ಬೆಂಗಳೂರು ಜು.25 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ, ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಅರ್ಜಿ ಸಲ್ಲಿಕೆಗಾಗಿ ಯಾರಾದರೂ ಹಣ ನೀಡುವಂತೆ ಒತ್ತಾಯಿಸಿದಲ್ಲಿ ಅಥವಾ ಹಣ ಪಡೆದ ಬಗ್ಗೆ ದೂರುಗಳು ಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲು ಮಾಡಲಾಗುವುದು. ಮಧ್ಯವರ್ತಿಗಳ ಹಾವಳಿಯಿಲ್ಲದೆ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪಿಸಬೇಕು, ಸರ್ಕಾರದ ಯೋಜನೆಗಳ ಗರಿಷ್ಠ ಲಾಭ ಫಲಾನುಭವಿಗಳಿಗೆ ಸಿಗಬೇಕು ಎಂಬುದು ನಮ್ಮ ಆಶಯ ಎಂದರು.
ಲೇಖಕ: admin
ಮಡಿಕೇರಿ ಜು.25 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜು ಹಾಗೂ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಮಂಗಳವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದರು. ಭಾಗಮಂಡಲ, ಬೆಂಗೂರು, ಚೆರಂಬಾಣೆ ಮತ್ತಿತರ ಪ್ರದೇಶಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು. ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್‍ರಾಜಾ ಹಾಗೂ ಇತರ ಅಧಿಕಾರಿಗಳು ಇದ್ದರು.
ನಾಪೋಕ್ಲು ಜು.25 : ನಾಪೋಕ್ಲು ವ್ಯಾಪ್ತಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಭಾರಿ ಗಾಳಿ ಮಳೆಯಿಂದ ಸಮೀಪದ ಬಲಮುರಿ ಹಾಗೂ ಕಕ್ಕಬ್ಬೆ ನಾಲಡಿ ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗಿ ನಷ್ಟ ಉಂಟಾಗಿದೆ. ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯ ನಾಲಡಿ ಗ್ರಾಮದ ನಿವಾಸಿ ಕೆ.ಎಸ್. ಪೂವಣ್ಣ ಎಂಬುವವರ ಮನೆಯ ಮೇಲ್ಚಾವಣಿಯ ಹೆಂಚು ಹಾಗೂ ಶೀಟ್ ಗಳು ಬಾರಿ ಗಾಳಿ ಮಳೆಗೆ ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ. ಅದರಂತೆ ಬಲಮುರಿ ಗ್ರಾಮದ ನಿವಾಸಿ ಈರ ಎಂಬುವವರ ಮನೆಯ ಮೇಲ್ಚಾವಣಿಯ ಶೀಟ್ ಗಳು ಗಾಳಿ ಮಳೆಗೆ ಹಾರಿ ಹೋಗಿದ್ದು, ನಷ್ಟಉಂಟಾಗಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ :ಝಕರಿಯ ನಾಪೋಕ್ಲು
ಕಡಂಗ ಜು.25 : ಸಿದ್ದಾಪುರ ವರಕ್ಕಲ್ ಸಮಸ್ತ ಭವನದಲ್ಲಿ ಎಸ್ ವೈ ಎಸ್ ಕೊಡಗು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಡೆದ ಮುಹರಂ ಸಂಗಮ ಹಾಗೂ ಹಿಜರಿಯ ಸಂದೇಶ ಕಾರ್ಯಕ್ರಮದಲ್ಲಿ ನೂತನ ಎಸ್ ವೈ ಎಸ್ ಆಮಿಲ ಕೊಡಗು ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಒಟ್ಟು 70 ಸದಸ್ಯರನ್ನು ಒಳಗೊಂಡ ಆಮಿಲ ಸಮಿತಿಗೆ 21 ಕಾರ್ಯನಿರ್ವಾಹಕ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ ಹಾರಿಸ್ , ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ , ಜಿಲ್ಲಾ ವೀಕ್ಷಕರಾಗಿ ಮುಹಮ್ಮದ್ ಹಾಜಿ, ಕೋಶಾಧಿಕಾರಿಯಾಗಿ ಫ್ಯಾಶನ್ ಅಬ್ದುಲ್ ರಹ್ಮಾನ್ , ಉಪಾಧ್ಯಕ್ಷರುಗಳಾಗಿ ಅಬ್ದುಲ್ ರಹ್ಮಾನ್ ಕೊಡ್ಲಿಪೇಟೆ, ಸಯ್ಯದ್ ಸಲಾಂ ತಂಙಳ್ , ಸಹ ಕಾರ್ಯದರ್ಶಿಗಳಾಗಿ ರಝಾಕ್ , ಹನೀಫ್ ನೇಮಕಗೊಂಡರು. ಸದಸ್ಯರುಗಳಾಗಿ ಎಂ.ಸಿ.ಅಶ್ರಫ್ ಮೌಲವಿ, ಹಾಫಿಳ್ ಹಾರಿಸ್ ಮುಸ್ಲಿಯಾರ್ , ಮುಹಮ್ಮದ್ ಅಝ್ಹರಿ, ಸುಲೈಮಾನ್ ಸಿದ್ದಾಪುರ, ರಶೀದ್ , ಶರೀಫ್ ಶನಿವಾರಸಂತೆ, ಮಸೂದ್ ಸಿದ್ದಾಪುರ, ಜಂಶೀದ್ ಕಲ್ಲುಬಾಣೆ, ಅಶ್ರಫ್ , ಇಬ್ರಾಹಿಂ , ಸ್ವಾದಿಕ್ , ಸಲಾಂ ಹಾಗೂ…
ಸೋಮವಾರಪೇಟೆ ಜು.25 : ಇನ್ನರ್ ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಸೋಮವಾರಪೇಟೆಯ ಸಾಕ್ಷಿ ಸಭಾಂಗಣದಲ್ಲಿ ನೂತನ ಸಾಲಿನ ಅಧ್ಯಕ್ಷೆ ಸಂಧ್ಯಾ ಕೃಷ್ಣಪ್ಪ ಹಾಗೂ ಕಾರ್ಯದರ್ಶಿ ತನ್ಮಯಿ ಪ್ರವೀಣ್, ನಿಕಟಪೂರ್ವ ಜಿಲ್ಲಾ ಪ್ರಾಂತಪಾಲಕರಾದ ಡಾ. ಸಾರಿಕ ಪ್ರಸಾದ್ ಪ್ರಮಾಣವಚನ ಬೋಧಿಸಿದರು. ಪ್ರಪಂಚದಲ್ಲಿ ಅತಿ ದೊಡ್ಡ ಮಹಿಳಾ ಸಂಘಟನೆಯಾಗಿ ಇನ್ನರ್ ವೀಲ್ ಗುರುತಿಸಿಕೊಂಡಿದ್ದು, ಸೇವೆ ಮಾಡುವ ಮನಸ್ಸು ಇರುವವರು ಎಲ್ಲರೂ ಇದರಲ್ಲಿ ಸದಸ್ಯತ್ವ ಪಡೆಯಲು ಅವಕಾಶ ಇದೆ ಎಂದರು. ಅಧ್ಯಕ್ಷೆ ಸಂಧ್ಯಾ ಕೃಷ್ಣಪ್ಪ ಮಾತನಾಡಿ, ಮಹಿಳೆಯರ ಸಂಘಟನೆ, ಸೇವಾ ಮನೋಭಾವ ಮತ್ತು ಅವರಲ್ಲಿನ ಪ್ರತಿಭೆ ಗುರುತಿಸಿ ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಕೆಲಸ ಇನ್ನರ್ ವೀಲ್ ಕ್ಲಬ್ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರಕ್ತದಾನ ಮತ್ತು ನೇತ್ರದಾನ ನೋಂದಣಿಯಂತಹ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ವೇದಿಕೆಯಲ್ಲಿ ಜಿಲ್ಲಾ ಸಂಪಾದಕಿ ಉಮಾ ಮಹೇಶ್, ಮಾಜಿ ಅಧ್ಯಕ್ಷೆ ಪ್ರೇಮ ಹೃಷಿಕೇಶ್ ಇದ್ದರು. ಇದೇ ಸಂದರ್ಭ ನೂತನ ಸಾಲಿನ ಆಡಳಿತ ಮಂಡಳಿಯ…
ಮಡಿಕೇರಿ ಜು.25 : ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ಯೋಗಖಾತ್ರಿ ಯೋಜನೆಯ ಫಲಾನುಭವಿಗಳಿಗೆ ಅರಣ್ಯ ಇಲಾಖೆಯ ವತಿಯಿಂದ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಈ ಸಂದರ್ಭ ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಗಣೇಶ್, ಸದಸ್ಯರಾದ ನವೀನ್ ಅಜ್ಜಳ್ಳಿ, ಸಿ.ಈ.ವೆಂಕಟೇಶ್ ಪಿಡಿಒ ಲಿಖಿತ ಇದ್ದರು.
ಮಡಿಕೇರಿ ಜು.25 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಹೇಳಿದರು. ಕೊಂಡಂಗೇರಿ ವಲಯ ಕಾಂಗ್ರೆಸ್ ವತಿಯಿಂದ ಶಾದಿಮಲ್ ನಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿರಾಜಪೇಟೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಮೊದಲ ಗುರಿ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಯನ್ನು ಎಲ್ಲರೂ ಬಳಸಿ, ಸರ್ಕಾರದ ಯೋಜನೆಯ ಲಾಭವನ್ನು ಪಡೆಯಿರಿ. ಎಲ್ಲರೂ ಸಾಮಾಜಿಕ ಭದ್ರತೆ ಹಾಗೂ ಸೌಹಾರ್ದತೆಯಿಂದ ಪರಸ್ಪರ ಅನ್ಯೋನ್ಯತೆಯಿಂದ ಬದುಕಬೇಕು. ಕೊಂಡಂಗೇರಿ ಗ್ರಾಮಕ್ಕೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಭರವಸೆ ನೀಡಿದರು. ಪ್ರಾಸ್ತಾವಿಕ ಮಾತಾನಡಿದ ಹಾಲುಗುಂದ ಗ್ರಾ.ಪಂ ಸದಸ್ಯ ಅಬ್ದುರಹಮಾನ್ (ಅಂದಾಯಿ) ವಿರಾಜಪೇಟೆ ಕ್ಷೇತ್ರದಲ್ಲಿ 20 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷದ ಶಾಸಕರು ಗೆಲುವು ಸಾಧಿಸಲು ಕೊಂಡಂಗೇರಿ ಗ್ರಾಮದ ಜನತೆ ದೊಡ್ಡ ಕೊಡುಗೆ ನೀಡಿದ್ದಾರೆ. ಪ್ರತೀ ಬಾರಿಯ…
ಮಡಿಕೇರಿ ಜು.25 : ಕರಿಕೆ ಎಳ್ಳುಕೊಚ್ಚಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಹೊಸಮನೆ ಬಿ.ಚಂಗಪ್ಪ, ಕರಿಕೆ ಗ್ರಾಮದ ಹಲವು ದಿನಗಳ ಬೇಡಿಕೆಗಳಾದ ಮೊಬೈಟ್ ಟವರ್, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಸರಕಾರಿ ಬಸ್ ವ್ಯವಸ್ಥೆ, ಕಾಂಞಂಗಾಡ್-ಪಾಣತ್ತೂರು-ಕರಿಕೆ-ಮಡಿಕೇರಿ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಗಮನ ಸೆಳೆದರು. ಈ ಸಂದರ್ಭ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮೊಬೈಲ್ ಟವರ್ ನಿರ್ಮಿಸಲು ಪಚ್ಚೆಪಿಲಾವುನಲ್ಲಿ ಸ್ಥಳ ಅಂತಿಮಗೊಳಿಸಲಾಗಿದ್ದು, ತಕ್ಷಣವೇ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. ಅಲ್ಲದೆ, ಈ ಭಾಗದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಭಾಗಮಂಡಲ-ಕರಿಕೆ-ಸುಳ್ಯಕ್ಕೆ ಸರಕಾರಿ ಬಸ್ಸನ್ನು ಒದಗಿಸಲು ಅಧಿಕಾರಿಗಳಿಗೆ ಸೂಚಿಸದರು. ಅಂತರ್‍ರಾಜ್ಯ ರಸ್ತೆಗೆ ಈಗಾಗಲೇ ಸರ್ವೆ ಕಾರ್ಯ ಮುಗಿದಿದ್ದು, ಕೇಂದ್ರದಿಂದ ನೀಲಿನಕಾಶೆ ಸಿದ್ದಗೊಂಡಿದೆ ಎಂದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕರಿಕೆ ಪ್ರೌಢಶಾಲೆಯಲ್ಲಿ ನಡೆಯುವ ಶಿಕ್ಷಕರ ವರ್ಗಾವಣೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು. ಸಭೆಯಲ್ಲಿ ಮಡಿಕೇರಿ…
ಮಡಿಕೇರಿ ಜು.25 : ಭಾಗಮಂಡಲ ಹೋಬಳಿ ಬೇಂಗೂರು ಚೇರಂಬಾಣೆ ವ್ಯಾಪ್ತಿಯ ದೋಣಿ ಕಡ್ ಎಂಬಲ್ಲಿ ಮಳೆಯಿಂದಾಗಿ ರಸ್ತೆಯು ಜಲಾವೃತವಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಫೈಬರ್ ದೋಣಿಯನ್ನು ವ್ಯವಸ್ಥೆ ಕಲ್ಪಿಸಲಾಗಿದೆ. ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ನಿರ್ದೇಶನದಂತೆ ಅಗ್ನಿಶಾಮಕ ಠಾಣಾಧಿಕಾರಿ ಜಿಲ್ಲಾ ಅಗ್ನಿಶಾಮಕ ಘಟಕದ ಸಹಕಾರದೊಂದಿಗೆ ಫೈಬರ್ ದೋಣಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಡಿಕೇರಿ ಜು.25 : ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ, ಗಾಳಿಯಿಂದಾಗಿ ವಿವಿಧೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಕುಶಾಲನಗರ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡುವಿನಲ್ಲಿ ಮನೆ, ರಸ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ.






