ಮಡಿಕೇರಿ ಜು.14 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿ, 1 ಕೆ.ಜಿ.160 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಹೊಸತೋಟ ನಿವಾಸಿಗಳಾದ ಕೆ.ಹೆಚ್.ಫೈಜಲ್(30), ಶರೀಫ್(32), ಗೋಂದಿಬಸವನಹಳ್ಳಿ ನಿವಾಸಿ ಜಿ.ಎ.ಶಶಿಕುಮಾರ್ (31), ಗುಡ್ಡೆಹೊಸೂರು ನಿವಾಸಿ ವಿನೀತ್ (28) ಎಂಬುವವರೇ ಬಂಧಿತ ಆರೋಪಿಗಳು. ಆರೋಪಿಗಳಿಂದ 1 ಕೆ.ಜಿ.160 ಗ್ರಾಂ ಗಾಂಜಾ ಮತ್ತು 6.5 ಗ್ರಾಂ ಎಂಡಿಎಂಎ ನಿಷೇಧಿತ ಮಾದಕ ವಸ್ತುವಿನೊಂದಿಗೆ ವಶಪಡಿಸಿಕೊಳ್ಳಲಾಗಿದೆ. ಗುಡ್ಡೆಹೊಸೂರುನಿಂದ ಸಿದ್ದಾಪುರ ಕಡೆಗೆ ಹೋಗುವ ರಸ್ತೆಯಲ್ಲಿ ಮಾದಕ ವಸ್ತು ಮಾಡರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳಿಂದ 1 ಕೆ.ಜಿ.160 ಗ್ರಾಂ ಗಾಂಜಾ ಮತ್ತು 6.5 ಗ್ರಾಂ ಎಂಡಿಎಂಎ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ. ::: ಮಾಹಿತಿ…
ಲೇಖಕ: admin
ಮಡಿಕೇರಿ ಜು.14 : ಸುಂಟಿಕೊಪ್ಪದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಯಶ್ವಸಿಯಾಗಿ ಭೇದಿಸಿದ್ದು ಮಾಲು ಹಾಗೂ ವಾಹನ ಸಹಿತ ಐವರನ್ನು ಬಂಧಿಸಿದ್ದಾರೆ. ಸುಂಟಿಕೊಪ್ಪ ಚೆಸ್ಕಾಂ ಬಳಿಯ ನಿವಾಸಿಗಳಾದ ರಫೀಕ್ (40), ನಯನ್ (25), ಅಭಿಷೇಕ್ (20), ಮೊಹಮ್ಮದ್ ಮುಕ್ರಮ್ (40) ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಿಂದ 1 ಕೆ.ಜಿ.65 ಗ್ರಾಂ ಗಾಂಜಾ, 2.5 ಗ್ರಾಂ ನಿಷೇಧಿತ ಮಾದಕ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ. ಸುಂಟಿಕೊಪ್ಪದ ಮಾರುಕಟ್ಟೆ ರಸ್ತೆ ಬಳಿಯಲ್ಲಿ ವ್ಯಾಪಾರ ನಡೆಸುತ್ತಿರುವ ಸಂದರ್ಭ ಖಚಿತ ಮಾಹಿತಿ ಆಧಾರಿಸಿ ಪೊಲೀಸರು ದಾಳಿ ನಡೆಸಿದ್ದು, ಐವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಸುಂದರ್ ರಾಜ್, ಡಿವೈಎಸ್‍ಪಿ ಆರ್.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕರಾದ ಬಿ.ಜಿ.ಮಹೇಶ್ ನೇತೃತ್ವದಲ್ಲಿ ತಂಡದಲ್ಲಿ ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಅಪರಾಧ ವಿಭಾಗದ ಎಸ್.ಐ.ಸ್ವಾಮಿ ಸಿಬ್ಬಂದಿಗಳಾದ ಮುಖ್ಯಪೇದೆ ಎಂ.ವಿ.ಸತೀಶ್, ಜಗದೀಶ್, ಪ್ರವೀಣ್, ಸಂಪತ್, ನಿಶಾಂತ್, ಸತೀಶ್ ಕುಮಾರ್, ಇಳಗೆರೆ, ಅಭಿಲಾಷ್,…
ಮಡಿಕೇರಿ, ಜು.14: ಮಡಿಕೇರಿಯ ಅಶ್ವಿನಿ ಆಸ್ಪತ್ರೆ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಿಟ್ಟೆ ವಿಶ್ವ ವಿದ್ಯಾಲಯದ ಕುಲಪತಿ ವಿನಯ್ ಹೆಗ್ಡೆ ಹಾಗೂ ವಿ.ವಿ. ಯ ಸಾಮಾಜಿಕ ನಿರ್ವಹಣಾ ವಿಭಾಗದ ಅಧ್ಯಕ್ಷ ಪ್ರೊ. ಡಾ.ಸತೀಶ್ ಕುಮಾರ್ ಭಂಡಾರಿ ಅವರ ನಿರ್ಧಾರದಂತೆ ನಿಟ್ಟ್ಟೆ ಸಂಸ್ಥೆಯ ಎಲ್ಲ ಗ್ರಾಮೀಣ ವಿಭಾಗಗಳಲ್ಲಿ ವನ ಮಹೋತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಡಿಕೇರಿ ಅಶ್ವಿನಿ ಆಸ್ಪತ್ರೆಯಲ್ಲ್ಲಿರುವ ನಿಟ್ಟೆ ಸಂಸ್ಥೆಯ ದಂತ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ.ಅನುಶ್ರೀ ತಿಳಿಸಿದರು. ಈ ಸಂದರ್ಭ ಮಂಗಳೂರಿನ ವಾಣಿಜ್ಯೋದ್ಯಮಿ ರೊಟೇರಿಯನ್ ಸತೀಶ್ ಬೋಳಾರ್, ಮಡಿಕೇರಿ ನಗರಸಭಾಧ್ಯಕ್ಷೆ ಅನಿತ ಪೂವಯ್ಯ, ಮಡಿಕೇರಿ ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್, ಮಿಸ್ಟಿಹಿಲ್ಸ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರತ್ನಾಕರ್ ರೈ, ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಸುಮಿತ್ರ, ವ್ಯವಸ್ಥಾಪಕ ರವಿ, ಮಂಗಳೂರಿನ ರೊಟೇರಿ ಯನ್ ಸೂರ್ಯಕಾಂತ್, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತ ಶಯನ, ಶಕ್ತಿ ಪ್ರಧಾನ ಸಂಪಾದಕ ಜಿ.ರಾಜೇಂದ್ರ, ಅಶ್ವಿನಿ ಆಸ್ಪತ್ರೆ ಕಾರ್ಯದರ್ಶಿ ರವೀಂದ್ರ…
ಮಡಿಕೇರಿ ಜು.14 : ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆಯನ್ನು ಖಂಡಿಸಿ ಮಡಿಕೇರಿ ಕೊಡವ ಸಮಾಜದ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಕೊಡವ ಸಮಾಜ, ಗೌಡ ಸಮಾಜ ಹಾಗೂ ಇತರೆ ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪ್ರತಿಭಟನೆ ನಡೆಯಿತು. ಮಡಿಕೇರಿಯ ಕೊಡವ ಸಮಾಜದಲ್ಲಿ ಸಮಾವೇಶಗೊಂಡ ವಿವಿಧ ಸಮಾಜದ ಪ್ರಮುಖರು ಹಾಗೂ ಕೊಡವರು, ಕೊಡವ ಭಾಷಿಕರು, ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಮೆರವಣಿಗೆ ಮೂಲಕ ತೆರಳಿ, ಜನರಲ್‍ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಹಲ್ಲೆ ನಡೆಸಿದವರ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕರರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು, ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಮುಂದೆ ಜಿಲ್ಲೆಯ ಯಾವುದೇ ಭಾಗದಲ್ಲಿ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ…
ಪ್ಯಾರಿಸ್(ಫ್ರಾನ್ಸ್): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದ್ದಾರೆ. ಎರಡು ದಿನಗಳ ಭೇಟಿಗಾಗಿ ನಿನ್ನೆ ಗುರುವಾರ ಪ್ಯಾರಿಸ್‌ಗೆ ಆಗಮಿಸಿದ ಮೋದಿಯವರಿಗೆ ಅಲ್ಲಿನ ನಾಯಕರು ಅಭೂತಪೂರ್ವ ಸ್ವಾಗತ ನೀಡಿದರು. ಇಂದು ಪ್ರಧಾನಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಮ್ಯಾಕ್ರನ್ ಜೊತೆಗೆ ಭಾಗಿಯಾಗಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಒಇಂ) ವಕ್ತಾರ ಅರಿಂದಮ್ ಬಾಗ್ಚಿ ಅವರು ಇಲ್ಲಿನ ಎಲಿಸೀ ಅರಮನೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ, “ಪಾಲುದಾರಿಕೆಯ ಮನೋಭಾವವನ್ನು ಸಾಕಾರಗೊಳಿಸುವ ಹೆಜ್ಜೆಯಿದು, ಫ್ರಾನ್ಸ್ ಅಧ್ಯಕ್ಷರಿಂದ ಅತ್ಯುನ್ನತ ಪ್ರಶಸ್ತಿ” ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು ಜು.14 : ಕೊಡಗು ಜಿಲ್ಲೆಯ ಕೆಲವೆಡೆ ಕೊಳೆತ ಮೊಟ್ಟೆ ವಿತರಣೆ ಮಾಡಿರುವ ವರದಿಗಳು ಬಂದಿರುವ ಹಿನ್ನಲೆಯಲ್ಲಿ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರು ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ಕೊಳೆತ ಮೊಟ್ಟೆಗಳನ್ನು ಸರಬರಾಜು ಮಾಡಿರುವವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಬಾಣಂತಿಯರಿಗೆ ಪೌಷ್ಟಿಕಾಂಶ ದೊರಕಬೇಕು ಎನ್ನುವ ಉದ್ದೇಶದಿಂದ ಮೊಟ್ಟೆಗಳನ್ನು ನೀಡಲಾಗುತ್ತಿದೆ. ಆದರೆ, ಕೆಲವೆಡೆ ಕೊಳೆತ ಮೊಟ್ಟೆಗಳನ್ನು ನೀಡುತ್ತಿರುವುದು ಮಾಧ್ಯಮಗಳ ವರದಿಯಿಂದ ತಿಳಿದು ಬಂದಿದೆ. ಈ ರೀತಿಯ ಬೇಜವಾಬ್ದಾರಿಯ ನಡವಳಿಕೆಯನ್ನು ಸಹಿಸುವುದು ಸಾಧ್ಯವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಇದು ಪುನರಾವರ್ತನೆ ಆದರೆ ಅಧಿಕಾರಿಗಳ ವಿರುದ್ದವೂ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಚಿವರು ತಿಳಿಸಿದ್ದಾರೆ.
ಮಡಿಕೇರಿ ಜು.12 : ಪ್ರಸಕ್ತ(2023) ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ/ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. www.awards.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ ಈ ಕಚೇರಿಗೆ ನೀಡಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ.ಸಂ.08272 295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಮಡಿಕೇರಿ ಜು.12 : ಭಾಗಮಂಡಲದ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯದಲ್ಲಿ ಪ್ರತಿ ವರ್ಷ ರೂಢಿ ಸಂಪ್ರದಾಯದಂತೆ “ಪೊಲಿಂಕಾನ” ಉತ್ಸವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಆಷಾಡ ಕೃಷ್ಣ ಪಕ್ಷದ ಗ್ರೀಷ್ಮ ಋತು ದಕ್ಷಿಣಾಯನದ ಕರ್ಕಾಟಕ ಮಾಷ ಒಂದನೇ ಸೋಮವಾರ ಜುಲೈ, 17 ರಂದು ಮಧ್ಯಾಹ್ನ 12 ಗಂಟೆಗೆ ಮಹಾ ಪೂಜೆಯ ನಂತರ ‘ಪೊಲಿಂಕಾನ ಉತ್ಸವ’ ನಡೆಯಲಿದೆ. ಭಕ್ತಾಧಿಗಳು ಪೊಲಿಂಕಾನ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾದ ಎಂ.ಎಸ್.ದೊರೆ ಕೋರಿದ್ದಾರೆ.
ಮಡಿಕೇರಿ ಜು.12 : ಶಿಕ್ಷಕರು ಮನಸ್ಸು ಮಾಡಿದರೆ ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿ ಪರಿವರ್ತನೆಯನ್ನು ತರಲು ಸಾಧ್ಯವಿದೆ. ಆ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣವನ್ನು ಸಾಧಿಸಬಹುದಾಗಿದೆ. ಹಾಗೆಯೇ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಮುಂದೆ ಬರಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಕಿವಿಮಾತು ಹೇಳಿದರು. ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದರು. ಕಾರ್ಯಕ್ರಮದ ಅಂಗವಾಗಿ ಕಳೆದ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ಮತ್ತು ಶೇ.100 ರಷ್ಟು ಫಲಿತಾಂಶ ಪಡೆದ 17 ಕಾಲೇಜಿನ ಪ್ರಾಂಶುಪಾಲರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ನಂತರ ಪ್ರಾಂಶುಪಾಲರ ಸಂಘದ ವತಿಯಿಂದ…
ಮಡಿಕೇರಿ ಜು.12 : ಕೊಡಗು ಜಿಲ್ಲೆಯಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ ನಡೆಸಿ, ಸಮೀಕ್ಷೆಯಲ್ಲಿ ಪತ್ತೆಯಾದ ಬಾಲ ಕಾರ್ಮಿಕರನ್ನು ಜಿಲ್ಲೆಯಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಬಾಲಕರ ಹಾಗೂ ಬಾಲಕಿಯರ ಬಾಲಮಂದಿರಗಳಲ್ಲಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ವಸತಿ ಶಾಲೆಗಳಲ್ಲಿ ಹಾಗೂ ಮುಖ್ಯವಾಹಿನಿ ಶಾಲೆಗಳಲ್ಲಿ ದಾಖಲಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಂಬಂಧ ಗುರುವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ಕಾಯ್ದೆಯಂತೆ ತಪಾಸಣೆ ಕೈಗೊಂಡ ವರದಿಯನ್ನು ಪ್ರತೀ ಮಾಹೆ ಒದಗಿಸುವಂತೆ ಕಾರ್ಮಿಕ ಅಧಿಕಾರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಲ್ಲಿ ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳಬಾರದು. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ನಿಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ತಪಾಸಣೆಯನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ‘ಪ್ರತಿಯೊಬ್ಬ ಮಕ್ಕಳಿಗೂ ಶಿಕ್ಷಣ ದೊರೆತಲ್ಲಿ ಸಮಾಜದಲ್ಲಿ ಬದಲಾವಣೆ…






