ವಿರಾಜಪೇಟೆ, NEWS DESK ಅ.05: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನಾಚರಣೆಯನ್ನು ವಿರಾಜಪೇಟೆ ಪುರಸಭೆ ಕಚೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ಪಟ್ಟಚೆರವಂಡ ಕೆ. ನಾಚಪ್ಪ ಅವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ನಂತರ ಮಾತನಾಡಿದ ಅವರು, ಗಾಂಧೀಜಿಯವರ ಬದುಕು, ಹೋರಾಟ ಹಾಗೂ ಆದರ್ಶಗಳನ್ನು ಸ್ಮರಿಸಿದರು. “ಸತ್ಯ ಮತ್ತು ಅಹಿಂಸೆ ಕೇವಲ ಪದಗಳಲ್ಲ. ಅವುಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗಾಂಧೀಜಿಯವರು ಕಂಡ ರಾಮರಾಜ್ಯ ಎಂದರೆ ಎಲ್ಲರಿಗೂ ಸಮಾನತೆ, ನೆಮ್ಮದಿ ಹಾಗೂ ನ್ಯಾಯ ದೊರೆಯುವ ಸಮಾಜ. ಇಂದಿನ ಯುವಪೀಳಿಗೆ ಗಾಂಧೀಜಿಯವರ ಸರಳತೆ, ಸ್ವಾಭಿಮಾನ ಮತ್ತು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಅಗತ್ಯ,” ಎಂದು ಹೇಳಿದರು. ಸ್ವಚ್ಛತೆಯೇ ಸೇವೆ ಗಾಂಧೀಜಿಯವರ ಕನಸಿನ ಸ್ವಚ್ಛ ಭಾರತ ನಿರ್ಮಾಣದಲ್ಲಿ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು ಎಂದು ಕರೆ ನೀಡಿದ ನಾಚಪ್ಪ, “ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಅದು ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಜವಾಬ್ದಾರಿ. ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರೋಗಮುಕ್ತ ಸಮಾಜ…
ಲೇಖಕ: admin
ಸೋಮವಾರಪೇಟೆ, NEWS DESK ಅ.05: ಇಲ್ಲಿನ ಬೇಳೂರು ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ 121ನೇ ವರ್ಷದ ಕೂರ್ಗ್ ಓಪನ್ ಮತ್ತು ಹ್ಯಾಂಡಿಕ್ಯಾಪ್ ಗಾಲ್ಫ್ ಚಾಂಪಿಯನ್‌ಶಿಪ್ ಪಂದ್ಯಾಟ ಬೇಳೂರು ಗಾಲ್ಫ್ ಮೈದಾನದಲ್ಲಿ ಶುಕ್ರವಾರ ಹಾಗೂ ಶನಿವಾರ ನಡೆಯಿತು. ಪಂದ್ಯಾಟದಲ್ಲಿ ಒಟ್ಟು 84 ಮಂದಿ ಸ್ಪರ್ಧಾಳುಗಳು ಭಾಗವಹಿಸಿದ್ದರು. 2026ರ ಓಪನ್ ವಿಭಾಗದಲ್ಲಿ ಮಡಿಕೇರಿಯ ಎಚ್.ಎಲ್. ಸಂಜಯ್ ಪ್ರಥಮ ಹಾಗೂ ಚಿಕ್ಕಮಗಳೂರಿನ ಶ್ರೀನಿವಾಸ್ ಆರ್. ದ್ವಿತೀಯ ಸ್ಥಾನ ಪಡೆದರು. ಹ್ಯಾಂಡಿಕ್ಯಾಪ್ ವಿಭಾಗದಲ್ಲಿ ಸೋಮವಾರಪೇಟೆಯ ಎಂ.ಎ. ಶ್ರೀಕಾಂತ್ ಪ್ರಥಮ ಹಾಗೂ ಮಡಿಕೇರಿಯ ದೈವಿಕ್ ಸಂಜಯ್ ದ್ವಿತೀಯ ಸ್ಥಾನ ಗಳಿಸಿದರು. ಸ್ಟೇಬಲ್‌ಫೋರ್ಡ್ ಓಪನ್ ವಿಭಾಗದಲ್ಲಿ ವೀರಾಜಪೇಟೆಯ ಅಪ್ಪಣ್ಣ ಪ್ರಥಮ ಹಾಗೂ ಎನ್.ಎಸ್. ಅನಿಲ್ ದ್ವಿತೀಯ ಸ್ಥಾನ ಪಡೆದರು. ಸ್ಟೇಬಲ್‌ಫೋರ್ಡ್ ಹ್ಯಾಂಡಿಕ್ಯಾಪ್ ವಿಭಾಗದಲ್ಲಿ ಮೈಸೂರಿನ ನಂದನ್ ಕೆ. ಪ್ರಥಮ ಹಾಗೂ ಮೈಸೂರಿನ ಶಶಿಕುಮಾರ್ ದ್ವಿತೀಯ ಸ್ಥಾನ ಗಳಿಸಿದರು. ಡಬಲ್ಸ್ ವಿಭಾಗದಲ್ಲಿ ಚಿಕ್ಕಮಗಳೂರಿನ ಶ್ರೀನಿವಾಸ್ ಆರ್. ಮತ್ತು ಮಡಿಕೇರಿಯ ಸಿ.ಟಿ. ಮಂದಣ್ಣ ಜೋಡಿ ಪ್ರಥಮ ಸ್ಥಾನ ಪಡೆದರೆ, ಶಶಿಕುಮಾರ್ ಮತ್ತು ದೈವಿಕ್ ಸಂಜಯ್…
ನಾಪೋಕ್ಲು, NEWS DESK ಅ.05: ಕೊಡಗಿನ ಮೂಲನಿವಾಸಿಗಳ ವಿಶಿಷ್ಟ ಸಂಸ್ಕೃತಿ, ಉಡುಪು, ನೆಲ-ಜಲ, ದೇವರಕಾಡು ಹಾಗೂ ಶ್ರೀ ಇಗ್ಗುತ್ತಪ್ಪ ದೇವರು ನೆಲೆನಿಂತಿರುವ ಪವಿತ್ರ ಮಲ್ಮ ಬೆಟ್ಟವನ್ನು ಸಂರಕ್ಷಿಸುವ ಉದ್ದೇಶದಿಂದ ಅನಿವಾಸಿ ಭಾರತೀಯ ಬಲ್ಯಾಟಂಡ ಕವೇರ ಪೂಣಚ್ಚ ಅವರ ನೇತೃತ್ವದಲ್ಲಿ ‘ಕೊಡಗು ಶಕ್ತಿ ನಡ್ಪು’ ಬೃಹತ್ ಪಾದಯಾತ್ರೆ ಯಶಸ್ವಿಯಾಗಿ ನಡೆಯಿತು. ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ದೇಶ ತಕ್ಕರಾದ ಪರದಂಡ ಪ್ರಿನ್ಸ್ ಅವರ ವಿಶೇಷ ಪ್ರಾರ್ಥನೆ ಹಾಗೂ ತಾಯಿ ಕಾವೇರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಬಾಗಮಂಡಲ ಹಾಗೂ ಅಯ್ಯಂಗೇರಿ ಮಾರ್ಗವಾಗಿ ಸಾಗಿದ ಪಾದಯಾತ್ರೆಯನ್ನು ಪುಲಿಕೋಟು ಗ್ರಾಮದಲ್ಲಿ ಕರವಂಡ, ಪೆಬ್ಬಟ್ಟಿರ, ಮುಕ್ಕಾಟಿರ ಹಾಗೂ ಮಣವಟ್ಟಿರ ಕುಟುಂಬಸ್ಥರು ಆತ್ಮೀಯವಾಗಿ ಸ್ವಾಗತಿಸಿ ಆತಿಥ್ಯ ನೀಡಿದರು. ಬಳಿಕ ಪಾದಯಾತ್ರೆ ಪೇರೂರು ಶ್ರೀ ಇಗ್ಗುತ್ತಪ್ಪ ದೇವಾಲಯ ತಲುಪಿ ದರ್ಶನ ಹಾಗೂ ವಿಶೇಷ ಪ್ರಾರ್ಥನೆ ಸಲ್ಲಿಸಿತು. ನಂತರ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಕಾಲ್ನಡಿಗೆಯಲ್ಲಿ ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನ ತಲುಪುವ ಮೂಲಕ…
ಮಡಿಕೇರಿ NEWS DESK ಅ.4 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುರುಷ ಸಾಹಿತಿಗಳಿಗೆ ಮೀಸಲಾಗಿರುವ ಪ್ರತಿಷ್ಠಿತ **‘ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ’**ಗೆ ಜಿಲ್ಲೆಯ ಹಿರಿಯ ಸಾಹಿತಿ ಹಾಗೂ ವಕೀಲರಾದ ಬಾಳೆಯಡ ಕಿಶನ್ ಪೂವಯ್ಯ ಅವರು ರಚಿಸಿರುವ ‘ರಾಜಕೀಯ ಮತ್ತು ಪ್ರಕೃತಿ’ ಕೃತಿ ಆಯ್ಕೆಯಾಗಿದೆ. ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ದಿ. ಬಿ.ಎಸ್. ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಅವರ ಪುತ್ರರು ಸ್ಥಾಪಿಸಿರುವ ಈ ದತ್ತಿ ಪ್ರಶಸ್ತಿಯು ಪ್ರಸಕ್ತವಾಗಿ ಮೂರನೇ ಪ್ರಶಸ್ತಿಯಾಗಿದೆ. ಪ್ರಶಸ್ತಿಗಾಗಿ ಜಿಲ್ಲೆಯ ಪುರುಷ ಬರಹಗಾರರು ಸಲ್ಲಿಸಿದ್ದ ಕೃತಿಗಳನ್ನು ಜಿಲ್ಲೆಯ ಮೂವರು ಹಿರಿಯ ಸಾಹಿತಿಗಳು ಪ್ರತ್ಯೇಕವಾಗಿ ಪರಿಶೀಲಿಸಿ ಅಂಕಗಳನ್ನು ನೀಡಿದ್ದರು. ತೀರ್ಪುಗಾರರು ನೀಡಿದ ಅಂಕಗಳನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಮಿತಿ ಒಟ್ಟುಗೂಡಿಸಿದಾಗ, ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿ ಅತಿ ಹೆಚ್ಚು ಅಂಕಗಳನ್ನು ಪಡೆದು ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ. ವಕೀಲರು, ನೋಟರಿ…
ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ’ ಅಡಿಯಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪೂರ್ಣ ಉಚಿತ ಆನ್‌ಲೈನ್ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಈ ಯೋಜನೆ ಸಹಕಾರಿಯಾಗಲಿದೆ. ಯಾವುದೇ ಶುಲ್ಕವಿಲ್ಲದೆ ಅನುಭವಿ ಹಾಗೂ ಪರಿಣಿತ ಉಪನ್ಯಾಸಕರಿಂದ ಆನ್‌ಲೈನ್ ತರಗತಿಗಳನ್ನು ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಯಾವ ಪರೀಕ್ಷೆಗಳಿಗೆ ತರಬೇತಿ? KPSC ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್-ಎ ಮತ್ತು ಗ್ರೂಪ್-ಬಿ), FDA, SDA, PDO, PSI, ಪೊಲೀಸ್ ಕಾನ್‌ಸ್ಟೇಬಲ್, VAO ಹಾಗೂ ವಿವಿಧ ಗ್ರೂಪ್-ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ತರಬೇತಿಯಲ್ಲಿ ಏನೆಲ್ಲಾ ಸೌಲಭ್ಯ? ಅಭ್ಯರ್ಥಿಗಳಿಗೆ ಗುಣಮಟ್ಟದ ಆನ್‌ಲೈನ್ ತರಗತಿಗಳ ಜೊತೆಗೆ ಅಧ್ಯಯನ ಸಾಮಗ್ರಿ ಹಾಗೂ ಅಣಕು ಪರೀಕ್ಷೆಗಳ (Mock Tests) ಸೌಲಭ್ಯವೂ ಲಭ್ಯವಿರಲಿದೆ. ಪ್ರತಿಯೊಬ್ಬ ಅಭ್ಯರ್ಥಿಯು ತಮ್ಮ ಆಸಕ್ತಿಗೆ ಅನುಗುಣವಾಗಿ ಗರಿಷ್ಠ ಮೂರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು…
ಬೆಂಗಳೂರು NEWS DESK ಅ.4 : ಕೊಡಗು ಗೌಡ ಸಮಾಜದ ವತಿಯಿಂದ ಬೆಂಗಳೂರಿನ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕೈಲ್ ಮುಹೂರ್ತ ಜಂಬರ–2026 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. ಕೊಡಗಿನ ಸಾಂಪ್ರದಾಯಿಕ ಆಚರಣೆಗಳು ಹಾಗೂ ಸಂಸ್ಕೃತಿಯ ಪ್ರತೀಕವಾಗಿರುವ ಕೈಲ್ ಮುಹೂರ್ತ ಜಂಬರ ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರು, ಗಣ್ಯರು ಹಾಗೂ ಸಮುದಾಯದ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭ ಕೊಡಗಿನ ಸಂಸ್ಕೃತಿ, ಪರಂಪರೆ ಮತ್ತು ಜನಜೀವನದೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಇಂತಹ ಆಚರಣೆಗಳನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಅಗತ್ಯದ ಕುರಿತು ಅತಿಥಿಗಳು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಮಂತರ್ ಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕೊಡಗು ಗೌಡ ಸಮಾಜದ ಪದಾಧಿಕಾರಿಗಳು, ಮುಖಂಡರು ಹಾಗೂ ಬೆಂಗಳೂರಿನಲ್ಲಿ ನೆಲೆಸಿರುವ ಕೊಡಗಿನ ವಿವಿಧ ಭಾಗಗಳ ಜನರು ಭಾಗವಹಿಸಿ ಕೈಲ್ ಮುಹೂರ್ತ ಜಂಬರದ ಸಂಭ್ರಮವನ್ನು ಹಂಚಿಕೊಂಡರು.
ಮಡಿಕೇರಿ NEWS DESK ಅ.4 : ಮಡಿಕೇರಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ 2026-27ನೇ ಸಾಲಿನ ರೋಟರೆಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭ ನಡೆಯಿತು. ವಿದ್ಯಾರ್ಥಿನಿ ಅಶಿತಾ ಅಧ್ಯಕ್ಷೆಯಾಗಿ ಹಾಗೂ ಭೂಮಿಕಾ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ಹಸಿರು ಗಿಡಗಳಿಗೆ ನೀರುಣಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಲಾಯಿತು. ರೋಟರಿ ಮಡಿಕೇರಿ ವುಡ್ಸ್ ಅಧ್ಯಕ್ಷೆ ರೊ. ಪ್ರಮೀಳಾ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರೋಟರಿ ಜಿಲ್ಲೆ 3181ರ ವಲಯ 6ರ ವಲಯ ಸೇನಾನಿ ಹಾಗೂ ಪದಗ್ರಹಣಾಧಿಕಾರಿ ರೋ.ವಸಂತ್ ಕುಮಾರ್ ಕೆ. ಅವರು ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಮಾತನಾಡಿದ ಅವರು, “ವಿಶಾಲವಾದ ಮರದಂತಿರುವ ರೋಟರಿ ಸಂಸ್ಥೆಯ ಒಂದು ಸಣ್ಣ ಚಿಗುರೇ ರೋಟರೆಕ್ಟ್ ಕ್ಲಬ್. ವಿದ್ಯಾರ್ಥಿಗಳು ರೋಟರೆಕ್ಟ್ ಕ್ಲಬ್ ಸೇರುವ ಮೂಲಕ ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು, ಮುಂದಿನ ದಿನಗಳಲ್ಲಿ ರೋಟರಿಯನ್‌ಗಳಾಗಿ ಗುರುತಿಸಿಕೊಳ್ಳಬೇಕು” ಎಂದು ಕರೆ ನೀಡಿದರು. ಅವಕಾಶಕ್ಕಾಗಿ ಕಾಯದೆ, ತಾವೇ ಅವಕಾಶಗಳನ್ನು ಸೃಷ್ಟಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ರೋಟರೆಕ್ಟರ್‌ಗಳಿಗೆ ಸಲಹೆ…
ಮಡಿಕೇರಿ NEWS DESK ಅ.4 : ದಸರಾ ಸುವರ್ಣ ಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಹಲವಾರು ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಕೈಗೊಂಡಿರುವ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಇಂದು ಸ್ವಚ್ಛತಾ ಶ್ರಮದಾನ ನಡೆಸಿತು. ಶ್ರೀ ಕೋಟೆ ಮಹಾಗಣಪತಿ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ವಯಂಸೇವಕರು ಸ್ವಚ್ಛತಾ ಕಾರ್ಯ ನಡೆಸಿದರು. ದಸರಾ ಸಂದರ್ಭದಲ್ಲಿ ನಗರವನ್ನು ಸ್ವಚ್ಛವಾಗಿಡುವುದರ ಜೊತೆಗೆ ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪದಾಧಿಕಾರಿಗಳು ತಿಳಿಸಿದರು. *ಬಟ್ಟೆ ವಿತರಣೆ* ಇದೇ ಸಂದರ್ಭ ಶ್ರಮಿಕ ಜೀವಿಗಳಾದ ಮಡಿಕೇರಿ ನಗರಸಭೆಯ ಪೌರ ಕಾರ್ಮಿಕರಿಗೆ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಬಟ್ಟೆಗಳನ್ನು ವಿತರಿಸಿ ಗೌರವಿಸಿತು. ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪೌರ ಕಾರ್ಮಿಕರು ನಿಸ್ವಾರ್ಥದಿಂದ ಶ್ರಮಿಸುತ್ತಿರುವ ಕುರಿತು ಪದಾಧಿಕಾರಿಗಳು ಶ್ಲಾಘಿಸಿದರು. ಇಂದಿನ ಕಾರ್ಯಕ್ರಮಕ್ಕೆ ನಗರದ ಜ್ಞಾನದೀಪ ಮಹಿಳಾ ಸಂಘ ಹಾಗೂ ನಗರಸಭೆ ಸಹಕಾರ ನೀಡಿತು. ಇದಕ್ಕೂ ಮೊದಲು ಶ್ರೀ ಕೋಟೆ ಮಹಾಗಣಪತಿಗೆ ವಿಶೇಷ…
ಮಡಿಕೇರಿ ಅ.3 NEWS DESK : ಈ ಬಾರಿ ಹಿಂದೆಂದೂ ಕೇಳರಿಯದ ರೀತಿಯ ಸೂಪರ್ ಎಲ್‌ನಿನೊ ಉಂಟಾಗಿದ್ದು, ಮುಂದಿನ ಎರಡು ತಿಂಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆಯಿದೆ ಎಂದು ಸಚಿವ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವ ಮೂಲಕ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ದೆಹಲಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ತಜ್ಞರು ಈ ಕುರಿತು ಎಚ್ಚರಿಕೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಅಂತರ್ಜಲ ಮಟ್ಟ ಮತ್ತಷ್ಟು ಕುಸಿಯುವ ಸಾಧ್ಯತೆಯಿದ್ದು, ಪರಿಸ್ಥಿತಿ ನಿಯಂತ್ರಿಸಲಾಗದ ಮಟ್ಟಕ್ಕೆ ತಲುಪಿದರೆ ಆಹಾರ ಪದಾರ್ಥಗಳ ಬೆಲೆಗಳು ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ ಎಂದು ಸಚಿವರು ತಿಳಿಸಿದರು. ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದಿಂದ ವಾಪಸ್ ತೆರಳಿದ ಬಳಿಕ ಮುಖ್ಯಮಂತ್ರಿ ಅವರೊಂದಿಗೆ ಈ ಕುರಿತು ಚರ್ಚಿಸಲಾಗುವುದು. ಬಳಿಕ ಪರಿಸ್ಥಿತಿಗೆ ಸಂಬಂಧಿಸಿದಂತೆ ವಿವರವಾದ ಮಾಹಿತಿಯನ್ನು ನೀಡಲಾಗುವುದು ಎಂದು ಸಚಿವ ಪಿ.ಎಂ. ನರೇಂದ್ರಸ್ವಾಮಿ ಹೇಳಿದರು.
ಮಡಿಕೇರಿ ಅ.3 NEWS DESK : ಎಲ್ಲರೂ ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಉತ್ಸವ ಆಚರಿಸಿ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರು ಕೋರಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಶನಿವಾರ ನಡೆದ ಮಡಿಕೇರಿ, ಗೋಣಿಕೊಪ್ಪಲು ದಸರಾ ಹಾಗೂ ತಲಕಾವೇರಿ ಪವಿತ್ರ ತೀರ್ಥೋದ್ಭವ ಕುರಿತ ಸಭೆಯಲ್ಲಿ ಸಚಿವರು ಮಾತನಾಡಿದರು. ನಿಯಮಗಳನ್ನು ಸಡಿಲಿಸಿ ಎಂಬ ಬೇಡಿಕೆ ತಪ್ಪಲ್ಲ. ಆದರೆ, ಒಮ್ಮೆ ನಿಯಮಗಳನ್ನು ಸಡಿಲಿಸಿದರೆ ಮುಂದೆ ದಸರೆಯ ಸ್ವರೂಪವೇ ಬದಲಾಗಬಹುದು. ಹಾಗಾಗಿ, ನಿಯಮ ಮೀರದಂತೆ ಇತಿಮಿತಿಯಲ್ಲೇ ಉತ್ಸವ ಆಚರಿಸಿ ಎಂದು ಸಚಿವರು ಸಲಹೆ ನೀಡಿದರು. ದೇಶದ ಕಾನೂನು ಮತ್ತು ಸಂವಿಧಾನಕ್ಕೆ ಎಲ್ಲರೂ ತಲೆಬಾಗಲೆಬೇಕು, ಅವುಗಳ ಮಿತಿಯಲ್ಲಿ ಹಬ್ಬ ಆಚರಿಸಿ ಎಂದು ಹೇಳಿದರು. ರಾಜ್ಯದ ಎಲ್ಲೆಡೆ ಭೀಕರ ಬರ ಆವರಿಸಿದೆ. ಇಂತಹ ಪರಿಸ್ಥಿತಿ ಅವಲೋಕಿಸಬೇಕು, ಸರ್ಕಾರ ಹಿಂದಿನಂತೆಯೇ ದಸರಾ ಉತ್ಸವ ಆಚರಿಸಲು ಅಗತ್ಯ ಸಹಕಾರ ನೀಡಲಾಗುವುದು ಎಂದರು. ರಸ್ತೆ ದುರಸ್ತಿ ಕಾರ್ಯವನ್ನು ಶೀಘ್ರದಲ್ಲೇ ಮುಗಿಸಬೇಕು, ಸೆಸ್ಕ್‌ನವರು ಮಂಟಪಗಳು ಸಾಗುವ ಮಾರ್ಗದಲ್ಲಿ ಎಚ್ಚರಿಕೆ ವಹಿಸಿ, ಮುನ್ನಚ್ಚರಿಕಾ…






