ಲೇಖಕ: admin

ಮಡಿಕೇರಿ ಜು.29 : ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ನಡೆದ ವಿಡಿಯೋ ಚಿತ್ರೀಕರಣ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅನಿತಾ ಪೂವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿದ್ಯಾ ದೇಗುಲದಂತಿರುವ ಕಾಲೇಜ್ ನಲ್ಲಿ ವಿದ್ಯಾರ್ಥಿನಿಯರಿಗೆ ಮುಜುಗರ ಉಂಟು ಮಾಡಿದ ಈ ಪ್ರಕರಣ ಅತ್ಯಂತ ಅಮಾನವೀಯ ಮತ್ತು ಖಂಡನೀಯವೆoದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದೂ ವಿದ್ಯಾರ್ಥಿನಿಯರನ್ನೇ ಗುರಿಯಾಗಿಸಿಕೊಂಡು ಶೌಚಾಲಯದಲ್ಲಿ ಚಿತ್ರೀಕರಣ ಮಾಡಿರುವುದನ್ನು ಗಮನಿಸಿದರೆ ಆರೋಪಿಗಳ ಹಿಂದೆ ದುಷ್ಟಶಕ್ತಿಗಳು ಕೆಲಸ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ರಾಜ್ಯದ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರೊಬ್ಬರು ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಿದ್ದಾರೆ, ಅಲ್ಲದೆ ಮಕ್ಕಳಾಟವೆಂದು ಬಾಲಿಶ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆಯನ್ನು ಗಮನಿಸಿದರೆ ಆರೋಪಿಗಳಿಗೆ ಬೆಂಬಲ ನೀಡುತ್ತಿದ್ದಾರೆ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದ್ದಾರೆ. ಆರೋಪಿಗಳ ಹಿಂದಿರುವ ಮತಾಂಧ ಶಕ್ತಿಗಳ ವಿರುದ್ಧ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಕಠಿಣ ಕ್ರಮ…

Read More

ನವದೆಹಲಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಪ್ರತಿಯೊಂದು ಭಾಷೆಗೆ ಗೌರವ ಮತ್ತು ಮನ್ನಣೆ ನೀಡುತ್ತದೆ ಎಂದು  ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಎನ್‌ಇಪಿ ಮೂರನೇ ವಾರ್ಷಿಕೋತ್ಸವ ಅಂಗವಾಗಿ ‘ಅಖಿಲ ಭಾರತೀಯ ಶಿಕ್ಷಾ ಸಮಾಗಮ್’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ವಿದ್ಯಾರ್ಥಿಗಳ ಸಾಮರ್ಥ್ಯದ ಬದಲಿಗೆ ಅವರ ಭಾಷೆಯ ಆಧಾರದ ಮೇಲೆ ಅವರನ್ನು ನಿರ್ಣಯಿಸುವುದೇ ದೊಡ್ಡ ಅನ್ಯಾಯ ಎಂದು ಹೇಳಿದರು. “ಮಾತೃಭಾಷೆಯಲ್ಲಿನ ಶಿಕ್ಷಣವು ದೇಶದಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ನ್ಯಾಯದ ಹೊಸ ರೂಪವಾಗಿದೆ. ಇದು ಸಾಮಾಜಿಕ ನ್ಯಾಯದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.

Read More

ನಾಪೋಕ್ಲು ಜು.29 : ಲಯನ್ಸ್ ಸಂಸ್ಥೆ ನಾಪೋಕ್ಲು ಮತ್ತು ಲಿಯೋ ಸಂಸ್ಥೆಯ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳಾ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಕೇಟೋಳಿರ ಡಾಲಿ ಅಚ್ಚಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ಕನ್ನಂಬಿರ ಸುಧಿ ತಿಮ್ಮಯ್ಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಹಾಗೂ ಕೊವೀಡ್ ಸಂದರ್ಭದಲ್ಲಿ ಮೂವತ್ತಕ್ಕೂ ಅಧಿಕ ಮೃತ ದೇಹಗಳ ಅಂತ್ಯಸಂಸ್ಕಾರಕ್ಕೆ ಸಹಕರಿಸಿರುವುದಲ್ಲದೇ, ಕ್ರೀಡಾ ತರಬೇತಿದಾರರು ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘೀಸಿದರು. ವೇದಿಕೆಯಲ್ಲಿದ್ದ ಗಣ್ಯರು ಮಾತನಾಡಿ ದೇಶಪ್ರೇಮ ಮತ್ತು ದಿನದ ಮಹತ್ವದ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್ ರಾಜ್ಯಪಾಲ ಸಂಯೋಜಕ ಪಂಚಮ್ ತಿಮ್ಮಯ್ಯ, ಸೇವಾ ಸಂಯೋಜಕ ಮುಕ್ಕಾಟಿರ ವಿನಯ್, ಸದಸ್ಯರಾದ ರತ್ನಾ ಚರ್ಮಣ, ಲಿಯೋ ಸಂಸ್ಥೆಯ ಉಪಾಧ್ಯಕ್ಷ ಮಾದೆಯಂಡ ರೋಹನ್, ಕೇಟೋಳಿರ ಕುಟ್ಟಪ್ಪ, ಡಾ.ಬೋಪ್ಪಂಡ ಜಾಲಿ ಬೋಪಯ್ಯ, ಕುಂಚೆಟ್ಟಿರ ಸುಧಿ, ರೇಷ್ಮಾ, ಅಪ್ಪಾರಂಡ ಸುಭಾಷ್, ಲವ ಕಾಳಪ್ಪ, ಕಾಂಡಂಡ ಪೊನ್ನಣ್ಣ, ತಿಮ್ಮಯ್ಯ, ಮಂದಪಂಡ…

Read More

ಮಡಿಕೇರಿ ಜು.29 :ಯುವ ಬಂಟ್ಸ್ ಅಸೋಸಿಯೇಷನ್ ಕೊಡಗು ಜಿಲ್ಲೆ ವತಿಯಿಂದ, ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ನಗರ ಬಂಟರ ಮಹಿಳಾ ಘಟಕ, ಗಾಳಿಬೀಡು ಹೋಬಳಿ ಬಂಟರ ಸಂಘದ ಸಹಯೋಗದಲ್ಲಿ ‘ಆಟಿಡೊಂಜಿ ದಿನ ಕೆಸರ್ದಗೊಬ್ಬು’ ಕಾರ್ಯಕ್ರಮ ನಡೆಯಲಿದೆ. ಗಾಳಿಬೀಡುವಿನ ಹೊರಮಲೆ ಶಿವಪ್ರಸಾದ್ ರೈಅವರ ಭತ್ತದಗದ್ದೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಹಿಳೆಯರು, ಪುರುಷರು, ಮಕ್ಕಳು, ಹಿರಿಯರಿಗೆ ವಿವಿಧಆಟೋಟ ಸ್ಪರ್ಧೆಜರುಗಲಿದೆ. ಪುರುಷರಿಗೆ ಹ್ಯಾಂಡ್ ಬಾಲ್, ಓಟ(ವಿವಿಧ ವಿಭಾಗದಲ್ಲಿ), ಹಗ್ಗಜಗ್ಗಾಟ, ದಂಪತಿ ಓಟ, ಮಹಿಳೆಯರಿಗೆ 100 ಮೀಟರ್‍ಓಟ, ಹಗ್ಗಜಗ್ಗಾಟ, ನಿಂಬೆ ಚಮಚ, ಪಾಸಿಂಗ್ ಬಾಲ್. ಮಕ್ಕಳಿಗೆ 100 ಮೀ. ಓಟ ಹಾಗೂ ಕೆಸರುಗದ್ದೆಯಲ್ಲಿ ವಿವಿಧ ಮನೋರಂಜನಾ ಸ್ಪರ್ಧೆಜರುಗಲಿದೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಚಂದ್ರಶೇಖರ್ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎತ್ತಿನ ಮೂಲಕ ಉಳುಮೆ ಪ್ರಾತ್ಯಕ್ಷಿಕೆ, ಸಾಂಪ್ರದಾಯಿಕ ಕೃಷಿ ಪರಿಕರಗಳ ಪ್ರದರ್ಶನ, ನಗರ ಬಂಟರ ಮಹಿಳಾ ಘಟಕದಿಂದ ಆಟಿ ವಿಶೇಷ ಖಾದ್ಯಗಳ ಪ್ರದರ್ಶನ, ತುಳುನಾಡಿನ ಜಾನಪದ ಕಲೆ ‘ಆಟಿ ಕಳೆಂಜ’ ಪ್ರದರ್ಶನವಿರಲಿದೆ. ಉದ್ಘಾಟನಾ ಕಾರ್ಯಕ್ರಮ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಗಾಳಿಬೀಡು…

Read More

ಮಡಿಕೇರಿ ಜು.29 :  ಕದನೂರು ಪಂಚಾಯಿತಿಯ ಅಧ್ಯಕ್ಷ ಎಂ. ಭರತ್ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರ ಸಮ್ಮುಖದಲ್ಲಿ ಶಾಸಕ ನಿವಾಸದ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜಾನ್ಸನ್ ಹಾಗೂ ಪಕ್ಷದ ಪ್ರಮುಖರು  ಹಾಜರಿದ್ದರು.

Read More

ಮಡಿಕೇರಿ ಜು.29 : ಬೆಟ್ಟಗೇರಿಯ ಓಂ ಯುವಕ ಸಂಘದ ಕ್ರೀಡಾ ಸಮಿತಿ ವತಿಯಿಂದ  2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ “ಹಿಂದು ಕಪ್”  ಸಂಭ್ರಮದಿಂದ ನಡೆಯಿತು. ಅರ್ವತ್ತೋಕ್ಲುವಿನ (ಅಪ್ಪಂಗಳ) ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ಕೆಸರುಗದ್ದೆ ಹಗ್ಗಜಗ್ಗಾಟ, ಕ್ರಿಕೆಟ್, ರಿಲೆ, ವಯೋಮಿತಿಯ ಓಟಗಳು ಗಮನ ಸೆಳೆಯಿತು.

Read More

ಮಡಿಕೇರಿ ಜು.29 :  ಬಾಳೆಲೆ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆ.20 ರಂದು ಎರಡನೇ ವರ್ಷದ ಪೊನ್ನಂಪೇಟೆ ತಾಲ್ಲೂಕು ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಅಂದು ಪೂರ್ವಹ್ನ 9ಗಂಟೆ ನಿಟ್ಟೂರು ಗದ್ದೆಯಲ್ಲಿ  ಕ್ರೀಡಾಕೂಟ ನಡೆಯಲಿದ್ದು, ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಕ್ರೀಡಾಪಟುಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯ ಕ್ರೀಡಾಪಟುಗಳು  ಗುರುತಿನ ಚೀಟಿ ಆಧಾರ್ ಕಾರ್ಡ್/ ಮತದಾರರ ಗುರುತಿನ ಚೀಟಿ/ ಡ್ರೈವಿಂಗ್ ಲೈಸನ್ಸ್ ಹೀಗೆ ಸರ್ಕಾರ ನಿಗದಿಪಡಿಸಿದ ಯಾವುದೇ ಗುರುತಿನ ಚೀಟಿಯನ್ನು ತಂಡ ನೊಂದಾವಣೆಯ ಸಂದರ್ಭದಲ್ಲಿ ನೀಡಬೇಕು. ಆಸಕ್ತ ತಂಡಗಳು ಫಾರ್ಮರ್ಸ್ ಅಸೋಸಿಯೇಷನ್ ಬಾಳೆಲೆ ಇವರಲ್ಲಿ ನೊಂದಾವಣೆ ಶುಲ್ಕ ದೊಂದಿಗೆ ಆ.17 ರೊಳಗೆ  ನೋಂದಾಯಿಸಿಕೊಳ್ಳಬಹುದಾಗಿದೆ. ಪುರುಷರ ವಾಲಿಬಾಲ್ ನೊಂದಾವಣೆ ಶುಲ್ಕ 2000,  ವಿಜೇತರಿಗೆ ಪ್ರಥಮ ಬಹುಮಾನ 25,000 ರೂ ದ್ವಿತೀಯ 15, 000 ಆಟಗಾರರ ಸಂಖ್ಯೆ 6+2. ಪುರುಷರಿಗೆ ಹಗ್ಗ ಜಗ್ಗಾಟ ನೊಂದಾವಣೆ ಶುಲ್ಕ 2000ರೂ ವಿಜೇತರಿಗೆ ಪ್ರಥಮ ಬಹುಮಾನ 25,000 ದ್ವಿತೀಯ 15,000.ಆಟಗಾರರ ಸಂಖ್ಯೆ 7+2 ಮಹಿಳೆಯರಿಗೆ ಹಗ್ಗಜಗ್ಗಾಟ ನೊಂದಾವಣೆ ಶುಲ್ಕ…

Read More

ಮಂಡ್ಯ, ಜು.29: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ  ಕೆಲಸ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಬೆಂಗಳೂರು, ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಡಿಟೆಕ್ಟರ್ ಗಳನ್ನು ಅಳವಡಿಸಿರಲಿಲ್ಲ. ಹಾಗಾಗಿ ಅಪಘಾತಗಳು ಹೆಚ್ಚಾಗಿದ್ದವು. ಜುಲೈ ತಿಂಗಳಲ್ಲಿ ಅಪಘಾತಗಳು ಕಡಿಮೆಯಾಗಿವೆ. ಜೂನ್ ತಿಂಗಳಲ್ಲಿ 20 ಅಪಘಾತಗಳಾಗಿದ್ದರೆ, ಜುಲೈನಲ್ಲಿ 5 ಅಪಘಾತಗಳು ಸಂಭವಿಸಿವೆ. ಸ್ಪೀಡ್ ಡಿಟೆಕ್ಟರ್ ಗಳನ್ನು 10 ಕಿಮೀ ಅಂತರದಲ್ಲಿ ಅಳವಡಿಸಿದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯ. ಮುಖ್ಯ ಕಾರ್ಯದರ್ಶಿಗಳು ಎನ್.ಹೆಚ್.ಎ. ಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಎಕ್ಸ್ ಪ್ರೆಸ್ ವೇ ನಲ್ಲಿ ಕೆಲವು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕಿದ್ದು ಅದಕ್ಕಾಗಿಯೇ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಸರ್ವಿಸ್ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಸ್ತಾವನೆಯನ್ನು ಕೇಂದ್ರಕ್ಕೆ  ಕಳುಹಿಸಲಾಗಿದೆ. ಬಿಡದಿ,…

Read More

ಮಡಿಕೇರಿ ಜು.29 :   ಬಿಟ್ಟಂಗಾಲ ವಲಯ ಕಾಂಗ್ರೆಸ್ ಸಮಿತಿ ವಿರಾಜಪೇಟೆ ಬ್ಲಾಕ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.

Read More

ಮಡಿಕೇರಿ ಜು.29 :  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ ಕೊಡಗು ಜಿಲ್ಲಾ ಮಟ್ಟದ ಮೂಲ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಗರದ ಗಾಂಧಿ ಭವನದಲ್ಲಿ ನಡೆಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗದಾಮಯ್ಯ ಮಾತನಾಡಿ,  ಶಿಕ್ಷಕರು ತರಬೇತಿಯಲ್ಲಿ ಪಡೆದ  ಮಾಹಿತಿಯನ್ನು ಮಕ್ಕಳಿಗೆ ನೀಡುವುದರ ಮೂಲಕ ಮಕ್ಕಳಲ್ಲಿ ಮೌಲ್ಯ ತುಂಬಬೇಕು, ಆ ಮೂಲಕ ಸದೃಢ ರಾಷ್ಟ್ರದ ನಿರ್ಮಾಣ ಆಗಬೇಕೆಂಬ ಸಂದೇಶ ನೀಡಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಡಾ. ಸದಾಶಿವಯ್ಯ ಎಸ್ ಪಲ್ಲೇದ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ನಡೆಯುತ್ತಿದ್ದು, ರಾಜ್ಯ ಸಂಸ್ಥೆಯಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ, ಅದರ ಪ್ರಯೋಜನವನ್ನು ಪಡೆದುಕೊಳ್ಳಲು ಶಿಕ್ಷಕರಿಗೆ ಸಲಹೆ ನೀಡಿದರು. ಮಡಿಕೇರಿ ನಗರಸಭಾ ಸದಸ್ಯರಾದ ಶಾರದಾ ನಾಗರಾಜ್ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಿಂದ ಮಕ್ಕಳಲ್ಲಿ ದೇಶ ಸೇವಾ ಮನೋಭಾವ ಬೆಳೆಯುತ್ತದೆ ಎಂಬ ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ ಬೇಬಿ ಮ್ಯಾಥ್ಯು,…

Read More