ಮಡಿಕೇರಿ, ಜು.23: ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ಒದಗಿಸುವ ಬೇಡಿಕೆಗೆ ಸ್ಪಂದಿಸುತ್ತೇನೆ. ಸರಕಾರ ಮಟ್ಟದಲ್ಲಿ ಈ ಬಗ್ಗೆ ಚರ್ಚಿಸುತ್ತೇನೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಭರವಸೆ ನೀಡಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಮಹಾಸಭೆ ಕಾರ್ಯಕ್ರಮ ನಗರದ ಪತ್ರಿಕಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪೊನ್ನಣ್ಣ ಅವರು, ಮಾಧ್ಯಮ ಸಂಸ್ಥೆ ಮುನ್ನಡೆಸುವುದು ಸವಾಲಿನ ಕೆಲಸ. ಸಂಸ್ಥೆಗಳು ಆರ್ಥಿಕ ಸಂಕಷ್ಟದ ನಡುವೆ ಕೆಲಸ ಮಾಡುತ್ತಿವೆ. ಜಿಲ್ಲಾ ಮಟ್ಟದಲ್ಲಿಯೂ ಪತ್ರಕರ್ತರು ಸಂಕಷ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಸಮಸ್ಯೆಗಳ ನಡುವೆ ಪತ್ರಕರ್ತರು ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹೆಸರು ಗಳಿಸಿದ ಪತ್ರಿಕೆಯೊಂದು ನಷ್ಟದಿಂದ ವಾರಗಳ ಕಾಲ ಸ್ಥಗಿತಗೊಂಡಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ವಾರ್ತಾ ಇಲಾಖೆ ಮೂಲಕ ಕಚ್ಛಾವಸ್ತು ಖರೀದಿಗೆ ನೆರವು ನೀಡಿದ್ದರು. ಆದರೆ, ಕುಮಾರಸ್ವಾಮಿ ವಿರುದ್ಧವೇ ಮುಖಪುಟದಲ್ಲಿ ವರದಿ ಪ್ರಕಟವಾಗಿತ್ತು. ಇದು ಮಾಧ್ಯಮದ ಜವಾಬ್ದಾರಿ ಪ್ರದರ್ಶಿಸುತ್ತದೆ. ಆಸಕ್ತಿ,…
ಲೇಖಕ: admin
ನಾಪೋಕ್ಲು ಜು.23 : ಧಾರಾಕಾರ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನಾಪೋಕ್ಲು -ಮೂರ್ನಾಡು ಮುಖ್ಯ ರಸ್ತೆಯ ಬೊಳಿಬಾಣೆ ಬಳಿ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಕಡಿತಗೊಂಡಿದೆ. ಚೆರಿಯಪರಂಬು, ಕಲ್ಲು ಮೊಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನದಿ ಪ್ರವಾಹದಿಂದ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದಾರೆ. ಅದರಂತೆ ನಾಪೋಕ್ಲುವಿನಿಂದ ಬೆಟ್ಟಗೇರಿ ಮಡಿಕೇರಿ ತೆರಳುವ ಕೊಟ್ಟಮುಡಿ ಬಳಿಯಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದೆ. ಕಕ್ಕಬ್ಬೆ ಗ್ರಾಮದಿಂದ ಕುಂಜಿಲ ಪೈನರಿ ದರ್ಗಾಕ್ಕೆ ಹೋಗುವ ರಸ್ತೆ ಜಲಾವೃತಗೊಂಡಿದೆ. ನಾಪೋಕ್ಲುವಿನಿಂದ ವಿರಾಜಪೇಟೆಗೆ ತೆರಳುವ ಕೈಕಾಡು ಹೊಳೆ ಹಾಗೂ ಎಡಪಾಲ ಮಾರ್ಗವಾಗಿ ಕಡಂಗ ತೆರಳುವ ಅರಪಟ್ಟು ಎಂಬಲ್ಲಿ ರಸ್ತೆಯಲ್ಲಿ ಪ್ರವಾಹ ಉಂಟಾಗಿದೆ. ನಾಪೋಕ್ಲು ಸುತ್ತಮುತ್ತ ಮಳೆ ಆರ್ಭಟ ಮುಂದುವರಿದಿದ್ದು, ನದಿ, ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಳೆಯ ತೀವ್ರತೆ ಹೀಗೆ ಮುಂದುವರೆದರೆ ರಸ್ತೆ ಸಂಪರ್ಕ ಕಡಿತಗೊಳ್ಳುವ ಎಲ್ಲಾ ಸಾಧ್ಯತೆಗಳಿದೆ. (ವರದಿ : ಝಕರಿಯ, ನಾಪೋಕ್ಲು)
ನಾಪೋಕ್ಲು ಜು.23 : ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಾನೂನು ಅಂದರೆ ಏನು? ಕಾನೂನು ಉಲ್ಲಂಘಿಸಿದವರಿಗೆ ಆಗುವ ಶಿಕ್ಷೆಯ ಬಗ್ಗೆ ಮಾಹಿತಿನೀಡಿದರು.ಶಿಕ್ಷಣದ ಮಹತ್ವದ ಮೂಲಕ ಗಳಿಸಿಕೊಳ್ಳುವ ಜ್ಞಾನ, ಕಟ್ಟಿಕೊಳ್ಳುವ ಬದುಕು, ರೂಡಿಸಿಕೊಳ್ಳಬೇಕಾದ ಮೌಲ್ಯಗಳು, ಮಾನವೀಯತೆಯ ಮನೋಭಾವದ ಬಗ್ಗೆ ತಿಳಿಸಿದರು. ಮಾದಕ ವಸ್ತುಗಳ ಬಳಕೆಯಿಂದ ಹಾಗುವ ದುಷ್ಪರಿಣಾಮ ಮತ್ತು ಅದನ್ನು ಬಳಸುವ, ಸರಬರಾಜು ಮಾಡುವವರಿಗೆ ಶಿಕ್ಷೆ ಮತ್ತು ದಂಡಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟ ಅವರು ಮೊಬೈಲ್ ಬಳಸುವುದರಿಂದ ಆಗುವ ಸಾಧಕ ಬಾದಕಗಳ ಬಗ್ಗೆ ಕೂಡ ಮಾಹಿತಿ ನೀಡಿ ಎಲ್ಲಾ ವಿದ್ಯಾರ್ಥಿಗಳು ಕಾನೂನನ್ನು ಪರಿಪಾಲಿಸಿ ಉಲ್ಲಂಘನೆ ಮಾಡದೆ ಶಿಸ್ತಿನಿಂದ ಶಿಕ್ಷಣವನ್ನು ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಬೇಕೆಂದು ಕರೆ ನೀಡಿದರು. ಪೊಲೀಸ್ ಸಿಬ್ಬಂದಿ ಲವಕುಮಾರ್ ಮಾತನಾಡಿ ವಿದ್ಯಾರ್ಥಿಗಳು ರಸ್ತೆಯ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು.…
ಸುಂಟಿಕೊಪ್ಪ ಜು.23 : ಭಾರೀ ಗಾಳಿ ಮಳೆಗೆ ಮರ ಮನೆಯ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ 7ನೇ ಮೈಲು ಗ್ರಾಮದಲ್ಲಿ ನಡೆದಿದೆ. ನೂತನವಾಗಿ ನಿರ್ಮಿಸಲಾಗುತ್ತಿರುವ ಫ್ರಾನ್ಸಿಸ್ ಎಂಬುವವರ ಮನೆಯ ತಾರಸಿ ಮೇಲೆ ಮರ ಬಿದ್ದ ಪರಿಣಾಮ ಸ್ಟೀಲ್ ಸಿಂಟೆಕ್ಸ್ ಸಂಪೂರ್ಣ ಜಖಂಗೊoಡಿದ್ದು, ಸುಮಾರು 1 ಲಕ್ಷ ರೂ. ನಷ್ಟ ಉಂಟಾಗಿದೆ.
ಸುಂಟಿಕೊಪ್ಪ ಜು.23 : ಸುಂಟಿಕೊಪ್ಪ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಎನ್‌ಡಿಆರ್‌ಎಫ್ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಮಿತಿ ವತಿಯಿಂದ ವಿಪತ್ತು ಸಂಬಂವಿಸಿದಾಗ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು. ಪ್ರವಾಹ, ಭೂಕುಸಿತ, ನೆರೆ, ಕಟ್ಟಡ ಕುಸಿತ ಸಂಭವಿಸಿದಾಗ ಪ್ರಾಣಹಾನಿ ಅನಾಹುತ ತಪ್ಪಿಸಲು ಎನ್‌ಡಿಆರ್‌ಎಫ್ ತಂಡ ಕಾಯೋನ್ಮುಖವಾಗುತ್ತದೆ. ವಿದ್ಯಾರ್ಥಿಗಳು ಆಟವಾಡುವಾಗ ಗಾಯವಾದರೆ ಪ್ರಥಮ ಚಿಕಿತ್ಸೆ ನೀಡುವುದು ಹೇಗೆ ಎನ್ನುವ ಬಗ್ಗೆ ಎನ್‌ಡಿಆರ್‌ಎಫ್ ನ ವಿಜಯವಾಡ ತಂಡದ ಅಧಿಕಾರಿ ಶಾಂತಿಲಾಯ್ ಶಾಲೆಯ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಸುಂಟಿಕೊಪ್ಪ ಗ್ರಾ.ಪಂ ಸದಸ್ಯ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಫೀಕ್‌ಖಾನ್, ಸರಕಾರಿ ಪ್ರೌಢಶಾಲೆಯ ಉಪಪ್ರಾಂಶುಪಾಲ ಬಾಲಕೃಷ್ಣ, ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ, ಗ್ರಾ.ಪಂ ಮಾಜಿ ಸದಸ್ಯೆ ರಹೆನಾ ಸುಲ್ತಾನ್, ಪ್ರೌಢಶಾಲೆಯ ಶಿಕ್ಷಕ ಪ್ರಕಾಶ್, ಸಹ ಶಿಕ್ಷಕ, ಶಿಕ್ಷಕಿಯರು ಹಾಗೂ ಎನ್‌ಡಿಆರ್‌ಎಫ್ ತಂಡದ ಸಿಬ್ಬಂದಿಗಳು ಇದ್ದರು.
ಮಡಿಕೇರಿ ಜು.23 : ಶ್ರೀ ದಂಡಿನ ಮಾರಿಯಮ್ಮ ದೇವಾಲಯದ 93ನೇ ವರ್ಷದ ದಸರಾ ಉತ್ಸವದ 2023/24ನೇ ಸಾಲಿನ ನೂತನ ಅಧ್ಯಕ್ಷರಾಗಿ ನವೀನ್ ಅಂಬೇಕಲ್, ಉಪಾಧ್ಯಕ್ಷರಾಗಿ ಕಿಶೋರ್ ಬಾಬು, ಹಾಗೂ ವಾಸುದೇವ್ ಆಯ್ಕೆಯಾಗಿದ್ದಾರೆ. ದೇವಾಲಯದ ಆವರಣದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಮಡಿಕೇರಿ ಜು.23 : ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಮತ್ತು ಇಬ್ಬರು ಮಹಿಳೆಯರನ್ನು ಅವಮಾನಿಸಿದ ಘಟನೆ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿರುವ ಮಡಿಕೇರಿ ನಗರಸಭಾ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಅಮಾನವೀಯವಾಗಿ ನಡೆದುಕೊಂಡವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ನೊಂದವರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ ದೇಶವನ್ನು ರಕ್ಷಿಸಿದ ಯೋಧನ ಪತ್ನಿಗೇ ರಕ್ಷಣೆ ನೀಡಲಾಗದಷ್ಟು ಹೀನಾಯ ಸ್ಥಿತಿಯಲ್ಲಿರುವ ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ಮತ್ತಷ್ಟು ಅಮಾಯಕ ಜೀವಗಳು ಬಲಿಯಾಗುವುದನ್ನು ತಡೆಯಬೇಕು. ದೇಶವ್ಯಾಪಿ ದ್ವೇಷದ ಕಿಚ್ಚು ಹಬ್ಬುವ ಮುನ್ನ ಪ್ರಧಾನಮಂತ್ರಿಗಳು ಎಚ್ಚೆತ್ತುಕೊಳ್ಳಬೇಕು. “ಬೇಟಿ ಪಡಾವೋ ಬೇಟಿ ಬಚಾವೋ” ಘೋಷಣೆ ಕೇವಲ ಪ್ರಚಾರಕಷ್ಟೇ ಸೀಮಿತವಾಗಬಾರದು. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ವಾಸ್ತವತೆಯನ್ನು ಅರಿತು ಅಮಾಯಕರ ರಕ್ಷಣೆಗೆ ಬರಬೇಕು ಎಂದು ಲೀಲಾ ಶೇಷಮ್ಮ ಒತ್ತಾಯಿಸಿದ್ದಾರೆ.
ಮಡಿಕೇರಿ ಜು.23 : ಚಿನ್ನಾಭರಣ ಕಳ್ಳತನ ಮಾಡಿದ ಆರೋಪದಡಿ ಮಹಿಳೆಯೊಬ್ಬರನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಕರ್ಕಳ್ಳಿ ಗ್ರಾಮದ ನಿವಾಸಿ ಜಯಂತಿ ಬಂಧಿತ ಆರೋಪಿಯಾಗಿದ್ದು, ಇವರಿಂದ 120 ಗ್ರಾಂ ನಷ್ಟು ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಜೂನಿಯರ್ ಕಾಲೇಜು ರಸ್ತೆಯ ಕೆ.ರಾಜೀವನ್ ಎಂಬುವವರ ಮನೆ ಕೆಲಸ ಮಾಡುತ್ತಿದ್ದ ಜಯಂತಿ, ಮಾಲೀಕರ ಮನೆಯಲ್ಲೇ ಕಳ್ಳತನ ಮಾಡಿದ್ದಳು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಚಿನ್ನಾಭರಣ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಳು. ಆರೋಪಿ ಜಯಂತಿಯನ್ನು ಬಂಧಿಸಿದ ಪೊಲೀಸರು, ಮಾರಾಟ ಮಾಡಿದ್ದ ಚಿನ್ನಾಭರಣವನ್ನು ವಶಪಡಿಸಿಕೊಂಡರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎಎಸ್‌ಪಿ ಸುಂದರ್ ರಾಜ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್, ಪಿಎಸ್‌ಐಗಳಾದ ರಮೇಶ್, ವಿರೂಪಾಕ್ಷ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜು.23 : ಕೊಡವ ಹಾಕಿ ಅಕಾಡೆಮಿಯ ಪ್ರಮುಖರು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರನ್ನು ಭೇಟಿಯಾಗಿ ನೆನಪಿನ ಕಾಣಿಕೆ ನೀಡಿ ಅಭಿನಂದಿಸಿದರು. ಈ ಸಂದರ್ಭ ಮಾತನಾಡಿದ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ ಹಾಗೂ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಕೊಡಗು ಜಿಲ್ಲೆ ಕ್ರೀಡಾ ಕಲಿಗಳ ನಾಡಾಗಿದ್ದು, ನೂರಾರು ಹಾಕಿ ಪಟುಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಎಂದರು. ಹಾಕಿ ಅಕಾಡೆಮಿ ಹಾಕಿಯನ್ನು ಉತ್ತೇಜಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದೆ. ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಿದೆ, ಈ ಕಾರ್ಯಕ್ಕೆ ಶಾಸಕರು ಸಂಪೂರ್ಣ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕ್ಷೇತ್ರದಲ್ಲಿರುವ ಮೈದಾನ ಹಾಗೂ ಕ್ರೀಡಾಂಗಣಗಳ ಅಭಿವೃದ್ಧಿಗೂ ಒತ್ತು ನೀಡಬೇಕೆಂದು ಗಮನ ಸೆಳೆದರು. ಹಾಕಿ ಅಕಾಡೆಮಿಯ ಜಂಟಿ ಕಾರ್ಯದರ್ಶಿ ಚೆಯ್ಯಂಡ ಸತ್ಯ ಗಣಪತಿ, ನಿರ್ದೇಶಕರುಗಳಾದ ಕುಲ್ಲೇಟಿರ ಬೇಬ ಹಾಗೂ ನೆರಪಂಡ ಹರ್ಷ ಉಪಸ್ಥಿತರಿದ್ದರು.
ಮಡಿಕೇರಿ ಜು.22 : ಮಣಿಪುರದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ವಿಮೆನ್ ಇಂಡಿಯಾ ಮೂಮೆಂಟ್ ಕೊಡಗು ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿ ಸಂಘಟನೆಯ ಕಾರ್ಯಕರ್ತರು ಕೇಂದ್ರ ಹಾಗೂ ಮಣಿಪುರದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ತನುಜಾವತಿ ಮಾತನಾಡಿ, ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವು ವಿಶ್ವವೇ ತಲೆತಗ್ಗಿಸುವಂತ ಕೃತ್ಯವಾಗಿದೆ. ಘಟನೆ ನಡೆದು ತಿಂಗಳುಗಳೇ ಕಳೆದರು ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದರು. ದೇಶದ ಹೃದಯ ಭಾಗವಾಗಿರುವ ರಾಜಧಾನಿಯಲ್ಲಿ ಮಹಿಳಾ ಕ್ರೀಡಾಪಟುಗಳು ನ್ಯಾಯಕ್ಕಾಗಿ ಮೊರೆಯಿಡುತ್ತಿರಬೇಕಾದರೆ ಪ್ರಧಾನಿ ಮೌನ ವಹಿಸಿದ್ದರು, ಬಿಲ್ಕೀಸ್ ಬಾನು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾದವರನ್ನು “ಸನ್ನಡತೆ” ಹೆಸರಿನಲ್ಲಿ ಬಿಡುಗಡೆಗೊಳಿಸಲಾಗಿತ್ತು ಇದು ದುಷ್ಕರ್ಮಿಗಳಿಗೆ ಆಡಳಿತಾತ್ಮಕ ಧೈರ್ಯ ನೀಡಿದಂತಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜು ಆಗುತ್ತಿದೆ ಎಂದು ಆರೋಪಿಸಿದರು. ಈ ಘಟನೆಯನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ…






