ಮಡಿಕೇರಿ NEWS DESK ಏ.22 : ನಿರ್ಗತಿಕರು, ವಯೋವೃದ್ಧರು ಹಾಗೂ ಆಶ್ರಯ ಇಲ್ಲದವರಿಗೆ ಆಶ್ರಯ ನೀಡಿ ಸಂತೈಸುತ್ತಿರುವ ಮಡಿಕೇರಿಯ ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕವನ್ನು ರಚಿಸಲಾಗಿದೆ. ಅಧ್ಯಕ್ಷರಾಗಿ ರಾಜು ಬಾಯ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎನ್.ಚರಣ್ ಉಪಾಧ್ಯಕ್ಷರಾಗಿ ಷರೀಫ್ ಎಂ.ಯು ಹಾಗೂ ಕಾರ್ಯದರ್ಶಿಯಾಗಿ ತಿಮ್ಮಯ್ಯ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಮಾತನಾಡಿದ ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್ ಅವರು ತುರ್ತು ಆರೋಗ್ಯ ಸೇವಾ ಘಟಕದ ಮೂಲಕ ರಸ್ತೆ ಬದಿಯಲ್ಲಿರುವ ನಿರ್ಗತಿಕರು, ಅನಾರೋಗ್ಯ ಪೀಡಿತರು ಹಾಗೂ ಅಸಹಾಯಕರ ಸಮಸ್ಯೆಗಳಿಗೆ ತುರ್ತು ಸ್ಪಂದನೆ ನೀಡಿ ಚಿಕಿತ್ಸೆಯನ್ನು ಒದಗಿಸಲು ಸಹಕಾರ ನೀಡಲಾಗುವುದು. ಅಲ್ಲದೆ ಆರೋಗ್ಯ ಸಂಬoಧಿತ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಲಾಗುವುದು ಮತ್ತು ಅನಾಥ ಶವಗಳ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದರು. ವಿಕಾಸ್ ಜನತಾ ಸೇವಾ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಡಿ.ಕರಿಯಪ್ಪ, ಅಧ್ಯಕ್ಷ ನವೀನ್ ಬಿ.ಕೆ ಹಾಗೂ ಗೌರವ ಅಧ್ಯಕ್ಷ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ…
ಲೇಖಕ: admin
ಮಡಿಕೇರಿ ಏ.21 NEWS DESK : ಆದಿ ಶಂಕರಾಚಾರ್ಯರು 8 ನೇ ಶತಮಾನದಲ್ಲಿ ಜನಿಸಿ ರಾಷ್ಟ್ರದಲ್ಲಿ ಅದ್ವೈತ ವೇದಾಂತ ಸಿದ್ಧಾಂತದ ಪ್ರವರ್ತಕರಾಗಿ ಬೆಳಕು ಚೆಲ್ಲಿದ್ದಾರೆ ಎಂದು ಕೊಡಗು ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಶ್ರೀ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೇರಳದ ಕಾಲಡಿಯಲ್ಲಿ ಶಿವಗುರು-ಆರ್ಯಾಂಬಾ ದಂಪತಿಯ ಪುತ್ರರಾಗಿ ಜನಿಸಿದ ಶಂಕರಾಚಾರ್ಯ ಅವರು, ಕೇವಲ 32 ವರ್ಷಗಳ ಅಲ್ಪಾಯುಷ್ಯದಲ್ಲಿ ವೇದ ಉಪ ನಿಷತ್ತುಗಳಿಗೆ ಭಾಷ್ಯ ಬರೆದು ರಾಷ್ಟ್ರದದ್ಯಾಂತ ಸಂಚರಿಸಿ ಅದ್ವೈತ ತತ್ವವನ್ನು ಪ್ರಚಾರ ಮಾಡಿದ್ದಾರೆ ಎಂದು ಹೇಳಿದರು. ಶಂಕರಾಚಾರ್ಯರು 8ನೇ ವಯಸ್ಸಿನಲ್ಲಿಯೇ ವೇದಗಳನ್ನು ಅಧ್ಯಯನ ಮಾಡಿ ಅಸಾಧಾರಣ ಪ್ರತಿಭೆಯನ್ನು ಹೊಂದಿದ್ದರು. 8ನೇ ವಯಸ್ಸಿನಲ್ಲಿಯೇ ಸನ್ಯಾಸ ದೀಕ್ಷೆ ಪಡೆದು ಗೋವಿಂದ ಭಗವತ್ಪಾದರ ಬಳಿ ಶಿಷ್ಯರಾಗಿ ಬೆಳೆದರು ಎಂದು ಬಿ.ಜಿ.ಅನಂತಶಯನ ಅವರು ವಿವರಿಸಿದರು. ಅದ್ವೈತ ಸಿದ್ಧಾಂತದಲ್ಲಿ ಬ್ರಹ್ಮವೇ…
ಮಡಿಕೇರಿ ಏ.21 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆಯು ಶನಿವಾರ ನಗರದ ಪತ್ರಿಕಾಭವನದಲ್ಲಿ ನಡೆಯಿತು. ಬಳಗದಲ್ಲಿ ಪ್ರಾರಂಭ ಹಂತದಿಂದಲೂ, ಸದಸ್ಯರಾಗಿ, ಬಳಗದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸಿ, ಬಳಗದ ಯಶಸ್ಸಿಗೆ ಕಾರಣರಾಗಿ, ಇತ್ತೀಚಿನ ದಿನಗಳಲ್ಲಿ ನಮ್ಮೆಲ್ಲರನ್ನು ಅಗಲಿದ ಹಿರಿಯ ಚೇತನ ಕುಶಾಲನಗರದಲ್ಲಿ ವಾಸವಿದ್ದ ಕಮಲ ಕರಿಯಪ್ಪ, ಹಿರಿಯ ಗಾಯಕರು, ಬಳಗದ ನಿರ್ದೇಶಕರೂ ಆಗಿದ್ದ ಮಡಿಕೇರಿಯ ಲಿಯಾಕತ್ ಅಲಿ ಹಾಗೂ ಬಳಗದ ಸಕ್ರೀಯ ಸದಸ್ಯರಾಗಿದ್ದ ತಮ್ಮಯ್ಯನವರಿಗೆ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಟಿ.ಪಿ.ರಮೇಶ್ ರವರು,ಇವರುಗಳ ಸಾಹಿತ್ಯ ಪರಿಷತ್ತಿನ, ಬಳಗದ ಸೇವೆಯನ್ನು ಸ್ಮರಿಸಿ ಮಾತನಾಡಿದರು. ಬಳಗದ ವತಿಯಿಂದ ಸ್ಥಾಪಿಸಲ್ಪಟ್ಟಿರುವ ಟಿ.ಪಿ.ರಮೇಶ್ ಧತ್ತಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ ಮಹಾಸಭೆಯನ್ನು ನಡೆಸುವುದರ ಬಗ್ಗೆ ಚರ್ಚಿಸಲಾಯಿತು. ಲೋಕನಾಥ್ ಅಮೇಚೂರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೇಶವ ಕಾಮತ್, ಟಿ.ಪಿ.ರಮೇಶ್, ಕೆ.ಟಿ.ಬೇಬಿಮ್ಯಾಥ್ಯೂ, ಉಮೇಶ್, ಕೋಶಾಧಿಕಾರಿ, ಕಡ್ಲೇರ ತುಳಸಿ ಮೋಹನ್, ಸುನೀತಾ ಪ್ರೀತು ಸಭೆಯಲ್ಲಿ ಹಾಜರಿದ್ದರು. ಕಾರ್ಯದರ್ಶಿ ಭಾರತಿ ರಮೇಶ್…
ಮಡಿಕೇರಿ ಏ.21 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 9ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನವು ಇದೇ 23 ರಿಂದ ಮೇ, 22 ರವರೆಗೆ ನಡೆಯಲಿದ್ದು, ಯಾವುದೇ ಜಾನುವಾರು ಲಸಿಕೆಯಿಂದ ಬಿಟ್ಟು ಹೋಗದಂತೆ ಕಾರ್ಯಕ್ರಮ ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬಂಧ ಮಂಗಳವಾರ ಭಿತ್ತಿಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಜಾನುವಾರುಗಳ ರಕ್ಷಣೆ, ಸುರಕ್ಷತೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಯಶಸ್ಸುಗೊಳಿಸಬೇಕು ಎಂದರು. ಜಾನುವಾರುಗಳು ರೈತರ ಹಾಗೂ ರಾಷ್ಟ್ರದ ಆಸ್ತಿಯಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಜವಾಬ್ದಾರಿ ಎಲ್ಲರದ್ದಾಗಿದೆ. ಹೈನುಗಾರಿಕೆ ರೈತರ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಜಾನುವಾರುಗಳ ಆರೋಗ್ಯ ಕಾಪಾಡುವುದು ಅತೀ ಮುಖ್ಯವಾಗಿದೆ ಎಂದರು. ಪಶುಪಾಲನೆ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ಮಾತನಾಡಿ…
ಪಿರಿಯಾಪಟ್ಟಣ ಏ.21 NEWS DESK : ಜಿಲ್ಲಾಡಳಿತ ಜಿಲ್ಲಾಪಂಚಾಯತ್ ಮೈಸೂರು ವತಿಯಿಂದ ಪಿರಿಯಾಪಟ್ಟಣದ ಪಾರೆಕೊಪ್ಪಲು ಆಯೋಜಿಸಲಾಗಿದ್ದ ಪಿರಿಯಾಪಟ್ಟಣ ಶಕ್ತಿ ದೇವತೆ ಶ್ರೀ ಮಸಣಿಕಮ್ಮ ದೇವಸ್ಥಾನ, ಪಿರಿಯಾಪಟ್ಟಣ ತಾಲ್ಲೂಕು ಒಕ್ಕಲಿಗ ಸಂಘದ ಸಹಯೋಗದೊಂದಿಗೆ ನಿರ್ಮಿಸುತ್ತಿರುವ ಕುವೆಂಪು ಭವನ ನಿರ್ಮಾಣ ಹಾಗೂ ಬೆಟ್ಟದ ಪುರ ಗ್ರಾಮದ ಶ್ರೀ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ ಹಾಗೂ ವಿವಿಧ ಇಲಾಖೆಗಳ ಒಟ್ಟಾರೆ ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಮಾತನಾಡಿದರು.
ವಿರಾಜಪೇಟೆ ಮಾ.21 NEWS DESK : ಬೇಟೋಳಿ ಗ್ರಾಮದ ರಾಮನಗರದ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾ ಚಂಡಿಕಾ ಹೋಮ ನೆರವೇರಿತು. ದೇವಸ್ಥಾನದಲ್ಲಿ ಹಬ್ಬದ ಹಿಂದಿನ ದಿವಸವೇ ಸಂಜೆ ಅರ್ಚಕರು ವಿಶೇಷ ಪ್ರಾರ್ಥನೆಯೊಂದಿಗೆ ಪಾರಾಯಣವನ್ನು ನಡೆಸಿದರು. ಮಹೋತ್ಸವದ ದಿವಸ ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾದವು. ದೇವಸ್ಥಾನದ ಆವರಣದಲ್ಲಿರುವ ಶ್ರೀ ಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ನಾಗ ಹಾಗೂ ಶ್ರೀ ವನದುರ್ಗೆ ದೇವರುಗಳಿಗೆ ವಿಶೇಷ ಪೂಜೆಯನ್ನು ಅರ್ಚಕರು ಸಲ್ಲಿಸಿದರು. ನಂತರ ಮಹಾ ಗಣಪತಿ ಹೋಮವನ್ನು ನೆರವೇರಿಸಲಾಯಿತು. ಹೂವಿನ ಅಲಂಕೃತ ಮಂಟಪದಲ್ಲಿ ಶ್ರೀ ಸತ್ಯನಾರಾಯಣ ಸ್ವಾಮಿಯ ಫೋಟೋವನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ನೆರವೇರಿಸಲಾಯಿತು. ಅದರೊಟ್ಟಿಗೆ ಮಹಾ ಚಂಡಿಕಾ ಹೋಮದ ಆಚರಣೆಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು. ಅರ್ಚಕರು ಸತ್ಯನಾರಾಯಣ ಸ್ವಾಮಿಗೆ ಸಂಕಲ್ಪ…
ಮಡಿಕೇರಿ ಮಾ.21 NEWS DESK : ಕೊಡಗಿನಲ್ಲಿ ಕೃಷಿ, ಕಾಫಿ, ಏಲಕ್ಕಿ, ಕಾಳು ಮೆಣಸು ಸೇರಿದಂತೆ ಪ್ರಮುಖ ಕೖಷಿ ಇಂದು ತೀವ್ರ ಸಂಕಷ್ಟದಲ್ಲಿದ್ದು, ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮದ ಮೂಲಕ ರೈತರಿಗೆ ಹೆಚ್ಚುವರಿ ಆದಾಯ ಒದಗಿಸುವ ಮತ್ತು ಪ್ರವಾಸಿಗರಿಗೆ ಅದ್ಭುತ ಅನುಭವ ಹಲವಾರು ಅವಕಾಶಗಳಿವೆ ಎಂದು ಬ್ಯಾಂಕಿಂಗ್, ವ್ಯಕ್ತಿತ್ವ ವಿಕಸನ ತರಬೇತುದಾರ ಮತ್ತು ವೃತ್ತಿ ಮಾಗ೯ದಶ೯ಕ, ಆರ್.ಕೆ.ಬಾಲಚಂದ್ರ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರರ‍್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಮಂಗಳವಾರ ಕುಶಾಲನಗರ ಗೌಡ ಸಮಾಜದಲ್ಲಿ ಆಯೋಜಿಸಿದ್ದ ‘ನೇಗಿಲಯೋಗಿ’ ಪ್ರಶಸ್ತಿ ಪ್ರದಾನ ಕರ‍್ಯಕ್ರಮದಲ್ಲಿ ಅವರು ‘ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮ-ಹಲವು ಆಯಾಮಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕೊಡಗಿನಲ್ಲಿ ಸುಮಾರು 1.05 ಲಕ್ಷ ಹೆಕ್ಟೇರ್ ಕಾಫಿ ತೋಟವಿದೆ. ಭಾರತದ ಒಟ್ಟು ಕಾಫಿ ಉತ್ಪಾದನೆಯ ಸುಮಾರು ಶೇ.30ರಷ್ಟು ಇಲ್ಲೇ ಬೆಳೆಯುತ್ತದೆ. ಆದರೆ ಕಳೆದ ಎರಡು ದಶಕಗಳಲ್ಲಿ ಕಾಫಿ ಬೆಲೆಯ ಏರಿಳಿತ, ಹವಾಮಾನ ಬದಲಾವಣೆ, ಕೂಲಿ ಕರ‍್ಮಿಕರ ಕೊರತೆ, ಕಾಡಾನೆ ಹಾವಳಿ ಇವೆಲ್ಲ ರೈತರ…
ಮಡಿಕೇರಿ ಮಾ.20 NEWS DESK : ಕುಂಜಿಲ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮೇ6 ರಿಂದ 10ರವರೆಗೆ ಕಕ್ಕಬ್ಬೆಯ ಪ್ರೌಢ ಶಾಲಾ ಮೈದಾನದಲ್ಲಿ ಜಮಾಅತ್ ಮಟ್ಟದ “ಕೊಡಗು ಕಪ್” ಕ್ರಿಕೆಟ್ ಸೀಸನ್-2 ಪಂದ್ಯಾವಳಿಯನ್ನು ಆಯೋಜಿಸಲಾಗಿದೆಯೆಂದು ಕ್ಲಬ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಶರೀಫ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿರುವ ಜಮಾಅತ್‍ಗಳಿಗೆ ಸಂಬಂಧಿಸಿದ ತಂಡಗಳು ಈ ಪಂದ್ಯಾವಳಿಯಲ್ಲಿ ಸ್ಪರ್ಧಿಸಲಿವೆ. ಪಂದ್ಯಾವಳಿಯಲ್ಲಿ 60 ರಿಂದ 70 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆಸಕ್ತ ತಂಡಗಳು ಮೇ1ರ ಒಳಗಾಗಿ 3ಸಾವಿರ ರೂ. ಪ್ರವೇಶ ಶುಲ್ಕದೊಂದಿಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ.9845225284ನ್ನು ಸಂಪರ್ಕಿಸಬಹುದೆಂದರು. ಪಂದ್ಯಾವಳಿ ವಿಜೇತ ತಂಡಕ್ಕೆ 66,666 ರೂ. ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ 33,333 ರೂ. ಮತ್ತು ಆಕರ್ಷಕ ಟ್ರೋಫಿ, ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆಯುವ ತಂಡಗಳಿಗೂ ಆಕರ್ಷಕ ಬಹುಮಾನಗಳನ್ನು ವಿತರಿಸಲಾಗುತ್ತದೆಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಪಂದ್ಯಗಳು 6 ಓವರ್‍ಗಳಿಗೆ ಸೀಮಿತವಾಗಿ ನಡೆಯಲಿದೆ. ತಂಡಗಳಿಗೆ ಸಮವಸ್ತ್ರ…
ಮಡಿಕೇರಿ ಏ.21 NEWS DESK : ಕೊಡವರ ಹೊಸವರ್ಷ ಎಡಮ್ಯಾರ್ ಮಾಸಿಕ ಸ್ಮರಣಾರ್ಥ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ ಹಿರಿಯರಿಗೆ ಪುಷ್ಪನಮನ ಸಲ್ಲಿಸಿತು. ಕೊಡವ ನರಮೇಧ ದುರಂತ ಹತ್ಯಾಕಾಂಡ ಸ್ಮಾರಕ ಸ್ಥಳ ದೇವಟ್ ಪರಂಬುವಿಗೆ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಭೇಟಿ ನೀಡಿದ ಸದಸ್ಯರು ಹಿರಿಯರನ್ನು ಸ್ಮರಿಸಿ ಪುಷ್ಪನಮನ ಅರ್ಪಿಸಿದರು. ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ ವೆನಿಸ್ ಚಾರ್ಟರ್ 1964ರ ವಿಧಿ 7 ಮತ್ತು ಭಾರತೀಯ ಸಂವಿಧಾನದ ವಿಧಿ 49ರ ಅಡಿಯಲ್ಲಿ ದೇವಟ್ ಪರಂಬ್ ಹತ್ಯಾಕಾಂಡ ಸ್ಥಳದಲ್ಲಿ “ಅಂತಾರಾಷ್ಟ್ರೀಯ ಕೊಡವ ಜನಾಂಗೀಯ ಹತ್ಯಾಕಾಂಡ ಸ್ಮಾರಕ’ವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ದೇವಟ್ ಪರಂಬ್ ದುರಂತ ಹತ್ಯಾಕಾಂಡವನ್ನು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಹತ್ಯಾಕಾಂಡ ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕು. ಸೂಕ್ಷ್ಮ, ಏಕ-ಜನಾಂಗೀಯ, ಆದಿಮಸಂಜಾತ, ಅನಿಮಿಸ್ಟಿಕ್ ನಂಬುಗೆಯ, ಪ್ರಕೃತಿಯನ್ನು ಆರಾಧಿಸುವ ಕೊಡವ ಯೋಧ ಕುಲಕ್ಕೆ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯನ್ನು ನೀಡಬೇಕು. ಕೊಡವ ಯೋಧ ಕುಲವನ್ನು ಭಾರತೀಯ ಸಂವಿಧಾನದ ಬುಡಕಟ್ಟು ಪಟ್ಟಿಗೆ ಸೇರ್ಪಡೆಗೊಳಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ…
ಮಡಿಕೇರಿ NEWS DESK ಏ.21 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.22 ರ ಪಂದ್ಯಗಳು>>> *ಮೈದಾನ 1* ಬೆಳಿಗ್ಗೆ 8 ಗಂಟೆಗೆ ಮೋಟನಾಳಿರ ಮತ್ತು ಚೌರೀರ, 9.30ಕ್ಕೆ ಮಚ್ಚಮಾಡ ಮತ್ತು ಸರ್ಕಂಡ, 11ಕ್ಕೆ ಪಾಂಡ್ಯoಡ ಮತ್ತು ಪೊನ್ನಚಂಡ, ಮಧ್ಯಾಹ್ನ 12ಕ್ಕೆ ಮುಕ್ಕಾಟಿರ (ಬೇತ್ರಿ) ಮತ್ತು ಮಾದೆಯಂಡ (ಮಾದಾಪುರ) ಹಾಗೂ 1 ಗಂಟೆಗೆ ಗೀಜಿಗಂಡ ಮತ್ತು ಬೊಳ್ಳೆಪಂಡ *ಮೈದಾನ 2* ಬೆಳಿಗ್ಗೆ 9 ಗಂಟೆಗೆ ಚೇರಂಡ ಮತ್ತು ಕೋಳೇರ, 10ಕ್ಕೆ ಮೂಕಳೇರ ಮತ್ತು ಕೂತಂಡ, 11ಕ್ಕೆ ಪಾರುವಂಡ ಮತ್ತು ಬೊಳ್ಳಚಟ್ಟೀರ, ಮಧ್ಯಾಹ್ನ 12ಕ್ಕೆ ಕೋಲುಮಾಡಂಡ (ರ‍್ವತ್ತೊಕ್ಲು) ಮತ್ತು ಚೊಟ್ಟಂಗಡ, 1ಕ್ಕೆ ಮುಕ್ಕಾಟಿರ (ಹರಿಹರ ಬೆಳ್ಳೂರು) ಮತ್ತು ಕಂಗoಡ *ಮೈದಾನ 3* ಮಹಿಳಾ ಕ್ರಿಕೆಟ್* ಬೆಳಿಗ್ಗೆ 10 ಗಂಟೆಗೆ ಮಂಡoಗಡ ಮತ್ತು ಮಚ್ಚಮಾಡ (ತಾವಳಗೇರಿ), 11ಕ್ಕೆ ಪಾಸುರ ಮತ್ತು ಕಟ್ಟೇರ (ಅರಮೇರಿ), ಮಧ್ಯಾಹ್ನ 12ಕ್ಕೆ ಚೆಕ್ಕೇರ ಮತ್ತು ಅಚ್ಚಪ್ಪಂಡ, 1ಕ್ಕೆ…






