ಮಡಿಕೇರಿ ಜು.26 : ನೈಸರ್ಗಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 56 ಕೋಟಿ ರೂ ಇದ್ದು, ಪ್ರಸಕ್ತ ಅವಧಿಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಿದಲ್ಲಿ 20 ಕೋಟಿ ರೂ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಮಂಗಳವಾರ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು. ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಈಗಾಗಲೇ ಬಿಡುಗಡೆ ಆಗಿರುವ ಅನುದಾನವನ್ನು ಸರಿಯಾಗಿ ಬಳಸಬೇಕು. ಒಂದು ತಿಂಗಳಲ್ಲಿ ಮನೆ ಕಾಮಗಾರಿಗಳು ಮತ್ತು ಇತರೆ ಹಳೇ ಕಾಮಗಾರಿಗಳ ಕೆಲಸ ಆಗಿದ್ದಲ್ಲಿ ಹಣ ಪಾವತಿಸಬೇಕು. ಹಾಗೆಯೇ ಕಾಮಗಾರಿ ಆರಂಭಿಸದಿದ್ದಲ್ಲಿ ನೋಟೀಸು ನೀಡಿ ಮಾಹಿತಿ ಪಡೆದು ಮುಕ್ತಾಯಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾಮಗಾರಿ ಬಾಕಿ ಇದ್ದಲ್ಲಿ ಸರ್ಕಾರದ ಹಂತದಲ್ಲಿ ಮಾಹಿತಿ ನೀಡುವುದು ಕಷ್ಟವಾಗುತ್ತದೆ. ಆದ್ದರಿಂದ ಮನೆ ಕಾಮಗಾರಿಗಳು ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪದಡಿ ತೆಗೆದುಕೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಂದಾಯ…
ಲೇಖಕ: admin
ಮಡಿಕೇರಿ ಜು.25 : ರಾಜ್ಯದ ವಿವಿಧೆಡೆ ಜು.28 ರವರೆಗೆ ಮಳೆ ಮುಂದುವರೆಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಧಿಕಾರಿಗಳು ಪ್ರತಿಕ್ಷಣ ಸನ್ನದ್ಧರಾಗಿರಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇ ಗೌಡ ತಿಳಿಸಿದ್ದಾರೆ.NEWSDESK ಮಡಿಕೇರಿಯಲ್ಲಿ ಮಳೆಹಾನಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದು ವಾರದಿಂದ ರಾಜ್ಯವ್ಯಾಪಿ ಉತ್ತಮ ಮಳೆಯಾಗಿದೆ. ರಾಜ್ಯದ ನಾಲ್ಕು ಜಲಾಶಯಗಳು ಶೇ.50 ರಷ್ಟು ಭರ್ತಿಯಾಗಿವೆ. ಅತಿಮಳೆಯಿಂದ ದೊಡ್ಡ ಪ್ರಮಾಣದ ಹಾನಿಯಾಗದಿದ್ದರೂ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಮತ್ತು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದರು..NEWSDESK ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಳೆಹಾನಿ ಪರಿಹಾರ ಕೋರಿ ಮನವಿ ಸಲ್ಲಿಸಿದರೆ ಹಣ ನೀಡಲು ಸರ್ಕಾರ ಸಿದ್ಧವಿದೆ. ಪರಿಹಾರ ನೀಡಲು ಹಣದ ಕೊರತೆಯಿಲ್ಲ. ರಾಜ್ಯವ್ಯಾಪಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಮಳೆಹಾನಿ ಪರಿಹಾರದ ಹಣ ಒಟ್ಟು 540 ಕೋಟಿ ರೂ.ಗಳಿದೆ ಎಂದು ತಿಳಿಸಿದರು..NEWSDESK ::: ಉಳಿಕೆ ಸರಿಯಲ್ಲ ::: ಕೊಡಗು ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಕಳೆದ ವರ್ಷದ ಮಳೆಹಾನಿ ಪರಿಹಾರದ…
ಸೋಮವಾರಪೇಟೆ ಜು.25 : ಅಬ್ಬೂರುಕಟ್ಟೆ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಹೊಸಳ್ಳಿಯ ಕುಶಾಲಪ್ಪ ಅವರ ಗದ್ದೆಯಲ್ಲಿ ತಾಲೂಕು ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಹಾಗೂ ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕ್ರೀಡಾಕೂಟವನ್ನು ಉದ್ಘಾಟಿಸಿದ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಮಾತನಾಡಿ, ಒಕ್ಕಲುತನವೇ ಪ್ರಮುಖವಾಗಿರುವ ಒಕ್ಕಲಿಗ ಸಮುದಾಯ ನಾಡಿಗೆ ಅನ್ನ ನೀಡುವ ಅನ್ನದಾತನಿದ್ದಂತೆ. ಸಮುದಾಯ ಬಾಂಧವರು ಕೇವಲ ಕೃಷಿಯಲ್ಲಿ ಮಾತ್ರ ತೊಡಗಿಸಿಕೊಳ್ಳದೇ ಇತರ ಕ್ಷೇತ್ರಗಳತ್ತಲೂ ಗಮನಹರಿಸುತ್ತಿದ್ದಾರೆ. ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸಮುದಾಯ ಮುಂದೆ ಬರಬೇಕಿದೆ ಎಂದರು. ಕೆಸರು ಗದ್ದೆ ಕ್ರೀಡಾಕೂಟಗಳು ಪರಸ್ಪರ ಸಾಮರಸ್ಯ ವೃದ್ಧಿಗೆ ಸಹಕಾರಿಯಾಗಿವೆ. ಮಕ್ಕಳು ಮಹಿಳೆಯರು, ವೃದ್ದರಾದಿಯಾಗಿ ಎಲ್ಲಾ ವಯೋಮಾನದ ಮಂದಿ ಕೆಸರು ಗದ್ದೆಯ ಕ್ರೀಡಾಕೂಟದಲ್ಲಿ ಒಂದುಗೂಡುವುದರಿಂದ ನವ ಚೈತನ್ಯದೊಂದಿಗೆ ದೈಹಿಕ ಕ್ಷಮತೆಯನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಅಭಿಪ್ರಾಯಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ಹುಣಸೂರು ಕ್ಷೇತ್ರದ ಶಾಸಕ ಹರೀಶ್ ಗೌಡ ಅವರುಗಳು ಭಾಗವಹಿಸಿದ್ದರು. ಮಾತನಾಡಿದರು.…
ಸುಂಟಿಕೊಪ್ಪ ಜು.25: 7ನೇಹೊಸಕೋಟೆ ಗ್ರಾ.ಪಂ ಗೆ ಸೇರಿದ ಅಂದಗೋವೆ ಪೈಸಾರಿಯಲ್ಲಿ ಹಾಡುಹಗಲೇ ಕಾಡಾನೆಗಳು ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತು. ಉರಗ ತಜ್ಞ ಶಾಜಿ ಅವರ ಮನೆಯ ಮುಂಭಾಗದಲ್ಲಿ ಮರಿಯಾನೆಗೆ ಎರಡು ಕಾಡಾನೆಗಳು ಸಂಚರಿಸುತ್ತಿದ್ದು, ಗ್ರಾಮಸ್ಥರು ಬೊಬ್ಬೆ ಹೊಡೆದ ಪರಿಣಾಮ ಕಾಡಾನೆಗಳು ಊರಿನೊಳಗೆ ಪ್ರವೇಶಿಸಿದ್ದು, ಗ್ರಾಮಸ್ಥರು ಆತಂಕಗೊಂಡರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಡಾನೆಗಳನ್ನು ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾದರು.
ಮಡಿಕೇರಿ ಜು.25 : ಕೊಡಗು ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆಯ ಪ್ರಮಾಣ ಇಳಿಮುಖವಾಗಿದೆ. ಆದರೆ ನದಿ ನೀರಿನ ಪ್ರವಾಹ ತಗ್ಗದೆ ಇರುವುದರಿಂದ ಜನರ ಜೀವನ ಸಹಜ ಸ್ಥಿತಿಗೆ ಮರಳಿಲ್ಲ. ಗಾಳಿ ಮತ್ತು ಪ್ರವಾಹದಿಂದಾಗಿ ಹಲವೆಡೆ ಹಾನಿ ಸಂಭವಿಸಿದ್ದು, ಹಲವು ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ. ದಾಖಲೆಯ ಮಳೆಯಾಗಿದ್ದ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದೆ. ಶ್ರೀಭಗಂಡೇಶ್ವರ ದೇವಾಲಯವನ್ನು ಆವರಿಸಿದ್ದ ಪ್ರವಾಹದ ನೀರು ತಗ್ಗಿದ್ದು, ಜನರು ಆತಂಕದಿಂದ ಹೊರ ಬಂದಿದ್ದಾರೆ. ಆದರೆ ಸುತ್ತಮುತ್ತಲ ಗ್ರಾಮಗಳ ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿವೆ. ಮಡಿಕೇರಿ ನಗರದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದ್ದು, ಸಾಧಾರಣ ಮಳೆ, ಮಂಜು ಮತ್ತು ಚಳಿ ಗಾಳಿಯ ವಾತಾವರಣವಿದೆ. ಹಾರಂಗಿ ಜಲಾಶಯದಿಂದ ಬಿಟ್ಟ ನೀರು ಕುಶಾಲನಗರ ಪಟ್ಟಣದ ಸಾಯಿ ಬಡಾವಣೆ ಮತ್ತು ಕುವೆಂಪು ಬಡಾವಣೆಗೆ ನುಗ್ಗಿದ್ದು, ಇಲ್ಲಿನ ನಿವಾಸಿಗಳು ಕಣ್ಣೀರು ಹಾಕುತ್ತಿದ್ದಾರೆ. ನೀರಿನಿಂದಾಗಿ ವಸ್ತುಗಳಿಗೆ ಹಾನಿಯಾಗಿದ್ದು, ಪ್ರವಾಹಪೀಡಿತ ಪ್ರದೇಶದಲ್ಲಿ ಲೇಔಟ್ ಮಾಡಲು ಆಡಳಿತ ವ್ಯವಸ್ಥೆ ಯಾಕೆ…
ಮಡಿಕೇರಿ ಜು.25 : ಹಿಂದು ಜಾಗರಣ ವೇದಿಕೆ, ಮಡಿಕೇರಿ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಜು.26 ರಂದು ಕಾರ್ಗಿಲ್ ವಿಜಯ್ ದಿವಸ್ ಹಾಗೂ ರಕ್ತದಾನ ಶಿಬಿರ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಹುತಾತ್ಮ ಸೈನಿಕ ಯುದ್ಧ ಸ್ಮಾರಕದಲ್ಲಿ ಕಾಗಿ9ಲ್ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಗುವುದು. ಮಾಜಿ ಸೈನಿಕಾಧಿಕಾರಿ ಮೇಜರ್ ಬಿದ್ದಂಡ ನಂಜಪ್ಪ, ಮಾಜಿ ಸೈನಿಕರು, ಗಣ್ಯರು ಹಾಗೂ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಳ್ಳಲಿದ್ದು, ಹಿಂದು ಜಾಗರಣ ವೇದಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ಕೆ.ಟಿ.ಉಲ್ಲಾಸ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಹಿಂದು ಜಾಗರಣ ವೇದಕೆ ಕೊಡಗು ಜಿಲ್ಲಾ ಸಂಯೋಜಕರು ತಿಳಿಸಿದ್ದಾರೆ.
ಮಡಿಕೇರಿ ಜು.25 : ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಮಳೆಹಾನಿಗೆ ಸಂಬಂಧಿಸಿದಂತೆ ಶಾಸಕರು, ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯಿಂದ ವರದಿ ಪಡೆದುಕೊಂಡು ಸರ್ಕಾರ ಸೂಕ್ತ ಪರಿಹಾರವನ್ನು ಸೂಚಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಭರವಸೆ ನೀಡಿದ್ದಾರೆ. ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ನಾಳೆ (ಜು.26) ಮುಖ್ಯಮಂತ್ರಿಗಳು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ, ಜಿ.ಪಂ. ಸಿಇಓ, ಉಸ್ತುವಾರಿ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಳೆ, ಪ್ರವಾಹ ಹಾನಿ ಕುರಿತು ಮಾಹಿತಿ ಪಡೆಯಲಿದ್ದಾರೆ. ಗುರುವಾರ ಸಚಿವ ಸಂಪುಟದ ಸಭೆಯೂ ನಡೆಯಲಿದೆ. ಜಿಲ್ಲೆಯ ಮಾಹಿತಿಯನ್ನು ಕಲೆ ಹಾಕಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು. ಮಳೆಯಿಂದ ಉಂಟಾಗುವ ವಿಕೋಪಕ್ಕೆ ಶಾಶ್ವತ ಪರಿಹಾರದ ಬಗ್ಗೆಯೂ ತಜ್ಞರ ಸಮಿತಿ ಸೂಕ್ತ ಪರಿಹಾರೋಪಾಯದ ವರದಿ ನೀಡಲಿದೆ. ಈ ವರದಿಯಾನುಸಾರ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ. ಕುಶಾಲನಗರದ ಮಳೆಹಾನಿ ಪೀಡಿತ ಬಡಾವಣೆಗಳ ನಾಗರಿಕರು, ಜಿಲ್ಲೆಯ ಕಾಫಿ ಬೆಳೆಗಾರರು ಮಳೆಯಿಂದ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ…
ಮಡಿಕೇರಿ ಜು.25 : ನಾಪೋಕ್ಲು ವ್ಯಾಪ್ತಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದೆ. ಮೂರ್ನಾಡು ನಾಪೋಕ್ಲು, ಚೆರಿಯ ಪರಂಬು-ನಾಪೋಕ್ಲು, ಭಾಗಮಂಡಲ-ನಾಪೋಕ್ಲು ನಡುವಿನ ಸಂಪರ್ಕ ಕಡಿತಗೊಂಡಿದೆ. ಮಳೆ ಗಾಳಿಯಿಂದಾಗಿ ವಿವಿಧಡೆ ಮರಗಳು ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಹೋಬಳಿ ವ್ಯಾಪ್ತಿಯಲ್ಲಿ ನಿರಂತರ ಮಳೆ ಬಿರುಸಿನಿಂದ ಸುರಿಯುತ್ತಿದ್ದು, ಜೀವ ನದಿ ಕಾವೇರಿ ಪ್ರವಾಹ ತುಂಬಿ ಬಹುತೇಕ ಭಾಗಗಳಲ್ಲಿ ಹಳ್ಳ, ಕೊಳ್ಳಗಳು ಭರ್ತಿಯಾಗಿದೆ. ಕಾವೇರಿ ನದಿತೀರದ ಹಲವು ಗದ್ದೆಗಳು ಜಲಾವೃತವಾಗಿವೆ. ನಾಪೋಕ್ಲು- ಕೊಟ್ಟಮುಡಿ ಮಡಿಕೇರಿ ರಸ್ತೆಯಲ್ಲಿ ಕಾವೇರಿ ನದಿ ಪ್ರವಾಹ ಬಂದು ಸಂಚಾರ ಸ್ಥಗಿತಗೊಂಡಿದೆ. ಚೆರಿಯ ಪರಂಬು ಕಲ್ಲುಮೊಟ್ಟೆ ರಸ್ತೆಯಲ್ಲಿ ಪ್ರವಾಹದ ಮಟ್ಟ ಹೆಚ್ಚಳವಾಗಿ ಮನೆಗಳಿಗೆ ನೀರು ನುಗ್ಗುತ್ತಿದೆ.ಚೆರಿಯಪರಂಬು ಗ್ರಾಮದ ಅಲವು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಮಂಗಳವಾರವು ವರುಣನ ಆರ್ಭಟ ಮುಂದುವರೆದಿದ್ದು ಪ್ರವಾಹದ ಮಟ್ಟ ಮತ್ತೆ ಹೆಚ್ಚಳವಾಗುವ ಸಾಧ್ಯತೆ ಇದೆ.ಚೆರಿಯಪರಂಬು ಕಾವೇರಿ ನದಿ ದಂಡೆಯಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಸಚಿವರ ಭೇಟಿ ರದ್ದು :: …
ಮಡಿಕೇರಿ ಜು.25 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 19 ಪತ್ರಕರ್ತರು ಸೇರಿದ್ದಂತೆ ಒಟ್ಟು 50 ಜನ ರಕ್ತದಾನ ಮಾಡಿದರು. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹುಣಸೂರಿನ ಕಾವೇರಿ ಆಸ್ಪತ್ರೆ, ಕೊಡಗು ಹಿಂದೂ ಮಲಯಾಳಿ ಸಮಾಜ ಪಾಲಿಬೆಟ್ಟ ಉಪಸಮಿತಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರ, ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರ ಹಾಗೂ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಕ್ತದಾನ ಶಿಬಿರ ನಡೆಯಿತು. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ವಿವಿಧ ಸಂಘ- ಸಂಸ್ಥೆಗಳ ಸಹಯೋಗ ದೊಂದಿಗೆ ಪಾಲಿಬೆಟ್ಟದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಪಾಲಿಬೆಟ್ಟ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಅಜ್ಜಿನಿಕಂಡ ಶ್ಯಾಮ್‍ಚಂದ್ರ, ದಾನಗಳ ಪೈಕಿ ರಕ್ತದಾನಕ್ಕೆ ಪ್ರಾಮುಖ್ಯತೆ ಹೆಚ್ಚಿದೆ. ರಕ್ತದಾನ ಶಿಬಿರ ಆಯೋಜಿಸಲು…
ಮಡಿಕೇರಿ ಜು.25 : ಬೆಟ್ಟಗೇರಿಯ ಓಂ ಯುವಕ ಸಂಘದ ಕ್ರೀಡಾ ಸಮಿತಿ ವತಿಯಿಂದ ಜು.29 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ “ಹಿಂದು ಕಪ್” ನಡೆಯಲಿದೆ. ಅಂದು ಬೆಳಿಗ್ಗೆ 8.30ಕ್ಕೆ ಅರ್ವತ್ತೋಕ್ಲುವಿನ (ಅಪ್ಪಂಗಳ) ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ಕೆಸರುಗದ್ದೆ ಹಗ್ಗಜಗ್ಗಾಟ, ಕ್ರಿಕೆಟ್, ರಿಲೆ, ವಯೋಮಿತಿಯ ಓಟಗಳು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ತಿಳಿಸಿದ್ದಾರೆ.






