ನಾಪೋಕ್ಲು ಜು.14 : ಇಂದಿರಾ ನಗರದಲ್ಲಿರುವ ಸಮುದಾಯ ಭವನದ ಒಳ ಮತ್ತು ಹೊರಗೆ ಸುಚಿತ್ವ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಸ್ಥಳಿಯ ಶೌರ್ಯ ಸ್ವಯಂ ಸೇವಕರು ಸೇರಿ ಇಡಿ ಭವನದ ಸುತ್ತು ಮುತ್ತ ಕಾಡು, ಕಸ ತೆಗೆದು ಒಳಗೆ ಸ್ವಚ್ಛ ಗೊಳಿಸುವುದರ ಮೂಲಕ ಶ್ರಮದಾನ ಮಾಡಿದರು. ಈ ಸೇವಾ ಕಾರ್ಯದಲ್ಲಿ ಗೀತಾ, ಆಶಾ, ಶರವಣ, ದಮಯಂತಿ, ಹಾಜರಿದ್ದರು. ಶೌರ್ಯ ತಂಡದ ಸದಸ್ಯರು ತಮ್ಮ ಕೆಲಸ ಕಾರ್ಯಗಳನ್ನು ಬದಿಗೊತ್ತಿ ವಿವಿಧ ಸಾಮಾಜಿಕ ಉಪಯೋಗಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಶಾಲೆ, ಅಂಗನವಾಡಿ, ಸಮುದಾಯ ಭವನಗಳ ಸ್ವಚ್ಚತೆ, ರಸ್ತೆ ಗುಂಡಿಗಳ ಮುಚ್ಚುವಿಕೆ, ವೃದ್ಧರಿಗೆ ನೆರವು ಸೇರಿದಂತೆ ವಿವಿಧ ಜನೋಪಯೋಗಿ ಕಾರ್ಯಕ್ರಮಗಳನ್ನು ಸಂಯೋಜಕಿ ಬಾಳೆಯಡ ದಿವ್ಯ ನೇತೃತ್ವದಲ್ಲಿ ಶೌರ್ಯ ಸ್ವಯಂ ಸೇವಕ ತಂಡದ ಸದಸ್ಯರು ಹಮ್ಮಿಕೊಳ್ಳುತ್ತಿರುವುದು ಸಾರ್ವಜನಿಕರ ಪ್ರಸಂಸ್ಥೆಗೆ ಪಾತ್ರವಾಗಿದೆ. ವರದಿ : ದುಗ್ಗಳ ಸದಾನಂದ
ಲೇಖಕ: admin
ಮಡಿಕೇರಿ ಜು.16 : ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವಿಗೀಡಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಕುರುಬರ ಹುಂಡಿ ಗ್ರಾಮದಲ್ಲಿ ನಡೆದಿದೆ. ಆಹಾರ ಅರಸಿ ಬಂದ ಕಾಡಾನೆ ಜಮೀನಿನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ತಂತಿಯನ್ನು ಸ್ಪರ್ಷಿಸಿ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜು .17 : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮವು ಜು.19 ರಂದು ಮಧ್ಯಾಹ್ನ 3 ಗಂಟೆಗೆ ಮಡಿಕೇರಿಯ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಿಕೊಳ್ಳಲಿದ್ದು, ಕಾರ್ಯಕ್ರಮವನ್ನು ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ. ಶ್ರೀಧರ ಹೆಗಡೆ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ ರಮೇಶ್ ನೂತನ ಸದಸ್ಯರುಗಳಿಗೆ ಪ್ರತಿಜ್ಞಾವಿಧಿ ಬೋಧನೆಯನ್ನು ನೆರವೇರಿಸಲಿದ್ದಾರೆ. ನೂತನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ನಿಕಟ ಪೂರ್ವ ಅಧ್ಯಕ್ಷ ಅಂಬೇಕಲ್ ನವೀನ್ ಅಧಿಕಾರ ಹಸ್ತಾಂತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುನಿರ್ ಅಹ್ಮದ್ ಮತ್ತು ರೇವತಿ ರಮೇಶ್ ಉಪಸ್ಥಿತರಿರುತ್ತಾರೆ. ನಿಯೋಜಿತ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಗೌರವ ಕಾರ್ಯದರ್ಶಿಗಳಾಗಿ ನಿಯೋಜಿಸಲ್ಪಟ್ಟಿರುವ ಪುದಿಯನೆರವನ ರಿಷಿತ್ ಮಾದಯ್ಯ, ಬಾಳೆಯಡ…
ಮಡಿಕೇರಿ ಜು.16 : ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ತಂಬಾಕು ಭಸ್ಮವಾಗಿ ಬ್ಯಾರನ್ ಗೆ ಹಾನಿಯಾದ ಘಟನೆ ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಕಾಮಗೌಡನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ತಂಬಾಕು ಹದ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ತಂಬಾಕು ಭಸ್ಮವಾಗಿ ಬ್ಯಾರನ್ ಮೇಲ್ಚಾವಣಿ ಸಂಪೂರ್ಣವಾಗಿ ಹಾನಿಯಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿದೆ. ಬೆಳೆಗಾರನಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ.
ಮಡಿಕೇರಿ ಜು.17 : ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ವತಿಯಿಂದ ಬಿಳಿಗೇರಿಯಲ್ಲಿ 3ನೇ ವರ್ಷದ ಹಿಂದೂ ಕೆಸರು ಗದ್ದೆ ಕ್ರೀಡಾಕೂಟ ಸಂಭ್ರಮದಿಂದ ನಡೆಯಲಿದೆ. ತುಂತಜಿರ ಕುಟುಂಬಸ್ಥರ ಗದ್ದೆಯಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಕೃಷಿಕರಾದ ತುಂತಜಿರ ಚಂದ್ರಶೇಖರ್ ಉದ್ಘಾಟಿಸಿದರು. ಅತಿಥಿಗಳಾಗಿ ಮಾಜಿ ಕ್ಯಾಪ್ಟನ್ ತುಂತಜಿರ ದಯಾನಂದ್, ಕೃಷಿಕ ತುಂತಜಿರ ಜನಾರ್ಧನ್, ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಅರವಿಂದ್, ತಾ.ಪಂ ಮಾಜಿ ಸದಸ್ಯೆ ತುಂತಜಿರ ಕುಮುದ ಮತ್ತಿತರರು ಪಾಲೊಂಡಿದ್ದರು. ಕ್ರೀಡಾಕೂಟದಲ್ಲಿ ಕ್ರಿಕೆಟ್, ವಾಲಿಬಾಲ್, ಓಟದ ಸ್ಪರ್ಧೆ, ಹಗ್ಗಜಗ್ಗ ಟ, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆದವು.
ಮಡಿಕೇರಿ ಜು.17 : ಯಾವುದೇ ವಿಚಾರಕ್ಕಾಗಿಯಾದರೂ ಸರಿಯೇ. ಹಿಂದು ಮುಂದು ಆಲೋಚಿಸದೆಯೇ ತಮ್ಮ ಮೂಗಿನ ನೇರಕ್ಕೆ ಸರಿಯೆನಿಸುವ, ಸಮಾಜದ ದೃಷ್ಟಿಯಿಂದ ತಪ್ಪು ಎನ್ನಬಹುದಾದ ಕೃತ್ಯವನ್ನು ಯಾರಾದರೂ ಮಾಡಿದರೆ ಆ ಕೃತ್ಯದ ಪರಿಣಾಮವಾಗಿ ಏನೆಲ್ಲಾ ಮತ್ತು ಯಾರಿಗೆಲ್ಲಾ ಯಾವ್ಯಾವ ರೀತಿಯ ತೊಂದರೆಗಳು ಸಂಭವಿಸಬಹುದು ಎಂಬುದನ್ನು ನಾವಿಂದು ಕಾಣುತ್ತಿದ್ದೇವೆ. ಅಂತಹ ಒಂದು ಕೃತ್ಯ ನಡೆದ ಸಂದರ್ಭದಲ್ಲಿ ನಡೆದ ಘಟನೆಗೆ ನೇರವಾಗಿ ಯಾವುದೇ ರೀತಿಯ ಸಂಬಂಧ ಇಲ್ಲದೇ ಇದ್ದರೂ ಸಹ ಕೇವಲ ಕೃತ್ಯದ ರೂವಾರಿಯ ಜಾತಿ ಮತದವರೆಂಬ ಏಕೈಕ ಕಾರಣದಿಂದ ಅದೆಷ್ಟು ಮುಗ್ಧರಿಗೆ ನೋವಾಗಿರಬಹುದು. ಅದೆಷ್ಟು ಯುವ ಮನಗಳು, ಅದೆಷ್ಟು ಹಿರಿಯ ಕಿರಿಯ ಜೀವಗಳು ಆಸರೆ ಕೈತಪ್ಪಿ ಹೋಗಿ ಜೀವಮಾನದ ಗೊತ್ತು ಗುರಿಗಳು ದಿಕ್ಕುತಪ್ಪಿ ಅಲ್ಲೋಲ ಕಲ್ಲೋಲವಾಗಿಬಹುದು ಎಂದು ನಾವೆಲ್ಲರೂ ಚಿಂತಿಬೇಕಾಗಿದೆ. ಅಂತಹ ಒಂದು ಕುಟುಂಬದ ಏಳುಬೀಳುಗಳ ನಡುವೆ ಬೆಂಕಿಯಲ್ಲಿ ಅರಳಿದ ಹೂವು ಈ ಕೃತಿಕಾರರಾದ ವಿಜಯಾ ವಿಷ್ಣುಭಟ್ ಡೋಂಗ್ರೆ. ತಾನು ಚಿತ್ಪಾವನ ಬ್ರಾಹ್ಮಣರ ಪಂಗಡಕ್ಕೆ ಸೇರಿದ ಕಾರಣಕ್ಕಾಗಿ ವಿದ್ಯಾಭ್ಯಾಸ ಮೊಟಕುಗೊಂಡಿತು . ಇದ್ದ ಸ್ವಂತ…
ಮಡಿಕೇರಿ ಜು.17 : ಮನುಷ್ಯರಿಗೆ ಅತ್ಯವಶ್ಯಕವಾದ ಉತ್ತಮ ಪರಿಸರವನ್ನು ಪ್ರತಿಯೊಬ್ಬರೂ ಕಾಪಾಡಿಕೊಳ್ಳಬೇಕಾಗಿದೆ ಎಂದು ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ.ಶಿವರಾಮ್ ತಿಳಿಸಿದ್ದಾರೆ. ಕುಶಾಲನಗರದ ಕೃಷಿ ಮಾರುಕಟ್ಟೆ ಆವರಣದಲ್ಲಿ ಭಾನುವಾರ ವಾಕರ್ಸ್ ಅಸೋಸಿಯೇಷನ್ ತಂಡದ ಸದಸ್ಯರು ಕುಶಾಲನಗರ ಅರಣ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡ ವಾಯು ವಿಹಾರಿಗಳ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉತ್ತಮ ವಾತಾವರಣದಿಂದ ಉತ್ತಮ ಆರೋಗ್ಯ ಗಳಿಸಲು ಸಾಧ್ಯ ಎಂದ ಶಿವರಾಂ, ಇದೊಂದು ವಿಶೇಷ ಕಾರ್ಯಕ್ರಮವಾಗಿದೆ ಎಂದರು ಗಿಡಗಳನ್ನು ನೆಡುವ ಮೂಲಕ ನಿರ್ವಹಣೆ ಮಾಡಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು. ಕಳೆದ ಹಲವು ವರ್ಷಗಳಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣಕ್ಕೆ ವಾಯು ವಿಹಾರಕ್ಕೆ ತೆರಳುತ್ತಿದ್ದ ಸುಮಾರು 20ಕ್ಕೂ ಅಧಿಕ ವಾಯು ವಿಹಾರಿಗಳು ಇಲಾಖೆ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸೇರಿ ನೂರಕ್ಕೂ ಅಧಿಕ ಗಿಡಗಳನ್ನು ನೆಡುವಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಕಾರ್ಯಕ್ರಮ ಸಂಯೋಜಕರಾದ ಎಂ ಎನ್ ಚಂದ್ರಮೋಹನ್, ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಹೆಚ್.ಟಿ.ರವಿ, ಪ್ರಧಾನ ಕಾರ್ಯದರ್ಶಿ ಬಸವರಾಜ್, ಉಪ ವಲಯ…
ಮಡಿಕೇರಿ ಜು.17 : ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಮಾರಮ್ಮ ದೇವರ ವಾರ್ಷಿಕ ಉತ್ಸವ “ಮಾರಿಗುಡಿ ನಮ್ಮೆ” ಶ್ರದ್ಧಾಭಕ್ತಿಯಿಂದ ಜರುಗಿತು. ವರ್ಷಂಪ್ರತಿ ಕಕ್ಕಡ ಮಾಸದ ಒಂದು ದಿನದ ಮುಂಚಿತವಾಗಿ ಸಂಕ್ರಮಣದಂದು ನಡೆಯುವ ಹಳ್ಳಿಗಟ್ಟು ಮಾರಮ್ಮ ದೇವರ ವಾರ್ಷಿಕ ಉತ್ಸವದಲ್ಲಿ ಮಚ್ಚಿಯಂಡ ಕುಟುಂಬದವರೇ ಪೂಜಾರಿಗಳಾಗಿ ವಿವಿಧ ವಿಧಿವಿಧಾನಗಳನ್ನು ಪೂರೈಸುತ್ತಾರೆ. ಹಳ್ಳಿಗಟ್ಟು ಊರಿನಲ್ಲಿ ಪ್ರಮುಖವಾಗಿ ನಾಲ್ಕು ದೇವಸ್ಥಾನಗಳಿದ್ದು, ಇಲ್ಲಿನ ಭದ್ರಕಾಳಿ ದೇವಸ್ಥಾನದಲ್ಲಿ ಮಾತ್ರ ಬ್ರಾಹ್ಮಣರ ಪೂಜೆ ನೆರವೇರಿಸುತ್ತಿದ್ದು ಉಳಿದ ಮೂರು ದೇವಾಲಯಗಳಲ್ಲಿ ಕೊಡವ ಜನಾಂಗದವರೇ ಪೂಜಾರಿಯಾಗಿ ಕಾರ್ಯನಿರ್ವಹಿಸುತ್ತಾರೆ. ಇಲ್ಲಿನ ಗುಂಡಿಯತ್ ಅಯ್ಯಪ್ಪ ದೇವಸ್ಥಾನ ಹಾಗೂ ಪೊಲವಪ್ಪ ದೇವಸ್ಥಾನದಲ್ಲಿ ಚಮ್ಮಟೀರ ಹಾಗೂ ಮೂಕಳೇರ ಕುಟುಂಬ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದರೆ, ಮಾರಮ್ಮ ದೇವಸ್ಥಾನದಲ್ಲಿ ಮಚ್ಚಿಯಂಡ ಕುಟುಂಬ ವಿವಿಧ ಕಟ್ಟುಪಾಡುಗಳೊಂದಿಗೆ ಪೂಜೆಯನ್ನು ನೆರವೇರಿಸುತ್ತಾರೆ. ಭಾನುವಾರ ನಡೆದ ಮಾರಮ್ಮ ದೇವರ ಉತ್ಸವದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹರಕೆಗಳನ್ನು ಅರ್ಪಿಸಿದ್ದರು. ಕಕ್ಕಡ ಮಾಸಕ್ಕೆ ಒಂದು ದಿನ ಮುಂಚಿತವಾಗಿ ಹಾಗೂ ಕಕ್ಕಡದ ಮೊದಲ ವಾರದಲ್ಲಿ ನಡೆಯುವ ಹಳ್ಳಿಗಟ್ಟು ಮಾರಿಗುಡಿ ನಮ್ಮೆ ಜು.22ರಂದು…
ಮಡಿಕೇರಿ ಜು.16 : NEWSDESK ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ದಂಧೆ ವ್ಯಾಪಕವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ.NEWSDESK ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ದಾಳಿಗಳನ್ನು ಮುಂದುವರೆಸಿದೆ. ಜಿಲ್ಲಾ ವ್ಯಾಪ್ತಿಯ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳಲ್ಲಿ ಪ್ರವಾಸದ ನಿಮಿತ್ತ ತಂಗಲು ಬರುವ ಪ್ರವಾಸಿಗರು ಮಾದಕ ವಸ್ತು ಬಳಕೆ, ಮಾರಾಟ ಮಾಡುವುದು ಕಂಡು ಬಂದಲ್ಲಿ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳ ಮಾಲೀಕರು, ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡದೆ ದಾಳಿ ಸಂದರ್ಭ ಮಾದಕ ವಸ್ತು ಸೇವನೆ, ಮಾರಾಟ ಕಂಡು ಬಂದಲ್ಲಿ ಮಾಲೀಕರು ಹಾಗೂ ಮಧ್ಯವರ್ತಿಗಳ ವಿರುದ್ದ ಎನ್.ಡಿ.ಪಿ.ಎಸ್. ಕಾಯಿದೆ ಕಲಂ 25ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಅವುಗಳ ಪರವಾನಗಿ ರದ್ದು ಮಾಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.NEWSDESK
ಮಡಿಕೇರಿ ಜು.16 : ಕೊಡಗು ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸೇವನೆಯ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು 1 ಕೆ.ಜಿ.702 ಗ್ರಾಂ ಗಾಂಜಾ ಮತ್ತು 9 ಸಂಖ್ಯೆಯ ನಿಷೇಧಿತ ಐಎಸ್‌ಡಿ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.NEWSDESK ಮಡಿಕೇರಿ ಸಮೀಪದ ಮಕ್ಕಂದೂರು ಗ್ರಾಮದ ಹೋಂ ಸ್ಟೇ ಒಂದರಲ್ಲಿ ಮಾದಕ ವಸ್ತು ಮಾರಾಟ ಮತ್ತು ಬಳಕೆ ಕುರಿತು ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು 414 ಗ್ರಾಂ ಗಾಂಜಾ ಮತ್ತು 9 ಸಂಖ್ಯೆಯ ನಿಷೇಧಿತ ಐಎಸ್‌ಡಿ ಮಾದಕ ವಸ್ತು ಸಹಿತ ಹಲವರನ್ನು ವಶಕ್ಕೆ ಪಡೆದರು.NEWSDESK ಮಂಗಳೂರು ಮೂಲದ ರಿತಿಕ್(23), ವಿಘ್ನೇಶ್ ಅಜೀತ್ ಅಂಚನ್(21), ಸುಮನ್ ಹರ್ಷಿತ್(26), ಚಿರಾಗ್ ಸಾನಿಲ್(24), ಮಂಜುನಾಥ್(30), ಲತೀಶ್ ನಾಯಕ್(32), ಸಚಿನ್(26), ರಾಹುಲ್(26), ಪ್ರಜ್ವಲ್(32), ಅವಿನಾಶ್(28), ಪ್ರತಿಕ್ ಕುಮಾರ್(27), ಧನುಷ್(28), ರಾಜೇಶ್(45), ದಿಲ್ ರಾಜು(30) ಹಾಗೂ ಮಡಿಕೇರಿ ನಿವಾಸಿ ಹೋಂ ಸ್ಟೇ ಮಧ್ಯವರ್ತಿ…






