ಲೇಖಕ: admin

ಮಡಿಕೇರಿ ಜು.26 : ಹಿಂದು ಜಾಗರಣ ವೇದಿಕೆ, ಮಡಿಕೇರಿ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ   ಮಡಿಕೇರಿಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಯಿತು. ನಗರದ ಮುಖ್ಯ ರಸ್ತೆಯಲ್ಲಿರುವ  ಯುದ್ಧ ಸ್ಮಾರಕಕ್ಕೆ ನಿವೃತ್ತ ಯೋಧರು, ಹಿಂದು ಜಾಗರಣ ವೇದಿಕೆ, ಹಿಂದು ಯುವ ವಾಹಿನಿ ಹಾಗೂ ದೇಶಾಭಿಮಾನಿಗಳು ಪುಷ್ಪರ್ಚನೆ ಮಾಡಿ ಗೌರವ ನಮನ ಸಲ್ಲಿಸಿ, ಸೈನಿಕರ ತ್ಯಾಗ ಬಲಿದಾವನ್ನು ಸ್ಮರಿಸಿದರು. ಈ ಸಂದರ್ಭ ಮಾತನಾಡಿದ  ಮಾಜಿ ಸೈನಿಕಾಧಿಕಾರಿ ಮೇಜರ್ ಬಿದ್ದಂಡ ನಂಜಪ್ಪ, ಗಡಿಯಲ್ಲಿದ್ದು ನಮ್ಮ ಜೀವವನ್ನು ಉಳಿಸುವ ಕೆಲಸ ಯೋಧರು ಮಾಡುತ್ತಿದ್ದು ಅವರನ್ನು ನಿತ್ಯ ಸ್ಮರಿಸಬೇಕು  ಹಾಗೂ ಮುಂದಿನ ಪಿಳಿಗೆಗೆಗೂ ಇದರ ಬಗ್ಗೆ ಅರಿವು ಮೂಡಬೇಕು ಎಂದರು. ಈ ಸಂದರ್ಭ  ಮಾಜಿ ಸೈನಿಕರು, ಗಣ್ಯರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು  ಪಾಲ್ಗೊಂಡಿದ್ದರು. ವಿಜಯ್ ದಿವಸ್ ಅಂಗವಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ  ರಕ್ತದಾನ ಶಿಬಿರ ನಡೆಯಿತು.

Read More

ಮಡಿಕೇರಿ ಜು.26 :  ಗಾಳಿಬೀಡು ಗ್ರಾ.ಪಂ  ವ್ಯಾಪ್ತಿಯ ಕಾಲೂರು ಗ್ರಾಮದ  ಮಳೆ  ಹಾನಿ ಪ್ರದೇಶಕ್ಕೆ  ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಭೋಸರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ  ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಅಧಿಕಾರಿಗಳು ಇದ್ದರು.

Read More

ಮಡಿಕೇರಿ ಜು.26 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2853.13 ಅಡಿಗಳು. ಕಳೆದ ವರ್ಷ ಇದೇ ದಿನ 2856.33 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 15.60 ಮಿ.ಮೀ., ಕಳೆದ ವರ್ಷ ಇದೇ ದಿನ 1.20 ಮಿ.ಮೀ. ಇಂದಿನ ನೀರಿನ ಒಳಹರಿವು 12861 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2648 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 12625 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 2800 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.

Read More

ಮಡಿಕೇರಿ ಜು.26 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 48.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.94 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1463.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1877.77 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 74.20 ಮಿ.ಮೀ. ಕಳೆದ ವರ್ಷ ಇದೇ ದಿನ 11.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2130.95 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2635.58 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.57 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1097.78 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1484.20 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 42.72 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.76 ಮಿ.ಮೀ.…

Read More

ಮಡಿಕೇರಿ ಜು.26 :  ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆ ಸರಹದ್ದಿನಲ್ಲಿ ನಿಷೇಧಿತ ಮಾದಕ ವಸ್ತು ಮಾರಟ ಮಾಡುತ್ತಿದ್ದ  ಎಂಟು ಮಂದಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿ, 1 ಕೆ.ಜಿ 243 ಗ್ರಾಂ  ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಅರೇಕಾಡು ನಿವಾಸಿ ರಶೀದ್ (23),  ಒಂಟಿಯಾಂಗಡಿ ನಿವಾಸಿ ಹೆಚ್.ಆರ್ ಸುದೀಶ್ (23),  ಮೈಸೂರಿನ ಕೆಸಿಪಿ ಕಾಲೋನಿ ನಿವಾಸಿ ಇಮ್ರಾನ್ ಖಾನ್ (35), ಮುರ್ತಾಮುಡಿಯ ಎಂ.ಪ್ರಕಾಶ್ (24), ಚೇರಂಬಾಂಣೆಯ ಹೆಚ್.ಎಂ.ಶಾಂತಕುಮಾರ್ (27), ಕಡಗದಾಳುವಿನ ಎಸ್.ಎಂ.ಸಜೀರ್ (37), ಎಂ.ಇ.ನಿಯಾಜ್ (35), ಮೈಸೂರಿನ ಶಾಂತಿನಗರ ನಿವಾಸಿ ಇಮ್ರಾನ್ ಖಾನ್ (46)  ಎಂಬುವವರೇ ಬಂಧಿತ ಆರೋಪಿಗಳು.   ಕದನೂರು ನಾಪೋಕ್ಲು ರಸ್ತೆ ಜಂಕ್ಷನ್ ಬಳಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ  ಆರೋಪಿಗಳಿಂದ 1 ಕೆ.ಜಿ 243 ಗ್ರಾಂ  ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.    ವಿರಾಜಪೇಟೆ ವೃತ್ತ ಸಿಪಿಐ ಬಿ.ಎಸ್.ಶಿವರುದ್ರಪ್ಪ, ಮತ್ತು ಪಿಎಸ್‌ಐ ಮಂಜುನಾಥ.ಸಿ.ಸಿ,  ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು…

Read More

ಮಡಿಕೇರಿ ಜು.26 :   ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಕೂಡ್ಲುರು ವಾರ್ಡ್ ನಂ.1ರ ಉಪಚುನಾವಣೆಯಲ್ಲಿ  ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಆರ್.ಸುರೇಶ್ ಗೆಲುವು ಸಾಧಿಸಿದ್ದಾರೆ. ಈ ಹಿಂದೆ ಇದ್ದ ಸದಸ್ಯ ಅಕಾಲಿಕ ಮರಣದಿಂದ ತೆರವಾಗಿದ್ದ  ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಆರ್.ಸುರೇಶ್  ಬಿಜೆಪಿ ಅಭ್ಯರ್ಥಿಯನ್ನು ಮಣಿಸಿ 82 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಸುರೇಶ್ ಗೆಲುವಿಗೆ ಸಹಕರಿಸಿದ ಶಾಸಕ ಡಾ. ಮಂತರ್ ಗೌಡ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ವಿ ಪಿ ಶಶಿಧರ್, ಕೊಡಗು ಜಿಲ್ಲಾ ಕಾಂಗ್ರೆಸ್  ನ ಮಾಜಿ ಅಧ್ಯಕ್ಷ  ಕೆ.ಕೆ.ಮಂಜುನಾಥ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ವಲಯ ಘಟಕಾಧ್ಯಕ್ಷ  ಹೀರಪ್ಪ ಹಾಗೂ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರುಗಳು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್  ಅಧ್ಯಕ್ಷ  ಧರ್ಮಜ ಉತ್ತಪ್ಪ ಹಾಗೂ ಪ್ರಮುಖರು ಸುರೇಶ್ ಗೆ  ಶುಭಹಾರೈಸಿ, ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಜು.26 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮೂರ್ನಾಡು-ನಾಪೋಕ್ಲು ರಸ್ತೆ ಮಾರ್ಗದ ಹೊದ್ದೂರು ಬಳಿ ನೀರು ತುಂಬಿ ಜಲಾವೃತಗೊಂಡಿದ್ದು, ಸಾರಿಗೆ ಸಂಚಾರಕ್ಕೆ ವ್ಯತ್ಯಯವಾಗಿದೆ.

Read More

ಮಡಿಕೇರಿ ಜು.26 : ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಪ್ ಇಂಡಿಯಾ(ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೋಡ್ಲು ಕಾವೇರಿ ಯುವ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆ.12 ರಂದು ಮಡಿಕೇರಿ ತಾಲ್ಲೂಕು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ದೇವಯ್ಯ ಅವರ ಗದ್ದೆಯಲ್ಲಿ 2023-24 ನೇ ಸಾಲಿನ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆ ನಡೆಯಲಿದೆ. ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಆಗಸ್ಟ್, 12 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್, ಅಧ್ಯಕ್ಷರು ಕೊಡಗು ಜಿಲ್ಲಾ ಯುವ ಒಕ್ಕೂಟ ಮಡಿಕೇರಿ 9481213920, ಬಾಳಾಡಿ ದಿಲೀಪ್ ಕುಮಾರ್, ಅಧ್ಯಕ್ಷರು, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ 8618568173, ಕುಂಜಿಲನ ಎಂ.ಮೋಹನ್, ಖಜಾಂಜಿ, ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ 9480646382, ನವೀನ್…

Read More

ಮಡಿಕೇರಿ ಜು.26 : ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ 2023-24 ನೇ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಟರ್ನರು 13 ಸ್ಥಾನ ಮತ್ತು ಬಿಡಿವಿವಿ 24 ಸ್ಥಾನಗಳು ಖಾಲಿಯಿದ್ದು, ಖಾಲಿ ಉಳಿದಿರುವ ಸ್ಥಾನಗಳನ್ನು ನೇರವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.31 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಡಿಕೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.  

Read More

ಮಡಿಕೇರಿ ಜು.26 : ರೋಟರಿ ವುಡ್ಸ್ ವತಿಯಿಂದ  ಕಾರ್ಗಿಲ್ ವಿಜಯೋತ್ಸವ ನಡೆಯಿತು. ನಗರದ ಜನರಲ್ ತಿಮ್ಮಯ್ಯ ಮ್ಯೂಸಿಯಂನ ‘ಅಮರ್ ಜವಾನ್’ ಸ್ಮಾರಕದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಭೋಸರಾಜು  ಪುಷ್ಪನಮನ‌ ಸಲ್ಲಿಸಿ ಯೋಧರಿಗೆ ಗೌರವ ಸಲ್ಲಿಸಿದರು. ಈ ಸಂದರ್ಭ  ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ರೋಟರಿ ವುಡ್ಸ್ ಅಧ್ಯಕ್ಷ  ವಸಂತ್ ಕುಮಾರ್, ಕಾರ್ಯದರ್ಶಿ ಕಿಗ್ಗಾಲು ಗಿರೀಶ್,  ಮಾಜಿ ಸೈನಿಕರು, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ ಬೆಳ್ಳಿಯಪ್ಪ, ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಹಾಗೂ  ಇತರರು ಇದ್ದರು.

Read More