ಮಡಿಕೇರಿ ಜು.26 : ಮುಂಬರುವ ಮಹಾರಾಜ ಟ್ರೋಫಿ- 2023ಕ್ಕಾಗಿ ಸೈಕಲ್ ಪ್ಯೂರ್ ಅಗರಬತ್ತಿ ಒಡೆತನದ ಮೈಸೂರು ವಾರಿಯರ್ಸ್ ತಂಡದಿಂದ ಜು.29 ರಂದು ಮೈಸೂರಿನಲ್ಲಿ ಟ್ಯಾಲೆಂಟ್ ಹಂಟ್ ನಡೆಯಲಿದೆ. ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ಸ್ನ ಹೆಮ್ಮೆಯ ಮಾಲೀಕರಾದ ಸೈಕಲ್ ಪ್ಯೂರ್ ಅಗರಬತ್ತಿ, ಕರ್ನಾಟಕದ ವಿವಿಧ ಪ್ರದೇಶಗಳಿನ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಮುಂಬರುವ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 2023 ಸರಣಿಗಾಗಿ ಜುಲೈ 29 ರಂದು ಮೈಸೂರು ನಗರದ ಎಸ್‌ಎನ್‌ಡಿಆರ್ ಕ್ರೀಡಾಂಗಣದಲ್ಲಿ ಟ್ಯಾಲೆಂಟ್ ಹಂಟ್ ಅನ್ನು ಆಯೋಜಿಸಿದೆ. ಈ ಕಾರ್ಯಕ್ರಮ ದೂರದ ಪ್ರದೇಶಗಳ ಮಹತ್ವಾಕಾಂಕ್ಷಿ ಕ್ರೀಡಾಪಟುಗಳನ್ನು ವಿಶೇಷವಾಗಿ ಕ್ರಿಕೆಟ್ ಕ್ಷೇತ್ರದಲ್ಲಿನ ಪ್ರತಿಭೆಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ. ರಾಜ್ಯದ ಎಲ್ಲಾ ಉದಯೋನ್ಮುಖ ಪ್ರತಿಭೆಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಬಹುದು ಮತ್ತು ಈ ವರ್ಷದ ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಪಡೆದುಕೊಳ್ಳಬಹುದು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಅಡಿಯಲ್ಲಿ ನೋಂದಾಯಿತ ಕ್ಲಬ್‌ಗಳನ್ನು ಪ್ರತಿನಿಧಿಸುವ ಅತ್ಯುತ್ತಮ…
ಲೇಖಕ: admin
ಮಡಿಕೇರಿ ಜು.26 : ಕೊಡಗು ಜಿಲ್ಲೆಯ ಮಾಜಿ ಸೈನಿಕರ ಪ್ರಮುಖ ಬೇಡಿಕೆಯಾಗಿರುವ ಮಡಿಕೇರಿಯಲ್ಲಿ ಸಮುದಾಯ ಭವನ ನಿಮಾ೯ಣ ಸಂಬಂಧಿತ ಸಕಾ೯ರದ ಮಟ್ಟದಲ್ಲಿ ಚಚಿ೯ಸಿ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಹೇಳಿದ್ದಾರೆ. ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ರೋಟರಿ ವುಡ್ಸ್ ವತಿಯಿಂದ ನೆಹರು ಯುವಕೇಂದ್ರ ಹಾಗೂ ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ಸಹಯೋಗದಲ್ಲಿ ಆಯೋಜಿತ ಕಾಗಿ೯ಲ್ ದಿನಾಚರಣೆ ಕಾಯ೯ಕ್ರಮದಲ್ಲಿ ಪಾಲ್ಗೊಂಡು ನಿವೖತ್ತ ವಾಯುಸೇನಾಧಿಕಾರಿ ಕಿಗ್ಗಾಲು ಗಿರೀಶ್ ಅವರನ್ನು ಸನ್ಮಾನಿಸಿ ಮಂಥರ್ ಗೌಡ ಮಾತನಾಡಿದರು. ಜಿಲ್ಲೆಯಲ್ಲಿ 5000 ಕ್ಕೂ ಅಧಿಕ ನಿವೖತ್ತ ಯೋಧರಿದ್ದಾರೆ. ಬೇರೆ ಜಿಲ್ಲೆಗಳಲ್ಲಿ ನಿವೖತ್ತ ಯೋಧರಿಗೆ ಅವರದ್ದೇ ಆದ ಸಮುದಾಯ ಭವನಗಳಿದೆ. ಆದರೆ ಬಹಳ ವಷ೯ಗಳಿಂದಲೂ ಮಾಜಿ ಸೈನಿಕರ ಮುಖ್ಯ ಬೇಡಿಕೆಯಾಗಿದ್ದ ಸಮುದಾಯ ಭವನದ ಅಗತ್ಯತೆ ಇಂದಿಗೂ ಈಡೇರಿಲ್ಲ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿರುವ ತಾನು ಜಿಲ್ಲಾಡಳಿತದ ಮೂಲಕ ಸೂಕ್ತ ನಿವೇಶನ ಗುರುತಿಸಿ ಸಮುದಾಯ ಭವನವನ್ನು ಮಾಜಿ ಸೈನಿಕರ ಸಂಘಕ್ಕೆ ನೀಡುವ…
ಮಡಿಕೇರಿ ಜು.26 : ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‌ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆಸಲ್ಲಿಸಲು ಯುವಕ, ಯುವತಿಯರಿಂದ ಆನ್‌ಲೈನ್ ಅರ್ಜಿಗಳನ್ನುಆಹ್ವಾನಿಸಲಾಗಿದೆ. 13 Oct 2023 ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗಾಗಿ, ಪಿಯುಸಿ (ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೊಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ. 50 ಮತ್ತು ಇಂಗ್ಲಿಷ್‌ನಲ್ಲಿ ಶೇ. 50 ಅಂಕಗಳೊಂದಿಗೆ, ಉತ್ತೀರ್ಣರಾದ ಅವಿವಾಹಿತ ಯುವಕ, ಯುವತಿಯರಿಂದ ಆನ್‌ಲೈನ್ ಅರ್ಜಿಗಳನ್ನುಆಹ್ವಾನಿಸಲಾಗಿದೆ. ಆನ್‌ಲೈನ್ ನೋಂದಣಿ ಜು. 27 ರಿಂದ ಆ.17ರ ವರೆಗೆ ತೆರೆದಿರುತ್ತದೆ. ಅಭ್ಯರ್ಥಿಗಳು 2003 ಜೂನ್ 27 ರಿಂದ 2006 ಡಿಸೆಂಬರ್ 27ರ ನಡುವೆ (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ಜನಿಸಿದವರಾಗಿರಬೇಕು. ಆನ್‌ಲೈನ್ ಅರ್ಜಿ ನೋಂದಣಿಗಾಗಿ https://agnipathvayu.cdac.in ವೆಬ್ಸೈಟ್ ಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನೋಂದಣಿಗೆ 2023 ಆಗಸ್ಟ್ 17 ಕೊನೆಯ ದಿನ. ಹೆಚ್ಚಿನ ವಿವರಗಳಿಗಾಗಿ https://careerindianairforce.cdac.in ವೆಬ್ಸೈಟ್ ಗೆ ಭೇಟಿ ನೀಡಿ.
ಮಡಿಕೇರಿ ಜು.26 : ಗಾಳಿಬೀಡು ಗ್ರಾ.ಪಂ ಗೆ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೇಟಿ ನೀಡಿದರು. ಗ್ರಾ.ಪಂ ಅಧಿಕಾರಿಗಳೊಂದಿಗೆ ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ಹಾಗೂ ತುರ್ತು ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ನಂತರ ವಣಚಲು ಗ್ರಾಮಕ್ಕೆ ಭೇಟಿ ನೀಡಿ ಬರೆ ಕುಸಿತ ಉಂಟಾದ ಸ್ಥಳ ವನ್ನು ಪರಿಶೀಲಿಸಿದರು. ಇದೇ ಸಂದರ್ಭ ಗಾಳಿಬೀಡು ಮುಖ್ಯ ರಸ್ತೆಯನ್ನು ದುರಸ್ತಿ ಪಡಿಸಿ ರಸ್ತೆ ಅಗಲೀಕರಣ ಮಾಡಿಸುದಾಗಿ ಸಚಿವರು ಭರವಸೆ ನೀಡಿದರು. ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.
ಕುಶಾಲನಗರ, ಜು.26: ವಿದ್ಯಾರ್ಥಿ ಸಮುದಾಯದಲ್ಲಿ ಉತ್ತಮ ವ್ಯಕ್ತಿತ್ವ ಹಾಗೂ ಉತ್ತಮ ನಾಗರಿಕನನ್ನಾಗಿ ರೂಪಿಸಲು ಸಹಕಾರಿಯಾಗಿರುವ ರಾಷ್ಟ್ರೀಯ ಸೇವಾ ಯೋಜನೆ( ಎನ್.ಎಸ್.ಎಸ್.)ಯ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಭವಿಷ್ಯದ ಕುರಿತು ಸಾಮಾಜಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕಲಿಸುವುದರೊಂದಿಗೆ ಅವರಲ್ಲಿ ಸೇವಾ ಮನೋಭಾವನೆ ಬೆಳೆಸಲು ಸೂಕ್ತ ವೇದಿಕೆ ಒದಗಿಸುತ್ತದೆ ಎಂದು ರಾಜ್ಯ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಪ್ರತಾಪ್ ಲಿಂಗಯ್ಯ ಹೇಳಿದರು. ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮೈಸೂರು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಯೋಜನೆ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಎನ್‌ಎಸ್‌ಎಸ್ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಸರ್ಕಾರಿ ಪ್ರೌಢಶಾಲೆಗಳ ಎನ್‌ಎಸ್‌ಎಸ್ ಘಟಕಗಳ ಮುಖ್ಯ ಶಿಕ್ಷಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳಿಗೆ ಏರ್ಪಡಿಸಿದ್ದ ಎನ್‌ಎಸ್‌ಎಸ್ ಕಾರ್ಯಾಗಾರವನ್ನು ಉದ್ಘಾಟಿಸಿ ಎನ್‌ಎಸ್‌ಎಸ್.ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಎನ್.ಎಸ್.ಎಸ್. ಶಾಲಾ – ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು- ಸಂಯಮ, ಸೇವಾ ಮನೋಭಾವನೆ, ರಾಷ್ಟ್ರೀಯ ಭಾವೈಕ್ಯತೆ, ಸೇವಾ ಮನೋಭಾವ ಬೆಳೆಸುವುದರೊಂದಿಗೆ ಅವರಲ್ಲಿ ಉತ್ತಮ ನಾಯಕತ್ವ ಹಾಗೂ ವ್ಯಕ್ತಿತ್ವವನ್ನು ಬೆಳೆಸಲು ಉತ್ತಮ ಅವಕಾಶ ಕಲ್ಪಿಸುತ್ತದೆ ಎಂದರು.…
ಮಡಿಕೇರಿ ಜು.26 : ಕೊಡಗು ಗೌಡ ಸಮಾಜ, ಮಡಿಕೇರಿ ಗೌಡ ಸಮಾಜ ಮತ್ತು ಜಿಲ್ಲೆಯ ಎಲ್ಲಾ ಗೌಡ ಸಮಾಜಗಳ ಸಂಘಟನೆಗಳ ಸಹಯೋಗದಲ್ಲಿ ಜು.28 ರಂದು ಶಾಸಕದ್ವಯರಿಗೆ ಅಭಿನಂದನಾ ಸಮಾಂಭವನ್ನು ಆಯೋಜಿಸಲಾಗಿದೆ ಎಂದು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶುಕ್ರವಾರ ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದ್ದಾರೆ. ಅಭಿವೃದ್ಧಿಪರ ಚಿಂತನೆಯ ಇಬ್ಬರು ಉತ್ಸಾಹಿ ಶಾಸಕರುಗಳು ಹೊಸ ಭರವಸೆಯನ್ನು ಮೂಡಿಸಿದ್ದು, ಇವರುಗಳನ್ನು ಗೌಡ ಜನಾಂಗದ ಮೂಲಕ ಅಭಿನಂದಿಸಿ ಮತ್ತಷ್ಟು ಪ್ರೋತ್ಸಾಹ ನೀಡುವ ಅಗತ್ಯವಿದೆ. ಆದ್ದರಿಂದ ಅಭಿನಂದನಾ ಸಮಾರಂಭದಲ್ಲಿ ಎಲ್ಲಾ ಗೌಡ ಸಮಾಜಗಳ ಮತ್ತು ಸಂಘಟನೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜನಾಂಗ ಬಾಂಧವರು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂರ್ತಲೆ ಸೋಮಣ್ಣ ಮನವಿ ಮಾಡಿದ್ದಾರೆ.
ಸೋಮವಾರಪೇಟೆ ಜು.26 : ಸಣ್ಣ ಕಾಫಿ ಬೆಳೆಗಾರರ 10ಹೆಚ್.ಪಿ.ವರೆಗಿನ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಬೇಕು. ಬಾಕಿ ವಿದ್ಯುತ್ ಬಿಲ್ ಮನ್ನಾ ಮಾಡದ್ದಿದ್ದರೆ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕ ಎಚ್ಚರಿಸಿದೆ. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ದಿನೇಶ್ ಪತ್ರಿಕಾಗೋಷ್ಠಿಯಲ್ಲಿ, ಪ್ರತಿವರ್ಷ ಅಕಾಲಿಕ ಮಳೆ, ಫಸಲು ಹಾನಿಯಿಂದ ನಷ್ಟದಲ್ಲಿರುವ ಸಣ್ಣ ಕಾಫಿ ಬೆಳೆಗಾರರ 10ಎಚ್.ಪಿ.ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ಮತ್ತು ವಿದ್ಯುತ್ ಬಾಕಿ ಬಿಲ್ ಮನ್ನಾ ಬೇಡಿಕೆಯಿಟ್ಟು ಹೋರಾಟ ಮಾಡುತ್ತಿದ್ದೇವೆ. ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕೆಲವು ನಿಂಬಂಧನೆ ಹಾಕಿ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಇದುವರಗೆ ಯವುದೇ ಕ್ರಮ ಆಗಿಲ್ಲ. ಇಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿವೇಶನದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು. ಜಿಲ್ಲೆಯ ಶಾಸಕರಿಬ್ಬರೂ ಮೌನಕ್ಕೆ ಶರಣಾಗಿದ್ದಾರೆ. ಚಿಕ್ಕಮಗಳೂರು, ಹಾಸನ ಜಿಲ್ಲೆಯ ಶಾಸಕರನ್ನು ಸೇರಿಸಿಕೊಂಡು ಸರ್ಕಾರದ ಮೇಲೆ ಒತ್ತಡ ತಂದು, ಉಚಿತ ವಿದ್ಯುತ್‍ಗೆ ಕಾನೂನಾತ್ಮಕ ಮಂಜೂರಾತಿ…
ಬೆಂಗಳೂರು: ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ್ದಾರೆ. ಬೆಂಗಳೂರಿನ ಇಂದಿರಾಗಾಂಧಿ ಉದ್ಯಾನವನದಲ್ಲಿರುವ ಹುತಾತ್ಮ ಯೋಧರ ಪ್ರತಿಮೆಗೆ ಪುಷ್ಪಗುಚ್ಛ ಇಟ್ಟು ನಮನ ಸಲ್ಲಿಸಿದರು. ಈ ಸಂದರ್ಭ ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಜರಿದ್ದರು. ನಂತರ ಟ್ವೀಟ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ನೆಲದ ಅಖಂಡತೆ ಮತ್ತು ಸಾರ್ವಭೌಮತೆಯ ರಕ್ಷಣೆಗಾಗಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಭಾರತಾಂಬೆಯ ವೀರ ಪುತ್ರರಿಗೆ ನನ್ನ ಗೌರವ ನಮನಗಳು. ಭಾರತೀಯ ಯೋಧರ ತ್ಯಾಗ- ಬಲಿದಾನ, ಸಮರ್ಪಣಾಭಾವವನ್ನು ಕಾರ್ಗಿಲ್ ವಿಜಯ ದಿನದಂದು ಹೆಮ್ಮೆಯಿಂದ ಸ್ಮರಿಸೋಣ ಎಂದರು.
ಸೋಮವಾರಪೇಟೆ ಜು.25 : ಡಾ. ಮಂಥರ್ ಗೌಡ ಅಭಿಮಾನಿ ಬಳಗದ ಉದ್ಘಾಟನೆ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ಸ್ಥಳೀಯ ಕೊಡವ ಸಮಾಜದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಡಾ.ಮಂಥರ್ ಗೌಡ, ಯುವ ಸಮುದಾಯವನ್ನು ದೇಶದ ಶಕ್ತಿಯನ್ನಾಗಿಸುವ ಜವಾಬ್ದಾರಿ ನಮ್ಮ ಮೇಲಿದೆ. ಡ್ರಗ್ಸ್ ಮುಕ್ತ ಕೊಡಗು ನಿರ್ಮಾಣದ ಸಂಕಲ್ಪ ನನ್ನದಾಗಿದ್ದು, ಇದಕ್ಕೆ ಜನತೆ ಸಹಕಾರ ನೀಡಬೇಕು ಎಂದರು. ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧವಾಗಿದ್ದು, ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಡ್ರಗ್ಸ್ ಮುಕ್ತ ಕೊಡಗು ನಿರ್ಮಾಣ, ಶಾಲಾ ಕಾಲೇಜುಗಳಲ್ಲಿ ಉತ್ತಮ ಪರಿಸರ ನಿರ್ಮಾಣ, ಪ್ರತಿ ಗ್ರಾಮಗಳಲ್ಲಿ ಯುವಕ ಸಂಘಗಳ ಬಲವರ್ಧನೆಗೆ ಶ್ರಮಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಹೆಚ್.ಆರ್. ಸುರೇಶ್, ವಿ.ಪಿ. ಶಶಿಧರ್, ಕೆ.ಎಂ. ಲೋಕೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಪ್ರಮುಖರಾದ ನಾಗೇಂದ್ರ ಬಾಬು, ಎಸ್.ಎಂ. ಚಂಗಪ್ಪ, ಕೆ.ಎ. ಯಾಕೂಬ್, ಬಿ.ಈ. ಜಯೇಂದ್ರ, ಡಾ. ಮಂಥರ್ ಗೌಡ ಅಭಿಮಾನಿ ಬಳಗದ ಅಧ್ಯಕ್ಷ ಸುಜಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಡಿಕೇರಿ ಜು.26 : ಸೋಮವಾರಪೇಟೆಯ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾನಗಲ್ಲು ಬಾಣೆ ಯಲ್ಲಿ ಮಳೆಹಾನಿ ಸಂಭವಿಸಿದ ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿ, ಜಿಲ್ಲೆಯಲ್ಲಿ ಇನ್ನೂ ಮಳೆಯಾಗುವುದರಿಂದ ಹೆಚ್ಚಿನ ಮುನ್ನೆಚ್ಚರ ವಹಿಸಬೇಕಿದೆ ಎಂದು ಶಾಸಕರು ಹೇಳಿದರು.






