ಲೇಖಕ: admin

ಮಡಿಕೇರಿ ಜು.22 :  ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಪಣತೊಟ್ಟು, ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಎಂದು ಚೆಟ್ಟಳ್ಳಿ ಗ್ರಾಮ ಪಂಚಾಯತಿ ಸದಸ್ಯರ ಸಿ.ಇ ತೀರ್ಥಕುಮಾರ್ ಅಭಿಪ್ರಾಯಪಟ್ಟರು. ಗಾಂಧಿ ಯುವಕ ಸಂಘ ಕಂಡಕರೆ ಹಾಗೂ ಗಾಂಧಿ ಯುವಕ ಸಂಘ ಸರ್ವಧರ್ಮೀಯ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಸಮಿತಿ ವತಿಯಿಂದ ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 25 ಕುರ್ಚಿಗಳ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಯ ಬಗ್ಗೆ ಎಲ್ಲರಿಗೂ ಕೀಳರಿಮೆ ಉಂಟಾಗಿದೆ. ಮಕ್ಕಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ನೀಡಿದರೆ ಮಾತ್ರ ಸರ್ಕಾರಿ ಶಾಲೆ ಉಳಿಯುವುದು. ಇತ್ತೀಚಿನ ದಿನಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯಿಂದ ಸರ್ಕಾರಿ ಶಾಲೆಗಳು ಮುಚ್ಚುವಂತಹ ಪರಿಸ್ಥಿತಿ ಎದುರಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ನೀಡುವಂತೆ ಮುತುವರ್ಜಿವಹಿಸಿದರೆ ಮಾತ್ರ ಸರ್ಕಾರಿ ಶಾಲೆಗಳು ಉಳಿಯುವಂತಾಗುವುದು. ಮುಂದಿನ‌ ದಿನಗಳಲ್ಲಿ ಕಂಡಕರೆ ಶಾಲೆಗೆ ಗ್ರಾಮ ಪಂಚಾಯತಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶ್ರಮವಹಿಸಲಾಗುವುದೆಂದು ಚೆಟ್ಟಳ್ಳಿ…

Read More

ನಾಪೋಕ್ಲು ಜು.22 :  ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಸರ್ಕಾರ ಕೊಡಗನ್ನು ಜಂಗಲ್ ರಾಜ್ಯ ಎಂದು ಘೋಷಿಸಿ ಮನುಷ್ಯರನ್ನು ಕೊಡಗಿನಿಂದ ಹೊರಹಾಕಬಹುದಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೊಡಗು ಬೆಳೆಗಾರರ ಒಕ್ಕೂಟದ ಉಪಾಧ್ಯಕ್ಷ, ಭಾರತೀಯ ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷ ಡಾ.ಸಣ್ಣುವಂಡ ಎಂ.ಕಾವೇರಪ್ಪ ಹೇಳಿದರು. ನಾಪೋಕ್ಲು ವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವ -ಪ್ರಾಣಿ ಸಂಘರ್ಷ ಕೊಡಗಿನ ಅತ್ಯಂತ ಭೀಕರ ಸಮಸ್ಯೆ. ಮೊದಲು ದಕ್ಷಿಣ ಕೊಡಗಿನ ಕೆಲವು ಭಾಗ ಮತ್ತು ಸೋಮವಾರಪೇಟೆಯ ಕೆಲವು ಪ್ರದೇಶಗಳಿಗೆ ಸೀಮಿತವಾಗಿತ್ತು. ಈಗ ಇದು ಪ್ರತಿಯೊಬ್ಬರ ಸಮಸ್ಯೆಯಾಗಿದೆ. ಆನೆಗಳಿಗೆ ಕೃಷಿಕರ ತೋಟಗಳು ಮತ್ತು ಅರಣ್ಯ ಸರ್ಕಾರಿ ಆಸ್ಪತ್ರೆಗಳಾಗಿವೆ ಎಂದರು. ಉತ್ತಮ ಆಹಾರ ಮತ್ತು ನೀರಿನ ಸೌಕರ್ಯ ಉತ್ತಮವಾಗಿರುವುದರಿಂದ ಕಾಡಾನೆಗಳು ಕೃಷಿಕರ ತೋಟಗಳಿಗೆ ಲಗ್ಗೆ ಇಡುತ್ತಿವೆ. ಇದರಿಂದ ಬೆಳೆಗಾರರು ಸಂಪೂರ್ಣವಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಕೃಷಿಕರ ತೋಟ ಈಗ ಆನೆ ಹೆರಿಗೆಗೆ ಅತ್ಯುತ್ತಮ ಆಸ್ಪತ್ರೆಗಳಾಗಿವೆ. ಖಾಸಗಿ ಎಸ್ಟೇಟ್‌ಗಳಿಂದ ಆನೆಗಳನ್ನು ಕಾಡಿಗೆ ಓಡಿಸಲು ಸರ್ಕಾರಗಳು ಸೋಲಾರ್ ಫೆನ್ಸಿಂಗ್, ರೈಲ್ವೆ ಬ್ಯಾರಿಕೇಡ್ ಮತ್ತು…

Read More

ನಾಪೋಕ್ಲು ಜು.22 : ಕಕ್ಕಬೆ ಗ್ರಾ.ಪಂ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಯಿಂದಾಗಿ ನಸೀಮ ಎಂಬವರ ಮನೆಯ ಮೇಲ್ಛಾವಣಿಯ ಶೀಟುಗಳು ಹಾರಿಹೋಗಿ ನಷ್ಟ ಸಂಭವಸಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಕಂದಾಯ ಪರಿವೀಕ್ಷಕ (ಅರ್.ಐ) ರವಿಕುಮಾರ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿ, ಸೂಕ್ತ ಕ್ರಮ ಕೈಗೊಂಡಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಜು.22 : ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಲಾಯಿತು. ಸಂಸ್ಥೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕುಟ್ಟಂಚೆಟ್ಟೀರ ಮಾದಪ್ಪ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನಂತರ ಸಭೆಯ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಹಿತವಚನ ನುಡಿಯಾಡಿ ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿದರು. ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಚೋಕಿರ ರತೀಶ್ ತಮ್ಮಯ್ಯ ನೂತನವಾಗಿ ಆಯ್ಕೆ ಆಗಿರುವ ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ ಬೋಧಿಸಿ ತಮ್ಮ ತಮ್ಮ ಕಾರ್ಯದಕ್ಷತೆಯ ಬಗ್ಗೆ ಮಾರ್ಗದರ್ಶನವನ್ನು ನೀಡಿದರು. ಈ ಸಂದರ್ಭ ವಿದ್ಯಾ ಸಂಸ್ಥೆಯಲ್ಲಿ 10 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆಸಲ್ಲಿಸಿದ ಬಿದ್ದಾಟಂಡ ರಹನಾ ಸಂಪತ್ ಅವರನ್ನು ಶಾಲಾ ಆಡಳಿತ ಮಂಡಳಿ ಪರವಾಗಿ ಶಾಲು ಒದಿಸಿ ಕಿರು ಕಾಣಿಕೆ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ನಿರ್ದೇಶಕಿ ವಿದ್ಯಾ ಸುರೇಶ್, ಶಾಲಾ ಬೋಧಕ ವೃಂದ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ನಡೆದ ವಿವಿಧ…

Read More

ಮಡಿಕೇರಿ ಜು.22 :  ಕೊಡಗಿನ ಗಡಿ ಕರಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಗೆ, ಭಾಗಮಂಡಲ-ಕರಿಕೆ ನಡುವಿನ ರಸ್ತೆಯ ಹಲವೆಡೆಗಳಲ್ಲಿ ಬರೆ ಕುಸಿತದೊಂದಿಗೆ ಮರಗಳು ಉರುಳಿ ರಸ್ತೆ ಸಂಚಾರಕ್ಕೆ ತೊಡಕುಂಟಾಗಿದೆ. ಭಾಗಮಂಡಲ-ಕರಿಕೆ ರಸ್ತೆ ನೆರೆಯ ಕೇರಳ ರಾಜ್ಯವನ್ನು ಸಂಪರ್ಕಿಸುವ ರಸ್ತೆಯೂ ಆಗಿದ್ದು,  ಬರೆ ಹಾಗೂ ಮರಗಳನ್ನು  ತೆರವುಗೊಳಿಸಿ ಸಂಚಾರಕ್ಕೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More

ಮಡಿಕೇರಿ ಜು.22 : ವಿಧಾನಸಭಾ ಕಲಾಪದಿಂದ ಹತ್ತು ಮಂದಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಪ್ರಧಾನ ಕಾರ್ಯದರ್ಶಿ ನಾಪಂಡ ರವಿ ಕಾಳಪ್ಪ, ವಕ್ತಾರ ಮಹೇಶ್ ಜೈನಿ, ನಗರಾಧ್ಯಕ್ಷ ಮನುಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ರಾಜ್ಯ ರೈತ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಪ್ರಮುಖರಾದ ಜಗದೀಶ್, ಎಸ್.ಸಿ.ಸತೀಶ್, ಶ್ವೇತ ಸೇರಿದಂತೆ ಮತ್ತಿತರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಜೂ.22 :   ಭಾರೀ ಗಾಳಿ ಮಳೆಗೆ ಮೂರ್ನಾಡುವಿನ ಎಂ.ಬಾಡಗ  ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲೆ ಮರ ಉರುಳಿಬಿದ್ದಿದ್ದು,  ಶಾಲೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಮಡಿಕೇರಿ-ವಿರಾಜಪೇಟೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಸ್ಥಳೀಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More

ಮಡಿಕೇರಿ ಜು.21 : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಇದ್ದರೂ ಭಾರೀ ಗಾಳಿ ಬೀಸುತ್ತಿದೆ. ಇದರ ಪರಿಣಾಮ ಮರಗಳು ಬಿದ್ದು ಮನೆ ಮತ್ತು ವಾಹನಗಳಿಗೆ ಹಾನಿಯಾಗಿದೆ. ಮಡಿಕೇರಿ ನಗರದ ಜಿಲ್ಲಾಧಿಕಾರಿ ನಿವಾಸದ ಹಿಂಭಾಗ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ 3 ದ್ವಿಚಕ್ರ ವಾಹನಗಳು ಮರದಡಿಯಲ್ಲಿ ಸಿಲುಕಿಕೊಂಡವು. ಆದರೆ ಯಾವುದೇ ವಾಹನಗಳಿಗೆ ಹಾನಿಯಾಗಿಲ್ಲ. ಅರಣ್ಯ ಇಲಾಖೆ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರವನ್ನು ಸುಗಮಗೊಳಿಸಿತು. ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮ ಪಂಚಾಯತಿಗೆ ಸೇರಿದ 7ನೇ ಮೈಲು ವಿಕ್ರಂ ಬಡಾವಣೆಯ ನಿವಾಸಿ ವಸಂತಿ ಎಂಬುವರ ಮನೆಯ ಮೇಲೆ ಭಾರಿ ಗಾತ್ರದ ಮರ ಮುರಿದು ಬಿದ್ದು ಹಾನಿ ಸಂಭವಿಸಿದೆ. ಶುಕ್ರವಾರ ಮುಂಜಾನೆ 3.30 ಗಂಟೆಯ ವೇಳೆಗೆ ಭಾರಿ ಗಾಳಿಗೆ ಬೀಟೆ ಮರವೊಂದು ಮುರಿದು ಬಿದ್ದಿದೆ. ಮರ ಬಿದ್ದ ಪರಿಣಾಮ ಅಡುಗೆ ಕೋಣೆ ಮತ್ತು ಶೌಚಾಲಯಕ್ಕೆ ಹಾನಿಯಾಗಿದೆ. ಮನೆಯ ಪಕ್ಕ ನಿಲ್ಲಿಸಿದ್ದ ಕಾರು ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿದೆ. ಸ್ಥಳಕ್ಕೆ ನಾಡ ಕಚೇರಿ…

Read More

ಮಡಿಕೇರಿ ಜು.21 : ಮನೆಯೊಂದರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರು ಗ್ರಾ.ಪಂ ವ್ಯಾಪ್ತಿಯ ಕೊಡ್ಚೆ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಮಾಚಿಮಾಡ ಡಿ.ಮಾಚಯ್ಯ ಎಂಬುವವರ ಮನೆ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ಶುಕ್ರವಾರ ನಸುಕಿನ 3.15 ಗಂಟೆಗೆ ಗುಂಡಿನ ದಾಳಿ ನಡೆಸಲಾಗಿದ್ದು, ಮನೆಯ ಬಲಭಾಗದ ಕಿಟಿಕಿಗೆ 2 ಗುಂಡುಗಳು ತಗುಲಿವೆ. ಕಿಟಕಿಯ ಗಾಜುಗಳು ಒಡೆದಿದ್ದು, ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಟ್ಟ ವೃತ್ತ ನಿರೀಕ್ಷಕ ಮತ್ತು ಶ್ರೀಮಂಗಲ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read More

ಮಡಿಕೇರಿ ಜು.21 : ನಗರಸಭೆ ವ್ಯಾಪ್ತಿಯ ಹಿಲ್ ರಸ್ತೆಯ ಹಿರಿಯ ಪ್ರಾಥಮಿಕ ಶಾಲೆಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯಿಸಿದೆ. ನಗರಸಭೆ ಪೌರಾಯುಕ್ತ ವಿಜಯ ಅವರಿಗೆ ಮನವಿ ಸಲ್ಲಿಸಿದ ಘಟಕದ ಪದಾಧಿಕಾರಿಗಳು, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಭ ಮಾತನಾಡಿದ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್, ನಗರದ ಹಿಲ್ ರಸ್ತೆಯ ಹಿರಿಯ ಪ್ರಾಥಮಿಕ ಶಾಲೆಯು 1918ರಲ್ಲಿ ಸ್ಥಾಪನೆಯಾಗಿ 105 ವರ್ಷ ಕಳೆದಿದೆ. ಇಲ್ಲಿ ವ್ಯಾಸಂಗ ಮಾಡಿದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಅಲಂಕರಿಸಿದ್ದಾರೆ. ಆದರೆ ಪ್ರಸ್ತುತ ಶಾಲೆಗೆ ಒಬ್ಬರೇ ಖಾಯಂ ಶಿಕ್ಷಕರಿದ್ದು, ಇವರು ಇದೇ ಜು.31ಕ್ಕೆ ನಿವೃತ್ತಿಯಾಗಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆ ಎದುರಾಗಲಿದೆ. ಬಡ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಓದುತ್ತಿದ್ದು, ಖಾಯಂ ಶಿಕ್ಷಕರ ಅವಶ್ಯಕತೆ ಇದೆ. ಆದುದ್ದರಿಂದ ಸರ್ಕಾರದ ಮೂಲಕ ಖಾಯಂ ಶಿಕ್ಷಕರನ್ನು ನೇಮಕ ಮಾಡಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ…

Read More