ಲೇಖಕ: admin

ಸುಂಟಿಕೊಪ್ಪ ಜೂ.17: ಜೂನ್ ತಿಂಗಳಿನಲ್ಲಿ ಮೃಗಶಿರ ಮಳೆ ಬೆಳೆಗಾರರ ರೈತರ ಚಟುವಟಿಕೆಗಳಿಗೆ ಆಶಾದಾಯಕವಾಗಿರುತ್ತದೆ. ಆದರೆ ಈ ವರ್ಷ ಮಳೆ ಬಾರದೆ ಕರಿಮೆಣಸಿನ ಫಸಲಿಗೆ ಹೊಡೆತ ನೀಡಿದೆ. ಭತ್ತದ ಬಿತ್ತನೆಗಾಗಿ ಗದ್ದೆ ಹದ ಮಾಡಿದ ರೈತ ಮಳೆಗಾಗಿ ಆಕಾಶದತ್ತ ನೋಡುವಂತಾಗಿದೆ. ಜೂನ್ ತಿಂಗಳಿನಲ್ಲಿ ಸರಿಯಾಗಿ ಮಳೆ ಬಾರದೆ ಕರಿಮೆಣಸಿನ ಕೊತ್ತು ಬಿಡುವ ಸಕಾಲ ಮಳೆ ಮಾಯವಾಗಿದೆ. ಮುಂದಿನ ವರ್ಷದ ಕರಿಮೆಣಸು ಇಳುವರಿಗೆ ಭಾರೀ ಹಿನ್ನಡೆಯಾಗಲಿದೆ ಎಂದು  ಬೆಳೆಗಾರರು ಕಂಗಾಲಾಗಿದ್ದಾರೆ. ಜೂನ್ ತಿಂಗಳಿನಲ್ಲಿ ಭತ್ತದ ಬಿತ್ತನೆ ಕಾರ್ಯ ಆರಂಭವಾಗಲಿದ್ದು, ಮಳೆ ಸರಿಯಾಗಿ ಬಾರದೆ ಕೃಷಿಕರ ಮೊಗದಲ್ಲಿ ಆತಂಕ ಮೂಡಿದೆ. ಅನಿಸಿಕೆ: ಪ್ರತೀ ವರ್ಷ ಕರಿಮೆಣಸಿನ ಬಳ್ಳಿ 2018 ರ ಮಹಾಮಳೆಯಿಂದ ಹಳದಿ ರೋಗ ಕೊಳೆರೋಗದಿಂದ ನಶಿಸುತ್ತಿದೆ. ಇದಕ್ಕೆ ಮಣ್ಣಿನ ಫಲವತ್ತತೆ ಕಡಿಮೆಯಾಗಿರುವುದೇ ಕಾರಣವಾಗಿದೆ. ವಿಜ್ಞಾನಿಗಳು ಏನೇ ಪರಿಹಾರ ಸೂಚಿಸಿದ್ದರೂ ಕರಿಮೆಣಸಿನ ಬಳ್ಳಿಗೆ ಬರುವ ರೋಗ ತಡೆಯಲು ಸಾಧ್ಯವಾಗುತ್ತಿಲ್ಲ. ಈ ವರ್ಷ ಜೂನ್‍ನಲ್ಲಿ ಮಳೆ ಬಾರದೆ ಇರುವುದರಿಂದ ಕರಿಮೆಣಸು ಗಿಡಕ್ಕೆ ಸಿಗಬೇಕಾದ ಪೌಷ್ಠಿಕತೆ ಕಡಿಮೆಯಾಗಲಿದ್ದು, ಇಳುವರಿ…

Read More

ಮಡಿಕೇರಿ ಜೂ.17 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯುದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರಗಳ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಜುಲೈ, 15 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು www.dom.karnataka.gov.in ಹಾಗೂ ದೂ.ಸಂ.08272-225528/ 220214 ಸಂಪರ್ಕಿಸಬಹುದು ಹಾಗೂ www.dom.karnataka.gov.in ಇಲಾಖಾ ವೆಬ್‍ಸೈಟ್‍ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯ ಮಾಹಿತಿ ಪಡೆದು ಸದುಪಯೋಗ ಪಡಿಸಿಕೊಳ್ಳವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ದಿವಾಕರ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.17 : ಪ್ರಸಕ್ತ(2023-24) ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಖ್ಯಾತೆ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಇಲ್ಲಿಗೆ ರಸಾಯನ ಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಿತ ವಿಷಯಗಳಿಗೆ ಸಂಬಂಧಿಸಿದಂತೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂ.ಸಂ.7676473767/ 9632746411 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.17 : ನಗರದ ನೂತನ ಖಾಸಗಿ ಬಸ್ ನಿಲ್ದಾಣದ ವೃತ್ತಕ್ಕೆ ಸ್ವಾಮಿ ವಿವೇಕಾನಂದರ ಹೆಸರು ಇಡುವುದು ಹಾಗೆಯೇ ಇಂದಿರಾ ಕ್ಯಾಂಟೀನ್ ಬಳಿ ಇರುವ ಬಸ್ ನಿಲ್ದಾಣದ ಉದ್ಯಾನವನದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಲು ನಗರಸಭೆ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಲಹೆ ಮತ್ತು ಆಕ್ಷೇಪಣೆಗಳು ಇದ್ದಲ್ಲಿ, 30 ದಿನದೊಳಗೆ ಸಕಾರಣ ಮತ್ತು ಸಂಬಂಧಿತ ದಾಖಲೆಗಳೊಂದಿಗೆ ನಗರಸಭೆ ಕಚೇರಿಗೆ ಸಲ್ಲಿಸಲು ಕೋರಿದೆ. ಅವಧಿ ಮೀತಿ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.17 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಇವರ ಸಹಯೋಗದಲ್ಲಿ ಜೂ.22 ರಂದು ಬೆಳಗ್ಗೆ 10.30 ಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಕುಶಾಲನಗರದ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ, ದಿಯಾ ಸಿಸ್ಟಮ್ ಪ್ರೈವೇಟ್ ಲಿಮಿಟೆಡ್ ಮಂಗಳೂರು, ರಾಣಿ ಮದ್ರಾಸ್-ಮೈಸೂರು, ಜಸ್ಟ್ ಡಯಲ್-ಬೆಂಗಳೂರು, ಈಕ್ವಲೈಜರ್ ಆರ್‍ಎಂಸಿ-ಮೈಸೂರು, ಪ್ಯಾಲೆಸ್ ಟೊಯೋಟಾ ಕುಶಾಲನಗರ, ಅಲ್ಫಾ ಟೆಕ್ನಾಲಜಿ-ಮಡಿಕೇರಿ, ಪುಜಿಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಎಸ್‍ಎಲ್‍ಎನ್ ಕಾಫಿ ಪ್ರೈವೇಟ್ ಲಿಮಿಟೆಡ್ ಕೂಡಿಗೆ, ಮ್ಯಾಜಿಕ್ ಬಸ್ ಇಂಡಿಯಾ ಬೆಂಗಳೂರು, ಪರ್ಪಲ್ ಪಾಲ್ಮ್ ರೆಸಾರ್ಟ್ ಮತ್ತು ಸ್ಪಾ-ಕುಶಾಲನಗರ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ ಕ್ಕಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯುಸಿ,…

Read More

ಮಡಿಕೇರಿ ಜೂ.17 : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ವತಿಯಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ ವಯಾ ಸಿಇಟಿ/ಎನ್‍ಇಇಟಿ(ನೀಟ್) ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಆಯುಷ್, ಬ್ಯಾಚುಲರ್ ಆಫ್ ಆರ್ಕ್, ಎಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಪಾರ್ಮಸ್ಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಹಾಗೂ ಫಾರ್ಮ್ ಸೈನ್ಸ್ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ. ಸಿಇಟಿ/ಎನ್‍ಇಇಟಿ ಮುಖೇನ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ “ ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್  https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್…

Read More

ಮಡಿಕೇರಿ ಜೂ.17 : ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಡೆದ ಯೋಗ ಜಾಥಕ್ಕೆ ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬರ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ಯೋಗ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ 2023ರ 9ನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದ ಗಾಂಧಿ ಮೈದಾನದಿಂದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ ಜಾಥಾ ನಡೆಯಿತು. ಜೂನ್ 21 ರಂದು ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಶಾಲಾ ಮಕ್ಕಳು, ಎಲ್ಲಾ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಹೇಳಿದರು. ಈ ಬಾರಿಯ ಘೋಷವಾಕ್ಯ ವಸುದೈವ ಕುಟುಂಬಕ್ಕಾಗಿ ಯೋಗ ಆಗಿರುವುದರಿಂದ ಪ್ರತಿಯೊಬ್ಬರೂ ಮನೆಯಲ್ಲಿಯೇ ಯೋಗದಲ್ಲಿ ಪಾಲ್ಗೊಳ್ಳುವಂತೆ ಡಾ.ಬಿ.ಸಿ.ಸತೀಶ ತಿಳಿಸಿದರು. ಜಾಥಾದಲ್ಲಿ ನಗರಸಭೆ ಅಧ್ಯಕರಾದ ಅನಿತಾ ಪೂವಯ್ಯ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಪೌರಾಯುಕ್ತ ವಿಜಯ,…

Read More

ಮಡಿಕೇರಿ ಜೂ.17 : ಕಾಲೇಜಿನಲ್ಲಿ ನಡೆಸಲಾಗುವ ವಿವಿಧ ಉತ್ಸವಗಳು ಕೇವಲ ಮನರಂಜನೆಗಾಗಿ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ವಿದ್ಯಾರ್ಥಿಗಳು ಪಾಠ ಪ್ರವಚನದಲ್ಲಿಗಳಿಸುವ ಅಂಕದೊಂದಿಗೆ ಬೆಸ್ಟ್ ಮ್ಯಾನೇಜರ್ ನಂತ ವಿವಿಧ ಚಟುವಟಿಕೆಗಳಲ್ಲಿ ಜಯಶೀಲರಾಗುವುದನ್ನು ಕೂಡ ಇಂದು ಕಂಪನಿಗಳು ಉದ್ಯೋಗಕ್ಕೆ ಪ್ರಮುಖವಾಗಿ ಮಾನ್ಯ ಮಾಡುತ್ತವೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಹಾಗೂ ಮಾಜಿ ಪ್ರಾಂಶುಪಾಲರಾದ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ತಿಳಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಹಾಗೂ ವ್ಯವಹಾರ ನಿರ್ವಹಣೆ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಉತ್ಸವ ‘ಸಂಕಲ್ಪ-2023’ ನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಹ ಕಲಿಕೆಯಿಂದ ಅವರಲ್ಲಿರುವ ಬಹುಮುಖ ಪ್ರತಿಭೆ ಹೊರಹೊಮ್ಮಿ ಮತ್ತಷ್ಟು ಸೃಜನಶೀಲಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ವಿವಿಧ ಕಾಲೇಜಿನಿಂದ ಆಗಮಿಸಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರೆ ವಿದ್ಯಾರ್ಥಿಗಳಲ್ಲಿ ಗೆಳೆತನದ ಸಂಪರ್ಕ ಹೆಚ್ಚಾಗುತ್ತದೆಯಲ್ಲದೆ, ಸ್ನೇಹಮಯ ಗುಣ ಜೀವನದ ಪ್ರಗತಿಗೆ ಮತ್ತಷ್ಟು ಮೆರುಗು ಕಲ್ಪಿಸುತ್ತದೆ ಎಂದು ಕಿವಿಮಾತು ಹೇಳಿದರು. ಕ್ಯಾಪಿಟಲ್…

Read More

ಮಡಿಕೇರಿ ಜೂ.17 : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಇರುವ ಜಿಲ್ಲಾ ಕಸಾಪ ಕಚೇರಿಯಲ್ಲಿ ಕಸಾಪ ತಾಲ್ಲೂಕು ಮತ್ತು ಜಿಲ್ಲಾ ಘಟಕಗಳ ವತಿಯಿಂದ ಕಳೆದ ವರ್ಷ ಹಮ್ಮಿಕೊಂಡಿದ್ದ ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಲೆಕ್ಕಪತ್ರ ಮಂಡನೆ, ಗೌರಮ್ಮ ಕಸಾಪ ಜಿಲ್ಲಾ ಘಟಕದ ಸಣ್ಣ ಕಥೆಗಳ ಗೌರಮ್ಮ ಕಥಾ ಸ್ಪರ್ಧೆ, ದತ್ತಿ ಕಾರ್ಯಕ್ರಮಗಳ ಆಯೋಜನೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಗಡಿ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚನೆ ನೀಡಿದ್ದು, ಆ ನಿಟ್ಟಿನಲ್ಲಿ ಮಳೆಗಾಲದ ನಂತರ ಗಡಿ ಭಾಗ ಕರಿಕೆ ಗ್ರಾಮದಲ್ಲಿ `ಗಡಿ ಉತ್ಸವ’ ಆಯೋಜಿಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಆರಂಭದಲ್ಲಿ ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಕಳೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯ ವರದಿ ಮಂಡಿಸಿದರು.…

Read More

ಮಡಿಕೇರಿ ಜೂ.17 : ‘ಹರ್ ಆಂಗನ್ ಯೋಗ’ ಎನ್ನುವ ಷೋಷ ವಾಕ್ಯದೊಂದಿಗೆ ಜೂ.21 ರಂದು ಮಡಿಕೇರಿಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು, ಸಾವಿರಕ್ಕೂ ಹೆಚ್ಚಿನ ಯೋಗ ಪಟುಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾ ದೇವಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕೆಳಗಿನ ಗೌಡ ಸಮಾಜದ ಸಭಾಂಗಣದಲ್ಲಿ ಬೆಳಗ್ಗೆ 6.30 ಗಂಟೆಗೆ ಯೋಗಪಟುಗಳು ಸಮಾವೇಶಗೊಳ್ಳಲಿದ್ದು, 7 ಗಂಟೆಗೆ ‘ಯೋಗ ದಿನಾಚರಣೆ’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಡಾ.ಮಂಥರ್ ಗೌಡ ವಹಿಸಲಿದ್ದಾರೆ ಎಂದರು. ಯೋಗ ದಿನದ ಆಸನಗಳು : ಯೋಗ ದಿನಾಚರಣೆಯಂದು ತಾಡಾಸನ, ವೃಕ್ಷಾಸನ, ತ್ರಿಕೋನಾಸನ, ವೀರಭದ್ರಾಸನ, ವಜ್ರಾಸನ, ಪಶ್ಚಿಮೋತ್ತಾಸನ, ಉಷ್ಟ್ರಾಸನ, ವಜ್ರಾಸನ, ಮಕರಾಸನ, ಭುಜಂಗಾಸನ, ಏಕಪಾದ ಶಲಭಾಸನ, ಧನುರಾಸನ, ಅರ್ಧ ಹಲಾಸನ, ಸೇತು ಬಂಧಾಸನ ಪವನ ಮುಕ್ತಾಸನ, ಶವಾಸನ, ಕಪಾಲಭಾತಿ ಆಸನಗಳು ಹಾಗೂ ಪ್ರಾಣಾಯಾಮವನ್ನು ಯೋಗ ಪಟುಗಳು ಪ್ರದರ್ಶಿಸಲಿದ್ದಾರೆ. ಗ್ರಾಮ ಗ್ರಾಮಗಳಲ್ಲಿ ಯೋಗ : ಆಯುಷ್ ಇಲಾಖೆಯಡಿ…

Read More