ಲೇಖಕ: admin

ನಾಪೋಕ್ಲು ಜು.13 : ಭವಿಷ್ಯಕ್ಕಾಗಿ ನೀರು ಮತ್ತು ಜೀವ ವೈವಿಧ್ಯ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂದು ಅರಣ್ಯ ಇಲಾಖೆಯ ಮುಂಡ್ರೋಟು ವಲಯ ಅರಣ್ಯಾಧಿಕಾರಿ ಮರಿಸ್ವಾಮಿ ಹೇಳಿದರು. ಅರಣ್ಯ ಇಲಾಖೆಯ ಮುಂಡ್ರೋಟು ವಲಯ, ನಾಪೋಕ್ಲು ಲಯನ್ಸ್ ಕ್ಲಬ್, ಗ್ರಾಮ ಪಂಚಾಯಿತಿ ಬಲ್ಲಮಾವಟಿ ಸಂಯುಕ್ತ ಆಶಯದಲ್ಲಿ ಬಲ್ಲಮಾವಟಿ ಗ್ರಾಮದ ನೇತಾಜಿ ಪ್ರೌಢಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ವನಮಹೋತ್ಸವದ ಅಂಗವಾಗಿ ಗಿಡಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ವನಮಹೋತ್ಸವ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ. ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ನಿಸರ್ಗಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನೀರನ್ನು ಮಿತವಾಗಿ ಬಳಸಬೇಕು ಸೋಲಾರ್ ಬಳಸಿ ವಿದ್ಯುತ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದರು. ನಾಪೋಕ್ಲು ಲಯನ್ಸ್ ಕ್ಲಬ್ ನ ಕಾರ್ಯ ಯೋಜನೆಗಳ ಆಯೋಜಕರಾದ ಎಂ.ಎಂ. ವಿನಯ್ ಮಾತನಾಡಿ ಕರ್ನಾಟಕ ಅರಣ್ಯ ಇಲಾಖೆ ವನ ಸಂಪತ್ತನ್ನು ವೃದ್ಧಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು ಎಲ್ಲರೂ ಸ್ಥಳೀಯ ಗಿಡಗಳನ್ನು ನೆಡುವುದರ ಮೂಲಕ ಇಲ್ಲಿನ ಪರಿಸರವನ್ನು ಸಂರಕ್ಷಿಸಬೇಕು. ವಾಣಿಜ್ಯ ಉದ್ದೇಶಕ್ಕಾಗಿ ಗಿಡ ನೆಡುವುದು…

Read More

ಮಡಿಕೇರಿ ಜು.13 :  ಮಡಿಕೇರಿ ರೋಟರಿ ವತಿಯಿಂದ ನಗರದ ಜಿ.ಟಿ.ರಸ್ತೆಯಲ್ಲಿರುವ ನಗರಸಭಾ ಶಾಲೆಯ 20 ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಲೇಖನಿಗಳನ್ನು ವಿತರಿಸಲಾಯಿತು. ಅಲ್ಲದೆ ಶಿಕ್ಷಕಿಯರಿಗೆ ಗೌರವ ಸಂಭಾವನೆಯನ್ನು ಡಾ. ಪಾಟ್ಕರ್ ದಂಪತಿಗಳು ಮತ್ತು ಹೆಚ್ ಎಸ್.ಅನಂತಸುಬ್ಬರಾವ್ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷೆ ಗೀತಾಗಿರೀಶ್, ಕಾರ್ಯದರ್ಶಿ ಎ೦.ಕೆ.ಶರತ್ , ಸದಸ್ಯರಾದ ಮೃಣಾಲಿನಿ ಚಿಣ್ಣಪ್ಪ, ಮಲ್ಲಿಗೆ ಪೈ, ಲಲಿತಾ ರಾಘವನ್ ಹಾಜರಿದ್ದರು.  

Read More

ಮಡಿಕೇರಿ ಜು.13 :  ಉಚ್ಚ ನ್ಯಾಯಾಲಯದ ಹಿರಿಯ ವಕೀಲರು, ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಎಸ್.ಚಂದ್ರಮೌಳಿ ರವರ ಸಹೋದರಿ ಶನಿವಾರ ಸಂತೆ ಗ್ರಾ.ಪಂ ಸದಸ್ಯರು,  ವಿಎಸ್‍ಎಸ್‍ಎನ್ ಬ್ಯಾಂಕ್ ಅಧ್ಯಕ್ಷ  ಶರತ್ ಶೇಖರ್ ಅವರ ತಾಯಿ ಸರೋಜಾ ಚಂದ್ರಶೇಖರ್ (80)   ದೈವಾಧೀನರಾಗಿದ್ದಾರೆ. ಇವರ ಅಂತ್ಯಕ್ರಿಯೆ  ಮಧ್ಯಾಹ್ನ 3 ಗಂಟೆಗೆ ಗೆ ಶನಿವಾರ ಸಂತೆಯ ಬೈಪಾಸ್ ರಸ್ತೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More

ಮಡಿಕೇರಿ ಜು.12 :  ಡಾ.ತಿಮ್ಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕೋಲಾರ್ನ ಕೆಜಿಎಫ್ ನಲ್ಲಿ ನಡೆದ 10km ಕ್ರಾಸ್ ಕಂಟ್ರಿ ಓಟದಲ್ಲಿ ಮೊದಲನೆಯ ಕ್ರಮಾಂಕಿ ಆಗಿ ಗೋಲ್ಡ್ ಮೆಡಲ್ ಪಡೆದು ರಾಷ್ಟ್ರೀಯ ಮಟ್ಟದ ಇಂಟರ್ ಕಾಲೇಜ್ ಆಲ್ ಇಂಡಿಯಾ ಕ್ರಾಸ್ ಕಂಟ್ರಿ ಸ್ಪರ್ಧೆ ಗೆ ಅಂಜೇರಿರ ಟಿಶನ್ ಮಾದಪ್ಪ ಆಯ್ಕೆಯಾಗಿದ್ದಾರೆ. ಟಿಶನ್ ಮಾದಪ್ಪ ಪ್ರಸುತ್ತ ದ.ಕ ಜಿಲ್ಲೆಯ ಸುಳ್ಯದ ಕೆವಿಜಿ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು.  ಇತ್ತೀಚಿನ ವಿ. ಟಿ.ಯು ಲೆವಲ್ ರಾಜ್ಯ ಮಟ್ಟದ 10 ಕಿ.ಮೀ. ಕ್ರಾಸ್ ಕಂಟ್ರಿ ಓಟದಲ್ಲಿ ಸರಾಸರಿ ಎರಡನೆ ಕ್ರಮ ಅಂಕಿ  ಪಡೆದಿದ್ದು,  ರಾಷ್ಟ್ರೀಯ ಮಟ್ಟದ ಆಲ್ ಇಂಡಿಯಾ ಅಂತರ ಕಾಲೆಜು ಮಟ್ಟದಲ್ಲಿ ಭಾಗವಹಿಸಿದರು. ಇವರು 2022 ನೇ ಸಾಲಿನ ಚಿಕ್ಕಬಳ್ಳಾಪುರದಲ್ಲಿ ನಡೆದ ವಿ.ಟಿ.ಯು ರಾಜ್ಯ ಮಟ್ಟದ ಅಥ್ಲೆಟಿಕ್ಸ ನಲ್ಲಿ 21ಕಿ.ಮಿ ಹಾಫ್ ಮ್ಯಾರಥಾನ್ ನಲ್ಲಿ ಬ್ರಾನ್ಸ್ ಮಡೆಲ್ ಪಡೆದುಕೊಂಡಿದ್ದಾರೆ. 2023 ನೇ ಸಾಲಿನ ವಿ.ಟಿ.ಯು ರಾಜ್ಯ…

Read More

ಕಡಂಗ ಜು.12 :  ಕೂಡಿಗೆ ಸದ್ಗುರು ಅಪ್ಪಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ವನಮಹೋತ್ಸವ ಹಾಗೂ ಪೋಷಕರ ಸಭೆ ನಡೆಯಿತು. ವ್ಯವಸ್ಥಾಪಕ  ಎಂ.ಬಿ.ಪೊನ್ನಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ಶಾಲಾ ಶಿಕ್ಷಕ ವೃಂದದವರು,ಆಡಳಿತ ಮಂಡಳಿ ಸದಸ್ಯರು, ಪೋಷಕರು,ಪೋಷಕರ ಪರಿಷತ್ ಅಧ್ಯಕ್ಷರು, ಉಪಾಧ್ಯಕ್ಷರು ಮಕ್ಕಳ ಸುರಕ್ಷಾ ಸಮಿತಿ ಉಪಾಧ್ಯಕ್ಷರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಎನ್. ಪುಷ್ಪ ಸ್ವಾಗತಿಸಿದರು.  ಎ.ಪಿ ಸೋಮಯ್ಯ ನಿರೂಪಿಸಿದರು.  ಎಂ. ಎಸ್ . ಕುಸುಮ ಸರ್ವರನ್ನು ವಂದಿಸಿದರು.  ವರದಿ : ನೌಫಲ್ ಕಡಂಗ 

Read More

ಮಡಿಕೇರಿ ಜು.12 : ರಾಷ್ಟ್ರೀಯ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮೌನ ಪ್ರತಿಭಟನೆ ನಡೆಸಿತು. ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ಸೂಚಿಸಿದ ಪಕ್ಷದ ಪ್ರಮುಖರು ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದರು. ನಗರದ ಗಾಂಧಿ ಮೈದಾನದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು, ರಾಹುಲ್ ಗಾಂಧಿ ವಿರುದ್ಧ ರಾಜಕೀಯ ಪ್ರೇರಿತ ದುರುದ್ದೇಶದ ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಹಿರಿಯ ಮುಖಂಡ ಟಿ.ಪಿ.ರಮೇಶ್, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ಹೆಚ್.ಎಂ.ನಂದಕುಮಾರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ನಗರ ಕಾಂಗ್ರೆಸ್ ಆಧ್ಯಕ್ಷ ರಾಜೇಶ್ ಯಲ್ಲಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಮುಖಂಡರಾದ ಕೊಲ್ಯದ ಗಿರೀಶ್, ಸತೀಶ್, ಕಾನೆಹಿತ್ಲು…

Read More

ಮಡಿಕೇರಿ ಜು.12 : ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರವು ಜು.13 ರಿಂದ 21 ರವರೆಗೆ ಶ್ರೀಮಂಗಲದ ನಾಲ್ಕೇರಿ ಜಂಕ್ಷನ್‍ನ ಮಣಿ ಕಾಂಪ್ಲೆಕ್ಸ್‍ನಲ್ಲಿ ನಡೆಯಲಿದೆ. ತಮ್ಮಲ್ಲಿ ಉಪಯೋಗಿಸುವ ಅಳತೆ, ತೂಕ ಮತ್ತು ತೂಕದ ಸಾಧನಗಳನ್ನು ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಿಕೊಳ್ಳುವಂತೆ ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಜು.12 : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನವೆಂಬರ್, 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗು ಜಿಲ್ಲೆಯಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 4,873 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು 4,856 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2023-24 ನೇ ಆರ್ಥಿಕ ಸಾಲಿನಲ್ಲಿ 2023 ರ ಏಪ್ರಿಲ್, 01 ರಿಂದ ಜೂನ್ ತಿಂಗಳ ಅಂತ್ಯದವರೆಗೆ 69 ಪ್ರಕರಣಗಳು ದಾಖಲೆಗೆ 58 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ ಉಳಿದ 17 ಪ್ರಕರಣಗಳು ಇತ್ಯರ್ಥದ ಹಂತದಲ್ಲಿ ಇರುತ್ತದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿಯವರಾದ ನಮಿತ ಆರ್. ರೈ ಅವರು ಕೋರಿದ್ದಾರೆ.…

Read More

ಮಡಿಕೇರಿ ಜು.12  : ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಆತ್ಮ) ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಖಾಲಿ ಇರುವ ಒಂದು ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2023-24 ನೇ ಸಾಲಿನ ಸೀಮಿತ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಂ.ಎಸ್ಸಿ(ಕೃಷಿ/ ತೋಟಗಾರಿಕೆ/ಮೀನುಗಾರಿಕೆ/ ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 5 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹೊಂದಿರಬೇಕು. ಎಂ.ಎಸ್ ಆಫೀಸ್‍ನಲ್ಲಿ ಪರಿಣಿತಿ ಇರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ.42 ಸಾವಿರ ಗೌರವ ಧನ ನೀಡಲಾಗುತ್ತದೆ. ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಹರಿರುವ ಅಭ್ಯರ್ಥಿಗಳು ಜುಲೈ, 25 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರು, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ…

Read More

ಮಡಿಕೇರಿ ಜು.12 : ಪೊನ್ನಂಪೇಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ ಪರಿಶೀಲಿಸಿದರು. ಪೊನ್ನಂಪೇಟೆ ತಾಲ್ಲೂಕು ಆಡಳಿತ ಭವನ ನಿರ್ಮಾಣ ಸಂಬಂಧ ತಹಶೀಲ್ದಾರರ ಜೊತೆ ಚರ್ಚಿಸಿದರು. ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ನ್ಯಾಯಾಲಯ ಪ್ರಕರಣಗಳನ್ನು ನಿಯಮಾನುಸಾರ ಆದಷ್ಟು ತ್ವರಿತವಾಗಿ ಇತ್ಯರ್ಥ ಪಡಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು. ದಕ್ಷಿಣ ಕೊಡಗಿನ ವಿವಿಧ ಹಾಡಿಗಳಲ್ಲಿ ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದು, ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಹಾಡಿ ಜನರ ಜೀವನ ಮಟ್ಟ ಸುಧಾರಣೆಗೆ ಕಂದಾಯ, ಐಟಿಡಿಪಿ, ಸಮಾಜ ಕಲ್ಯಾಣ, ಅರಣ್ಯ ಹೀಗೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು. ತಾಲ್ಲೂಕು ಕಚೇರಿಗೆ ಸಾರ್ವಜನಿಕರು ಭೇಟಿ ನೀಡಿದ ಸಂದರ್ಭದಲ್ಲಿ ಆಗಬೇಕಿರುವ ಸರ್ಕಾರಿ ಕೆಲಸವನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಒದಗಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಸಕಾಲದಲ್ಲಿ ಅಗತ್ಯ ಪ್ರಮಾಣ ಪತ್ರವನ್ನು ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರು. ಕೃಷಿಕರು, ಕಾರ್ಮಿಕರು, ಆದಿವಾಸಿಗಳು ಹೀಗೆ ಯಾರನ್ನೂ ಸತಾಯಿಸದೆ ಕಾಲಮಿತಿಯಲ್ಲಿ ಸರ್ಕಾರದ…

Read More