ಮಡಿಕೇರಿ ಜು.18 : ಕೇಂದ್ರದ ಮಾಜಿ ಸಚಿವ ಹಾಗೂ ಆರ್ಥಿಕ ತಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ತಮ್ಮ ರಾಜ್ಯಸಭಾ ನಿಧಿಯಿಂದ ನೀಡಿದ ಅನುದಾನದಲ್ಲಿ ಕುಶಾಲನಗರ ತಾಲ್ಲೂಕಿನ “ನೂರೊಕ್ಕನಾಡ್ ಹಿಲ್ಸ್” ರಸ್ತೆ ಮತ್ತು ಮಡಿಕೇರಿ ತಾಲ್ಲೂಕಿನ ಕತ್ತಲೆಕಾಡು ರಸ್ತೆ ಅಭಿವೃದ್ಧಿಯಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ಜು.19 ರಂದು ನಡೆಯಲಿದೆ. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ಕೋರಿಕೆಯ ಮೇರೆಗೆ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಂಸತ್ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯ ನಿಧಿಯಡಿ ಕೊಡಗಿನ ಕುಗ್ರಾಮಗಳ “ಬಲ್ಯಮನೆ” ರಸ್ತೆ ಮತ್ತು ಇತರ ರಸ್ತೆಗಳ ಅಭಿವೃದ್ಧಿಗೆ 2.46 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದರು. ಮೊದಲ ಹಂತದಲ್ಲಿ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ “ನೂರೊಕ್ಕನಾಡ್ ಹಿಲ್ಸ್” ರಸ್ತೆ ಮತ್ತು ಕತ್ತಲೆಕಾಡು ರಸ್ತೆ ನಿರ್ಮಾಣವಾಗಿದೆ. ಇದನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಆಪ್ತ ಹಾಗೂ ವಿಹೆಚ್‍ಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ…
ಲೇಖಕ: admin
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್ (INDIA) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.
ಮಡಿಕೇರಿ ಜು.18 : ಕೊಡಗಿನ ಕೆಲವು ತೋಟಗಳ ಲೈನ್ ಮನೆಗಳಲ್ಲಿ ಜೀತದಾಳುಗಳಾಗಿ ದುಡಿಯುತ್ತಿರುವ ಆದಿವಾಸಿ ಕಾರ್ಮಿಕರಿಗೆ ಸ್ವಂತ ಮನೆ ಮತ್ತು ಕೃಷಿಭೂಮಿ ನೀಡಬೇಕು ಎಂದು ದಲಿತ ಆದಿವಾಸಿ ಕೃಷಿ ಕಾರ್ಮಿಕ ಸಂಘದ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಮುಖಂಡ ಡಿ.ಎಸ್.ನಿರ್ವಾಣಪ್ಪ, ಜಿಲ್ಲೆಯ ಮೂಲ ನಿವಾಸಿಗಳಾದ ಪಣಿಯರವ, ಪಂಜರಿಯರವ, ಜೇನುಕುರುಬ, ಬೆಟ್ಟಕುರುಬ, ಮಲೆ ಕುಡಿಯರು, ದಲಿತರು ಸೇರಿದಂತೆ ಸಾವಿರಾರು ಕುಟುಂಬಗಳು ಶಾಶ್ವತ ನಿವೇಶನ, ಸೂರಿಲ್ಲದೆ ಉಳ್ಳವರ ತೋಟದ ಲೈನ್ ಮನೆಗಳಲ್ಲಿ ಜೀತ ಮಾಡುತ್ತಿದ್ದಾರೆ. ಕಾರ್ಮಿಕರ ಮೂಲ ದಾಖಲೆಗಳನ್ನು ಕಸಿದುಕೊಳ್ಳುವ ಪ್ರಕರಣಗಳು ಕೂಡ ಬೆಳಕಿಗೆ ಬಂದಿದೆ ಎಂದು ಆರೋಪಿಸಿದರು. ಮಹಿಳೆಯರು, ಮಕ್ಕಳು, ಬಾಣಂತಿಯರು ಆರೋಗ್ಯ ಮತ್ತು ಜೀವನದ ಭದ್ರತೆ ಇಲ್ಲದೆ ಭೀತಿಯ ವಾತಾವರಣದಲ್ಲಿ ಲೈನ್ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಈ ಹಿನ್ನೆಯಲ್ಲ್ಲಿ ಸಂಘಟನೆ ವತಿಯಿಂದ ಲೈನ್ ಮನೆಯ ಕಾರ್ಮಿಕರ ಪಟ್ಟಿಯನ್ನು ಸಂಗ್ರಹಿಸಲಾಗುತ್ತಿದ್ದು, ಅವರ ಸ್ವ ವಿವರ ಹಾಗೂ ದಾಖಲಾತಿಗಳನ್ನು ಸಾಧ್ಯವಾದಷ್ಟು ಸಂಗ್ರಹಿಸಿ ಹಂತ ಹಂತವಾಗಿ ಸರ್ಕಾರಕ್ಕೆ ನೀಡಲಾಗುತ್ತದೆ. ಈಗಾಗಲೇ ಒಂದು…
ಕುಶಾಲನಗರ,ಜು.18 : ಕೂಡುಮಂಗಳೂರು ಗ್ರಾ.ಪಂ ನ ಕೂಡ್ಲೂರು ನವಗ್ತಾಮದಲ್ಲಿ ಹೈಮಾಸ್ಟ್ ಲೈಟ್ ಅಳವಡಿಸುವ ಕಾಮಗಾರಿಗೆ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್ ಚಾಲನೆ ನೀಡಿದರು. ಕೂಡ್ಲೂರಿನ ನವಗ್ರಾಮದ ನ್ಯಾಯಬೆಲೆ ಅಂಗಡಿ ಬಳಿ ಅಮೃತ ಗ್ರಾಮ ಯೋಜನೆಯ ಒಂದು ಲಕ್ಷ ರೂ .ವೆಚ್ಚದ ಅನುದಾನದಲ್ಲಿ ಹೈಮಾಸ್ಟ್ ಅಳವಡಿಸಲಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹೈಮಾಸ್ಟ್ ಅಳವಡಿಸಲಾಗುತ್ತಿದೆ. ನಂತರ ಮಾತನಾಡಿದ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್, ನವಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಬಳಿ ಹೈಮಾಸ್ಟ್ ಅಳವಡಿಸುವಂತೆ ಗ್ರಾಮಸ್ಥರ ಆಗ್ರಹಿಸಿದ ಹಿನ್ನಲೆ ಸ್ಥಳದಲ್ಲಿ ಅಮೃತ ಗ್ರಾಮ ಯೋಜನೆಯ ಅನುದಾನದಲ್ಲಿ ಹೈಮಾಸ್ಟ್ ಲೈಟನ್ನು ಅಳವಾಡಿಸಲಾಗುತ್ತಿದೆ. ವರ್ಕ್ಸ್ ನಿಂದ ಬರುವ ಕಾರ್ಮಿಕರಿಗೆ, ಮಹಿಳೆಯರಿಗೆ ರಾತ್ರಿ ಹೊತ್ತಿನಲ್ಲಿ ಸಂಚರಿಸಲು ಅನುಕೂಲವಾಗಲಿದೆ ಎಂದರು. ಈ ಸಂದರ್ಭ ಸ್ಥಳೀಯ ಗ್ರಾಮಸ್ಥರು ಇದ್ದರು.
ಮಡಿಕೇರಿ ಜು.18 : ವಿಧಾನ ಸೌಧದಲ್ಲಿ ನೆನೆಗುದ್ದಿಗೆ ಬಿದ್ದಿರುವ ಅರಣ್ಯ ಕಾಯ್ದೆ ಮತ್ತು ಪರಿಹಾರ ಕುರಿತು ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿದಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ, ಸಚಿವರಿಗೆ ಜಿಲ್ಲೆಯ ಸಮಸ್ಯೆಗಳ ಕುರಿತು ವಿವರಿಸಿದರು. ಈ ಸಂದರ್ಭ ಅರಣ್ಯ ಸಚಿವರು, ಪರಿಶಿಷ್ಟ ವರ್ಗಗಳ ಮತ್ತು ಯುವಜನ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಜರಿದ್ದರು.
ನಾಪೋಕ್ಲು ಜು.18 : ದಿನನಿತ್ಯ ನೂರಾರು ವಾಹನಗಳು ಸಂಚರಿಸುವ ಮುಖ್ಯ ರಸ್ತೆಯ ಬದಿಯಲ್ಲಿ ಒಣಗಿದ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ನಾಪೋಕ್ಲು ಬಳಿಯ ಬಾವಲಿ ಗ್ರಾಮದಿಂದ ಎಡಪಾಲ, ಚೆಂಯ್ಯಂಡಾಣೆ ಮಾರ್ಗವಾಗಿ ವಿರಾಜಪೇಟೆಗೆ ತೆರಳುವ ಮುಖ್ಯ ರಸ್ತೆಯ ಬದಿಯಲ್ಲಿ ಕೆಲವು ವರ್ಷಗಳಿಂದ ಒಣಗಿದ ಮರವೊಂದು ಬೀಳುವ ಸ್ಥಿತಿಗೆ ತಲುಪಿದ್ದರೂ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ಬಾರದೇ ಇರುವುದು ವಿಪರ್ಯಾಸ. ಮಳೆಗಾಲ ಪ್ರಾರಂಭವಾಗಿದ್ದು, ಹೆಚ್ಚಿನ ಮಳೆ ಬೀಳುವ ಸಂದರ್ಭ ಮರ ಧರೆಗುರುಳುವ ಸಾಧ್ಯತೆಗಳು ಕಂಡು ಬರುತ್ತಿದೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು, ವಾಹನ ಸವಾರರು ಭಯದಿಂದ ಸಂಚರಿಸುವ ಪರಿಸ್ಥಿತಿ ಉದ್ಭವವಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ನಾಪೋಕ್ಲು, ಮೂರ್ನಾಡು ಭಾಗಗಳಿಂದ ಶಾಲಾ ವಾಹನಗಳು, ಖಾಸಗಿ ಮತ್ತು ಸರ್ಕಾರಿ ಬಸ್ಸುಗಳು ಸೇರಿದಂತೆ ನೂರಾರು ವಾಹನಗಳು ಸಂಚರಿಸುತ್ತಿದ್ದು, ಮರ ಬಿದ್ದರೆ ಭಾರಿ ಅನಾಹುತ ಅನುಭವಿಸುವ ಸಾಧ್ಯತೆ ಎದ್ದು ಕಾಣುತ್ತಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರು ತಕ್ಷಣ ಮರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ವಾಹನಸವಾರರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.…
ಮಡಿಕೇರಿ ಜು.18 : ಬೆಂಗಳೂರಿನ ಕೋರಮಂಗಲ ಒಳಕ್ರೀಡಾಂಗಣದಲ್ಲಿ ನಡೆದ 40ನೇ ರಾಜ್ಯ ಮಟ್ಟದ ಟೆಕ್ವಾಂಡೋ ಸ್ಪರ್ಧೆಯಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್‍ನ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದಿದ್ದಾರೆ. ಕ್ಲಬ್‍ನ ವಿದ್ಯಾರ್ಥಿಗಳಾದ ಎನ್.ಕೆ.ಪ್ರಜ್ಞಾ, ಪಿ.ಜಿ.ನಿಕ್ಷಾ, ಮಿಜಲ್, ಮಿಶಾಲ್, ವಿರಂಜನ್, ಅರುಶ್ ಪರ್ವಿನ್ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದು, ಎಂ.ಆರ್.ಮೃದುಲ್, ಎನ್.ಕೆ.ದಿವಿತ್, ಅನ್ಯ ಪರ್ವಿನ್, ಮೊಹಮ್ಮದ್ ಜಿಸಾನ್, ಮೋಹಿತ್, ವಿರಾಟ್ ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಮೊಹಮ್ಮದ್ ಅಸ್ಲಮ್, ಹಿಬಾ, ಬಿಲಾಲ್, ಹರ್ಷ ಕರುಂಬಯ್ಯ, ಅಯಾನ್ ಖಾನ್, ಮೊಹಮ್ಮದ್ ಅಯಾನ್, ಫರ್ಶನ್, ತನ್ವಿತ್, ದಕ್ಷ್, ಅಲುಫ್, ಪಶುಪತಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ. ಇವರು ಕ್ಲಬ್ ನ ಮಾಸ್ಟರ್ ಕುಶಾಲ್ ಕುಮಾರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಮಡಿಕೇರಿ ಜು.17 : ನಗರದ ಸಂತ ಮೈಕಲರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸುಮಾರು 30ಕ್ಕೂ ಹೆಚ್ಚು ವಿಜ್ಞಾನ ವರ್ಕಿಂಗ್ ಮಾಡೆಲ್‍ಗಳ ಪ್ರದರ್ಶನ ಗಮನ ಸೆಳೆಯಿತು. ಕಾಲೇಜಿನ ಪ್ರಾಂಶುಪಾಲ ಕೆ.ಎಸ್.ಸುಮಂತ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ.ಎ.ಜಾನ್ಸನ್, ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರ ಹಾಗೂ ಆಡಳಿತ ಮಂಡಳಿ ವ್ಯವಸ್ಥಾಪಕ ರವಿ ಹಾಜರಿದ್ದರು. ತೀರ್ಪುಗಾರರಾಗಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪಲ್ಲವಿ, ಸಂತ ಜೋಸೆಫರ ಕಾಲೇಜಿನ ಉಪನ್ಯಾಸಕರಾದ ಎಂ.ಸಿ. ಚೈತ್ರ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಉಪನ್ಯಾಸಕರಾದ ಬಿ.ವಿ.ವೀಕ್ಷಿತ ಪಾಲ್ಗೊಂಡಿದ್ದರು. ವಿದ್ಯಾರ್ಥಿ ಮಾರ್ಗದಶಕರು, ಉಪನ್ಯಾಸಕರಾದ ಟಿ.ಡಿ.ಗಾನವಿ, ಶ್ವೇತ ರುಮಾಲೆ, ಸಿ.ಸಿ.ಶ್ವೇತಾ, ಮನಿಷ ಮೊರಾಸ್ ಸಹಕಾರದೊಂದಿಗೆ ವಿದ್ಯಾರ್ಥಿಗಳು ತ್ರೀಡಿ ಪ್ರಿಂಟರ್, ಡಿ.ಸಿ.ಸ್ಮಾರ್ಟ್‍ಬಿನ್, ಎ.ಸಿ.ಕನ್‍ವರ್ಟರ್, ಟಿಸ್ಲ ಕಾಯಿಲ್, ರೆಕಾರ್ಡ್, ವಿವಿಧ ನೆನ್ಸರ್‍ಗಳು ಜಿಡ್ರೋ ಇಲೆಕ್ಟ್ರಿಸಿಟಿ, ಅರ್ತ್‍ಕ್ವೇಕ್ ಡಿಟೆಕ್ಟರ್, ಮೆಟಲ್ ಡಿಟೆಕ್ಟರ್, ಆ್ಯಂಟಿ ಸ್ಲೀಪ್, ಅಲಾರ್ಮ್‍ಗಳು, ವೀಟ್‍ಸ್ಟನ್ಸ್ ಬ್ರಿಡ್ಜ್, ಕ್ಲಪ್ ಸ್ವಿಚ್, ಲೇಸರ್ ಸೆಕ್ಯುರಿಟಿ ಅಲಾವರ್ಗ್,…
ಮಡಿಕೇರಿ ಜು.18 : ವಿದ್ಯುತ್ ತಗುಲಿ 19 ಕುರಿಗಳು ಸಾವನ್ನಪಿರುವ ಘಟನೆ ಪಾವಗಡ ತಾಲ್ಲೂಕಿನ ನಾಗಲಮಡಿಕೆ ಹೋಬಳಿ ಶ್ರೀರಂಗಪುರದಲ್ಲಿ ನಡೆದಿದೆ. ಸ್ಥಳೀಯ ರೈತ ಮಂಜುನಾಥ್ ಎಂಬುವವರಿಗೆ ಸೇರಿದ ಕುರಿಗಳನ್ನು ವಿದ್ಯುತ್ ಕಂಬದ ಸಮೀಪದಲ್ಲೇ ಇದ್ದ ಶೆಡ್ ನಲ್ಲಿ ಬಿಡಲಾಗಿತ್ತು. ತಡರಾತ್ರಿ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಶೆಡ್ ಗೆ ವಿದ್ಯುತ್ ಹರಿದು ಕುರಿಗಳು ಸಾವನ್ನಪ್ಪಿವೆ. ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದ್ದು, ಪರಿಹಾರ ನೀಡಬೇಕೆಂದು ಮಂಜುನಾಥ್ ಮನವಿ ಮಾಡಿದ್ದಾರೆ.
ಮಡಿಕೇರಿ ಜು.18 : ಮಾಜಿ ಯೋಧ, ಗ್ರಾ.ಪಂ ಮಾಜಿ ಸದಸ್ಯ ಹಾಗೂ ಹಾಕಿ ಪಟು ಎಂ.ಪಿ.ಪೂಣಚ್ಚ(61) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಕೆ.ಜಿ.ಹಬ್ಬನಕುಪ್ಪೆಯ ನಿವಾಸಿ ಪೂಣಚ್ಚ ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.






