ಮಡಿಕೇರಿ ಜು.20 : ನಗರದ ವಿದ್ಯಾನಗರದಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ‘ಉಪಾಹಾರ ಗೃಹ’ವನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನಡೆಸಲು ಮರು ಟೆಂಡರ್/ಕೊಟೇಷನ್ ಆಹ್ವಾನಿಸಲಾಗಿದೆ. ಮರು ಟೆಂಡರ್/ಕೊಟೇಷನ್ ಸಲ್ಲಿಸಲು ಆ.2 ರ ಸಂಜೆ 6 ಗಂಟೆ ವರೆಗೆ ಕಾಲಾವಕಾಶವಿದೆ. ಮುಚ್ಚಿದ ಲಕೋಟೆಗಳನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು, ಮಡಿಕೇರಿ ಇವರ ಸಮ್ಮುಖದಲ್ಲಿ ಆ.7 ರಂದು ಸಂಜೆ 6 ಗಂಟೆಗೆ ತೆರೆಯಲಾಗುತ್ತದೆ. ಷರತ್ತು ಹಾಗೂ ನಿಬಂಧನೆಗಳ ಬಗ್ಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಲೇಖಕ: admin
ಮಡಿಕೇರಿ ಜು.20 : ಮಿಲಿಟರಿ ಪಿಂಚಣಿರಹಿತ ಕರ್ನಾಟಕ ಮಾಜಿ ಸೈನಿಕರ ಮತ್ತು ಹೊರ ರಾಜ್ಯದ ಮಾಜಿ ಸೈನಿಕರ ಮಕ್ಕಳಿಗೆ 2023-24 ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೊಮಾ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುಸ್ತಕ ಅನುದಾನ ಹಾಗೂ ವಿಶೇಷ ಅನುದಾನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಜು.20 : ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್ ತಿಳಿಸಿದ್ದಾರೆ.
ಮಡಿಕೇರಿ ಜು.20 : ಪ್ರಸಕ್ತ ಸಾಲಿನ ಜುಲೈ ಆವೃತ್ತಿಯ ಸ್ನಾತಕ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ ಹಾಗೆಯೇ ಸ್ನಾತಕೋತ್ತರ ಎಂ.ಎ, ಎಂ.ಎ-ಪತ್ರಿಕೋದ್ಯಮ. ಎಂ.ಕಾಂ, ಎಂ.ಬಿ.ಎ, ಎಂ.ಲಿಬ್, ಎಂ.ಎಸ್ಸಿ , ಎಂ.ಸಿ.ಎ, ಎಂ.ಎಸ್,ಡಬ್ಲ್ಯೂ ಹಾಗೂ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮಡಿಕೇರಿ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಈ ಅವಕಾಶವನ್ನು ಎಲ್ಲಾ ಉದ್ಯೋಗ ಆಕಾಂಕ್ಷಿಗಳು ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ತೆರೆದ ಶಿಕ್ಷಣದ ಮೂಲಕ ಪದವಿ ಪಡೆಯಬಹುದಾಗಿದೆ ಎಂದು ಮುಕ್ತ ವಿಶ್ವ ವಿದ್ಯಾಲಯ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ. ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಎ+ ಮಾನ್ಯತೆ ಪಡೆದ ದೂರ ಶಿಕ್ಷಣ ನೀಡುವ ವಿಶ್ವ ವಿದ್ಯಾನಿಲಯವಾಗಿದೆ. ಯು.ಜಿ.ಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ ಭೌತಿಕ ಶಿಕ್ಷಣ(ರೆಗ್ಯುಲರ್) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (ಮುಕ್ತ ವಿವಿ)…
ಮಡಿಕೇರಿ ಜು.20 : 2023-24ನೇ ಸಾಲಿನಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್‍ಫೇರ್ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಪ್ರಕರಣವು ಜುಲೈ 2022 ರಿಂದ ಸೆಪ್ಟೆಂಬರ್ 30, 2023ರ ಒಳಗೆ ನಡೆದಿರಬೇಕು. ಪ್ರಕರಣ ನಡೆದ ದಿನಾಂಕಕ್ಕೆ 6 ರಿಂದ 18 ವರ್ಷದ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಪ್ರಶಸ್ತಿ ನೀಡಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಪ್ರಕರಣ ನಡೆದಿರುವ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಎಫ್‍ಐಆರ್ ದಾಖಲಾಗಿರಬೇಕು. ಪ್ರಶಸ್ತಿಯು ಪದಕ (ಚಿನ್ನ, ಬೆಳ್ಳಿ ಪದಕ), ಪ್ರಶಸ್ತಿ ಪತ್ರ ಹಾಗೂ ನಗದು…
ಮಡಿಕೇರಿ ಜು.20 : ಕರ್ನಾಟಕ ಮೂಲ ನಿವಾಸಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ 2023-24 ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೊಮಾ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ (ಹವಿಲ್ದಾರ್ ರ್ಯಾಂಕ್‍ಮೇಲಿನ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ) ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆ ದಿನವಾಗಿದೆ. ಹವಿಲ್ದಾರ್ ಮತ್ತು ಕೆಳಗಿನ ರ್ಯಾಂಕ್‍ನ ಮಾಜಿ ಸೈನಿಕರು ಶಿಷ್ಯವೇತನಕ್ಕಾಗಿ ವೆಬ್‍ಸೈಟ್ (WWW.KSB.GOV.IN) ಆನ್‍ಲೈನ್‍ನಲ್ಲಿ ಸೆಪ್ಟೆಂಬರ್ ಮಾಹೆಯ ಒಳಗಡೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ತಿಳಿಸಿದ್ದಾರೆ.
ಮಡಿಕೇರಿ ಜು.20 : 2022-23 ನೇ ಸಾಲಿನಲ್ಲಿ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಸಾರ್ವತ್ರಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ‘ಜನರಲ್ ಕೆ.ಎಸ್.ತಿಮ್ಮಯ್ಯ’ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಜು.20 : ಕನ್ನಡ ಸಾಹಿತ್ಯ ಪರಿಷತ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಕನ್ನಡ ಪರವಾದ ಕೆಲಸಗಳು ನಡೆಯಲಿದೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ.ಶ್ರೀಧರ್ ಹೆಗಡೆ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗಿನಲ್ಲಿರುವ ಪ್ರಾಕೃತಿಕ ಸಂಪತ್ತನ್ನು ದಾಖಲೀಕರಣ ಮಾಡುವ ಕೆಲಸವಾಗಬೇಕು ಎಂದು ಸಲಹೆ ನೀಡಿದ ಅವರು, ಮಾತೃಭಾಷೆಯಾದ ಕನ್ನಡಕ್ಕೆ ಮೊದಲ ಆದ್ಯತೆ ಸಿಗುವಂತಾಗಬೇಕು ಎಂದು ನುಡಿದರು. ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಜಿಲ್ಲಾ ಕಸಾಪದಲ್ಲಿ ಸದಸ್ಯತ್ವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪರಿಷತ್‍ನ ಪದಾಧಿಕಾರಿಗಳು ಸದಸ್ಯರು ಸಹಕಾರ ನೀಡಬೇಕು ಎಂದು ಹೇಳಿದರು. ನೂತನ ಅಧ್ಯಕ್ಷರಿಗೆ ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ ನವೀನ್ ಅಧಿಕಾರ ಹಸ್ತಾಂತರಿಸಿದರು. ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷರಾಗಿ ಕಡ್ಲೇರ ತುಳಸಿ ಮೋಹನ್, ಗೌರವ ಕಾರ್ಯದರ್ಶಿಗಳಾದ ಪುದಿಯನೆರವನ ರಿಷಿತ್ ಮಾದಯ್ಯ, ಬಾಳೆಯಡ ದಿವ್ಯ ಮಂದಪ್ಪ, ಗೌರವ ಕೋಶಾಧಿಕಾರಿ ಸಿದ್ದರಾಜು ಬೆಳ್ಳಯ್ಯ,…
ಮಡಿಕೇರಿ ಜು.20 : ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಪದವಿ ಮಟ್ಟದ ಕೊಡವ ಸಂಯುಕ್ತ ಅಧ್ಯಯನ ಮಂಡಳಿಯನ್ನು ರಚಿಸಲಾಗಿದೆ. ಇದರ ಅಧ್ಯಕ್ಷರಾಗಿ ಮಂಗಳೂರಿನ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಡಾ. ಎಂ.ಎಂ.ಮೀನಾಕ್ಷಿ, ಸದಸ್ಯರುಗಳಾಗಿ ಮೈಸೂರು ಯುವರಾಜ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾಗಿರುವ ಡಾ.ರೇಖಾವಸಂತ್, ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಕಾವೇರಿಯಪ್ಪ, ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಕಾವೇರಿ ಪ್ರಕಾಶ್ ಹಾಗೂ ಕಾವೇರಿ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಎಆ.ರೇವತಿ ಪೂವಯ್ಯ ಅವರುಗಳನ್ನು ನೇಮಕ ಮಾಡಲಾಗಿದೆ. ಇವರುಗಳನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಿಸಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.
ಕುಶಾಲನಗರ ಜು.20 : ಕೂಡುಮಂಗಳೂರು ಗ್ರಾ.ಪಂ ನ ಕೂಡ್ಲೂರು ವಾರ್ಡ್ ನಲ್ಲಿ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಆರ್.ಸುರೇಶ್ ಪರವಾಗಿ ಮತ ಪ್ರಚಾರ ನಡೆಸಲಾಯಿತು. ಕೂಡುಮಂಗಳೂರು ಗ್ರಾ.ಪಂ ನ ಕೂಡ್ಲೂರು ವಾರ್ಡ್ ನ ಕುಮಾರ್ ಎಂಬುವವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಆರ್.ಸುರೇಶ್ ಸ್ಪರ್ಧಿಸಿದ್ದಾರೆ. ಕೆ.ಆರ್.ಸುರೇಶ್ ಅವರ ಪರವಾಗಿ ಕೂಡುಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಹಾಗೂ ಪ್ರಮುಖರಿಂದ ಬಿರುಸಿನ ಪ್ರಚಾರ ನಡೆಯಿತು. ಈ ಸಂದರ್ಭ ಮಾತನಾಡಿದ ಸದಸ್ಯ ಕೆ.ಬಿ.ಶಂಶುದ್ಧೀನ್, ಕೂಡ್ಲೂರು ಎಸ್.ಟಿ ಮೀಸಲಾತಿಯ ಸ್ಥಾನಕ್ಕೆ ಕೆ.ಆರ್.ಸುರೇಶ್ ಅವರು ಕಣದಲ್ಲಿದ್ದಾರೆ. ಇವರ ಪರವಾಗಿ ಮತಪ್ರಚಾರ ನಡೆಸಲಾಯಿತು. ಯುವ ಉತ್ಸಾಹಿ, ಸ್ಥಳೀಯರು ಕೂಡಾ ಆಗಿರುವ ಕೆ.ಆರ್.ಸುರೇಶ್ ಅವರು ಸಾಮಾಜಿಕ ಸೇವಾ ಮನೋಭಾವನೆಯುಳ್ಳ ವ್ಯಕ್ತಿಯಾಗಿದ್ದಾರೆ. ಸಾರ್ವಜನಿಕರು ತಮ್ಮ ಮತವನ್ನು ನೀಡಿ ಜಯಶಾಲಿಯನ್ನಾಗಿಸಲಿದ್ದು, ಕೆ.ಆರ್.ಸುರೇಶ್ ಅವರ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಆರ್.ಸುರೇಶ್ ಮಾತನಾಡಿ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ತಮ್ಮ…






