ಲೇಖಕ: admin

ಮಡಿಕೇರಿ ಜು.21 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 44.37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.48 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1030.81 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1836.40 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 22.55 ಮಿ.ಮೀ. ಕಳೆದ ವರ್ಷ ಇದೇ ದಿನ 23.38 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1540.76 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2566.81 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.17 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 771.63 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1454.56 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 39.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.57 ಮಿ.ಮೀ.…

Read More

ಮಡಿಕೇರಿ ಜು.21 : ನಾಪೋಕ್ಲು ಸಮೀಪದ ಮರಂದೋಡ ಗ್ರಾಮದ ಭಾಗದಲ್ಲಿ ಗುರುವಾರ ಸುರಿದ ಭಾರೀ ಗಾಳಿ ಮಳೆಗೆ ಬೃಹತ್ ಮರ ಮುರಿದುಬಿದ್ದು 3-4 ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿವೆ. ಮರ ಮುರಿದು ಬಿದ್ದ ಪರಿಣಾಮ ಕೆರೆತಟ್ಟು ಸಂಪರ್ಕ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು. ಗ್ರಾಮಸ್ಥರಾದ ಬಾಲಕೃಷ್ಣ ಹಾಗೂ ಕೆ.ಕೆ.ಗಿರೀಶ್, ಸಿ.ಹರೀಶ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಒಗ್ಗೂಡಿ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮರ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತ ಉಂಟಾಗಿ ಗ್ರಾಮಸ್ಥರು ಕತ್ತಲೆಯಲ್ಲಿ ಕಳೆಯುವಂತಾಗಿದೆ. ಗ್ರಾ.ಪಂ ಸದಸ್ಯ ಹರೀಶ್ ಮೊಣ್ಣಪ್ಪ ಸ್ಥಳಕ್ಕೆ ಭೇಟಿ ನೀಡಿ ಸೆಸ್ಕ್ ಇಲಾಖೆಯ ಎಂಜಿನಿಯರ್ ಅವರನ್ನು ಸಂಪರ್ಕಿಸಿ ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಜು.21 : ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹಿಂದಕ್ಕೆ ಪಲ್ಟಿಯಾಗಿ ಬಿದ್ದಿರುವ ಘಟನೆ ನಾಪೋಕ್ಲು-ಮಡಿಕೇರಿ ಮುಖ್ಯರಸ್ತೆಯ ಅಪ್ಪಂಗಳದಲ್ಲಿ ನಡೆದಿದೆ. ನಾಪೋಕ್ಲುವಿನಿಂದ ಕುಶಾಲನಗರಕ್ಕೆ ಕಾಫಿ ಸಾಗಿಸುತ್ತಿದ್ದ ಲಾರಿ ಅಪ್ಪಂಗಳದ ಏಲಕ್ಕಿ ಸಂಶೋಧನಾ ಕೇಂದ್ರದ ಬಳಿ ಹಿಂದಕ್ಕೆ ಚಲಿಸಿ ರಸ್ತೆಯಂಚಿಗೆ ಬಿದ್ದಿದ್ದು, ಚಾಲಕ ಹಾಗೂ ಸಹಾಯಕ ಅಪಾಯದಿಂದ ಪಾರಾಗಿದ್ದಾರೆ. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಜು.20 :  ನಿವೃತ್ತ ನ್ಯಾಯಮೂರ್ತಿ ಪಿ.ಪಿ.ಬೋಪಣ್ಣ ಅವರು ಬೆಂಗಳೂರಿನಲ್ಲಿ ಇಂದು ನಿಧನ ಹೊಂದಿದರು.  ಮೃತರ ಅಂತ್ಯಕ್ರಿಯೆ ಜು.21 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Read More

ಸುಂಟಿಕೊಪ್ಪ,ಜು.20 :  ಇಂದಿನ ದಿನಗಳಲ್ಲಿ ನಾವು ಎಷ್ಟೇ ಸಿರಿವಂತಿಕೆಯನ್ನು ಹೊಂದಿದ್ದರು ಶಿಕ್ಷಣ ಇಲ್ಲದಿದ್ದರೆ ಆತ ಬಡವನೆಂದು ಸಮಾಜದಲ್ಲಿ ಪರಿಗಣಿಸುತ್ತದೆ ಎಂದು ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್ ಹೇಳಿದರು. ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ಘಾಟನೆ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಹೊಂದಿರಬೇಕು. ಅದರ ಸಕಾರಕ್ಕೆ ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು ಎಂದು  ಸಲಹೆ ನೀಡಿದರಲ್ಲದೆ, ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ವಿದ್ಯಾರ್ಥಿಯಾಗಿದ್ದಾಗ ಮಾಡಿದ ಸಾಧನೆಯನ್ನು ಉದಾಹರಣೆಯಾಗಿ ತೆಗೆದುಕೊಂಡು ವಿದ್ಯಾರ್ಥಿಗಳನ್ನು ಉತ್ತೇಜಿಸಿದರು.  ಕಾನೂನು ಮಹತ್ವತೆಯ ಬಗ್ಗೆ ಮಾಹಿತಿ ನೀಡಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಎ ಎಸ್ ಐ ಶಿವಣ್ಣ  ಮಾತನಾಡಿ, ಮಾದಕ ವ್ಯಸನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿದರು. ಮಾದಕ ವ್ಯಸಗಳಿಗೆ ದಾಸರಾದರೆ ವಿದ್ಯಾರ್ಥಿ ಜೀವನವು ನರಕ ಸದೃಶ್ಯವಾಗಿತ್ತದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ…

Read More

ಬೆಂಗಳೂರು ಜು.20 : ವಿಧಾನಸಭಾ ಸ್ಪೀಕರ್ ಅವರು 10 ಮಂದಿ ಶಾಸಕರನ್ನು ಅಮಾತುಗೊಳಿಸಿದ ಕ್ರಮವನ್ನು ವಿರೋಧಿಸಿ ಬಿಜೆಪಿಯ ಶಾಸಕರು ವಿಧಾನಸೌಧದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಸಿದರು. ಬಸವರಾಜ ಬೊಮ್ಮಾಯಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಶಾಸಕರಾದ ಆರಗ ಜ್ಞಾನೇಂದ್ರ, ಮುನಿರತ್ನ. ಸುರೇಶ್ ಕುಮಾರ್, ಸುನೀಲ್ ಕುಮಾರ್, ಭೈರತಿ ಬಸವರಾಜ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Read More

ನವದೆಹಲಿ ಜು.20 : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಪರೇಡ್ ಮಾಡಿಸಿದ ಘಟನೆ 140 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ, ಕಠಿಣ ಶಿಕ್ಷೆಯಾಗಲಿದೆ ಎಂದರು. ಈ ಪ್ರಕರಣದಲ್ಲಿ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ. ವಿಷಯ ಕೇಳಿ ನನ್ನ ಹೃದಯ ತುಂಬಾ ನೋವಾಗಿದ್ದು, ಸಿಟ್ಟಿನಿಂದ ಕುದಿಯುತ್ತಿದೆ. ಮಣಿಪುರದ ಘಟನೆ ಯಾವುದೇ ಸುಸಂಸ್ಕೃತ ಸಮಾಜಕ್ಕೆ ನಾಚಿಕೆಗೇಡಿನ ವಿಚಾರವಾಗಿದೆ. ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕೆಂದು ಹೇಳಿದರು. ವಿಶೇಷವಾಗಿ ಮಹಿಳೆಯರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

Read More

ಮಡಿಕೇರಿ ಜು.20 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ ಮುಂಗಾರು ದುರ್ಬಲವಾಗಿದ್ದರು, ಆಗೊಮ್ಮೆ ಈಗೊಮ್ಮೆ ಹಠಾತ್ತನೆ ಸುರಿಯುವ ಗಾಳಿ ಮಳೆಯಿಂದ ಪ್ರಮುಖವಾಗಿ ವಿದ್ಯುತ್ ಸಂಪರ್ಕಕ್ಕೆ ಅಡಚಣೆಯಾಗುತ್ತಿದ್ದು, ವರ್ಷದ ಆರಂಭದಿಂದ ಇಲ್ಲಿಯವರೆಗೆ ಒಟ್ಟು 1,111 ವಿದ್ಯುತ್ ಕಂಬಗಳಿಗೆ ಹಾನಿಯುಂಟಾಗಿದೆ. ಗ್ರಾಮೀಣ ಭಾಗಗಳಲ್ಲಿ ಮಳೆಯಿಂದ ಮರಗಳು ಧರೆಗುರುಳುವ ಮೂಲಕ ವಿದ್ಯುತ್ ಕಂಬಗಳು ಮುರಿರು ಬೀಳುತ್ತಿದೆ. ಈ ಎಲ್ಲಾ ಹಂತಗಳಲ್ಲಿ ಚೆಸ್ಕಾಂ ಇಲಾಖಾ ಸಿಬ್ಬಂದಿಗಳು ಆದಷ್ಟು ತುರ್ತು ಕ್ರಮ ಕೈಗೊಂಡು ವಿದ್ಯುತ್ ಮರು ಸಂಪರ್ಕವನ್ನು ಕಲ್ಪಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜಿಲ್ಲೆಯ ಐದು ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ಅಲ್ಲಲ್ಲಿ ಮರದ ಕೊಂಬೆಗಳು ಮುರಿದು ಬೀಳುವ ಘಟನೆಗಳು ಸಾಕಷ್ಟು ನಡೆದಿವೆಯಾದರು, ಬೃಹತ್ ಗಾತ್ರದ 35 ಮರಗಳು ಬಿದ್ದಿವೆಯಾದರೆ, ಗಾಳಿ ಮಳೆಗೆ 71 ಟ್ರಾನ್ಸ್ ಫಾರ್ಮರ್‍ಗಳಿಗೆ ಹಾನಿಯಾಗಿದ್ದು, ವಿದ್ಯುತ್ ಕಂಬ ಮತ್ತು ಟ್ರಾನ್ಸ್ ಪಾರ್ಮರ್‍ಗಳು ಹಾಳಾಗಿ ಅಂದಾಜು 1.40 ಕೋಟಿ ರೂ. ನಷ್ಟ ಚೆಸ್ಕಾಂ ಇಲಾಳೆಗೆ ಉಂಟಾಗಿದೆ. 49 ಮನೆಗಳಿಗೆ ಹಾನಿ :  ಪ್ರಸಕ್ತ ಸಾಲಿನಲ್ಲಿ ಮಳೆಯಿಂದಾಗಿ…

Read More

ಚೆಯ್ಯಂಡಾಣೆ ಜು.20 :  ಬ್ಯಾಂಕ್ ಆಫ್ ಬರೋಡಾ ಶಾಖೆಯ 116ನೇ ಸಂಸ್ದಾಪನಾ ದಿನದ ಅಂಗವಾಗಿ ಕರಡ ಶಾಖೆಯ ವತಿಯಿಂದ ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಹಾಗೂ ಊಟದ ತಟ್ಟೆಯನ್ನು  ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಬ್ಯಾಂಕಿನ ವ್ಯವಸ್ಥಾಪಕ  ಸಿ.ವಿ.ಮಹೇಶ್ ವರ್ಮಾ, ಸೀನಿಯರ್ ಆಫಿಸರ್ ರಾಜೀವ್ ಹಾಗೂ ಸಿಬ್ಬಂದಿಗಳು, ಶಾಲೆಯ ಮುಖ್ಯ ಶಿಕ್ಷಕಿ ಡಿ.ಕೆ. ಲೀಲಾವತಿ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು, ಗ್ರಾಮಸ್ಥರು  ಹಾಜರಿದ್ದರು. ವರದಿ : ಅಶ್ರಫ್  

Read More

ಮಡಿಕೇರಿ ಜು.20 : ಕರ್ನಾಟಕ ಸರ್ಕಾರವು 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಕೊಡಗು ಜಿಲ್ಲೆಗೆ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕವನ್ನು ಅಧಿಸೂಚಿಸಲಾಗಿದೆ. ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ. 2023-24 ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಕಾಳುಮೆಣಸು ಬೆಳೆಗೆ ಒಟ್ಟು ರೂ.47 ಸಾವಿರ ಹಾಗೂ ಅಡಿಕೆ ಬೆಳೆಗೆ ರೂ.1,28,000 ಆಗಿದೆ. ವಿಮಾ ಕಂಪನಿಗೆ ಒಟ್ಟು ವಿಮಾ ಮೊತ್ತಕ್ಕೆ ರೈತರು ಕಾಳುಮೆಣಸು ಬೆಳೆಗೆ ಶೇ.5 ರ ವಿಮಾ ಮೊತ್ತ ರೂ. 2350 ಹಾಗೂ ಅಡಿಕೆ ಬೆಳೆಗೆ ರೂ. 6400 ಪ್ರತಿ ಹೆಕ್ಟೇರ್ ಪಾವತಿಸಬೇಕಿದೆ. ವಿಮಾ ನೋಂದಣಿಗೆ ಜುಲೈ, 31 ಕೊನೆ…

Read More