪಂ ಯ ಎರಡನೇ ಅವಧಿಯ ಆಡಳಿತಕ್ಕೆ ಅಧ್ಯಕ್ಷರಾಗಿ ಪ್ರೇಮ ಗೋಪಾಲ ಹಾಗೂ ಉಪಾಧ್ಯಕ್ಷರಾಗಿ ಪಳನಿಸ್ವಾಮಿ ಹೆಚ್.ಎನ್ ಆಯ್ಕೆಯಾಗಿದ್ದಾರೆ. ಒಟ್ಟು 25 ಸದಸ್ಯ ಬಲದ ಗ್ರಾ.ಪಂ ಯಲ್ಲಿ 15 ಬಿಜೆಪಿ, 9 ಕಾಂಗ್ರೆಸ್ ಬೆಂಬಲಿತರು ಹಾಗೂ ಒಬ್ಬರು ಪಕ್ಷೇತರರು ಇದ್ದಾರೆ. ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಎಸ್.ಸಿ (ಪರಿಶಿಷ್ಟ ಜಾತಿ) ಮಹಿಳೆಗೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಸಂಖ್ಯಾ ಬಲದ ಆಧಾರದಲ್ಲಿ ಎಲ್ಲವೂ ನಡೆದಿದ್ದರೆ ಬಿಜೆಪಿ ಬೆಂಬಲಿತರೇ ಮತ್ತೆ ಅಧಿಕಾರ ಹಿಡಿಯಬೇಕಾಗಿತ್ತು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ತಂತ್ರಗಾರಿಕೆ ಬಳಸಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಸಿದ್ದಾಪುರ ಗ್ರಾ.ಪಂ ಯನ್ನು ತನ್ನದಾಗಿಸಿಕೊಂಡಿದೆ. ಗುಪ್ತ ಮತದಾನದಲ್ಲಿ ಪ್ರೇಮ ಗೋಪಾಲ ಅವರಿಗೆ 14 ಮತಗಳು ಮತ್ತು ಬಿಜೆಪಿ ಬೆಂಬಲಿತ ಹೆಚ್.ಧನಲಕ್ಷ್ಮಿ ಅವರಿಗೆ 11 ಮತಗಳು ಲಭಿಸಿದವು. ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಪಳನಿಸ್ವಾಮಿ ಅವರಿಗೆ 14 ಮತಗಳು ಮತ್ತು…
ಕಡಂಗ ಆ.2 : ಬದ್ರಿಯಾ ಮದರಸ ಮಸೀದಿಯಲ್ಲಿ ಲತೀಫ್ ಸಹಿದಿ ಅನುಸ್ಮರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ರಹಮಾನ್ ಅರಫರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಬದರ್ ಮೌಲಿದ್ ನ್ನು ಉಸ್ತಾದ್ ಲತೀಫ್ ನೆರವೇರಿಸಿದರು. ಮುಖ್ಯ ಭಾಷಣಗಾರರಾಗಿ ಕೇರಳದ ಪ್ರಸಿದ್ಧ ಭಾಷಣಕಾರ ಶಾಪಿ ಲತಿಫಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಊರಿನ ಹಿರಿಯರು ಕಿರಿಯರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಬದ್ರಿಯಾ ಜಮಾತ್ ಕಾರ್ಯದರ್ಶಿ ರಾಶಿದ್ ನಿರೂಪಿಸಿದರು. ಕೊನೆಯಲ್ಲಿ ಭಕ್ತಾದಿಗಳಿಗೆ ಅನ್ನದಾನವನ್ನು ನೀಡಲಾಯಿತು. ವರದಿ : ನೌಫಲ್ ಎಂ.ಬಿ. ಕಡಂಗ
ಮಡಿಕೇರಿ ಆ.2 : ಕೊಡವ ಎಂ.ಎ ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ಆ.5 ರಂದು “ಕರ್ಮ-ಪ್ರಾರಬ್ಧ” ಕೊಡವ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ 10.30 ಗಂಟೆಗೆ ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಸಾಹಿತಿ ಕೊಟ್ಟುಕತ್ತಿರ ಜಾಲಿ ಸೋಮಣ್ಣ ಬರೆದಿರುವ, ಕೊಡವ ಮಕ್ಕಡ ಕೂಟದ 71ನೇ ಪುಸ್ತಕ “ಕರ್ಮ-ಪ್ರಾರಬ್ಧ” ಅನಾವರಣಗೊಳ್ಳಲಿದೆ. ಫೀ.ಮಾ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ.ಮೇಜರ್ ರಾಘವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಂ.ಎ ಕೊಡವ ವಿಭಾಗದ ಸಂಯೋಜಕ ಮೇಚಿರ ರವಿಶಂಕರ್ ನಾಣಯ್ಯ, ಸಾಹಿತಿಗಳು ಹಾಗೂ ಎಂ.ಎ ಕೊಡವ ವಿಭಾಗದ ಉಪನ್ಯಾಸಕರಾದ ಬಾಚರಣಿಯಂಡ ಅಪ್ಪಣ್ಣ, ಬಾಚರಣಿಯಂಡ ರಾಣು ಅಪ್ಪಣ್ಣ, “ಕರ್ಮ-ಪ್ರಾರಬ್ಧ” ಪುಸ್ತಕದ ಬರಹಗಾರ ಹಾಗೂ ಸಾಹಿತಿ ಕೊಟ್ಟುಕತ್ತಿರ ಜಾಲಿ ಸೋಮಣ್ಣ, ಕೊಡವ ಎಂ.ಎ ವಿದ್ಯಾರ್ಥಿ ಹಾಗೂ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಬೊಳ್ಳಜಿರ ಬಿ.ಅಯ್ಯಪ್ಪ…
ಮಡಿಕೇರಿ ಆ.2 : ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸೇರಿದಂತೆ ಸಮಾಜವನ್ನು ಸರಿದಾರಿಯಲ್ಲಿ ಕರೆದೊಯ್ಯುವ ಪ್ರಮುಖ ಅಂಗವೇ ಪತ್ರಿಕಾ ರಂಗ ಎಂದು ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು. ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕುಶಾಲನಗರ ಪ್ರೆಸ್ ಕ್ಲಬ್, ಸಂಗಮ ಟಿವಿ ಚಾನಲ್ ಮತ್ತು ವಂಶಿ ನ್ಯೂಸ್ ಸಹಯೋಗದೊಂದಿಗೆ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಪತ್ರಿಕೆಯ ವರದಿಗಳಿಗೆ ಇಡೀ ಸಮಾಜದ ಚಿತ್ರಣ ಬದಲಿಸುವ ಶಕ್ತಿ ಇದೆ ಎಂದರು. ಕಾರ್ಯಕ್ರಮದಲ್ಲಿ ಖಾಸಗಿ ವಾಹಿನಿ ವರದಿಗಾರ ಸುರ್ಜಿತ್ ಕುಮಾರ್, ಶಿಕ್ಷಕ ಎಚ್.ಸಿ.ರಮೇಶ್, ಶಿಕ್ಷಕರಾದ ನಗಿನ ಬಾನು, ಮಂಜೇಗೌಡ, ಉಪನ್ಯಾಸಕ ಮೋಹನ್ ಕುಮಾರ್, ಲೀಲಾಕುಮಾರಿ ತೊಡಿಕಾನ, ಸುಶೀಲಾ, ಕೆ.ಬಿ.ರಾಜು, ಮಾಲದೇವಿ ಸೇರಿದಂತೆ 16 ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್‌ಕ್ಲಬ್ ಅಧ್ಯಕ್ಷ ಎಚ್.ಎಂ. ರಘು ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಪುರಸಭಾ…
ಮಡಿಕೇರಿ ಆ.2 : ಸೋಮವಾರಪೇಟೆಯ ರಾಜ್ಯ ಹೆದ್ದಾರಿಯಲ್ಲಿರುವ ಕಕ್ಕೆಹೊಳೆ ಸೇತುವೆ ಶಿಥಿಲಗೊಂಡು ಅಪಾಯಕಾರಿ ಸ್ಥಿತಿಯಲ್ಲಿರುವ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ ಆ.2 : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ಮಗುವಿನ ಪೋಷಕರು ಆರ್ಥಿಕ ನೆರವಿಗಾಗಿ ಮನವಿ ಮಾಡಿದ್ದಾರೆ. ಚೆಟ್ಟಳ್ಳಿಯ ಪ್ರಕಾಶ್ ಹಾಗೂ ಸುಮಿತ್ರಾ ದಂಪತಿಯ ಒಂದೂವರೆ ವರ್ಷದ ಮಗು ತನುಷ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದು, ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಇಂದಿರಾ ಆಸ್ಪತ್ರೆ ಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿನ ಚಿಕಿತ್ಸೆಗೆ ಒಂದೂವರೆ ಲಕ್ಷಕ್ಕೂ ಹೆಚ್ಚು ಹಣ ವೆಚ್ಚವಾಗಲಿದ್ದು, ದಾನಿಗಳು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. ದಾನಿಗಳು Name : K. R. REENA Bank : Canara Bank, Chettalli A/c No. 11012200041091 IFSC : CNRB 0011101 phonepay or google pay 9141047515 Reena ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಆ.2 : ಸೋಮವಾರಪೇಟೆ ಜ್ಞಾನವಿಕಾಸ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಲಯನ್ಸ್ ಸಂಸ್ಥೆ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದ ಅಂಗವಾಗಿ ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು. ಜೈ ಜವಾನ್ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ಮಾತನಾಡಿ, ಕಾರ್ಗಿಲ್ ಗೆಲುವು ದೇಶಪ್ರೇಮಿಗಳಿಗೆ ಮರೆಯದ ಅವಿಸ್ಮರಣೀಯ ದಿನವಾಗಿದೆ. 1999ರ ಮೇ ನಲ್ಲಿ ತಿಂಗಳಲ್ಲಿ ಆರಂಭವಾದ ಕಾರ್ಗಿಲ್ ಯುದ್ಧ ಜುಲೈ ಅಂತ್ಯದ ತನಕ ನಡೆಯಿತು. ಪಾಕಿಸ್ತಾನವನ್ನು ನಮ್ಮ ಭಾರತೀಯ ವೀರ ಯೋಧರು ಸದೆ ಬಡಿದು ಅವರು ಅಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದುಕೊಂಡರು ಎಂದು ಸ್ಮರಿಸಿದರು. ಯುದ್ಧದಲ್ಲಿ ನಮ್ಮ ದೇಶದ 527 ಯೋಧರು ವೀರಮರಣ ಹೊಂದಿದರು. ‘ಅಪರೇಷನ್ ವಿಜಯ್’ ಮೂಲಕ ಕಾರ್ಗಿಲ್-ಡ್ರಾಸ್ ವಲಯದಲ್ಲಿ ಪ್ರದರ್ಶಿಸಿದ ಯೋಧರ ಶೌರ್ಯ ಹಾಗೂ ಗೆಲುವಿನ ನೆನಪಿಗಾಗಿ ಜುಲೈ 26 ಅನ್ನು ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ದೇಶವನ್ನು ಪ್ರೀತಿಸಬೇಕು. ದೇಶ ರಕ್ಷಣೆಯಲ್ಲಿ ಸೈನಿಕರ ತ್ಯಾಗ ದೊಡ್ಡದು ಎಂದು ಹೇಳಿದರು. ಸಮಾರಂಭದಲ್ಲಿ ನಿವೃತ್ತ ಸೈನಿಕರಾದ ರಾಜರಾಮ್,…
ಮಡಿಕೇರಿ ಆ.2 : ಕುಶಾಲನಗರ “ವೀರಶೈವ ಲಿಂಗಾಯತ ಸಮಾಜದ ” ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಮಾಜದ ಜಿಲ್ಲಾಧ್ಯಕ್ಷ ಶಿವಪ್ಪ, ಜಿಲ್ಲಾ ನಿರ್ದೇಶಕ ಅಮೃತ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.






