ಮಡಿಕೇರಿ ಜು.28 : ಪ್ರವಾಸಿತಾಣಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸದ ಪ್ರವಾಸಿಗರ ಮೇಲೆ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎಚ್ಚರಿಕೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಜಿಲ್ಲೆಯ ಬಹುತೇಕ ಜಲಾಶಯಗಳು, ಜಲಪಾತಗಳು, ನದಿಗಳು ಉಕ್ಕಿ ಹರಿಯುತ್ತಿವೆ, ಕಲ್ಲು ಬಂಡೆಗಳು ಜಾರುತ್ತಿವೆ. ಜಿಲ್ಲೆಯ ಪ್ರಕೃತಿ ಸೌಂದರ್ಯ ಮತ್ತಷ್ಟು ಹೆಚ್ಚಾಗಿದ್ದು, ಇವುಗಳನ್ನು ವಿಕ್ಷೀಸಲು ಬರುವಂತಹ ಸಾರ್ವಜನಿಕರು/ ಪ್ರವಾಸಿಗರು ಸೌಂದರ್ಯಕ್ಕೆ ಮನಸೋತು ಬಹಳ ಹತ್ತಿರದಿಂದ ಫೋಟೋ ಅಥವಾ ವಿಡಿಯೋ ತೆಗೆಯುವ, ರೀಲ್ಸ್ ಮಾಡುವ ಅನಗತ್ಯ ಸಾಹಸ ಮಾಡದಿರಿ, ಪ್ರವಾಸಿಗರು ಮತ್ತು ಸ್ಥಳೀಯರು ಹೊಸ ಪ್ರದೇಶದಲ್ಲಿ ಅಲ್ಲಿನ ಪರಿಸರದ ಬಗ್ಗೆ ಅರಿವಿರುವುದಿಲ್ಲ ಸ್ಥಳೀಯರ ಮಾತುಗಳನ್ನು ಗೌರವಿಸಿ, ಪ್ರವಾಸಿ ತಾಣಗಳಲ್ಲಿ ಅನುಸರಿಸಬೇಕಾದ ಕನಿಷ್ಠ ನಿಯಮಗಳ ಅನುಸರಿಸಿ, ಅಲ್ಲದೇ ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ, ಸೂಕ್ತ ಸುರಕ್ಷತೆ ಮತ್ತು ಭದ್ರತೆಯನ್ನು ಕಲ್ಪಿಸುವ ದೃಷ್ಟಿಯಿಂದ ಪ್ರವಾಸಿ ಮಿತ್ರರನ್ನೂ…
ಲೇಖಕ: admin
ಮಡಿಕೇರಿ ಜು.28 : ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆ ಬಳಿ 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ‘ಕ್ರಿಟಿಕಲ್ ಕೇರ್ ಯೂನಿಟ್ ಆಸ್ಪತ್ರೆ’ ನಿರ್ಮಾಣ ಸಂಬಂಧ ಸಂಸದರಾದ ಪ್ರತಾಪ್ ಸಿಂಹ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಕುರಿತು ಮಾತನಾಡಿದ ಸಂಬಂಧಪಟ್ಟ ಎಂಜಿನಿಯರ್ ರಾಜೇಶ್ ಅವರು ಕ್ರಿಟಿಕಲ್ ಕೇರ್ ಯೂನಿಟ್ ಆಸ್ಪತ್ರೆಯನ್ನು 45 ಸೆಂಟು ಜಾಗದಲ್ಲಿ ಬೋಧಕ ಆಸ್ಪತ್ರೆ ಹತ್ತಿರ ನಿರ್ಮಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದರು. ಸದ್ಯ ಈಗಾಗಲೇ ನಿರ್ಮಾಣ ಆಗುತ್ತಿರುವ 450 ಹಾಸಿಗೆ ಆಸ್ಪತ್ರೆಯ ಜನರಲ್ ವಿಭಾಗದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಸ್ಪತ್ರೆ ನವೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ. ಈಗಾಗಲೇ 100 ಕೋಟಿ ರೂ. ಬಿಡುಗಡೆಯಾಗಿದ್ದು, ಹೆಚ್ಚುವರಿಯಾಗಿ ಅನುದಾನ ಬೇಕಿದೆ ಎಂದು ಹೇಳಿದರು. ‘ಕ್ರಿಟಿಕಲ್ ಕೇರ್ ಯೂನಿಟ್ ಆಸ್ಪತ್ರೆ’ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದರಾದ ಪ್ರತಾಪ್ ಸಿಂಹ ಅವರು…
ಮಡಿಕೇರಿ ಜು.28 : ಕೊಡಗು ಜಿಲ್ಲೆಯ 62 ಕಡೆಗಳಲ್ಲಿ 4ಜಿ ಟವರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಇದೇ ನವೆಂಬರ್ ಮೊದಲ ವಾರದಲ್ಲಿ ಚಾಲನೆಗೊಳ್ಳಲಿದೆ ಎಂದು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಜೊತೆ ಸಭೆಯಲ್ಲಿ ಜಾಗ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಈಗಾಗಲೇ ಕಂದಾಯ ಇಲಾಖೆಯಿಂದ 6 ಕಡೆಗಳಲ್ಲಿ ಹೊರತುಪಡಿಸಿ ಉಳಿದಂತೆ ಎಲ್ಲಾ ಕಡೆ ಭೂಮಿ ಕಾಯ್ದಿರಿಸಿದ್ದು, ಆ ನಿಟ್ಟಿನಲ್ಲಿ ಟವರ್ ನಿರ್ಮಾಣ ಮಾಡಿ ಅಂತರ್ಜಾಲ ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಂಸದರು ಹೇಳಿದರು. ಜಿಲ್ಲೆಯ 6 ಕಡೆಗಳಲ್ಲಿ ಮಾತ್ರ ಅರಣ್ಯ ಹಾಗೂ ಅರಣ್ಯ ಪೈಸಾರಿ ಜಾಗದಲ್ಲಿ ಅರಣ್ಯ ಇಲಾಖೆಯವರು ಜಾಗ ಕಾಯ್ದಿರಿಸುವ ಸಂಬಂಧ ಮಾಹಿತಿ ನೀಡಲಿದ್ದಾರೆ. ಆ ನಿಟ್ಟಿನಲ್ಲಿ ‘ಕೊಡಗು ಜಿಲ್ಲೆ ಜನತೆಯ ಬಹು ದಿನದ ಬೇಡಿಕೆ ಸದ್ಯ ಈಗ ಈಡೇರುತ್ತಿದೆ ಎಂದು ಸಂಸದರು ನುಡಿದರು.’ ಈ 62 ಸ್ಥಳಗಳ ಜೊತೆಗೆ ಉಳಿದಂತೆ ಪೆರಾಜೆ, ಚೆಂಬು, ಮೇಲ್‍ಚೆಂಬು,…
ಕುಶಾಲನಗರ ಜು.28 : ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಜೀವನ ರೂಪಿಸಲು “ವಚನ ಸಾಹಿತ್ಯ” ಉತ್ತಮ ವೇದಿಕೆಯಾಗಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚು ಸಹಕಾರಿಯಾಗಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮದ್ ಹೇಳಿದರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಕುಶಾಲನಗರದ ಮೂಕಾಂಬಿಕ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ” ಶಾಲಾ ಕಾಲೇಜುಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದಲ್ಲಿ ಲಿಂಗ, ವರ್ಣ ಹಾಗೂ ವರ್ಗ ತಾರತಮ್ಯ ಇಲ್ಲದೇ ಎಲ್ಲರನ್ನೂ ಸರಿ ಸಮಾನವಾಗಿ ಕಾಣುವಂತಹ ವ್ಯವಸ್ಥೆಯನ್ನು ಅನುಭವ ಮಂಟಪದ ಮೂಲಕ ಸಮಾಜಕ್ಕೆ ಸಾರಿದವರು ಬಸವಾದಿ ಶರಣರು. ಇಂತಹ ಮಹಾ ಪುರುಷರಿಂದ ರೂಪುಗೊಂಡ ವಚನ ಸಾಹಿತ್ಯದ ಅರಿವು ಇಂದು ಅಗತ್ಯ ಎಂದು ಜಮೀರ್ ಹೇಳಿದರು. ಇಂದಿನ ವಿದ್ಯಾರ್ಥಿಗಳು ಹಾಗೂ ಯುವ ಜನಾಂಗ ವಿವೇಕಾನಂದರ ವಿವೇಕವಾಣಿ, ಬಸವಾದಿ ಶರಣರ ವಚನವಾಣಿ ಗಳನ್ನು ಅರಿತು ಅದರಂತೆ ನಡೆದಲ್ಲಿ ಸಮಾಜದಲ್ಲಿ ತಲೆ ಎತ್ತಿ ನಡೆಯುವಂತೆ ಮಾಡುತ್ತವೆ. ಹಾಗೆಯೇ…
ಮಡಿಕೇರಿ ಜು.28 : ಸರ್ಕಾರಿ ದಾಖಲೆಗಳಲ್ಲಿ ಕೊಡವರನ್ನು “ಕೊಡವ” ಎಂದು ನಮೂದಿಸುವ ಕುರಿತು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಸರ್ಕಾರದ ಈ ಕ್ರಮಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಶ್ಲಾಘನೆ ವ್ಯಕ್ತಪಡಿಸಿದೆ. ಕಳೆದ 15 ವರ್ಷಗಳ ಸಿಎನ್‌ಸಿಯ ಸತತ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ ಎಂದು ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಕೊಡವರ ಕುಲ ಸಮಸ್ಯೆಗೆ ಸಂಬಂಧಿಸಿದ ಅತಿ ಪ್ರಧಾನ ಬೇಡಿಕೆಗಳಲ್ಲಿ ಒಂದಾದ “ಕೊಡವ” ಪದವನ್ನು ಕ್ಯಾಬಿನೆಟ್ ನಿರ್ಣಯದ ಮೂಲಕ ಅಧಿಕೃತಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ. “ಕೊಡವ” ಎನ್ನುವ ಉಜ್ವಲ ಶಾಸ್ತ್ರೀಯ ನಾಮಕ್ಕೆ ಶಾಸನಬದ್ಧ ಸ್ಥಿರೀಕರಣ ದೊರೆತ್ತಿದ್ದು, ಇದು ಸಿಎನ್‌ಸಿಯ ಮಹತ್ವದ ಮೈಲುಗಲ್ಲಾಗಿದೆ. ಕೊಡವರನ್ನು “ಕೊಡವ” ಎಂದು ನಮೂದಿಸದೆ “ಕೊಡಗರು” ಎಂದು ನಮೂದಿಸುವ ಮೂಲಕ ಕೊಡವ ಬುಡಕಟ್ಟು ಆದಿಮ ಸಂಜಾತ ಮೂಲನಿವಾಸಿಗಳ ಅಸ್ತಿತ್ವದ ಬಗ್ಗೆ ಆತಂಕ ಮೂಡಿಸಲಾಗುತ್ತಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಿಎನ್‌ಸಿ ಸಂಘಟನೆ 2008 ರಿಂದಲೇ ಹೋರಾಟವನ್ನು ಆರಂಭಿಸಿತು. ಕೊಡವರ ಭಾವನೆಯನ್ನು ಅರ್ಥ ಮಾಡಿಕೊಂಡು ನಮ್ಮ ಬೇಡಿಕೆಯನ್ನು…
ಮಡಿಕೇರಿ ಜು.28 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಜು.31 ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ಆಯೋಜಿಸಿರುವ ಒಂದು ಪ್ರೇಮ ಕಥೆ ನಾಟಕ ಪ್ರದರ್ಶನಕ್ಕೆ ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಚಾಲನೆ ನೀಡಲಿದ್ದಾರೆ. ಅಂದು ರಾತ್ರಿ 7 ಗಂಟೆಗೆ ಬೆಂಗಳೂರಿನ ರಂಗಪಯಣ ತಂಡದಿಂದ ಲಿಮ್ಕಾ ಬುಕ್ ಆಫ್ ರೆಕಾರ್ಡ್‍ನಲ್ಲಿ ಸ್ಥಾನ ಪಡೆಯುವ ನಾಟಕ ಪ್ರದರ್ಶನ ಪ್ರಾರಂಭವಾಗಲಿದೆ. ಕೊಡಗು ಬೆಳ್ಳಿ ಮಹೋತಸ್ವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಂಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಅತಿಥಿಗಳಾಗಿ ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ವಾಣಿಜ್ಯೋದ್ಯಮಿತಿ ಕೆ.ಎಂ.ಬಿ. ಗಣೇಶ್, ಹಿರಿಯ ಕಲಾವಿದ ನೆರವಂಡ ಉಮೇಶ್ ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‍ಕುಮಾರ್ ಉಪಸ್ಥಿತರಿರುತ್ತಾರೆಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಜು.28 : ಜನ ಸಾಮಾನ್ಯರ ಮೂಲಭೂತ ಸಮಸ್ಯೆಗಳಿಗೆ ಸಂವಿಧಾನಾತ್ಮಕವಾಗಿ ಮತ್ತು ಕಾನೂನಿಗೆ ಅನುಗುಣವಾಗಿ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುವುದಕ್ಕೆ ನಾವೆಂದಿಗೂ ಹೋಗುವುದಿಲ್ಲ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಕೊಡಗು ಗೌಡ ಸಮಾಜಗಳ ಒಕ್ಕೂಟ, ಮಡಿಕೇರಿ ಕೊಡಗು ಗೌಡ ಸಮಾಜ ಸೇರಿದಂತೆ ಜಿಲ್ಲೆಯ ಎಲ್ಲಾ ಗೌಡ ಸಮಾಜ ಮತ್ತು ಗೌಡ ಸಂಘಟನೆಗಳ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಇಬ್ಬರು ಶಾಸಕರುಗಳಾದ ಎ.ಎಸ್. ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪೊನ್ನಣ್ಣ ಸಮಸ್ಯೆಗಳನ್ನು ಚರ್ಚೆಯಿಂದ ಬಗೆಹರಿಸಿಕೊಳ್ಳಲು ಸಾಧ್ಯವಿದೆ. ಮುಂದಿನ ಐದು ವರ್ಷಗಳ ಆಡಳಿತದ ಅವಧಿಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುವ ನಾವಿಬ್ಬರು ಶಾಸಕರು, ಜಾತಿ ಮತ ಭೇದಗಳನ್ನು ಮರೆತು, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಾಮರಸ್ಯದ ಸುಭದ್ರ ನಾಡನ್ನು ಕಟ್ಟುವ ಪ್ರಯತ್ನ ಮಾಡಬೇಕಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ಎಲ್ಲಾ ವರ್ಗದ ಮಂದಿ ಮಾರ್ಗದರ್ಶಕರಾಗಿರಲಿ ಎಂದು…
ಕುಶಾಲನಗರ, ಜು.28 : ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸುವ ಮೂಲಕ ಉತ್ತಮ ಆರೋಗ್ಯ ರಕ್ಷಣೆಗೆ ಸೂಕ್ತ ಕ್ರಮ ವಹಿಸಬೇಕು ಎಂದು ಎಂದು ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾಧಿಕಾರಿ ಡಾ|ಬಿ.ಎಲ್. ಶ್ರೀನಿವಾಸ್ ಹೇಳಿದರು. ಕುಶಾಲನಗರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಶಾಲನಗರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ತಾಲ್ಲೂಕಿನ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ರಾಷ್ಟ್ರೀಯ ಮಲೇರಿಯಾ ಮಾಸಾಚರಣೆ : 2022 ರ ಅಂಗವಾಗಿ ಡೆಂಗ್ಯೂ, ಮಲೇರಿಯಾ, ಚಿಕುನ್ ಗುನ್ಯ ಇನ್ನಿತರ ಸಾಂಕ್ರಾಮಿಕ ರೋಗಗಳ ಕುರಿತಂತೆ “ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಸಹಭಾಗಿತ್ವ”ದ ಕುರಿತು ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಹಾಗೂ ತಡೆಗಟ್ಟುವ ಕುರಿತು ಮಾಹಿತಿ ನೀಡಿದ…
ಸಿದ್ದಾಪುರ ಜು.28 : ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ರಾಶಿಗಟ್ಟಲೇ ತ್ಯಾಜ್ಯ ಶೇಖರಣೆಯಾಗಿ ಬಿದ್ದಿದ್ದರೂ ಗ್ರಾ.ಪಂ ಆಡಳಿತ ಮಂಡಳಿ ಕಸವಿಲೇವಾರಿ ಮಾಡದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ನಾಗರಿಕ ಹೋರಾಟ ಸಮಿತಿ ತ್ಯಾಜ್ಯವಿಲೇವಾರಿಗೆ ಶಾಶ್ವತ ಪರಿಹಾರ ಕಲ್ಪಿಸದೇ ಇದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಹೆಚ್.ಬಿ.ರಮೇಶ್, ಅತೀ ಹೆಚ್ಚು ಆದಾಯಗಳಿಕೆಯ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು, ಕಸವಿಲೇವಾರಿ ಗೆ ಶಾಶ್ವತ ಪರಿಹಾರವಾಗಿ ಜಾಗ ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು. ಈ ಸಂಬಂಧ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾ.ಪಂ ಮಾಜಿ ಉಪಾಧ್ಯಕ್ಷ ಎಂ.ಹೆಚ್, ಮೂಸ ಮಾತನಾಡಿ, ಗ್ರಾ.ಪಂ ಯಲ್ಲಿ ಪೌರಕಾರ್ಮಿಕರ ಕೊರತೆ ಇದ್ದು, ಶುಚ್ಚಿತ್ವ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ ಇದರಿಂದ ಚಂರಡಿಗಳಲ್ಲಿ ತ್ಯಾಜ್ಯಗಳು ತುಂಬಿ ದುರ್ನಾತ ಬೀರುತ್ತಿದೆ. ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಆಡಳಿತ ಮಂಡಳಿ ಶುಚಿತ್ವ…
ಮಡಿಕೇರಿ ಜು.28 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2854.77 ಅಡಿಗಳು. ಕಳೆದ ವರ್ಷ ಇದೇ ದಿನ 2856.98 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 15.20 ಮಿ.ಮೀ., ಕಳೆದ ವರ್ಷ ಇದೇ ದಿನ 16.40 ಮಿ.ಮೀ., ಇಂದಿನ ನೀರಿನ ಒಳಹರಿವು 9926 ಕ್ಯುಸೆಕ್, ಕಳೆದ ವರ್ಷ ಇದೇ ದಿನ 3114 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 5875 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 1033 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.






