ಲೇಖಕ: admin

ಮಡಿಕೇರಿ ಜು.24 :  ಕೊಡಗು ಜಿ.ಪಂ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ಹಾಗೂ ವಿರಾಜಪೇಟೆ ಅನದಾನಿತ ನೌಕರರ ಸಂಘದ ಸಂಯುಕ್ತಶ್ರಯದಲ್ಲಿ 2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆ, ಶಿಕ್ಷಕರು ಮತ್ತು ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಮತ್ತು ಶೈಕ್ಷಣಿಕ ಕಾರ್ಯಾಗಾರ ನಡೆಯಿತು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ, ಎಸ್‍ಎಸ್‍ಎಲ್‍ಸಿಯಲ್ಲಿ ಶೇ.100ರಷ್ಟು ಅಂಕ ಪಡೆಯಲು ಕಾರಣರಾದ ಶಿಕ್ಷಕರನ್ನು ಹಾಗೂ ಉತ್ತಮ ಅಂಕ ಪಡೆದ ವಿಧ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದಿಸಿದರು.

Read More

ಬೆಂಗಳೂರು: ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ? ಇಲ್ಲವಾ? ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ. ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ. ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ. ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ…

Read More

ಮಡಿಕೇರಿ ಜು.24 : ಬ್ಯಾಂಕ್‍ನಲ್ಲಿ ಗುಮಾಸ್ತರಾಗಬೇಕೆಂದು ಕನಸು ಹೊತ್ತವರಿಗೆ ಇಲ್ಲಿದೆ ಮತ್ತೊಂದು ಸಿಹಿ ಸುದ್ದಿ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿ ಸುಮಾರು 4,545 ಹುದ್ದೆಗಳಿಗೆ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. 2022-23ರಲ್ಲಿ 6,035 ಹುದ್ದೆಗಳಿಗೆ ನೇಮಕ ನಡೆಸಲು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಈ ವರ್ಷ ಕೇವಲ 4,545 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಿಂದ ವರ್ಷದಿಂದ ವರ್ಷಕ್ಕೆ ನೇಮಕಾತಿಯಲ್ಲಿ ಇಳಿಮುಖ ವಾಗಿರೋದನ್ನು ಕಾಣಬಹುದು. ಕಳೆದ ಬಾರಿ ರಾಜ್ಯದಲ್ಲಿ 358 ಹುದ್ದೆಗಳಿದ್ದರೆ ಈ ಬಾರಿ ಕೇವಲ 253 ಹುದ್ದೆಗಳಿಗೆ ಮಾತ್ರ ನೇಮಕ ನಡೆಯಲಿದೆ. ಇದರಿಂದ ಆಕಾಂಕ್ಷಿಗಳು ನಿರಾಸೆಯಾಗುವ ಅಗತ್ಯವಿಲ್ಲ. ವಿಲೀನದ ನಂತರದ ಈ ಹಿಂದಿನ ಕಾರ್ಪೋರೇಷನ್ ಬ್ಯಾಂಕ್ ವಿಲೀನವಾದ ಯೂನಿಯನ್ ಬ್ಯಾಂಕ್ ಇನ್ನು ಹುದ್ದೆಗಳ ಮಾಹಿತಿಯನ್ನು ಐಬಿಪಿಎಸ್ ಗೆ ನೀಡಿಲ್ಲ.ಕೊನೆಯ ಕ್ಷಣದಲ್ಲಿ ಬದಲಾವಣೆ ಆಗಲುಬಹುದು. ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳೆಲ್ಲಿ..? ರಾಜ್ಯದ 11 ಜಿಲ್ಲಾ ಕೇಂದ್ರಗಳಲ್ಲಿ…

Read More

ಮಡಿಕೇರಿ ಜು.24 :  ಕುಂಜಿಲ ಸ್ಪೋರ್ಟ್ಸ್ ಕ್ಲಬ್  ವತಿಯಿಂದ  10ನೇ ವರ್ಷದ  ರಾಜ್ಯ ಮಟ್ಟದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದಲ್ಲಿ ಸುಮಾರು 38 ತಂಡಗಳು ಭಾಗವಹಿಸಿದ್ದು,  ಕೌ-ಟೈಗರ್ ತಂಡ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದ್ದು,  ನಿಹಾ ಫ್ರಂಡ್ಸ್ ಕುಂಜಿಲ ತಂಡ ದ್ವಿತೀಯ ಬಹುಮಾನಕ್ಕೆ ತೃಪ್ತಿಪಟ್ಟುಕೊಂಡಿತು. ನಾಪೋಕ್ಲು ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್  ಕ್ರೀಡಾಕೂಟದಲ್ಲಿ ಸೋಲ, ಗೆಲುವು ಮುಖ್ಯವಲ್ಲ. ದೈಹಿಕ ಸಾಮರ್ಥ್ಯದ ವೃದ್ಧಿಗೆ ಸಹಕಾರಿಯಾಗಲಿದೆ ಎಂದರು. ಈ ಸಂದರ್ಭ ಕಕ್ಕಬ್ಬೆ ಗ್ರಾ.ಪಂ ಅಧ್ಯಕ್ಷ  ಕಲಿಯಂಡ ಸಂಪ, ಸೌಕತ್ ಮಕ್ಕಿ, ಬಶೀರ್ ಪೊಯಕರೆ, ರಶೀದ್ ವಯಕೋಲ್ ಹಾಗೂ ಹಲವಾರು ಗಣ್ಯ ವ್ಯಕ್ತಿಗಳು ಪಾಲ್ಗೊಂಡಿದ್ದರು. ವರದಿ:ಸಾಜಿದ್ ಪಯ್ಯಡಿ 

Read More

ಮಡಿಕೇರಿ ಜು.24 :   ಭಾಗಮಂಡಲ ವ್ಯಾಪ್ತಿಯ ಬೆಂಗೂರು ಗ್ರಾಮದ ದೋಣಿ ಕಾಡು ಪ್ರದೇಶಕ್ಕೆ ತಹಶೀಲ್ದಾರ್ ಕಿರಣ್ ಗೌರಯ್ಯ ಮತ್ತು ಎನ್‍ಡಿಆರ್‍ಎಫ್ ತಂಡ  ಭೇಟಿ ನೀಡಿ ವೀಕ್ಷಿಸಿದರು.

Read More

ಚೆಯ್ಯಂಡಾಣೆ ಜು.24 :  ಎಡಪಾಲದ ನಜ್ಮುಲ್ ಹುದಾ ಮದರಸದ “ಮುಅಲಿಂ ಡೇ” ಕಾರ್ಯಕ್ರಮ ಎಡಪಾಲ ಜುಮಾ ಮಸೀದಿಯಲ್ಲಿ ನಡೆಯಿತು. ಪೊಯಾಪಳ್ಳಿ ಜುಮಾ ಮಸೀದಿಯ ಅಧ್ಯಕ್ಷ ಕೆ.ಯು.ಶಾಫಿ ಧ್ವಜಾರೋಹಣ ನೆರವೇರಿಸಿದರು. ಸಮಸ್ತ ಕೇಂದ್ರ ಮುಶಾವರ ಸದಸ್ಯರು ಹಾಗೂ ಕೊಡಗು ಜಿಲ್ಲಾ ನಾಇಬ್ ಖಾಝಿಗಳಾದ ಅಬ್ದುಲ್ಲ ಫೈಝಿ  ಕಾರ್ಯಕ್ರವನ್ನು ಉದ್ಘಾಟಿಸಿ  ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬೂಬಕ್ಕರ್ ಮುಸ್ಲಿಯಾರ್ ವಹಿಸಿ ಮಾತನಾಡಿದರು. ನೌಫಲ್ ಹುದವಿ ಮುಅಲಿಂ ಡೇ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದಕ್ಕೂ ಮೊದಲು ಎಡಪಾಲ ಜುಮಾ ಮಸೀದಿ ಮುದರ್ರಿಸ್ ನಿಝಾರ್ ಫೈಝಿ ನೇತೃತ್ವದಲ್ಲಿ ಅಂಡತ್ ಮಾನಿ ದರ್ಗಾ ಹಾಗೂ ಸಮೀಪದ ಖಬರ್ ಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ಜಮಾಅತ್ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್, ಎನ್.ಎಚ್.ವೈಎ ಅಧ್ಯಕ್ಷ ರಿಯಾಝ್, ಮದರಸ ಅಧ್ಯಾಪಕರು, ಮತಿತ್ತರರು ಉಪಸ್ಥಿತರಿದ್ದರು. ಸ್ವಾಗತ ಹಾಗೂ ವಂದನೆಯನ್ನು ಸದರ್ ಮುಅಲಿಂ ಹಮೀದ್ ಮುಸ್ಲಿಯಾರ್ ನೆರವೇರಿಸಿದರು. ವರದಿ : ಅಶ್ರಫ್   

Read More

ಮಡಿಕೇರಿ ಜು.24 :  ಮಡಿಕೇರಿ ತಾಲೂಕು ಮೇಘತ್ತಾಳು ಗ್ರಾಮದ ಐ.ಜಿ ಕಾರ್ಯಪ್ಪ ಅವರು ನಿರ್ಮಿಸಿರುವ ಕೆರೆಯು ಒಡೆದು ಸಿ.ಸಿ.ಸೋಮಯ್ಯ ಅವರ ಕಾಫಿ ತೋಟ,  ರಸ್ತೆಗೆ  ಹಾನಿಯಾಗಿದೆ. ಅಲ್ಲದೆ  ಕಾಫಿ ಒಣ ಹಾಕಲು ನಿರ್ಮಿಸಿರುವ ಕಣದ ಮೇಲೆ ಮಣ್ಣು ತುಂಬಿದೆ. ಈ ಹಿನ್ನೆಲೆ ಜೆಸಿಬಿಯಿಂದ ತೋಡಿನಲ್ಲಿ ಬಂದಿರುವ ದೊಡ್ಡ ದೊಡ್ಡ ಮರದ ದಿಮ್ಮಿಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಲಾಗಿದೆ.

Read More

ಮಡಿಕೇರಿ ಜು.24 :  ಸಂಪಾಜೆ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯನಾಡು ಸಮೀಪದ ಕಿಂಡಿ ಅಣೆಕಟ್ಟಿನ ಸೇತುವೆ ಬಳಿ ನೀರಿನ ಹರಿವು ಹೆಚ್ಚಾಗಿದೆ.  ಕಿಂಡಿ ಅಣೆಕಟ್ಟಿನಲ್ಲಿ‌ ಮಳೆಯ ನೀರು ಸರಾಗವಾಗಿ‌ ಹರಿಯುತ್ತಿದೆ.

Read More

ಮಡಿಕೇರಿ ಜು.24 :  ಮಡಿಕೇರಿ ನಗರದ ವಿವಿಧ ಬಡಾವಣೆಗಳಲ್ಲಿ  ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ  ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ ಹಾಗೂ  ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಭೇಟಿ ನೀಡಿ ಪರಿಶೀಲಿಸಿದರು. ನಂತರ ಪೀಲ್ಟ್ರ್ ಹೌಸ್ ನಲ್ಲಿ ಎರಡು ಮೋಟಾರ್ , ಕೂಟುಹೋಳೆಯಲ್ಲಿ ಟಿಸಿ ಹಾಳಾಗಿದ್ದನ್ನು ಮನಗಂಡ ಸದಸ್ಯರು ಖುದ್ದು ಸ್ಥಳಕ್ಕೆ ಧಾವಿಸಿ ನೀರಿನ ಸಮಸ್ಯೆಯನ್ನು  ಸರಿಪಡಿಸಿದರು. ಈ ಸಂದರ್ಭ ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ, ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ಸದಸ್ಯೆ ಸಭೀತಾ ಸೇರಿದಂತೆ ನಗರಸಭಾ ಸದಸ್ಯರು ಹಾಜರಿದ್ದರು.

Read More

ಮಡಿಕೇರಿ ಜು.24 : ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕುಶಾಲನಗರ ಸಮೀಪದ ಕಣಿವೆ ತೂಗು ಸೇತುವೆ ಬಳಿ ಜೀವನದಿ ಕಾವೇರಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಈ ದೃಶ್ಯ ನೋಡಲು ನಯನ ಮನೋಹರವಾಗಿದೆ. ಆದರೆ ಕ್ಷಣದಿಂದ ಕ್ಷಣಕ್ಕೆ ನೀರು ಏರಿಕೆಯಾಗುತ್ತಲೇ ಇರುವುದರಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

Read More