ಮಡಿಕೇರಿ ಜು.22 : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಕೊಡಗಿನ ಏಕೈಕ ಹಾರಂಗಿ ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ಏರಿಕೆಯಾಗಿದೆ. ಮುಂಜಾಗೃತಾ ಕ್ರಮವಾಗಿ ಯಾವುದೇ ಕ್ಷಣದಲ್ಲಿ ಜಲಾಶಯದಿಂದ ನದಿಗೆ ನೀರನ್ನು ಹರಿ ಬಿಡುವ ಸಾಧ್ಯತೆ ಇದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳಾಗಿದ್ದು, ಈಗಿನ ಮಟ್ಟ 2854.12 ಅಡಿಗಳಾಗಿದೆ. ಜಲಾಶಯದ ಒಳಹರಿವಿನ ಪ್ರಮಾಣ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, 16,970 ಕ್ಯುಸೆಕ್ ನೀರು ಜಲಾಶಯವನ್ನು ಬಂದು ಸೇರುತ್ತಿದೆ. ಮಳೆಯ ಪ್ರಮಾಣ ಮುಂದುವರಿದು, ಒಳಹರಿವು ಮತ್ತಷ್ಟು ಹೆಚ್ಚಿದಲ್ಲಿ ಶನಿವಾರ ರಾತ್ರಿ ಇಲ್ಲವೆ ಭಾನುವಾರ ನದಿಗೆ ನೀರನ್ನು ಹರಿ ಬಿಡುವ ಸಾಧ್ಯತೆ ಇದೆಯೆಂದು ಹಾರಂಗಿ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ಅವರು ಪತ್ರಿಕೆಗೆ ತಿಳಿಸಿದ್ದಾರೆ. ಈ ಹಿನ್ನೆಲೆ ಹಾರಂಗಿ ಮತ್ತು ಕಾವೇರಿ ನದಿ ಪಾತ್ರದಲ್ಲಿರುವ ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಮತ್ತು ಜನ ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವಿ…
ಲೇಖಕ: admin
ಮಡಿಕೇರಿ ಜು.22 : ಕೊಡಗು ಜಿಲ್ಲೆಯಲ್ಲಿ ತಡವಾಗಿ ಆರಂಭಗೊಂಡ ಮುಂಗಾರು ಬಿರುಸುಗೊಂಡಿದೆ. ಸತತ ಗಾಳಿ, ಮಳೆಯಾಗುತ್ತಿರುವುದರಿಂದ ಮರ, ಬರೆ ಮತ್ತು ವಿದ್ಯುತ್ ಕಂಬಗಳು ಬಿದ್ದು ಹಾನಿಯುಂಟಾಗಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ಕ್ಷೇತ್ರ ವ್ಯಾಪ್ತಿ ಸೇರಿದಂತೆ, ಕಾವೇರಿ ನದಿ ಹರಿವಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಹೆಚ್ಚಳವಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ನಗರದಲ್ಲಿ ಎಡೆಬಿಡದೆ ಗಾಳಿ ಮಳೆಯಾಗುತ್ತಿದ್ದು, ಮುಸುಕಿದ ಮಂಜು ಮತ್ತು ಮೈಕೊರೆಯುವ ಚಳಿಯ ವಾತಾವರಣವಿದೆ. ::: ವಿವಿಧೆಡೆ ಹಾನಿ ::: ಗಾಳಿ ಮಳೆಗೆ ಸುಂಟಿಕೊಪ್ಪ ಮತ್ತು ಸಮೀಪದ ಮಟತ್ ಕಾಡುವಿನಲ್ಲಿ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿದೆ. ಸೆಸ್ಕ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ. ನಾಕೂರು ಶಿರಂಗಾಲ ಗ್ರಾ.ಪಂ ವ್ಯಾಪ್ತಿಯಲ್ಲಿ ಮರ ಬಿದ್ದು, ವಿದ್ಯುತ್ ತಂತಿಗಳಿಗೆ ಹಾನಿಯಾಗಿದೆ. ನಗರದ ಅರಣ್ಯ ಭವನದ ಬಳಿ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದರಿಂದ ವಿವಿಧೆಡೆ ವಿದ್ಯುತ್ ಸಂಪರ್ಕದಲ್ಲಿ…
ಮಡಿಕೇರಿ ಜು.22 : ಆಟೋ ಅಪಘಾತಕ್ಕೊಳಗಾಗಿ ಕೋಮಾವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಯ ವೈದ್ಯಕೀಯ ಚಿಕಿತ್ಸೆಗೆ ಕೊಡಗು ಜಿಲ್ಲಾ ಕುಲಾಲ ಕುಂಬಾರ ಯುವ ಘಟಕದಿಂದ ಆರ್ಥಿಕ ನೆರವು ನೀಡಲಾಯಿತು. ಕೆಲವು ದಿನಗಳ ಹಿಂದೆ ಆಟೋ ಅಪಘಾತಕ್ಕೊಳಗಾಗಿ ಇದೀಗ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಂಟನೇ ತರಗತಿ ವಿದ್ಯಾರ್ಥಿ ಭುವಿನ್ ವೈದ್ಯಕೀಯ ಚಿಕಿತ್ಸೆಗೆ ಕೊಡಗು ಜಿಲ್ಲೆ ಅಲ್ಲದೆ ದಕ್ಷಿಣ ಕನ್ನಡ ,ಮೈಸೂರು ಜಿಲ್ಲೆ ಹಾಗೂ ಹೊರದೇಶಗಳಿಂದಲೂ ದಾನಿಗಳಿಂದ ಸಹಾಯಧನ ರೂಪದಲ್ಲಿ ಬಂದ ರೂ.51,701 ರೂಪಾಯಿಗಳನ್ನು ವಿದ್ಯಾರ್ಥಿಯ ತಂದೆ ಸುನಿಲ್ ಅವರಿಗೆ ಕೊಡಗು ಜಿಲ್ಲಾ ಕುಲಾಲ ಕುಂಬಾರ ಯುವ ಘಟಕ ಪದಾಧಿಕಾರಿಗಳು ಹಸ್ತಾಂತರಿಸಿದರು. ಈ ಸಂದರ್ಭ ಸದಸ್ಯರಾದ ಸುರೇಶ್, ಶಶಿ, ಚಂದ್ರಶೇಖರ್, ಪವನ್, ಅರುಣ್, ಜಯಪ್ರಕಾಶ್, ರಾಜೇಶ್,(ವಿಜು)ಪನ್ನೇ, ರಾಜುಮಣಿ, ರಾಮಚಂದ್ರ, ವಿನು ಹಾಜರಿದ್ದರು. ಸುಮಾರು ನಾಲ್ಕು ತಿಂಗಳ ಹಿಂದೆ ಪ್ರಾರಂಭಗೊಂಡ ಕೊಡಗು ಜಿಲ್ಲಾ ಕುಲಾಲ ಕುಂಬಾರ ಯುವ ಘಟಕವು ಹಲವು ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದು, ಜಿಲ್ಲೆಯ ಕುಲಾಲ ಕುಂಬಾರ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು.
ಮಡಿಕೇರಿ ಜು.22 : ನಗರದ ಕ್ರೆಸೆಂಟ್ ಶಾಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮಗಳು, ಮಾದಕ ವಸ್ತುಗಳ ವಿಚಾರ ಹಾಗೂ ಪೊಲೀಸ್ ಸಹಾಯವಾಣಿ 112 ಗಳ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭ ಸಂಚಾರಿ ಪೊಲೀಸ್ ಠಾಣೆಯ ಎಎಸ್‍ಐ ನಂದ ವಿವರಿಸಿದರು. ಮಾದಕ ವಸ್ತುಗಳನ್ನು ಬಳಸದಂತೆ ಮತ್ತು ಸಂಚಾರಿ ನಿಯಮ ಉಲ್ಲಂಘಿಸದಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ ಪ್ರಭಾಕರ್ ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.
ಮಡಿಕೇರಿ ಜು.22 : ಚಾಲಕನ ನಿಯಂತ್ರಣ ಕಳೆದುಕೊಂಡು ರಭಸವಾಗಿ ಚಲಿಸಿದ ಟ್ರ್ಯಾಕ್ಟರ್ 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿಯಾದ ಘಟನೆ ಮಡಿಕೇರಿ ನಗರದ ಮಹದೇವಪೇಟೆ ರಸ್ತೆಯಲ್ಲಿ ನಡೆದಿದೆ. ಅಪಘಾತಕ್ಕೆ ಕಾರಣಕರ್ತನಾದ ಟ್ರ್ಯಾಕ್ಟರ್ ಚಾಲಕ ಎಂ.ಹರ್ಷವರ್ಧನ್ (23) ಎಂಬಾತನನ್ನು ನಗರ ಸಂಚಾರಿ ಪೊಲೀಸರು ಟ್ರ್ಯಾಕ್ಟರ್ ಸಹಿತ ವಶಕ್ಕೆ ಪಡೆದಿದ್ದಾರೆ. ನೋಡು ನೋಡುತ್ತಿದ್ದಂತೆ ಅತಿವೇಗದಲ್ಲಿ ಬಂದ ಟ್ರ್ಯಾಕ್ಟರ್ ನಿಲ್ಲಿಸಿದ್ದ ಮತ್ತು ಚಲಿಸುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆಯಿತು. ತಕ್ಷಣ ಎಚ್ಚೆತ್ತುಕೊಂಡ ಸಾರ್ವಜನಿಕರು ಹಾಗೂ ಇತರ ವಾಹನ ಚಾಲಕರು ಅಪಾಯದಿಂದ ತಪ್ಪಿಸಿಕೊಂಡು ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದರು. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆಯಾದರೂ ಹಲವು ವಾಹನಗಳಿಗೆ ಹಾನಿಯಾಗಿದೆ. ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಡಿಕೇರಿ ಜು.22 : ಕರ್ನಾಟಕ ವಿಧಾನಸಭಾ ಕಲಾಪದಿಂದ ಹತ್ತು ಮಂದಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸ್ಪೀಕರ್ ಕ್ರಮವನ್ನು ಖಂಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಸರ್ಕಾರದ ನಡೆಯನ್ನು ಪ್ರಶ್ನಿಸಿದಕ್ಕೆ ಬಿಜೆಪಿ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವುದು ಸರಿಯಲ್ಲ. ಇದು ಸ್ಪೀಕರ್ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದರು. ಬೆಲೆ ಏರಿಕೆ ಮೂಲಕ ಜನರ ಮೇಲೆ ಸರಕಾರ ಬರೆ ಎಳೆದಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಇದೀಗ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಸೆರೆಸಿಕ್ಕ ಶಂಕಿತ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ, ನಗರಾಧ್ಯಕ್ಷ ಮನುಮಂಜುನಾಥ್,…
ಮಡಿಕೇರಿ ಜು.22 : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ಸರ್ವ ಸದಸ್ಯರ 2ನೇ ಮಹಾಸಭೆ ಜು.30 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ ತಿಳಿಸಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಕಾವೇರಿ ಕಲ್ಯಾಣ ಮಂಟಪದ ಆವರಣದಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಕುಟುಂಬ ಸಹಿತರಾಗಿ ಹಾಜರಾಗಿ ಸಲಹೆ, ಸೂಚನೆ ನೀಡುವಂತೆ ಮನವಿ ಮಾಡಿದರು. ಸಭೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರನ್ನು ಆಹ್ವಾನಿಸಲಾಗಿದೆ. ಸದಸ್ಯರು ಸ್ಟಾಂಪ್ ಅಳತೆಯ ಭಾವಚಿತ್ರವನ್ನು ತಂದು ತಮ್ಮ ತಮ್ಮ ಗುರುತಿನ ಚೀಟಿಯನ್ನು ಪಡೆದುಕೊಳ್ಳಬಹುದಾಗಿದೆ. ಸಂಘದ ಸದಸ್ಯತ್ವ ಬಯಸುವ ಮಾಜಿ ಸೈನಿಕರು ಸಭೆಗೆ ಹಾಜರಾಗಿ ಸದಸ್ಯತ್ವ ಪಡೆದುಕೊಳ್ಳಬಹುದು ಎಂದರು. ಹತ್ತನೇ ತರಗತಿ ಪರೀಕ್ಷೆಯಲ್ಲಿ ಸ್ಟೇಟ್ ಸಿಲಬಸ್ ನಲ್ಲಿ ಶೇ.95 ಮೇಲ್ಪಟ್ಟು ಅಂಕ ಪಡೆದ, ಸಿಬಿಎಸ್ ನಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಮತ್ತು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಅಲ್ಲದೆ ಕ್ರೀಡೆ,…
ಬೆಂಗಳೂರು : ರಫ್ತು ಮಾಡುವುದರಲ್ಲಿ ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು ಎರಡನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ ರಫ್ತು ಮಾಡುವುದರಲ್ಲಿ ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುತ್ತದೆ ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಗಿತ್ತು. ಈಗ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು. ಹೊಸ ಕೈಗಾರಿಕಾ ನೀತಿಯನ್ನು ಸರ್ಕಾರ ಘೋಷಣೆ ಮಾಡಿದಾಗ ಕೈಗಾರಿಕೋದ್ಯಮಿಗಳು ನೀತಿಯನ್ನು ಬೆಂಬಲಿಸಿ ಸ್ವಾಗತಿಸಿದರು. ಈಗಲೂ ಎಲ್ಲರೊಂದಿಗೆ ಚರ್ಚೆ ಮಾಡಿ ರಫ್ತು ಬೆಳವಣಿಗೆಗೆ ಪೂರಕವಾದಂಥ ಕೈಗಾರಿಕಾ ನೀತಿಯನ್ನು ರೂಪಿಸಲು ಕ್ರಮ ವಹಿಸಲಾಗುವುದು. ಎಂ.ಬಿ.ಪಾಟಲ್ ಅವರು ಕೈಗಾರಿಕಾ ಇಲಾಖೆಯ ನೇತೃತ್ವವನ್ನು ವಹಿಸಿದ್ದು, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆ ಆಗಬೇಕು ಎನ್ನುವ ಆಶಯವನ್ನು ಹೊಂದಿದ್ದಾರೆ. ಕರ್ನಾಟಕ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು…
ಮಡಿಕೇರಿ ಜು.22 : ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿರುತ್ತದೆ. ಜಲಾಶಯವು ಶೀಘ್ರವೇ ಗರಿಷ್ಟ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಕಾವೇರಿ ನೀರಾವರಿ ನಿಗಮ ನಿಯಮಿತ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಮಡಿಕೇರಿ ಜು.22 : ಗಾಳಿ ಮಳೆಗೆ ಹೈಸೋಡ್ಲೂರು – ಬಿರುನಾಣಿ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಪೊನ್ನಂಪೇಟೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು.






