ಲೇಖಕ: admin

ಮಡಿಕೇರಿ ಮೇ 2 : ಸಾರ್ವಜನಿಕರು ಪಾವತಿಸಿದ ತೆರಿಗೆ ಹಣ ಭ್ರಷ್ಟ ವ್ಯವಸ್ಥೆಯ ಪರಿಣಾಮ ಪೋಲಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳು ಕುಂಟಿತಗೊಳ್ಳುತ್ತಿದೆ. ಇದೇ ಕಾರಣಕ್ಕೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕೆನ್ನುವ ಉದ್ದೇಶದಿಂದ ನಾನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಮತದಾರರು ವಿಶ್ವಾಸವಿಟ್ಟು ಮತ ನೀಡುವ ಮೂಲಕ ಜನಸೇವೆಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಶ್ರೀಕೃಷ್ಣ ಗೋಶಾಲೆಯ ಅಧ್ಯಕ್ಷ ಹರೀಶ್ ಜಿ.ಆಚಾರ್ಯ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಗೆದ್ದು ಬಂದರೆ ಅಥವಾ ಸೋತರೂ ಕೊಡಗು ಜಿಲ್ಲೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳನ್ನು ರಚಿಸಲು ಹೋರಾಟ ಮಾಡುವುದಾಗಿ ತಿಳಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ವ್ಯಕ್ತಿ ಕೂಡ ಹಣವಿಲ್ಲದೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಮತ್ತು ಯಾವ ರೀತಿ ಅಭಿವೃದ್ಧಿ ಕಾರ್ಯ ಮಾಡಬಹುದು ಎನ್ನುವುದನ್ನು ಸಾಬೀತು ಪಡಿಸಲು ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದೇನೆ. ಜನಬೆಂಬಲ ಪ್ರಾಮಾಣಿಕರ ಪರ ಇರಲಿದೆ ಎನ್ನುವ ವಿಶ್ವಾಸವಿದೆ ಎಂದರು. 2018 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಸಿಲುಕಿ ಅನಾಥವಾಗಿ ಅಲೆದಾಡುತ್ತಿದ್ದ ಗೋವುಗಳಿಗೆ ಆಶ್ರಯ ನೀಡುವ…

Read More

ಮಡಿಕೇರಿ ಮೇ 2 : ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಧಿಕ ಮತಗಳ ಅಂತರದಿoದ ಗೆಲುವು ಸಾಧಿಸಲು ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶ್ರಮ ವಹಿಸಬೇಕೆಂದು ವಿಧಾನ ಪರಿಷತ್ ನ ವಿರೋಧ ಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕರೆ ನೀಡಿದ್ದಾರೆ. ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೂತ್ ಮತ್ತು ವಲಯ ಮಟ್ಟದ ಚುನಾವಣಾ ಕಾರ್ಯಾಗಾರ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಹರಿಪ್ರಸಾದ್, ಬೂತ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿನ ರುವಾರಿಗಳಾಗಿದ್ದು, ಮೇ 10 ರವರೆಗೆ ನಿರಂತರ ಜನ ಸಂಪರ್ಕದಲ್ಲಿರುವoತೆ ಕಿವಿಮಾತು ಹೇಳಿದರು. ವಿದ್ಯಾವಂತ ಹಾಗೂ ಪ್ರಜ್ಞಾವಂತ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಇವರುಗಳ ಗೆಲುವು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು. ಕಾAಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸುಜು ತಿಮ್ಮಯ್ಯ ಮಾತನಾಡಿ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಒಗ್ಗಟ್ಟಿನಿಂದ ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು. ಬ್ಲಾಕ್ ಪ್ರಚಾರ…

Read More

ಮಡಿಕೇರಿ ಮೇ 2 : ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ವಿ.ಜೆ.ಮೋಹನ್, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎನ್.ರೌವೂಫ್, ಕಾರ್ಯದರ್ಶಿಗಳಾಗಿ ಇಬ್ರಾಹಿಂ ಮಡಿಕೇರಿ, ಹಮೀದ್ ಕಡಗದಾಳು, ಕಾರ್ಯಕಾರಿಣಿ ಸದಸ್ಯರಾಗಿ ಸ್ವರ್ಣಲತಾ ಹಾಗೂ ಸುಭಾಶ್ ಆಳ್ವ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

Read More

ಮಡಿಕೇರಿ ಮೇ 2 : ಆಮ್ ಆದ್ಮಿ ಪಕ್ಷದ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಕೆ.ಪಿ.ಬೋಪಣ್ಣ ಪರವಾಗಿ ಮಕ್ಕಂದೂರು, ಸೋಮವಾರಪೇಟೆಯ ವಿವಿಧೆಡೆ ಬಿರುಸಿನ ಪ್ರಚಾರ ನಡೆಯಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಟ್ಟಿಹೂಳೆ, ಮಾದಾಪುರ, ಕುಂಬೂರು, ಐಗೂರು, ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಕಡೆಗಳಲ್ಲಿ ಪಕ್ಷದ ಯೋಜನೆಗಳ ಕುರಿತು ಜನರಿಗೆ ತಿಳಿಸಿ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡಿದರು. ಈ ಸಂದರ್ಭ ಮಾತನಾಡಿದ ಅಭ್ಯರ್ಥಿ ಕೆ.ಪಿ.ಬೋಪಣ್ಣ, ಎಎಪಿ ಪಕ್ಷದಿಂದ ಜಿಲ್ಲೆಯ ಉದ್ದ ಅಗಲಕ್ಕೂ ಒಂದು ಸುತ್ತಿನ ಪ್ರಚಾರ ಕಾರ್ಯ ಮುಗಿದಿದ್ದು, ಬಾರಿ ಜನ ಬೆಂಬಲ ವ್ಯಕ್ತವಾಗಿದೆ ಹಾಗೂ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಪ್ರಮುಖರಾದ ಮುರಳಿ, ಕಲ್ಯಾಣಿ, ಶಿಲ್ಪ ಬೋಪಣ್ಣ, ಥೋಮಸ್ ಮತ್ತು ಇತರರು ಹಾಜರಿದ್ದರು.

Read More

ಮಡಿಕೇರಿ ಮೇ 2 : ಜಿಲ್ಲಾಡಳಿತ, ಸ್ವೀಪ್ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಕಾರದಲ್ಲಿ ಮೇ, 6 ರಂದು ಸಂಜೆ 6.30 ಗಂಟೆಗೆ ಕುಶಾಲನಗರದ ಗಣಪತಿ ದೇವಸ್ಥಾನದಿಂದ ‘ಕ್ಯಾಂಡಲ್ ದೀಪದೊಂದಿಗೆ’ ಜಾಥ ನಡೆಯಲಿದೆ. ಗಣಪತಿ ದೇವಸ್ಥಾನದಿಂದ ಟೌನ್ ಕಾಲೋನಿ ಮತ್ತು ರಥ ಬೀದಿ ಮೂಲಕ ಬಸ್ ನಿಲ್ದಾಣಕ್ಕೆ ಜಾಥ ತಲುಪಲಿದೆ. ಜಾಥದಲ್ಲಿ ಪಾಲ್ಗೊಳ್ಳುವವರು ಕ್ಯಾಂಡಲ್ ಅಥವಾ ಮಣ್ಣಿನ ದೀಪವನ್ನು ತೆಗೆದುಕೊಂಡು ಬರಬೇಕು. ಜಾಥಾದಲ್ಲಿ ವಿವಿಧ ಸಂಘ ಸಂಸ್ಥೆಗಳು ಪಾಲ್ಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 2 : ನಿವೇಶನದ ಹಕ್ಕುಪತ್ರ ಮತ್ತು ಮೂಲಭೂತ ಸೌಲಭ್ಯಗಳಿಗಾಗಿ ಒತ್ತಾಯಿಸಿ ಹೊದ್ದೂರು ಗ್ರಾ.ಪಂ ವ್ಯಾಪ್ತಿಯ ಪಾಲೇಮಾಡು ಕಾನ್ಶಿರಾಂ ನಗರದ ನಿವಾಸಿಗಳು ಕಳೆದ 36 ದಿನಗಳಿಂದ ನಡೆಸುತ್ತಿದ್ದ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಸೂಕ್ತ ಭರವಸೆ ನೀಡಿರುವ ಹಿನ್ನೆಲೆ ಧರಣಿಯಿಂದ ಹಿಂದೆ ಸರಿದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಅವರ ಸಲಹೆಯಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್, ಗ್ರಾ.ಪಂ ಅಧ್ಯಕ್ಷರಾದ ಕುಸುಮಾವತಿ ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಮೊಣ್ಣಪ್ಪ ಅವರುಗಳು ಸ್ಥಳಕ್ಕೆ ಭೇಟಿ ನೀಡಿ ಧರಣಿ ನಿರತರೊಂದಿಗೆ ಸಮಾಲೋಚಿಸಿದರು. ಚುನಾವಣೆ ಬಳಿಕ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ಚುನಾವಣಾ ಬಹಿಷ್ಕಾರದ ನಿರ್ಧಾರ ಕೈಬಿಡುವಂತೆ ಮನವೊಲಿಸಿದರು. ಧರಣಿ ನಿರತರು ಮಾತನಾಡಿ ಕಳೆದ 36 ದಿನಗಳಿಂದ 260…

Read More

ಮಡಿಕೇರಿ ಮೇ 2 : ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಹಾಗೂ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮೇ, 05 ರಂದು ಮಡಿಕೇರಿ ನಗರದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ಜಾಥ ನಡೆಯಲಿದೆ ಎಂದು ಜಿ.ಪಂ.ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ. ಮೇ, 05 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ನಗರದ ಎ.ವಿ.ಶಾಲೆ ಬಳಿಯಿಂದ ಮತದಾನದ ಮಹತ್ವ ಸಾರುವ ಸಂದೇಶದೊಂದಿಗೆ ಜಾಥ ಆರಂಭವಾಗಲಿದೆ. ಮಡಿಕೇರಿ ಮಾರುಕಟ್ಟೆ, ಮಹದೇವಪೇಟೆಗಾಗಿ ಸಾಗಿ ಹಳೆ ಬಸ್ ನಿಲ್ದಾಣದಲ್ಲಿ ಜಾಥ ಸಮಾಪನಗೊಳ್ಳಲಿದೆ. ಈ ಜಾಥಾದಲ್ಲಿ ಎಲ್ಲಾ ಸಂಘ ಸಂಸ್ಥೆಗಳು, ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು ಜಾಥವನ್ನು ಯಶಸ್ವಿಗೊಳಿಸುವಂತೆ ಜಿ.ಪಂ. ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಹಾಗೂ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಕೋರಿದ್ದಾರೆ.

Read More

ಮಡಿಕೇರಿ ಮೇ 2 : ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ರ ಮತದಾನ ಮೇ 10 ರಂದು ನಡೆಯಲಿದ್ದು, ಕರ್ನಾಟಕದಲ್ಲಿ ಚುನಾವಣೆಯನ್ನು ‘ಪ್ರಜಾಪ್ರಭುತ್ವದ ಹಬ್ಬದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಾಹಕರಿಗಾಗಿ ಮತದಾನದ ವಿಷಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ ನಡೆಯಲಿದೆ. ಲೋಕಸಭಾ ಚುನಾವಣೆ-2019 ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ್ಯ ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿಸುವುದರ ಜೊತೆಗೆ ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ನಿಮಿತ್ತ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಲಾಗುತ್ತಿದೆ.…

Read More

ನಾಪೋಕ್ಲು ಮೇ  1 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳ (ಜೆಡಿಎಸ್ )ಅಭ್ಯರ್ಥಿ ಎಂ. ಎ. ಮನ್ಸೂರ್ ಆಲಿ ನಾಪೋಕ್ಲುವಿನಲ್ಲಿ ರೋಡ್ ಶೋ ನಡೆಸಿ  ಮತಯಾಚಿಸಿದರು. ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ನೇತೃತ್ವದಲ್ಲಿ  ಪಟ್ಟಣದಲ್ಲಿರುವ ಜೆಡಿಎಸ್ ಕಚೇರಿಯಿಂದ ಜೆಡಿಎಸ್  ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಜೈ ಘೋಷಣೆಗಳೊಂದಿಗೆ ಪಟ್ಟಣದಲ್ಲಿ ರೋಡ್ ಶೋ ನಡೆಸಿದರು. ನಂತರ  ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ತೆರಳಿ ವ್ಯಾಪಾರಿಗಳಲ್ಲಿ ಮತ್ತು ಮನೆಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ ಗಣೇಶ್ ಮಾತನಾಡಿ, 2018ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಕೊಡಗಿನ ಜನರು ಮನೆಮಠಗಳನ್ನು ಕಳೆದು ಸಂಕಷ್ಟಕ್ಕೆ ಸಿಲುಕಿದ ಸಂದರ್ಭ ಕುಮಾರಸ್ವಮಿ ಅವರು ಹಲವು ಬಾರಿ ಜಿಲ್ಲೆಗೆ ಭೇಟಿ ನೀಡಿ ಜನರ ಕಣ್ಣೀರನ್ನು ಹೊರೆಸುವ ಕಾರ್ಯ ಮಾಡಿದ್ದಾರೆ. ಜಿಲ್ಲೆಯ ಜಂಬೂರು, ಗಾಳಿಬಿಡಿನಲ್ಲಿ ಮನೆಗಳನ್ನು ಕಳೆದುಕೊಂಡವರಿಗೆ ಮನೆಗಳನ್ನು ನಿರ್ಮಿಸುವ ಕೆಲಸವನ್ನು ಮಾಡಿಕೊಟ್ಟಿದ್ದಾರೆ. ಅದರಂತೆ ಪರಿಹಾರವನ್ನು ನೀಡಿದ್ದಾರೆ. ಇದನ್ನು ಕೊಡಗಿನ ಜನರು ಮರೆಯಲು ಸಾಧ್ಯವಿಲ್ಲ ಎಂದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ…

Read More

ಮಡಿಕೇರಿ ಮೇ 2 :  ಕೊಡಗು ಹೆಗ್ಗಡೆ ಸಮಾಜದ ವತಿಯಿಂದ  ನಡೆದ  ಸೀನಿಯರ್ ಕ್ರಿಕೆಟ್ ನಲ್ಲಿ ಹಾಲುಗುಂದ ತಂಡ ಚಾಂಪಿಯನ್ ಪಟ್ಟ ಪಡೆದುಕೊಂಡಿದೆ. ಮೂರ್ನಾಡುವಿನ ಬಾಚಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ   ಕಳೆದ ಮೂರು ದಿನಗಳಿಂದ ನಡೆದ ಕ್ರೀಡಾಕೂಟದ ಸೀನಿಯರ್ ಕ್ರಿಕೆಟ್ ನಲ್ಲಿ ಹಾಲುಗುಂದ ತಂಡವು ಪಾರಣೆ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟವನ್ನು ಆಲಂಕರಿಸಿತು. ಮೊದಲು ಬ್ಯಾಟ್ ಮಾಡಿದ ಹಾಲುಗುಂದ ತಂಡವು ಶ್ರೇಯಸ್  ಅರ್ಧಶತಕ ಹಾಗೂ  ಅವಿನಾಶ್  ಉಪಯುಕ್ತ 35 ರನ್ನುಗಳ ನೆರವಿನಿಂದ ನಿಗದಿತ 8 ಓವರ್ ಗಳಲ್ಲಿ 8 ವಿಕೇಟ್‌ ನಷ್ಟಕ್ಕೆ 114 ರನ್ನು ಗಳ ಗುರಿಯನ್ನು ನೀಡಿತು. ಪಾರಣೆ ತಂಡದ ಅಕ್ಷಿತ್ 5 ವಿಕೇಟ್‌ ಪಡೆದರು.  ಗುರಿ ಬೆನ್ನತ್ತಿದ ಪಾರಣೆ ತಂಡವು 53 ರನ್ನು ಗಳಿಸುವಷ್ಟೇ ಶಕ್ತರಾಗಿ ಸೋಲು ಒಪ್ಪಿಕೊಂಡಿತು. ಉತ್ತಮ ಬ್ಯಾಟ್‌ಮ್ಯಾನ್‌, ಪಂದ್ಯ ಪುರುಷೋತ್ತಮ ಮತ್ತು ಸರಣಿ ಪುರುಷೋತ್ತಮ ಪ್ರಶಸ್ತಿಯನ್ನು ಶ್ರೇಯಸ್,  ಉತ್ತಮ ಬೌಲರ್ ಪ್ರಶಸ್ತಿಯನ್ನು ಪಾರಣೆ ತಂಡದ ಅಕ್ಷತ್ ಪಡೆದು ಕೊಂಡರು. ಜೂನಿಯರ್ ವಿಭಾಗದಲ್ಲಿ ಪೊನ್ನಂಪೇಟೆ ತಂಡವು ಬೆಟ್ಟಗೇರಿ…

Read More