ಅರಂತೋಡು ಜು.25 : ಜಾತ್ಯತೀತ ತತ್ವ ಭಾಷೆ ಸಂಸ್ಕೃತಿಯಲ್ಲಿ ವೈವಿದ್ಯತೆ, ಆ ವೈವಿದ್ಯತೆಯಲ್ಲಿಯೂ ಏಕತೆಯನ್ನು ಕಾಣುವುದು ನಮ್ಮ ದೇಶದ ವಿಶೇಷತೆ, ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಿ ಪ್ರತಿಯೊಬ್ಬರಿಗೂ ಬೆಳೆಯಲು ಅವಕಾಶ ನೀಡುವ ಮೂಲಕ ನಮ್ಮ ಭಾಷೆ, ಸಂಸ್ಕೃತಿಯ ವೈವಿಧ್ಯತೆಯನ್ನು ಪೋಷಿಸಬೇಕು ಎಂದು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವ ಅಹಮ್ಮದ್ ದೇವರ ಕೋವಿಲ್ ಹೇಳಿದ್ದಾರೆ. ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ದಿ ಪ್ರತಿಷ್ಠಾನದ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆದ ತೆಕ್ಕಿಲ್ ಮೊಹಮ್ಮದ್ ಹಾಜಿ ಅವರ 50ನೇ ಪುಣ್ಯಸ್ಮರಣೆ ಕಾರ್ಯಕ್ರಮ ಮತ್ತು ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತೆಕ್ಕಿಲ್ ಮೊಹಮ್ಮದ್ ಹಾಜಿ ಅವರು ಅಗಲಿ 50 ವರ್ಷಗಳು ಸಂದರು ಅವರನ್ನು ಎಲ್ಲರು ನೆನಪಿಸಿ ಗೌರವಿಸುವುದು ಅವರಿಗೆ ಈ ಸಮಾಜ ನೀಡುವ ಗೌರವಕ್ಕೆ ಸಾಕ್ಷಿಯಾಗಿದೆ. ಅವರ ಪರಂಪರೆಯನ್ನು ಟಿ.ಎಂ ಶಹೀದ್ ನೇತೃತ್ವದಲ್ಲಿ ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಜಾತಿ, ಧರ್ಮ, ಭೇದವಿಲ್ಲದೆ ಶಿಕ್ಷಣ ಆರೋಗ್ಯ ಸಾಮಾಜಿಕ ಸೇವೆ…
ಲೇಖಕ: admin
ಮಡಿಕೇರಿ ಜು.25 : ವಿರಾಜಪೇಟೆ ತಾಲ್ಲೂಕಿನ ತೋರ ಗ್ರಾಮಕ್ಕೆ ಕಂದಾಯ ಮತ್ತು ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದರು. ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತ ತಡೆಯುವ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸುವವಂತೆ ಸೂಚಿಸಿದರು.
ಮಡಿಕೇರಿ ಜು.25 : ಸೋಮವಾರಪೇಟೆಯ ಬೇಳೂರು ಗ್ರಾ.ಪಂ ವ್ಯಾಪ್ತಿಯ ಬಳಗುಂದ ಗ್ರಾಮದ ಅಶ್ವಿನಿ ಮತ್ತು ರಾಜು, ಸುರೇಶ್ ಹಾಗೂ ಗಂಗು ಹರೀಶ್ ಅವರ ಮನೆಗೆ ಮಳೆಯಿಂದ ಹಾನಿಯಾಗಿದ್ದು, ತಹಶೀಲ್ದಾರ್ ಎಸ್.ಎನ್ ನರಗುಂದ , ಪಿಡಿಒ, ಕಂದಾಯ ಪರಿವೀಕ್ಷಕರೊಂದಿಗೆ ಸ್ಥಳ ಪರಿಶೀಲಿಸಿದರು.
ಮಡಿಕೇರಿ ಜು.25 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2853.05 ಅಡಿಗಳು. ಕಳೆದ ವರ್ಷ ಇದೇ ದಿನ 2856.38 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 43.60 ಮಿ.ಮೀ., ಕಳೆದ ವರ್ಷ ಇದೇ ದಿನ 5.40 ಮಿ.ಮೀ. ಇಂದಿನ ನೀರಿನ ಒಳಹರಿವು 19343 ಕ್ಯುಸೆಕ್, ಕಳೆದ ವರ್ಷ ಇದೇ ದಿನ 4137 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 21166 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 2800 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.
ಮಡಿಕೇರಿ ಜು.25 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 104.36 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.04 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1414.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1873.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 133.38 ಮಿ.ಮೀ. ಕಳೆದ ವರ್ಷ ಇದೇ ದಿನ 6.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2056.75 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2624.51 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 91.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.83 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1069.21 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1484.20 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 88.07 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3 ಮಿ.ಮೀ.…
ಮಡಿಕೇರಿ ಜು.25 : ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರು ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಹಾರಂಗಿ ಜಲಾಶಯ ವೀಕ್ಷಕಣೆಗೂ ಮೊದಲು ಕುಶಾಲನಗರದ ಸಾಯಿ ಮತ್ತು ಕುವೆಂಪು ಬಡಾವಣೆಗೆ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಇತರರು ಇದ್ದರು.
ವಿರಾಜಪೇಟೆ ಜು.25 : ಸಮಾಜದಲ್ಲಿ ಗೌರವಯುತವಾದ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಪೋಷಕರು ಶಿಕ್ಷಕರನ್ನೆ ದೇವರು ಎಂದು ಭಾವಿಸಿರುತ್ತಾರೆ. ಶಿಕ್ಷಕರು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಅಭಿಪ್ರಾಯಪಟ್ಟರು. ಶಾಲಾ ಶಿಕ್ಷಣಾ ಇಲಾಖೆ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಅನುದಾನಿತ ನೌಕರರ ಸಂಘದ ವತಿಯಿಂದ ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಾಗಾರ ಹಾಗೂ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಶೇಕಡ 100ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ, ವಿಷಯ ಬೋಧನಾ ಶಿಕ್ಷಕರಿಗೆ, ದೈಹಿಕ ಶಿಕ್ಷಕರಿಗೆ ಅಭಿನಂದನಾ ಸಮಾರಂಭವನ್ನು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ ಉದ್ಘಾಟಿಸಿ ಮಾತನಾಡಿದರು. ನಾವೇಲ್ಲರೂ…
ಕಡಂಗ ಜು.25 : ಅರಪಟ್ಟು ಪೋದವಾಡ ಗ್ರಾಮದ ಕೋಡಿರ ಕುಟುಂಬಸ್ಥರಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಕೋಡಿರ ಐನ್ ಮನೆಯಲ್ಲಿ ಕುಟುಂಬದ ಮಹಿಳಾ ಒಕ್ಕೂಟ ಹಿರಿಯರಾದ ಮುತ್ತವ್ವ ಪೊನ್ನಪ್ಪ , ಸರಸ್ವತಿ , ಅಧ್ಯಕ್ಷೆ ಪೊನ್ನು ಮಂದಣ್ಣ, ಉಪಾಧ್ಯಕ್ಷೆ ಹೇಮಾ ಮಂದಣ್ಣ ಹಾಗೂ ಕುಟುಂಬದ ಅಧ್ಯಕ್ಷರಾದ ಪ್ರವೀಣ್ ಚಂಗಪ್ಪ ಅವರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಮಾಚಯ್ಯ, ಪ್ರತಿಯೊಂದು ಕುಟುಂಬದಲ್ಲಿ ಒಗ್ಗಟ್ಟು ಬಹಳ ಮುಖ್ಯ ಹಾಗೂ ಒಗ್ಗಟ್ಟಿದ್ದರೆ ಏನನ್ನು ಸಾಧಿಸಬಹುದು ಎಂದು ನುಡಿದರು. ಕುಟುಂಬದ ಅನೇಕ ಹಿರಿಯ ಕಿರಿಯ ಕಲಾವಿದರಿಂದ ಹಾಡುಗಾರಿಕೆ ನಡೆಯಿತು. ವಿಶೇಷವಾಗಿ ಕೊಡಗಿನ ಹೆಸರಾಂತ ಕಲಾವಿದೆ ಲಲಿತಾ ಅವರ ಹಾಡುಗಳು ಗಮನ ಸೆಳೆಯಿತು. ಶಿಲ್ಪಕುಮಾರಿ ಕಾರ್ಯಕ್ರಮ ನಿರೂಪಿಸಿದರು. ಟೀನಾಹರ್ಷಸ್ವಾಗತಿಸಿದರು ಹಾಗೂ ವೀಣಾಶಶಿ ವಂದಿಸಿದರು. ವರದಿ : ನೌಫಲ್ ಕಡಂಗ
ನಾಪೋಕ್ಲು ಜು.25 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಪಾಜೆ ಸಂಸ್ಥೆಯ 2022 -23ನೇ ಸಾಲಿಗೆ ವಾರ್ಷಿಕ ಮಹಾಸಭೆಯು ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಸಂಪಾಜೆ ಸಂಸ್ಥೆಯ ಅಧ್ಯಕ್ಷರಾದ ಎಂ.ಧನಂಜಯ ವಹಿಸಿದ್ದರು. ಸಭೆಯಲ್ಲಿ ಮುಖ್ಯವಾಗಿ ಕೇಂದ್ರ ಕಚೇರಿಯಿಂದ ಹಾಗೂ ಗ್ರಾಮ ಪಂಚಾಯಿತಿಗಳಿಂದ ದೊರೆಯಬೇಕಾಗಿರುವ ಅನುದಾನಗಳ ಬಗ್ಗೆ ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುವಂತೆ, ಈ ವರ್ಷ ನಡೆಸಬೇಕಾಗಿರುವ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಜಿಲ್ಲಾ ಪ್ರಧಾನ ಆಯುಕ್ತ ಬೇಬಿ ಮ್ಯಾತ್ಯು, ಕೆ ಪಿ ಎಸ್ ಎಸ್ ಡಿಎಮ್ ಸಿ ಉಪಾಧ್ಯಕ್ಷ ಹಾಗೂ ಭಾರತ್ ಸ್ಕೌಟ್ ಗೈಡ್ಸ್ ಎಡಿಸಿ ತರಬೇತಿ ಹೊಂದಿರುವ ಕೆ.ಎ. ಹಾರಿಸ್, ಉಪ ಪ್ರಾಂಶುಪಾಲ ಶಿವಣ್ಣ, ಜಿಲ್ಲಾ ಸಂಘಟಕರಾದ ದಮಯಂತಿ, ಜಿಲ್ಲಾ ಕಾರ್ಯದರ್ಶಿ ವಸಂತಿ, ಸ್ಕೌಟ್ ಮತ್ತು ಗೇಟ್ಸ್ ದಳ ನಡೆಸುತ್ತಿರುವ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ ಉಷಾರಾಣಿ ಸ್ವಾಗತಿಸಿ ವರದಿ ವಾಚಿಸಿದರು. ಬಳಿಕ ಪ್ರಸಕ್ತ…
ಮಡಿಕೇರಿ ಜು.24 : ಕಾವೇರಿನಾಡು ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ. ಮುಂಜಾಗೃತಾ ಕ್ರಮವಾಗಿ ಜು.25 ರಂದು ಕೂಡ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಶಾಲಾ, ಕಾಲೇಜು ಹಾಗೂ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜಿಲ್ಲೆಯಾದ್ಯಂತ 24 ಗಂಟೆಗಳಲ್ಲಿ 5 ಇಂಚಿಗೂ ಅಧಿಕ ಮತ್ತು ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ 9 ಇಂಚಿಗೂ ಅಧಿಕ ಮಳೆಯಾಗಿದೆ. ಉತ್ತಮ ಮಳೆಯಾಗುತ್ತಿರುವುದರಿಂದ ನದಿ, ತೊರೆ, ಹಳ್ಳ, ಕೊಳ್ಳ, ಜಲಪಾತಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ವ್ಯಾಪ್ತಿಯಲ್ಲಿ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ನೀರಿನ ಹೊರ ಹರಿವು ನದಿಗೆ 23937 ಕ್ಯುಸೆಕ್ ಆಗಿದೆ. ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದಿರುವುದರಿಂದ ಅಲ್ಲಲ್ಲಿ ಮರ ಬಿದ್ದು ಮನೆ ಹಾಗೂ ವಿದ್ಯುತ್ ಮಾರ್ಗಕ್ಕೆ ಹಾನಿಯಾಗಿದೆ. ಎಡಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಭಾಗಮಂಡಲದಲ್ಲಿ…






