ಲೇಖಕ: admin

ಸೋಮವಾರಪೇಟೆ ಜು.25 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸ್ವಸಹಾಯ ಸಂಘಗಳ ಗುಂಪುಗಳಿಗೆ ಮತ್ತು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಬಗೆಗಿನ ಜಾಗೃತಿ ಸಭೆ ಪಟ್ಟಣ ಪಂಚಾಯಿತಿಯಲ್ಲಿ ನಡೆಯಿತು. ಮುಖ್ಯಾಧಿಕಾರಿ ನಾಚಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈಗಾಗಲೇ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗಿದೆ. ಆದರೂ ಅಂಗಡಿ, ಮುಂಗಟ್ಟುಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅನೇಕ ಕಡೆ ರೈಡ್ ಮಾಡಿ ದಂಡ ವಿಧಿಸಲಾಗುತ್ತಿದೆ. ಸಾರ್ವಜನಿಕರು ಕೂಡ ಪ್ಲಾಸ್ಟಿಕ್ ಖರೀದಿಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ವಸ್ತುಗಳನ್ನು ಖರೀದಿಸುವ ಸಂದರ್ಭ ಜೊತೆಯಲ್ಲಿ ಬಟ್ಟೆಯ ಬ್ಯಾಗ್‍ಗಳನ್ನು ತೆಗೆದುಕೊಂಡು ಹೋಗಬೇಕು. ಪ್ಲಾಸ್ಟಿಕ್‍ನಿಂದ ಪರಿಸರದ ಮೇಲೆ ದೊಡ್ಡಮಟ್ಟದ ದುಷ್ಪರಿಣಾಮ ಬೀರುತ್ತಿದ್ದು, ಇದನ್ನು ನಾವೆಲ್ಲರೂ ಜವಾಬ್ದಾರಿಯಿಂದ ತಡೆಯಬೇಕಾಗಿದೆ ಎಂದರು. ವೇದಿಕೆಯಲ್ಲಿ ಅರೋಗ್ಯ ನಿರೀಕ್ಷಕ ಜಾಸಿಮ್‍ಖಾನ್, ಸದಸ್ಯರಾದ ಶೀಲಾ ಡಿಸೋಜ, ಮೃತ್ಯುಂಜಯ, ಬಿ.ಆರ್.ಮಹೇಶ್ ಇದ್ದರು. 

Read More

ಸೋಮವಾರಪೇಟೆ: ಜೈಜವಾನ್ ಮಾಜಿ ಸೈನಿಕರ ಸಂಘದ ವತಿಯಿಂದ ಪತ್ರಿಕಾಭವನ ಸಭಾಂಗಣದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಹಾಗೂ ಯೋಧರಿಗೆ ಸಂತಾಪ ಸಭೆ ನಡೆಯಿತು. ಸಿಆರ್‍ಪಿಎಫ್ ನಿವೃತ್ತ ಡೆಪ್ಯೂಟಿ ಕಮಾಡೆಂಟ್ ಮಂಜುನಾಥ್, ಅಮರ್ ಜವಾನ್ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ಸೈನಿಕರಿಗೆ ದೇಶ ಮೊದಲು, ನಂತರ ಕುಟುಂಬ ಎಂಬಂತೆ ಕೆಲಸ ಮಾಡುತ್ತಾರೆ. ನಾನು ಯುವಕನಾಗಿದ್ದಾಗ ಕ್ರೀಡಾಪಟುವಾಗಿದ್ದೆ, ನಂತರ ಸೈನ್ಯಕ್ಕೆ ಸೇರಿ ದೇಶಸೇವೆಯೊಂದಿಗೆ ಕ್ರೀಡೆಯಲ್ಲೂ ಸಾಧನೆ ಮಾಡಿದ್ದೇನೆ. ಜಮ್ಮು ಕಾಶ್ಮೀರದಲ್ಲೂ ಹತ್ತು ವರ್ಷ ಸೇವೆ ಮಾಡಿದ್ದೇನೆ. ನನ್ನ ಸೇವೆ ಸಂದರ್ಭದಲ್ಲೂ ಅನೇಕ ಸ್ನೇಹಿತರ ಬಲಿದಾನವಾಗಿದೆ. ಇವತ್ತು ದೇಶದ ಜನತೆ ನೆಮ್ಮದಿಯಿಂದ ಇರಬೇಕೆಂದರೆ ಸೈನಿಕರ ತ್ಯಾಗ ಪಾಲು ಇದೆ ಎಂದು ಹೇಳಿದರು. ಸಂಘದ ಅಧ್ಯಕ್ಷ ಬಿ.ಆರ್.ಈರಪ್ಪ ಮಾತನಾಡಿ, 24 ವರ್ಷದ ಹಿಂದೆ ನಡೆದ ಕಾರ್ಗಿಲ್ ಯುದ್ದದಲ್ಲಿ 520 ಯೋಧರು ಪ್ರಾಣತ್ಯಾಗ ಮಾಡಿ ಗೆಲುವು ತಂದುಕೊಟ್ಟಿದ್ದಾರೆ. ಪ್ರತಿಯೊಬ್ಬರು ದೇಶವನ್ನು, ದೇಶದ ಯೋಧರನ್ನು ಗೌರವಿಸಬೇಕು. ದೇಶಪ್ರೇಮಿಗಳೆಲ್ಲರೂ ಭಾರತದ ಸೈನಿಕರೆ ಎಂದು ಹೇಳಿದರು. ಬಾಲಪ್ರತಿಭೆ ಶ್ರೀಶಾ ಮಾತನಾಡಿ, ಕಾರ್ಗಿಲ್ ಯುದ್ದದಲ್ಲಿ ಅತ್ಯಂತ ಪರಾಕ್ರಮಿ…

Read More

ಮಡಿಕೇರಿ ಜು.26 : ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ತೋಟದ ಕಾರ್ಮಿಕರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಅತ್ತೂರು ನಲ್ಲೂರು ಗ್ರಾಮದಲ್ಲಿ ನಡೆದಿದೆ. ಕಾರ್ಮಿಕ ವಿಜಯ್ ಕುಮಾರ್  (59) ತೀವ್ರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತೂರು ನಲ್ಲೂರು ಗ್ರಾಮದ ತೋಟಕ್ಕೆ ಕೆಲಸಕ್ಕೆಂದು ಬುಧವಾರ ಬೆಳಗ್ಗೆ ತೆರಳುತ್ತಿದ್ದ ಕಾರ್ಮಿಕರ ಗುಂಪಿನ ಮೇಲೆ ಕಾಡಾನೆ ದಾಳಿ ಮಾಡಿದೆ. ಉಳಿದ ಕಾರ್ಮಿಕರು ಓಡಿ ಹೋದರಾದರೂ ದಾಳಿಯಿಂದ ತಪ್ಪಿಸಿಕೊಳ್ಳಲಾಗದ ವಿಜಯಕುಮಾರ್ ಅವರ ಎದೆಯ ಭಾಗಕ್ಕೆ ಘಾಸಿ ಉಂಟಾಯಿತು. ತಕ್ಷಣ ಅವರಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡರು.

Read More

ಮಡಿಕೇರಿ ಜು.26 : ಪ್ರಸಕ್ತ(2023-24) ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾಗೊಳಿಸಲು ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕ ಅಧಿಸೂಚಿಸಲಾಗಿದೆ. ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಯನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು ರೂ. 47 ಸಾವಿರ ಹಾಗೂ ಅಡಿಕೆ ಬೆಳೆಗೆ ರೂ. 128000 ಆಗಿರುತ್ತದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ. 5ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಾಗಿರುತ್ತದೆ. ವಿಮಾ ನೋಂದಣಿಗೆ ಜುಲೈ, 31 ಕೊನೆಯ ದಿನವಾಗಿದೆ.…

Read More

ಮಡಿಕೇರಿ ಜು.26 : ಕರ್ನಾಟಕ ರಾಜ್ಯದ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ ನೀಡುವ “ಗೃಹಲಕ್ಷ್ಮಿ” ಯೋಜನೆ ಅನುಷ್ಠಾನದಲ್ಲಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರ, ಎಲ್ಲಾ ಗ್ರಾಮ ವ್ಯಾಪ್ತಿಯಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಗೆ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಮಂಜೂರಾತಿ ಪತ್ರ ಪಡೆಯಬಹುದಾಗಿದೆ. ಮಡಿಕೇರಿ ನಗರಸಭಾ ವ್ಯಾಪ್ತಿಗೆ ಸಂಬಂಧಿಸಿದಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಹದೇವಪೇಟೆ, ಬೂಸ್ಟರ್ ಪಂಪ್ ಹೌಸ್ (ಮೈತ್ರಿ ಹಾಲ್ ಹತ್ತಿರ), ಡಾ.ಅಂಬೇಡ್ಕರ್ ಭವನ, ಸುದರ್ಶನ ಸರ್ಕಲ್, ಅಂಬೇಡ್ಕರ್ ಭವನ, ಆಜಾದ್‍ನಗರ, ಮಡಿಕೇರಿ ಇಲ್ಲಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಾರ್ಯಾಲಯ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಪಟ್ಟಂತೆ ವಿರಾಜಪೇಟೆ ಪಟ್ಟಣ ಪಂಚಾಯಿತಿ ಕಾರ್ಯಾಲಯಗಳಲ್ಲಿ ಸೇವಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದೆ. ಕುಶಾಲನಗರ ಪುರಸಭೆ ವ್ಯಾಪ್ತಿಗೆ ಸಂಬಂಧಿಸಿದಂತೆ ಕುಶಾಲನಗರ ಪುರಸಭಾ ಕಾರ್ಯಾಲಯ,…

Read More

ಮಡಿಕೇರಿ ಜು.26 : ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಮಣಿಪುರದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಆರ್.ಭರತ್ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. ಮಣಿಪುರದಲ್ಲಿ ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿರುವ ಕೋಮು ಸಂಘರ್ಷ ಅತ್ಯಂತ ಗಂಭೀರ ಸ್ವರೂಪ ಪಡೆಯುತ್ತಿದ್ದು, ಮಹಿಳೆಯರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಕೇಂದ್ರ ಸರ್ಕಾರವಾಗಲೀ, ಅಲ್ಲಿನ ರಾಜ್ಯ ಸರ್ಕಾರವಾಗಲೀ ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದು ಖಂಡನೀಯ ಎಂದರು. ಜಿಲ್ಲಾ ಪ್ರಧನಾ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿ, ಮಣಿಪುರದ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ಅಲ್ಲಿನ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ತಕ್ಷಣವೇ ಮಣಿಪುರದಲ್ಲಿ ಶಾಂತಿ ಸ್ಥಾಪಿಸಲು…

Read More

ಮಡಿಕೇರಿ ಜು.26 : ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮಾಜವನ್ನು ಸರಿದಾರಿಯಲ್ಲಿ ನಡೆಯುವಂತೆ ಮಾಡಲು ಮಾಧ್ಯಮಗಳು ಅತ್ಯವಶ್ಯಕ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಎ.ಎಸ್.ಪೊನ್ನಣ್ಣ ಹೇಳಿದರು. ಕೊಡಗು ಪತ್ರಕರ್ತರ ಸಂಘದ ವೀರಾಜಪೇಟೆ ತಾಲೂಕು ಘಟಕ ಹಾಗೂ ಅರಮೇರಿ ಕಳಂಚೇರಿ ಮಠದ ಸಂಯುಕ್ತಾಶ್ರಯದಲ್ಲಿ ಅರಮೇರಿ ಮಠದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ದಾರಿ ತಪ್ಪಿದಾಗ ಎಚ್ಚರಿಸಬೇಕಾದುದು ಮಾದ್ಯಮಗಳ ಜವಾಬ್ದಾರಿಯಾಗಿದೆ. ಸಂವಿಧಾನದಲ್ಲಿ ಪತ್ರಿಕಾ ರಂಗವನ್ನು ನಾಲ್ಕನೇಯ ಅಂಗವಾಗಿ ಗುರುತಿಸಲಾಗಿದ್ದು, ಪತ್ರಿಕಾ ರಂಗದ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಪೊನ್ನಣ್ಣ ನುಡಿದರು. ಪತ್ರಿಕೆಗಳನ್ನು ನಡೆಸುವವರು ಇಂದಿನ ಕಾಲಘಟ್ಟದಲ್ಲಿ ಸಂಕಷ್ಟದಲ್ಲಿದ್ದಾರೆ. ಸಾಮಾಜಿಕ ಜಾಲತಾಣಗಳ ಭರಾಟೆಯಿಂದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿದೆ.ಬಹಳಷ್ಟು ನಕಲಿ ಪತ್ರಕರ್ತರು ಹುಟ್ಟಿಕೊಳ್ಳುತಿದ್ದು, ಪತ್ರಕರ್ತರ ಸಂಘಗಳು ಅಂಥವರಿಗೆ ಕಡಿವಾಣ ಹಾಕುವ ಕೆಲಸ ಮಾಡಬೇಕು. ಉತ್ತಮವಾದ ಪತ್ರಿಕೆಗಳು ಮತ್ತು ಉತ್ತಮ ಪತ್ರಕರ್ತರನ್ನು ಉಳಿಸುವ ಕೆಲಸವಾಗಬೇಕು. ಪತ್ರಕರ್ತರ ಸಂಘಗಳು ಸದೃಢವಾಗಬೇಕು ಎಂದು ಅಭಿಪ್ರಾಯಪಟ್ಟರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಶಕ್ತಿ ದಿನ…

Read More

ಮಡಿಕೇರಿ ಜು.26 :  ಮಡಿಕೇರಿ ತಾಲೂಕಿನ ಬಾಡಗ ಬಳಿ ಚ.14 ರಿಂದ 16 ಕಿ.ಮೀ ವರೆಗೆ ವಿರಾಜಪೇಟೆ ಬೈಂದೂರು ರಸ್ತೆಯಲ್ಲಿ ಮಳೆ ನೀರು ಸಾರಾಗವಾಗಿ ಹರಿಯುವಂತಾಗಲು ಚರಂಡಿ ಮಾರ್ಗ ವನ್ನು ಸ್ವಚ್ಚಗೊಳಿಸಲಾಯಿತು.

Read More

ಮಡಿಕೇರಿ ಜು.26  : ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜು.30ರಂದು ನಡೆಯಲಿದೆ. ಯುವ ಬಂಟ್ಸ್ ಅಸೋಸಿಯೇಷನ್ ಮುಂದಾಳತ್ವದಲ್ಲಿ ಗಾಳಿಬೀಡುವಿನ ಹೊರಮಲೆ‌ ಶಿವಪ್ರಸಾದ್ ರೈ ಅವರ ಭತ್ತದ ಗದ್ದೆಯಲ್ಲಿ ‘ಆಟಿಡೊಂಜಿ ದಿನ ಕೆಸರ್ದ ಗೊಬ್ಬು’ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ 16 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು ಎಂದು ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಬಿ.ಡಿ.ಜಗದೀಶ್ ರೈ ಹಾಗೂ ಕಾರ್ಯದರ್ಶಿ ರವೀಂದ್ರ ವಿ. ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ ಜು.26 : ಮುಂಬರುವ ಮಹಾರಾಜ ಟ್ರೋಫಿ- 2023ಕ್ಕಾಗಿ ಸೈಕಲ್ ಪ್ಯೂರ್ ಅಗರಬತ್ತಿ ಒಡೆತನದ ಮೈಸೂರು ವಾರಿಯರ್ಸ್ ತಂಡದಿಂದ ಜು.29 ರಂದು ಮೈಸೂರಿನಲ್ಲಿ ಟ್ಯಾಲೆಂಟ್ ಹಂಟ್ ನಡೆಯಲಿದೆ. ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ಸ್ನ ಹೆಮ್ಮೆಯ ಮಾಲೀಕರಾದ ಸೈಕಲ್ ಪ್ಯೂರ್ ಅಗರಬತ್ತಿ, ಕರ್ನಾಟಕದ ವಿವಿಧ ಪ್ರದೇಶಗಳಿನ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಮುಂಬರುವ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 2023 ಸರಣಿಗಾಗಿ ಜುಲೈ 29 ರಂದು ಮೈಸೂರು ನಗರದ ಎಸ್‌ಎನ್‌ಡಿಆರ್ ಕ್ರೀಡಾಂಗಣದಲ್ಲಿ ಟ್ಯಾಲೆಂಟ್ ಹಂಟ್ ಅನ್ನು ಆಯೋಜಿಸಿದೆ. ಈ ಕಾರ್ಯಕ್ರಮ ದೂರದ ಪ್ರದೇಶಗಳ ಮಹತ್ವಾಕಾಂಕ್ಷಿ ಕ್ರೀಡಾಪಟುಗಳನ್ನು ವಿಶೇಷವಾಗಿ ಕ್ರಿಕೆಟ್ ಕ್ಷೇತ್ರದಲ್ಲಿನ ಪ್ರತಿಭೆಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ. ರಾಜ್ಯದ ಎಲ್ಲಾ ಉದಯೋನ್ಮುಖ ಪ್ರತಿಭೆಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಬಹುದು ಮತ್ತು ಈ ವರ್ಷದ ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಪಡೆದುಕೊಳ್ಳಬಹುದು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಅಡಿಯಲ್ಲಿ ನೋಂದಾಯಿತ ಕ್ಲಬ್‌ಗಳನ್ನು ಪ್ರತಿನಿಧಿಸುವ ಅತ್ಯುತ್ತಮ…

Read More