ಮಡಿಕೇರಿ ಜು.10 : ಕೊಡಗಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 23.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 20.18 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1521.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1900.41 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.52 ಮಿ.ಮೀ. ಕಳೆದ ವರ್ಷ ಇದೇ ದಿನ 39.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2229.72 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2679.05 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.41 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.57 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1124.09 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1492.43 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 22.03 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…
ಲೇಖಕ: admin
ಮಡಿಕೇರಿ ಜು.28 : ಕೊಡಗು ಗೌಡ ಸಮಾಜ, ಮಡಿಕೇರಿ ಗೌಡ ಸಮಾಜ ಮತ್ತು ಜಿಲ್ಲೆಯ ಎಲ್ಲಾ ಗೌಡ ಸಮಾಜಗಳ ಸಂಘಟನೆಗಳ ಸಹಯೋಗದಲ್ಲಿ ಶಾಸಕದ್ವಯರನ್ನು ಸನ್ಮಾನಿಸಲಾಯಿತು. ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾಂಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಹಾಗೂ ಎಲ್ಲಾ ಗೌಡ ಸಮಾಜಗಳ ಮತ್ತು ಸಂಘಟನೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜನಾಂಗ ಬಾಂಧವರು ಹಾಜರಿದ್ದರು.
ಸುಂಟಿಕೊಪ್ಪ,ಜು.28: ಸುಂಟಿಕೊಪ್ಪದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಯಿತು. ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಹರದೂರು ಗ್ರಾ.ಪಂ ಅಧ್ಯಕ್ಷ ಬಿ.ಡಿ.ಪದ್ಮನಾಭ ಉದ್ಘಾಟಿಸಿ, ನಮ್ಮ ದೇಶದ ವೀರ ಯೋಧರು ಪಾಕ್ ಸೈನಿಕರ ವಿರುದ್ಧ ಗೆಲುವು ಸಾಧಿಸಿದ ಮಹತ್ವದ ದಿನವಾಗಿದೆ. ಕಾರ್ಗಿಲ್ ಯುದ್ಧದ ಗೆಲುವು ಭಾರತೀಯ ಯೋಧರ ಧೈರ್ಯ, ತ್ಯಾಗ, ಬಲಿದಾನದ ಸಂಕೇತವಾಗಿದೆ ಎಂದರು. ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ಮಾತನಾಡಿ, ಕಾರ್ಗಿಲ್ ವಿಜಯ್ ದಿವಸ ವಿಜಯ್ ದಿವಸ್ ಮಾತ್ರವಲ್ಲದೆ ಈ ಯುದ್ಧದಲ್ಲಿ ಹುತಾತ್ಮರಾದ 527 ಮಂದಿ ವೀರ ಯೋಧರನ್ನು ನೆನೆಯುವ ಮತ್ತು ಅವರುಗಳಿಗೆ ನಮನಗಳನ್ನು ಸಲ್ಲಿಸುವ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಸರಕಾರವು ಗಮನಹರಿಸಿ ಜಿಲ್ಲಾಡಳಿತ ವತಿಯಿಂದ ಸರಕಾರಿ ಕಾರ್ಯಕ್ರಮವಾಗಿ ನಡೆಸುವಂತಾಗಬೇಕೆಂದು ಮನವಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಮಲ್ಟಿ ಮಿಡಿಯದ ಸಿಬ್ಬಂದಿಗಳು ಹಾಗೂ ಸುಂಟಿಕೊಪ್ಪದ ದೇಶಭಕ್ತ ಬಂಧುಗಳು ಪಾಲ್ಗೊಂಡಿದರು.
ಕುಶಾಲನಗರ ಜು.28 : ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಆರು ಜನ ಪತ್ರಕರ್ತರು ಭಾಜನರಾಗಿದ್ದಾರೆ. ತಾಲೂಕು ಸಂಘದ ವತಿಯಿಂದ ಈ ಬಾರಿ 6 ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಸಂಘದ ಸದಸ್ಯರಾದ ವನಿತಾ ಚಂದ್ರಮೋಹನ್ ಅವರ ತಾಯಿ ಐನಮಂಡ ಲೀಲಾವತಿ ಗಣಪತಿ ಅವರು ತಮ್ಮ ಪತಿ ದಿ. ಐನಮಂಡ ಗಣಪತಿ ಅವರ ಸ್ಮರಣಾರ್ಥ ಅತ್ಯುತ್ತಮ ಮಾನವೀಯ ವರದಿಗೆ ರಘು ಹೆಬ್ಬಾಲೆ ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡ “ಜಲ ಸಂಕಟಕ್ಕೆ ಸಿಗುವುದೇ ಮುಕ್ತಿ” ವರದಿಗೆ ಲಭಿಸಿದೆ. ಸಂಘದ ಸದಸ್ಯ ಎಂ.ಎನ್ ಚಂದ್ರಮೋಹನ್ ಅವರು ತಮ್ಮ ತಂದೆ ತಾಯಿ ದಿ. ಎಂ ನಾರಾಯಣ, ಎನ್ ಪದ್ಮಾವತಿ ಅವರ ಸ್ಮರಣಾರ್ಥ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಗೆ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರಕಟಕೊಂಡ ಹೆಚ್.ವಿ.ವಿನೋದ್ ಬರೆದ ಕುಶಾಲನಗರದಲ್ಲಿ ಅಕ್ರಮ ಬಡಾವಣೆ ದಂಧೆ ವರದಿಗೆ ದೊರೆತಿದೆ. ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರ ಅತ್ಯುತ್ತಮ ರಾಜಕೀಯ ವರದಿಯ ಪ್ರಶಸ್ತಿ ಕುಶಾಲನಗರ…
ಮಡಿಕೇರಿ ಜು.28 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಶೈಕ್ಷಣಿಕ ಸಾಧನೆಗೈದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.30 ರಂದು ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮ ಸಂಚಾಲಕ ಹೆಚ್.ಜೆ. ರಾಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಬೆಳಿಗ್ಗೆ 10.30ಕ್ಕೆ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಗಾರರಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕನ್ನಡ ಪಾಧ್ಯಾಪಕಿ, ಸಾಹಿತಿಯೂ ಆಗಿರುವ ಡಾ. ಕವಿತಾ ರೈ ಪಾಲ್ಗೊಳ್ಳಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಸಮಾಜ ಸೇವಕ ಟಿ.ಆರ್. ವಾಸುದೇವ್, ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಜೈರುಸ್ ಥೋಮಸ್ ಅಲೆಗ್ಸಾಂಡರ್ ಭಾಗವಹಿಸಲಿದ್ದಾರೆ.…
ಮಡಿಕೇರಿ ಜು.27 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮೀಪದ ಅಂಗನವಾಡಿ ಕೇಂದ್ರದ ಬಳಿ ಬೃಹತ್ ಮರಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಅಂಗನವಾಡಿ ಕೇಂದ್ರದ ತಡೆಗೋಡೆ ಬಳಿ ಬೃಹದಾಕಾರದ ಮರಗಳಿದ್ದು, ಇದರ ಕೊಂಬೆಗಳು ಅಂಗನವಾಡಿ ಕೇಂದ್ರದ ಮೇಲೆ ಬಾಗಿ ನಿಂತಿವೆ. ಅಪಾಯದ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಬಹಳ ಹಿಂದೆಯೇ ಅರಣ್ಯ ಇಲಾಖೆ ಮತ್ತು ಸಂಬಂಧಿಸಿದವರಿಗೆ ಮನವಿ ಸಲ್ಲಿಸಿದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಪ್ರತಿದಿನ 15 ಮಕ್ಕಳು ಹಾಜರಾಗುತ್ತಿದ್ದು, ಗಾಳಿ, ಮಳೆಯಿಂದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆ ತಕ್ಷಣ ಮರ ತೆರವಿಗೆ ಕ್ರಮ ಕೈಗೊಳ್ಳಬೇಕೆಂದು ಮಕ್ಕಳ ಪೋಷಕರು ಒತ್ತಾಯಿಸಿದ್ದಾರೆ. (ವರದಿ : ದಿನು ಬಾರನ-ಮದೆ)
ಮಡಿಕೇರಿ ಜು.27 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮೀಪದ ಅಂಗನವಾಡಿ ಕೇಂದ್ರದ ಬಳಿ ಬೃಹತ್ ಮರವೊಂದು ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಅಂಗನವಾಡಿ ಕೇಂದ್ರದ ತಡೆಗೋಡೆ ಪಕ್ಕದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಗೆ ಸಂಬಂಧಿಸಿದ ವಸತಿ ಗೃಹದ ಬಳಿ ಬೃಹದಾಕಾರದ ಮರಗಳಿದ್ದು, ಇದರ ಕೊಂಬೆಗಳು ಅಂಗನವಾಡಿ ಕೇಂದ್ರದ ಮೇಲೆ ಬಾಗಿ ನಿಂತಿದೆ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಅರಣ್ಯ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಇದುವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ವಿಪರ್ಯಾಸ. ಈ ಅಂಗನವಾಡಿ ಕೇಂದ್ರಕ್ಕೆ ನಿತ್ಯವೂ 15 ಮಕ್ಕಳು ಹಾಜರಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಪಾಯದಂಚಿನಲ್ಲಿರುವ ಮರಗಳ ಕೊಂಬೆಗಳನ್ನು ತೆರವುಗೊಳಿಸುವಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಪೋಷಕರು ಒತ್ತಾಯಿಸಿದ್ದಾರೆ. ವರದಿ : ದಿನು ಬಾರನ-ಮದೆ
ಮಡಿಕೇರಿ ಜು.29 : ಭಾರಿ ಗಾಳಿ ಮಳೆಯಿಂದ ಬೃಹತ್ ಮರ ಬಿದ್ದು ಹಾನಿಗೊಳಗಾಗಿದ್ದ ಹಾತೂರು ಗ್ರಾ.ಪಂ ವ್ಯಾಪ್ತಿಯ ಕೊಳತೋಡು ಬೈಗೊಡು ಗ್ರಾಮದ ನಿವಾಸಿ ಮುಕ್ಕಟಿರ ಶೋಭಾ ಎಂಬವರ ಮನೆಯನ್ನು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಪರಿಶೀಲಿಸಿದರು. ನಂತರ ಕುಟುಂಬಸ್ಥರೊಂದಿಗೆ ಮಾಹಿತಿ ಪಡೆದು ಸೂಕ್ತ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಗ್ರಾ.ಪಂ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಕಾಯ೯ಕತ೯ರು ಹಾಜರಿದ್ದರು.
ಮಡಿಕೇರಿ ಜು.27 : ಸಾರ್ವಜನಿಕರಿಗೆ ತೊಂದರೆ ಮಾಡದೆ ಜನರ ಕಷ್ಟಗಳನ್ನು ನಿವಾರಿಸಲು ಎಲ್ಲಾ ಹಂತದ ಅಧಿಕಾರಿಗಳು ಜವಾಬ್ದಾರಿಯುತ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ. ಮಡಿಕೇರಿ ತಾಲ್ಲೂಕಿನ ಸಂಪಾಜೆಯಲ್ಲ್ಲಿ ನೂತನವಾಗಿ ನಿರ್ಮಿಸಿರುವ ನಾಡ ಕಚೇರಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಕಂದಾಯ ಇಲಾಖೆ ಜೊತೆ ಸಾರ್ವಜನಿಕರು ನೇರ ಸಂಪರ್ಕ ಹೊಂದಿದ್ದು, ಸರ್ಕಾರದ ಹಲವು ಯೋಜನೆಗಳ ಪ್ರಮಾಣ ಪತ್ರಕ್ಕೆ ನಾಡ ಕಚೇರಿಗೆ ಆಗಮಿಸುತ್ತಾರೆ. ಆದ್ದರಿಂದ ನಾಗರಿಕರನ್ನು ಸತಾಯಿಸದೆ ಸ್ಪಂದಿಸುವಂತಾಗಬೇಕು ಎಂದು ಶಾಸಕರು ನುಡಿದರು. ಕಂದಾಯ ಇಲಾಖೆ ಜನರಿಗೆ ನೇರವಾಗಿ ಸ್ಪಂದಿಸಬೇಕು ಸರ್ವೆ ಹಾಗೂ ಇನ್ನಿತರ ದಾಖಲೆಗಳನ್ನು ಜನರಿಗೆ ಕಾಲಮಿತಿಯಲ್ಲಿ ನೀಡಬೇಕು. ಸಂಪಾಜೆಗೆ ಹೊಸ ನಾಡ ಕಚೇರಿ ಕಟ್ಟಡ ಕಲ್ಪಿಸಿದ್ದು, ಜನರು ಹಾಗೂ ಅಧಿಕಾರಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು, ಜನ ಸೇವೆ ಅತಿ ಮುಖ್ಯವಾಗಿದ್ದು, ಹಿರಿಯ ಅಧಿಕಾರಿಗಳಿಂದ ಹಿಡಿದು ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಜನರ ಸೇವೆ ಮಾಡಬೇಕು, ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು…
ಮಡಿಕೇರಿ ಜು.27 : ಶಿಕ್ಷಣ ಸಚಿವಾಲಯ ಮತ್ತು ಕೇಂದ್ರೀಯ ವಿದ್ಯಾಲಯ ಸಂಘಟನೆ, ನವದೆಹಲಿಯಿಂದ ಸ್ವೀಕರಿಸಿದ ಆದೇಶದ ಪ್ರಕಾರ, ಕೇಂದ್ರೀಯ ವಿದ್ಯಾಲಯ ಕೊಡಗು ಎನ್‍ಇಪಿ 2020ರ 3ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎನ್‍ಇಪಿ 2020 ಉಪಕ್ರಮಗಳು, ಉತ್ತಮ ಅಭ್ಯಾಸಗಳನ್ನು ಎನ್‍ಇಪಿ 2020 ಅನುಷ್ಠಾನದ ಸಾಧನೆಗಳನ್ನು ಪ್ರಸಾರ ಮಾಡಲು ಕೊಡಗು ಕೇಂದ್ರೀಯ ವಿದ್ಯಾಲಯದ ಆವರಣದಲ್ಲಿ ಜು.28 ರಂದು ಬೆಳಗ್ಗೆ 11 ಗಂಟೆಗೆ ಮಾಹಿತಿ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಸರ್ಕಾರಿ/ ಖಾಸಗಿ/ ಅನುದಾನಿತ ಶಾಲೆಗಳ ಸಂಸ್ಥೆಯ ಪ್ರಾಂಶುಪಾಲರು/ ಮುಖ್ಯಸ್ಥರು, ಆಯಾಯ ಶಾಲೆಗಳ 2 ಶಿಕ್ಷಕರು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.






