ಪಾಲಿಬೆಟ್ಟ, NEWS DESK ಸೆ.21: ಶ್ರೀ ಗೌರಿ-ಗಣೇಶೋತ್ಸವದ ಪ್ರಯುಕ್ತ 36ನೇ ವರ್ಷದ ಕಾವೇರಿ ಗಣೇಶೋತ್ಸವ ಸಮಿತಿಯ ವತಿಯಿಂದ ಸೆಪ್ಟೆಂಬರ್ 18ರಂದು ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಪಾಲ್ಗೊಂಡ ಎಸ್.ಎಸ್. ದಿವಿತ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಎಸ್.ಎಸ್. ದಿವಿತ್ ಅವರು ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯ ಶಿವರಾಜ್ ಹಾಗೂ ಭವ್ಯ ಅವರ ಪುತ್ರರಾಗಿದ್ದು, ಪಾಲಿಬೆಟ್ಟದ ಲೂಡ್ಸ್ ಹಿಲ್ ಕಾನ್ವೆಂಟ್‌ನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಲೇಖಕ: admin
ಮಡಿಕೇರಿ, ಸೆ.21 NEWS DESK : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಡಿಕೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸೆಂಟ್ ಮೇರೀಸ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ವರ್ಷ ವಿ.ಆರ್. ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಈ ಸಂದರ್ಭ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶ್ರೀನಿವಾಸ್, ನಿಕಟಪೂರ್ವ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀನಿವಾಸ್, ಸಂದೇಶ್, ತೇಜಸ್ ಹಾಗೂ ಶ್ಯಾಮಿಲಿ ಸೇರಿದಂತೆ ಕರಾಟೆ ವಿಭಾಗದ ಪ್ರಮುಖರು ಇದ್ದರು. ಕರಾಟೆ ತರಬೇತುದಾರರಾದ ಮುಕೇಶ್, ಅಂಕಿತ್, ಅಕ್ಷಿತ್ ಅವರಲ್ಲಿ ತರಬೇತಿ ಪಡೆದಿದ್ದಾರೆ. ವಿ.ಆರ್.ವರ್ಷ ಇಬ್ನಿವಳವಾಡಿ ಗ್ರಾಮದ ವಿ.ಎಂ.ರವಿ, ಪಿ.ಕೆ.ಶೈಲಜಾ ದಂಪತಿಯ ಪುತ್ರಿ.
ಪೊನ್ನಂಪೇಟೆ ಸೆ.21 NEWS DESK : ಸಾಯಿ ಶಂಕರ್ ಕಾಲೇಜಿನಲ್ಲಿ ನಡೆದ ಪೊನ್ನಂಪೇಟೆ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಸರ್ವದೈವತ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದೆ. ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡಿದ್ದರು.
ಮಡಿಕೇರಿ ಸೆ.21 NEWS DESK : ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹುಳಗೋಳ ಗ್ರಾಮದ ದಿವಂಗತ ಹೊಸಳ್ಳಿ ಭೀಮರಾಯ ಅವರ ಕಿರಿಯ ಪುತ್ರರಾದ ಕಾಂತಪ್ಪ ಅವರು ರಸಾಯನಶಾಸ್ತ್ರ ವಿಭಾಗದಲ್ಲಿ ಮಂಡಿಸಿದ ಪಿಎಚ್.ಡಿ. ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ, ಘಟಕ ಕಾಲೇಜಾದ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾದ ಕಾಂತಪ್ಪ ಅವರು ಮಂಡಿಸಿದ “A Voltammetric Determination of Some Electroactive Molecules Using Carbon-Based Electrodes, ಎಂಬ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿ.ಎಚ್.ಡಿ. ಪದವಿ ನೀಡಿದೆ. ಇವರು ರಸಾಯನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಜೆ.ಜಿ.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ನಡೆಸಿದ್ದಾರೆ.
ಮಡಿಕೇರಿ, ಸೆ.21 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯ ಆಂತರಿಕ ಗುಣಮಟ್ಟ ಭರವಸೆ ಕೋಶದ (IQAC) ವತಿಯಿಂದ ಭಾರತ್ ಕೇರ್ಸ್ ಸಂಸ್ಥೆ, ಸಿಎಸ್‌ಆರ್‌ಬಾಕ್ಸ್, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಹಾಗೂ ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯ (DTE) ಸಹಯೋಗದಲ್ಲಿ ‘ಹನಿವೆಲ್ ಟೆಕ್ನಾಲಜೀಸ್ ಫ್ಯೂಚರ್ ಸ್ಕಿಲ್ಸ್ ಎಡ್ಜ್ ಪ್ರೋಗ್ರಾಂ – ಕೃತಕ ಬುದ್ಧಿಮತ್ತೆ ಮತ್ತು ಸೈಬರ್ ಸುರಕ್ಷತೆ’ ಕುರಿತು ಓರಿಯಂಟೇಶನ್ ಕಾರ್ಯಕ್ರಮವನ್ನು ಸೆ.18ರಂದು ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ. ವಹಿಸಿದ್ದರು. ಭಾರತ್ ಕೇರ್ಸ್ ಸಂಸ್ಥೆ, ಸಿಎಸ್‌ಆರ್‌ಬಾಕ್ಸ್‌ನ ಹಿರಿಯ ಸಹಭಾಗಿತ್ವ ಸಹಯೋಗಿ ಶ್ರೀ ಸುಬ್ರಮಣಿ ಪಿ.ವಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕೃತಕ ಬುದ್ಧಿಮತ್ತೆ (AI) ಮತ್ತು ಸೈಬರ್ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಮಾತನಾಡಿ,…
ಮಡಿಕೇರಿ ಸೆ.21 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು-ಮಡಿಕೇರಿ, ಔಟ್‍ಲಾವೆಡ್ ಇಂಡಿಯಾ ಫೌಂಡೇಷನ್ ಮತ್ತು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಎಸ್.ಬಾಗಡೆ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ, ಮಾತನಾಡಿ ಹಿಂದಿನ ಕಾಲದಲ್ಲಿ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭವಿದ್ದರೂ ಗಂಡಸರು ಭಾಗಿಯಾಗುತ್ತಿದ್ದರು. ಆದರೆ ಇಂದು ಬದಲಾಗಿದೆ. ಮಹಿಳೆಯರಿಗೆ ನೀಡಿದ ಅವಕಾಶ ಮತ್ತು ಕಾನೂನು ಸೌಲಭ್ಯ ಪಡೆಯುವ ಮೂಲಕ ಸ್ವಾವಲಂಬಿ, ಸದೃಢವಾಗಿ ಸಬಲರಾಗುತ್ತಿರುವುದು ಸಮಾಜದಲ್ಲಿ ಬದಲಾವಣೆಗೆ ಪೂರಕ ಎಂದರು. ಮಹಿಳೆಯೊಬ್ಬರು ಶಿಕ್ಷಣ ಪಡೆದರೆ ಇಡೀ ಕುಟುಂಬವೇ ಶಿಕ್ಷಣವಂತರಾಗುತ್ತಾರೆ. ಕಾನೂನಿನ ಅರಿವು, ಸರ್ಕಾರದ ಸೌಲಭ್ಯದ ಬಗ್ಗೆ ತಿಳಿದು ಇಂದು ಮನೆಯವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದರು. ಇತ್ತೀಚಿನ ದಿನಗಳಲ್ಲಿ…
ವಿರಾಜಪೇಟೆ, NEWS DESK ಸೆ.21: ಶ್ರೀ ಗೌರಿ-ಗಣೇಶ ಉತ್ಸವದ ಅಂಗವಾಗಿ ವಿರಾಜಪೇಟೆ ನಗರದಲ್ಲಿ ಸೆಪ್ಟೆಂಬರ್ 25ರಂದು ಗಣೇಶ ಮಂಟಪಗಳ ಮೆರವಣಿಗೆ ಹಾಗೂ ಸೆಪ್ಟೆಂಬರ್ 26ರಂದು ಬೆಳಿಗ್ಗೆ ಗೌರಿಕೆರೆಯಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ನಡೆಯಲಿದೆ. ಉತ್ಸವದಲ್ಲಿ ಸುಮಾರು 20ರಿಂದ 25 ಸಾವಿರ ಮಂದಿ ಸಾರ್ವಜನಿಕರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಜನಸ್ತೋಮ ಹಾಗೂ ಗಣೇಶ ಮಂಟಪಗಳ ಸಂಚಾರ ಇರುವ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಆದೇಶದಂತೆ ಸೆ.25ರ ಮಧ್ಯಾಹ್ನ 2 ಗಂಟೆಯಿಂದ ಸೆ.26ರ ಬೆಳಿಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರದ ಒಳಭಾಗದಲ್ಲಿ ವಾಹನ ಸಂಚಾರ ಮತ್ತು ನಿಲುಗಡೆಗೆ ನಿರ್ಬಂಧ ವಿಧಿಸಲಾಗಿದೆ. ಪ್ರಮುಖ ಮಾರ್ಗ ಬದಲಾವಣೆಗಳು ಪೆರುಂಬಾಡಿ ಕಡೆಯಿಂದ ಬರುವ ವಾಹನಗಳು ಕೀರ್ತಿ ರೆಸ್ಟೋರೆಂಟ್ ಮುಂಭಾಗದಿಂದ ಅರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ಮಾತ್ರ ನಿಲುಗಡೆ ಮಾಡಬೇಕು. ಮಾಕುಟ್ಟ ಮೂಲಕ ಗೋಣಿಕೊಪ್ಪ ಅಥವಾ ಸಿದ್ದಾಪುರ…
ಸೋಮವಾರಪೇಟೆ, NEWS DESK ಸೆ.21: ತಾಲೂಕು ಹಿಂದೂ ಮಲಯಾಳ ಸಮಾಜದ ವತಿಯಿಂದ ಪಟ್ಟಣದ ಜಾನಕಿ ಸಭಾಂಗಣದಲ್ಲಿ ಓಣಂ ಉತ್ಸವ ಹಾಗೂ ಸಂಘದ ದಶಮಾನೋತ್ಸವ ಸಮಾರಂಭ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿ ಮಾತನಾಡಿ, ಹಬ್ಬಾಚರಣೆಗಳು ಸಾಮರಸ್ಯದ ಸಂಕೇತವಾಗಿದ್ದು, ಸಾಮೂಹಿಕ ಆಚರಣೆಗಳು ಸಂಭ್ರಮವನ್ನು ಹೆಚ್ಚಿಸುತ್ತವೆ. ಹಿಂದೂ ಮಲಯಾಳ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂದು ಕರೆ ನೀಡಿದ ಅವರು, ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಗುರುವಾಯೂರು ಹಾಗೂ ಪರಶಿನಕಡವು ಕ್ಷೇತ್ರಗಳಿಗೆ ಕೊಡಗಿನಿಂದ ಬಸ್ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಎರ್ನಾಕುಲಂ ಶಿವಗಿರಿನಂದ ಮಠದ ಶ್ರೀ ಶಿವಸ್ವರೂಪಾನಂದ ಸ್ವಾಮೀಜಿ ಮಾತನಾಡಿ, ಮಕ್ಕಳಿಗೆ ಮನೆಯಿಂದಲೇ ಉತ್ತಮ ಸಂಸ್ಕಾರ ಕಲಿಸಬೇಕು. ಧಾರ್ಮಿಕತೆಯೊಂದಿಗೆ ಮಕ್ಕಳು ಬೆಳೆಯುವಂತೆ ನೋಡಿಕೊಳ್ಳಬೇಕು ಹಾಗೂ ದುಶ್ಚಟಗಳಿಂದ ದೂರವಿರಿಸಬೇಕು. ಸಮುದಾಯದ ಹೆಣ್ಣುಮಕ್ಕಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ವಿವಾಹ ಸಂದರ್ಭದಲ್ಲಿ ಮತಾಂತರ ಅಥವಾ…
ಸೋಮವಾರಪೇಟೆ, NEWS DESK ಸೆ.21: ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಯುವ ಘಟಕ ಹಾಗೂ ಸೋಮವಾರಪೇಟೆ ನಗರ ಘಟಕದ ವತಿಯಿಂದ ಸಂಘಟನೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಸಂಘಟನೆಯ ಯುವ ಘಟಕದ ಜಿಲ್ಲಾಧ್ಯಕ್ಷ ವಸಂತ್, ನಗರಾಧ್ಯಕ್ಷ ಮಂಜುನಾಥ್, ತಾಲೂಕು ಯುವ ಘಟಕದ ಅಧ್ಯಕ್ಷ ಗಣೇಶ್, ಜಿಲ್ಲಾ ಉಪಾಧ್ಯಕ್ಷ ಶೇಖರ್, ಕರವೇ ವಿವಿಧ ಘಟಕಗಳ ಪದಾಧಿಕಾರಿಗಳಾದ ಕೆ.ಪಿ. ರವೀಶ್, ಮಹಮ್ಮದ್ ಬೇಟು, ಲತಾ, ಸುಮತಿ, ಸಚಿನ್, ಶಿವಪ್ಪ ಸೇರಿದಂತೆ ಇತರರು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ, ಶೀಘ್ರ ಚೇತರಿಕೆಗೆ ಹಾರೈಸಿದರು.
ಸೋಮವಾರಪೇಟೆ, NEWS DESK ಸೆ.21: ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ ₹1.23 ಕೋಟಿ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.25ರಷ್ಟು ಲಾಭಾಂಶ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಎಸ್.ಬಿ. ಭರತ್ ಕುಮಾರ್ ತಿಳಿಸಿದರು. ಸಂಘದ ಆವರಣದಲ್ಲಿ ಭಾನುವಾರ ನಡೆದ ಮಹಾಸಭೆಯಲ್ಲಿ ಮಾತನಾಡಿದ ಅವರು, ಸಂಘದಲ್ಲಿ 2,791 ಸದಸ್ಯರಿದ್ದು, ₹61.44 ಕೋಟಿ ದುಡಿಯುವ ಬಂಡವಾಳ ಹೊಂದಿದೆ. 2026-27ನೇ ಸಾಲಿಗೆ ₹53.94 ಕೋಟಿ ಮೊತ್ತದ ಸಾಲವನ್ನು ಸದಸ್ಯರಿಗೆ ವಿತರಿಸಲಾಗಿದೆ ಎಂದು ಹೇಳಿದರು. 2024-25ನೇ ಸಾಲಿನಲ್ಲಿ ಉತ್ತಮ ಕಾರ್ಯನಿರ್ವಹಣೆಗಾಗಿ ಕೇಂದ್ರ ಬ್ಯಾಂಕ್‌ನಿಂದ ಸಂಘಕ್ಕೆ ತೃತೀಯ ಬಹುಮಾನ ದೊರೆತಿದೆ. ಇದೇ ಸಾಲಿನಲ್ಲಿ 505 ಮಂದಿ ಸದಸ್ಯರಿಗೆ ಶೇ.10.5ರ ಬಡ್ಡಿದರದಲ್ಲಿ ಜಾಮೀನು ಸಾಲ ನೀಡಲಾಗಿದ್ದು, ₹9 ಕೋಟಿ ಅಸಲು ಹಾಗೂ ₹67 ಲಕ್ಷ ಬಡ್ಡಿ ವಸೂಲಿ ಮಾಡಲಾಗಿದೆ. ಸದಸ್ಯರು ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡುತ್ತಿರುವುದರಿಂದ ಸಂಘದ ವ್ಯವಹಾರ ಉತ್ತಮವಾಗಿ ನಡೆಯುತ್ತಿದೆ ಎಂದು ಅವರು ಹೇಳಿದರು. ಕೆಸಿಸಿ ಸಾಲ ಪಡೆಯುವ ಸದಸ್ಯರು ತಮ್ಮ ಸ್ವಾಧೀನದಲ್ಲಿರುವ…






