ಮಡಿಕೇರಿ ಜು. 24 : ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ಜು.26 ರಂದು ಕಾಗಿ೯ಲ್ ವಿಜಯ ದಿನಾಚರಣೆ ಆಯೋಜಿಸಲಾಗಿದೆ. ಜು.23 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ನ ಅಮರ್ ಜವಾನ್ ಸ್ಮಾರಕದಲ್ಲಿ ಕಾಗಿ೯ಲ್ ವಿಜಯ ದಿನಾಚರಣೆಯೊಂದಿಗೆ ಕಾಗಿ೯ಲ್ ಸಮರದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ. ಇದೇ ಸಂದಭ೯ ವಾಯುಸೇನೆಯ ನಿವೖತ್ತ ಅಧಿಕಾರಿ ಕಿಗ್ಗಾಲು ಗಿರೀಶ್ ಅವರನ್ನು ರೋಟರಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುತ್ತದೆ. ಜಿಲ್ಲಾಧಿಕಾರಿ ವೆಂಕಟ ರಾಜ, ರೋಟರಿ ಸಹಾಯಕ ಗವನ೯ರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್, ರೋಟರಿ ವುಡ್ಸ್ ಕಾಯ೯ದಶಿ೯ ಹರೀಶ್ ಕಿಗ್ಗಾಲು ಪಾಲ್ಗೊಳ್ಳಲಿದ್ದಾರೆ ಎಂದು ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜು.24 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2853.77 ಅಡಿಗಳು. ಕಳೆದ ವರ್ಷ ಇದೇ ದಿನ 2856.05 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 62.40 ಮಿ.ಮೀ., ಕಳೆದ ವರ್ಷ ಇದೇ ದಿನ 5.20 ಮಿ.ಮೀ. ಇಂದಿನ ನೀರಿನ ಒಳಹರಿವು 17972 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2766 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 23937 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 2800 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.
ಮಡಿಕೇರಿ ಜು.24 : ಕೊಡಗು ಜಿಲ್ಲೆಯಲ್ಲಿ ಸೋಮವಾರವೂ ಮಳೆಯ ತೀವ್ರತೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 5 ಇಂಚಿಗೂ ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 118.77 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 14.02 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1310.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1869.78 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 173.43 ಮಿ.ಮೀ. ಕಳೆದ ವರ್ಷ ಇದೇ ದಿನ 26.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1923.37 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2618.21 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 76.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 7 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 977.58 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1481.37 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ…
ಮಡಿಕೇರಿ ಜು.24 : ಸೋಮವಾರಪೇಟೆ ಹೋಬಳಿ ಜಂಬೂರು ಗ್ರಾಮದ ನಿವಾಸಿ ವತ್ಸಲ ಹಾಗೂ ಸಂತೋಷ್ ಅವರ ವಾಸದ ಮನೆಯು ಭಾರಿ ಮಳೆಗಾಳಿಯಿಂದ ಮನೆಯ ಹಿಂಭಾಗದ ಗೋಡೆಯು ಕುಸಿದಿದ್ದು ಮೇಲ್ಚಾವಣಿ, ಗೋಡೆ , ಶೀಟ್ ಗಳು ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ.
ಕರಿಕೆ ಜು.24 : ಭಾರೀ ಮಳೆಯಿಂದಾಗಿ ಕರಿಕೆಯ ಬಾಳೆ ಬಳಪು-ಕುಂಡತ್ತಿಕಾನ ಕಾಲೋನಿಯ ಹೊಸ ರಸ್ತೆ ಕುಸಿದಿದೆ. ಚರಂಡಿ ನಿರ್ಮಾಣ ಮಾಡದೆ ಇರುವುದರಿಂದ ಮತ್ತು ತೋಡಿಗೆ ಮೋರಿ ನಿರ್ಮಿಸದೆ ಇರುವುದರಿಂದ ರಸ್ತೆ ಕುಸಿದಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಜನ ಸಂಚಾರ ಅಸಾಧ್ಯವಾಗಿದ್ದು, ಅತಂತ್ರ ಪರಿಸ್ಥಿತಿ ಎದುರಾಗಿದೆ. ಈ ಹಿಂದೆಯೇ ಹಲವು ಬಾರಿ ಗ್ರಾ.ಪಂ ಗೆ ದೂರು ನೀಡಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಆರೋಪಿಸಿರುವ ಸ್ಥಳೀಯರು, ಜಿಲ್ಲಾಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ನಾಪೋಕ್ಲು ಜು.24 : ಇಂಟರಾಕ್ಟ್ ಕ್ಲಬ್ ದೇಶ ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲೂ ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ರೊಟೇರಿಯನ್ ಬಿ.ಜಿ ಅನಂತಶಯನ ಹೇಳಿದರು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2023-24ರ ಸಾಲಿನ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ವಿದ್ಯಾರ್ಥಿಗಳು ಹಂತ ಹಂತವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದ ಅವರು ವಿದ್ಯಾರ್ಥಿ-ಶಿಕ್ಷಕರ ಸಂಬಂಧ ಅನ್ಯೋನ್ಯವಾಗಿ ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು ಎಂದರು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಶಾಲಾ ಹಂತದಲ್ಲಿ ಸಂಘಗಳ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರೊಂದಿಗೆ ದೇಶದ ಉತ್ತಮ ಪ್ರಜೆಗಳಾಗಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಶಾಲೆಯ ಪ್ರಾಂಶುಪಾಲ ಬಿ.ಎಂ.ಶಾರದ ಮಾತನಾಡಿ, ಶಾಲಾ ಹಂತದಲ್ಲಿ ವಿವಿಧ ಸಂಘಗಳು ಚಟುವಟಿಕೆಗಳಿಂದ ಕೂಡಿದ್ದು, ದೇಶ ವಿದೇಶಗಳಲ್ಲಿ ಇಂಟರಾಕ್ಟ್ ಕ್ಲಬ್ ನಡೆಸುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನ ಅಧ್ಯಕ್ಷ…
ನಾಪೋಕ್ಲು ಜು.24 : ನಾಪೋಕ್ಲು ಹೋಬಳಿ ವ್ಯಾಪ್ತಿಯಲ್ಲಿ ನಿರಂತರ ಮಳೆ ಬಿರುಸಿನಿಂದ ಸುರಿಯುತ್ತಿದ್ದು ಜೀವ ನದಿ ಕಾವೇರಿ ಪ್ರವಾಹ ತುಂಬಿ ಬಹುತೇಕ ಕಡೆ ಹಳ್ಳಕೊಳ್ಳಗಳು ಭರ್ತಿಯಾಗಿದೆ. ಕಾವೇರಿ ನದಿತೀರದ ಹಲವು ಗದ್ದೆಗಳು ಜಲಾವೃತವಾಗಿದ್ದು, ನಾಪೋಕ್ಲು, ಬೊಳಿಬಾಣೆ, ಕಕ್ಕಬ್ಬೆ, ಬಲ್ಲಮಾವಟಿ, ಎಮ್ಮೆಮಾಡು, ಬೆಟ್ಟಗೇರಿ. ಪಾಲೂರು ,ಹೊದ್ದೂರು ಬೇತು, ಪಾರಾಣೆ ಗ್ರಾಮದಲ್ಲಿಯ ಗದ್ದೆಗಳಿಗೆ ನೀರು ನುಗ್ಗಿದ್ದು ಜಲಾವೃತವಾಗಿದೆ ನಾಪೋಕ್ಲು – ಮೂರ್ನಾಡು ಸಂಪರ್ಕ ರಸ್ತೆಯ ಬೊಳಿಬಾಣೆ ಎಂಬಲ್ಲಿ ರಸ್ತೆಯ ಮೇಲೆ ಕಾವೇರಿ ಪ್ರವಾಹದ ಹರಿಯುತ್ತಿದ್ದು ವಾಹನಗಳ ಸಂಚಾರ ಕಡಿದುಕೊಂಡಿದೆ. ಇಲ್ಲಿ ಪೊಲೀಸರು ಬ್ಯಾರಿಕೆಡ್ ಅಳವಡಿಸಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಚೆರಿಯಪರಂಬು ಕಲ್ಲುಮೊಟ್ಟೆ ಸಂಪರ್ಕ ರಸ್ತೆಯು ಜಲಾವೃತವಾಗಿ ಸಂಪರ್ಕ ಸ್ಥಗಿತಗೊಂಡಿದ್ದು ಸ್ಥಳೀಯ ಯುವಕರ ತುರ್ತು ಸೇವಾ ತಂಡದ ಮೂಲಕ ತೆಪ್ಪ ಬಳಸಿಕೊಂಡು ಸಾರ್ವಜನಿಕರಿಗೆ ಸಹಕರಿಸುತ್ತಿದ್ದಾರೆ. ಹೊದ್ದೂರು ಗ್ರಾಮದ ಬಲಮುರಿಯಲ್ಲಿ ಹಳೆಯ ಸೇತುವೆ ಮುಳುಗಡೆಯಾಗಿ ಗ್ರಾಮಸ್ಥರು ಸುತ್ತು ಬಳಸಿ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಳಿ ಮಳೆಯಿಂದಾಗಿ ಕುಂಜಿಲ ಗ್ರಾಮದ ಮಕ್ಕಿ ಉಮ್ಮರ್ ಅವರ ವಾಸದ ಮನೆಯ…
ಮಡಿಕೇರಿ ಜು.24 : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ 50 ನೇ ವರ್ಷದ ದಸರಾ ಉತ್ಸವ ಸಮಿತಿಯ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ರವಿ ಆಯ್ಕೆಯಾಗಿದ್ದಾರೆ.
ಮಡಿಕೇರಿ ಜು.23 : ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ 24 ಗಂಟೆಗಳಲ್ಲಿ ದಾಖಲೆಯ 12 ಇಂಚಿಗೂ ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮುಂಗಾರು ಬಿರುಸುಗೊಳ್ಳುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಲವೆಡೆ ಪ್ರವಾಹದಿಂದಾಗಿ ರಸ್ತೆ ಮತ್ತು ಸೇತುವೆ ಸಂಪರ್ಕ ಕಡಿತಗೊಂಡಿದೆ. ಮರ, ಬರೆ, ವಿದ್ಯುತ್ ಕಂಬಗಳು ಬೀಳುತ್ತಲೇ ಇದ್ದು, ರಸ್ತೆ ಮತ್ತು ಕಾಲು ಸೇತುವೆಗಳು ಕೊಚ್ಚಿ ಹೋದ ಘಟನೆಯೂ ನಡೆದಿದೆ. ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ. ::: ಹಾರಂಗಿಯಿoದ ನೀರು ::: ಜಿಲ್ಲೆಯ ಹಾರಂಗಿ ಜಲಾಶಯದಿಂದ 25,500 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯಬಿಡಲಾಗುತ್ತಿದ್ದು, ಜಲಾಶಯದ ಒಳ ಹರಿವು 31,140 ಕ್ಯೂಸೆಕ್ಸ್ ಆಗಿದೆ. ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದೆ. ನಾಪೋಕ್ಲು ಮತ್ತು ಮಡಿಕೇರಿ ರಸ್ತೆ ಜಲಾವೃತಗೊಂಡಿದ್ದು, ವಾಹನಗಳ ಸಂಚಾರ ದುಸ್ತರವಾಗಿದೆ.…
ಮಡಿಕೇರಿ ಜು.23 : ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೆ.ಎಸ್ .ನಾಗೇಶ್ ಅವರನ್ನು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಆಯ್ಕೆ ಮಾಡಿದ್ದಾರೆ. ಗೌರವ ಕಾರ್ಯದರ್ಶಿಗಳಾಗಿ ಎಸ್. ನಾಗರಾಜ್ ಮತ್ತು ಟಿ.ವಿ ಶೈಲಾ, ಗೌರವ ಕೋಶಾಧಿಕಾರಿಗಳಾಗಿ ಕೆ.ವಿ ಉಮೇಶ್, ಸಂಘಟನಾ ಕಾರ್ಯದರ್ಶಿಗಳಾಗಿ ಕೆ ಬಿ. ದೇವಿಪ್ರಸಾದ್ ಹಾಗೂ ರತ್ನಾವತಿ ಸೂದನ ಅವರನ್ನು ನೇಮಿಸಲಾಗಿದೆ. ಸುಂಟಿಕೊಪ್ಪ ಹೋಬಳಿ ಅಧ್ಯಕ್ಷ ಪಿ ಎಫ್ ಸಬಾಸ್ಟಿನ್, ಶಿರಂಗಾಲ ಹೋಬಳಿ ಅಧ್ಯಕ್ಷ ಎಂ.ಎನ್. ಮೂರ್ತಿ ಕಾರ್ಯಕಾರಿ ಮಂಡಳಿಯ ಸದಸ್ಯರಾಗಿರುತ್ತಾರೆ. ಅಲ್ಲದೆ ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ವಿ.ಪಿ ಶಶಿಧರ್, ಮಹಿಳಾ ಪ್ರತಿನಿಧಿಗಳಾಗಿ ಸಾವಿತ್ರಿ ಬಿ.ಬಿ, ಕುಮಾರಿ ಫಿಲೋಮಿನಾ, ಪರಿಶಿಷ್ಟ ಜಾತಿ ಪ್ರತಿನಿಧಿಗಳಾಗಿ ಹೆಚ್.ಎಂ ವೆಂಕಟೇಶ್, ಗೀತಾ ಬಸಪ್ಪ, ಪರಿಶಿಷ್ಟ ಪಂಗಡ ಪ್ರತಿನಿಧಿಯಾಗಿ ಪರಮೇಶ್ವರ್ ವೈ.ಟಿ, ಹಿಂದುಳಿದ ವರ್ಗಗಳ ಪ್ರತಿನಿಧಿಯಾಗಿ ಪರಮೇಶ್ ಬಿ. ಎಸ್.…






