ಮಡಿಕೇರಿ ಜು.24 : ರಾಷ್ಟ್ರದ ಅಭಿವೃದ್ಧಿ ಮತ್ತು ಶಿಸ್ತು ಬದ್ಧ ಜೀವನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳು ಸಹಕಾರಿ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಗಾಂಧಿ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಒಂದು ವಾರಗಳ ಕಾಲ ನಡೆಯುವ ‘ಮೂಲ ತರಬೇತಿ ಶಿಬಿರಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ರಾಷ್ಟ್ರದ ಅಭಿವೃದ್ಧಿ, ಸಂಸ್ಕೃತಿ, ನಾಡು ನುಡಿಯ ಬಗ್ಗೆ ಎಲ್ಲರೂ ಕಲಿಯಲು ಮತ್ತು ಮಕ್ಕಳಿಗೆ ಕಲಿಸಲು ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆ ಅಗತ್ಯ ಎಂದು ತಿಳಿಸಿದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು, ಪರಿಸರ ಸಂರಕ್ಷಣೆ, ಸಮಯ ಪ್ರಜ್ಞೆ, ಹೀಗೆ ಹಲವು ವಿಚಾರಗಳ ಕುರಿತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಕಾಣಬಹುದು ಎಂದು ಡಾ.ನಂಜುಂಡೇಗೌಡ ವಿವರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಮಾತನಾಡಿ ಯಾವುದೇ ಸಂಕಷ್ಟದ ಪರಿಸ್ಥಿತಿಯಲ್ಲೂ ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಪಾತ್ರ ವಹಿಸುತ್ತದೆ…
ಲೇಖಕ: admin
ಸುಂಟಿಕೊಪ್ಪ ಜು.24: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಂಟಿಕೊಪ್ಪದ ವಿವಿಧೆಡೆ ಹಾನಿಯಾಗಿದೆ. ಕಳೆದ 3 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಯ ಹಿನ್ನಲೆಯಲ್ಲಿ ಸ್ವಸ್ಥಶಾಲೆ ಸಮೀಪದಲ್ಲಿ ಟಿಸಿಎಲ್ ತೋಟದ ಮರ ಮುತ್ತ ಎಂಬುವವರ ಮನೆಯ ಮೇಲೆ ಮರ ಬಿದ್ದ ಪರಿಣಾಮ ಮನೆಗೋಡೆಗೆ ಹಾನಿಯಾಗಿದ್ದು, ನಷ್ಟವುಂಟಾಗಿದೆ. ಅದೃಷ್ಟವಶತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪಂಚಾಯಿತಿ ಉಪಾಧ್ಯಕ್ಷ ಕೆ.ಕೆ.ಪ್ರಸಾದ್ ಕುಟ್ಟಪ್ಪ, ಸದಸ್ಯ ಆಲಿಕುಟ್ಟಿ, ಗ್ರಾಮಲೆಕ್ಕಿಗರಾದ ನಾಗೇಂದ್ರ ಭೇಟಿ ನೀಡಿ ಪರಿಶೀಲಿಸಿ ಬಿದ್ದ ಮರವನ್ನು ತೆರವುಗೊಳಿಸಿದರು. ಸುಂಟಿಕೊಪ್ಪ ಪಂಪ್‍ಹೌಸ್ ಬಡಾವಣೆಯ ನಿವಾಸಿ ಜಯಮ್ಮ ಎಂಬವವರ ಮನೆಯ ಗೋಡೆಯು ಕುಸಿದು ಬಿದಿದ್ದು, ಸಾವಿರಾರು ರೂ ನಷ್ಟವುಂಟಾಗಿದೆ. ಅದೃಷ್ಟವಶತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಪಂಚಾಯಿತಿ ಅಧ್ಯಕ್ಷೆ ಸದಸ್ಯರುಗಳು, ಗ್ರಾಮಲೆಕ್ಕಿಗರಾದ ನಾಗೇಂದ್ರ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ವಿವಿಧೆಡೆ ಗಾಳಿಮಳೆಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದೆ.
ಸುಂಟಿಕೊಪ್ಪ ಜು.24: ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಸುಂಟಿಕೊಪ್ಪದ ಪಕ್ಷದ ಕಚೇರಿಯಲ್ಲಿ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯೂ ಮುಂದಿನ ದಿನಗಳಲ್ಲಿ ನಡೆಯಲ್ಲಿದ್ದು, ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸನ್ನದ್ಧರಾಗಬೇಕು. ಪಕ್ಷವನ್ನು ತಳಮಟ್ಟದಿಂದಲೇ ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಎರಡನೇ ಹಂತದ ಆಯ್ಕೆ ಪ್ರಕ್ರಿಯೆಗೆ ನಮ್ಮ ಪಕ್ಷದವರು ಸ್ಪರ್ದೆಗೆ ಇಳಿಯಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲವನ್ನು ಪಡೆದು ಅಧಿಕಾರ ನಡೆಸಲು ಒಮ್ಮತದಿಂದ ಸನ್ನದರಾಗಿರುವಂತೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು. ಕಳೆದ 2 ಅವಧಿಯಲ್ಲೂ ಕಾಂಗ್ರೆಸ್ ಜೆಡಿಎಸ್ ಬೆಂಬಲವನ್ನು ನೀಡುತ್ತಾ ಬರುತ್ತಿದ್ದು, ಈ ಬಾರೀ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲ ಪಡೆದು ಅಧಿಕಾರಿ ಪ್ರಯತ್ನಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ರಾಜ್ಯ ನಾಯಕ ಅಬ್ರಾಹರ್, ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್, ಕೊಡಗು ಕಾರ್ಯದರ್ಶಿ ಬಶೀರ್, ಪಂಚಾಯಿತಿ ಸದಸ್ಯೆ ನಾಗರತ್ನ,…
ಮಡಿಕೇರಿ ಜು.24 : ಮಡಿಕೇರಿ ತಾಲೂಕಿನ ಎರಡನೇ ಮೊಣ್ಣಂಗೇರಿ ಗ್ರಾಮದ ವಿವೇಕ ಗಿರಿಯಿಂದ ರಾಮ ಕೊಲ್ಲಿಗೆ ತೆರಳುವ ರಸ್ತೆಯಲ್ಲಿರುವ ಸೇತುವೆಯು ಗುಂಡಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದ್ದಾರೆ.
ನಾಪೋಕ್ಲು ಜು.24 : ಕಳೆದ ಎರಡು ಮೂರು ದಿನಗಳಿಂದ ನಾಪೋಕ್ಲು ವ್ಯಾಪ್ತಿಯಲ್ಲಿ ಪುಷ್ಯ ಮಳೆಯ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಮರ ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡರೆ, ಕಾವೇರಿ ನದಿ ನೀರಿನ ಮಟ್ಟ ಹೆಚ್ಚಳವಾಗಿ ನಾಪೋಕ್ಲು ಮೂರ್ನಾಡು ಮುಖ್ಯರಸ್ತೆಯ ಕೊಟ್ಟಮುಡಿ ಜಂಕ್ಷನ್ ಬಳಿ ಜಲಾವೃತಗೊಂಡಿದೆ. ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ತಾಲೂಕುವಿನಿಂದ ಅಜ್ಜಿ ಮುಟ್ಟ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ನೂರಂಬಡ ಉದಯ ಶಂಕರ್ ಅವರ ಮನೆಯ ಪಕ್ಕದಲ್ಲಿದ್ದ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರ ಸ್ಥಗಿತಗೊಂಡಿತು. ಗ್ರಾ.ಪಂ ಸದಸ್ಯ ಪ್ರತೀಪ್ ಹಾಗೂ ಜಗದೀಶ್ ತಕ್ಷಣ ಸ್ಥಳಕ್ಕೆ ಧಾವಿಸಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು. ನಾಪೋಕ್ಲು ಬಳಿಯ ಚೆರಿಯಪರಂಬು, ಕಲ್ಲುಮೊಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕಾವೇರಿ ನದಿ ಪ್ರವಾಹ ಮತ್ತೆ ಹೆಚ್ಚಳವಾಗಿದ್ದು, ಗ್ರಾಮದ ಕಾವೇರಿ ನದಿ ದಂಡೆಯ ಪೈಸಾರಿಯಲ್ಲಿ ವಾಸಿಸುವ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಸ್ಥಳೀಯ ಯುವಕರು ತೆಪ್ಪದ…
ಮಡಿಕೇರಿ ಜು.24 : ಕೊಡಗು ಜಿಲ್ಲೆಯ ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಗಳನ್ನು ನಿಯೋಜಿಸುವ ಮೂಲಕ ಗ್ರಾಮಸ್ಥರಿಗೂ “ಶಕ್ತಿ” ಯೋಜನೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಮಡಿಕೇರಿ ನಗರ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ ಬೆಳ್ಳಿಯಪ್ಪ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಡಿಕೇರಿ ಡಿಪೋದ ವ್ಯವಸ್ಥಾಪಕರು ಗಮನ ಹರಿಸಬೇಕು ಎಂದು ಹೇಳಿದ್ದಾರೆ. ಕೊಡಗು ಬೆಟ್ಟ ಗುಡ್ಡಗಳಿಂದ ಕೂಡಿದ ಜಿಲ್ಲೆಯಾಗಿದ್ದು, ಗ್ರಾಮೀಣ ಪ್ರದೇಶಗಳು ಹೆಚ್ಚು ಇವೆ. ರಾಜ್ಯ ಸರ್ಕಾರ ಶಕ್ತಿ ಯೋಜನೆಯ ಮೂಲಕ ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಸೇವೆಯನ್ನು ಒದಗಿಸಿದ್ದು, ರಾಜ್ಯದ ಲಕ್ಷಾಂತರ ಮಹಿಳೆಯರು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಆದರೆ ಕೊಡಗು ಜಿಲ್ಲೆಯ ಗ್ರಾಮೀಣ ಭಾಗದ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಇದಕ್ಕೆ ಕಾರಣ ಗ್ರಾಮೀಣ ಭಾಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಗಳ ಸೇವೆ ಇಲ್ಲದೆ ಇರುವುದು. ಕೊಡಗಿನ ಗ್ರಾಮೀಣ ಪ್ರದೇಶದಲ್ಲಿ…
ಮಡಿಕೇರಿ ಜು.24 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಜು.31 ರಂದು ಮಡಿಕೇರಿಯಲ್ಲಿರುವ ಪತ್ರಿಕಾ ಭವನದಲ್ಲಿ ಒಂದು ಪ್ರೇಮ ಕಥೆ ನಾಟಕ ಪ್ರದರ್ಶನಗೊಳ್ಳಲಿದೆ. ಅಂದು ಸಂಜೆ 7 ಗಂಟೆಗೆ ಸರಿಯಾಗಿ ನಾಟಕ ಪ್ರದರ್ಶನ ಪ್ರಾರಂಭವಾಗಲಿದೆ. ಸಾರ್ವಜನಿಕರಿಗೆ ನಾಟಕ ವೀಕ್ಷಿಸಲು ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಪ್ರದರ್ಶನ ಪ್ರಾರಂಭವಾಗುವ 10 ನಿಮಿಷ ಮುಂಚಿತವಾಗಿ ಪ್ರೇಕ್ಷಕರು ಆಗಮಿಸಬೇಕೆಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಕೆ.ಕೆ.ರೆಜಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಿಂಬರ್ಲಿ ಕೂರ್ಗ್ ಪ್ರಾಯೋಜಕತ್ವದಲ್ಲಿ ಬೆಂಗಳೂರಿನ ರಂಗಪಯಣ ತಂಡದಿಂದ ನಾಟಕ ಪ್ರದರ್ಶನಗೊಳ್ಳಲಿದೆ. 55 ನಿಮಿಷದ ಅವಧಿಯಲ್ಲಿ ಕಲಾವಿದ ಭರತ್ ಅಕಿರಾ ಅಭಿನಯಿಸಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಉಸ್ತಾದ್ ಜಸ್ಮಿಲಾ ಖಾನ್ ಪ್ರಶಸ್ತಿ ಪುರಸ್ಕೃತ ರಂಗಭೂಮಿ ಕಲಾವಿದ ರಾಜ್‍ಗುರು ರಚನೆ, ಸಂಗೀತದೊಂದಿಗೆ ನಿರ್ದೇಶನ ಮಾಡಿದ್ದಾರೆ. ರಂಗಪಯಣ ತಂಡದ 14ನೇ ವರ್ಷದ ಸಂಭ್ರಮ ಪ್ರಯುಕ್ತ ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಈ ನಾಟಕ ಪ್ರದರ್ಶನಗೊಳ್ಳಲಿದೆ. ಲಿಮ್ಕಾ ಬುಕ್ ಆಫ್ ರೆಕಾರ್ಡ್‍ನಲ್ಲಿ ದಾಖಲೆ ಮಾಡುವ ಉದ್ದೇಶದಿಂದ 31…
ಮಡಿಕೇರಿ ಜು.24 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಪ್ರಯುಕ್ತ ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜು.25 ರಂದು ಪತ್ರಕರ್ತರು ಸೇರಿದ್ದಂತೆ ಒಟ್ಟು 80 ಸಾರ್ವಜನಿಕರು ರಕ್ತದಾನ ಮಾಡಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಹುಣಸೂರಿನ ಕಾವೇರಿ ಆಸ್ಪತ್ರೆ, ಕೊಡಗು ಹಿಂದೂ ಮಲಯಾಳಿ ಸಮಾಜ ಪಾಲಿಬೆಟ್ಟ ಉಪಸಮಿತಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಕ್ತನಿಧಿ ಕೇಂದ್ರ, ಪಾಲಿಬೆಟ್ಟ ಸಮುದಾಯ ಆರೋಗ್ಯ ಕೇಂದ್ರ ಹಾಗೂ ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮ ಸಂಚಾಲಕ ಪುತ್ತಂ ಪ್ರದೀಪ್ ಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಪಾಲಿಬೆಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಅಜ್ಜಿನಿಕಂಡ ಶ್ಯಾಮ್‍ಚಂದ್ರ…
ಮಡಿಕೇರಿ ಜು.24 : ಮಡಿಕೇರಿ ನಗರಸಭೆ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ, ಇದರ ನಡುವೆಯೇ ಇರುವ ಸಿಬ್ಬಂದಿಗಳನ್ನು ಸರ್ಕಾರದ “ಗೃಹಲಕ್ಷ್ಮಿ” ಯೋಜನೆಯ ಸೇವೆಗಾಗಿ ನಿಯೋಜಿಸಿ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ನಗರಸಭಾ ಮಾಜಿ ಉಪಾಧ್ಯಕ್ಷರಾದ ಲೀಲಾ ಶೇಷಮ್ಮ ಆರೋಪಿಸಿದ್ದಾರೆ. ನಗರಸಭೆಗೆ ಭೇಟಿ ನೀಡಿದ್ದ ಅವರು ಕಚೇರಿಯಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ ಕುರ್ಚಿಗಳಿರುವುದನ್ನು ಮತ್ತು ಅರ್ಜಿದಾರರು ಪರದಾಡುತ್ತಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರರು ಪ್ರತಿದಿನ ಅಲೆದಾಡಬೇಕಾದ ದುಸ್ಥಿತಿ ಬಂದೊದಗಿದೆ, ಫಾರಂ ನಂ.3 ಸೇರಿದಂತೆ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಕಂದಾಯ ಸ್ವೀಕಾರ ಮಾಡಲು ಕೂಡ ಅಧಿಕಾರಿಗಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಗರಸಭೆಯಲ್ಲಿ ಶೇ.50 ಕ್ಕಿಂತಲೂ ಅಧಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆ ಇದೆ. ಇದರ ನಡುವೆಯೇ ಇರುವ ಸಿಬ್ಬಂದಿಗಳನ್ನು “ಗೃಹಲಕ್ಷ್ಮಿ” ಯೋಜನೆಯೆ ಸೇವೆಗೆ ನಿಯೋಜಿಸಲಾಗಿದೆ. ಇದರಿಂದ ನಗರಸಭೆಯ ಕೆಲಸ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿದೆ. ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಕಷ್ಟ ಹೇಳಿಕೊಳ್ಳಲು ನಗರಸಭೆಗೆ ಬಂದರೆ ಸಿಬ್ಬಂದಿಗಳೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…
ಮಡಿಕೇರಿ ಜು.24 : ಮಡಿಕೇರಿ ನಗರಸಭೆ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ, ಇದರ ನಡುವೆಯೇ ಇರುವ ಸಿಬ್ಬಂದಿಗಳನ್ನು ಸರ್ಕಾರದ “ಗೃಹಲಕ್ಷ್ಮಿ” ಯೋಜನೆಯ ಸೇವೆಗಾಗಿ ನಿಯೋಜಿಸಿ ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ ಎಂದು ನಗರಸಭಾ ಮಾಜಿ ಉಪಾಧ್ಯಕ್ಷರಾದ ಲೀಲಾ ಶೇಷಮ್ಮ ಆರೋಪಿಸಿದ್ದಾರೆ. ನಗರಸಭೆಗೆ ಭೇಟಿ ನೀಡಿದ್ದ ಅವರು ಕಚೇರಿಯಲ್ಲಿ ಸಿಬ್ಬಂದಿಗಳಿಲ್ಲದೆ ಖಾಲಿ ಕುರ್ಚಿಗಳಿರುವುದನ್ನು ಮತ್ತು ಅರ್ಜಿದಾರರು ಪರದಾಡುತ್ತಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಅರ್ಜಿದಾರರು ಪ್ರತಿದಿನ ಅಲೆದಾಡಬೇಕಾದ ದುಸ್ಥಿತಿ ಬಂದೊದಗಿದೆ, ಫಾರಂ ನಂ.3 ಸೇರಿದಂತೆ ಯಾವುದೇ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ಕಂದಾಯ ಸ್ವೀಕಾರ ಮಾಡಲು ಕೂಡ ಅಧಿಕಾರಿಗಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಗರಸಭೆಯಲ್ಲಿ ಶೇ.50 ಕ್ಕಿಂತಲೂ ಅಧಿಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆ ಇದೆ. ಇದರ ನಡುವೆಯೇ ಇರುವ ಸಿಬ್ಬಂದಿಗಳನ್ನು “ಗೃಹಲಕ್ಷ್ಮಿ” ಯೋಜನೆಯೆ ಸೇವೆಗೆ ನಿಯೋಜಿಸಲಾಗಿದೆ. ಇದರಿಂದ ನಗರಸಭೆಯ ಕೆಲಸ ಕಾರ್ಯಗಳಿಗೆ ತೀವ್ರ ಹಿನ್ನಡೆಯಾಗಿದೆ. ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಮ್ಮ ಕಷ್ಟ ಹೇಳಿಕೊಳ್ಳಲು ನಗರಸಭೆಗೆ ಬಂದರೆ ಸಿಬ್ಬಂದಿಗಳೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…






