ಮಡಿಕೇರಿ ಜು.12 : ತಿತಿಮತಿಯ ಹೆಬ್ಬಾಲೆ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಇಂದು ಬೆಳಗ್ಗೆ ಮುಖ್ಯ ರಸ್ತೆಯಲ್ಲಿ ಕಾಣಿಸಿಕೊಂಡ ಕಾಡಾನೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದೆ. ಅಲ್ಲದೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನಕ್ಕೂ ಹಾನಿ ಮಾಡಿದ್ದು, ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಲೇಖಕ: admin
ಮಡಿಕೇರಿ ಜು.12 : ನಾಪೋಕ್ಲು ಠಾಣಾ ಸರಹದ್ದಿನ ಕೊಳಕೇರಿ ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪೋಕ್ಲು ಪೊಲೀಸರು ಏಳು ಆರೋಪಿಗಳನ್ನು ನಗದು ಸಹಿತ ವಶಕ್ಕೆ ಪಡೆದಿದ್ದಾರೆ. ಜೂಜಾಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆರೋಪಿಗಳ ಬಳಿಯಿಂದ 8540 ರೂ.ಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಜು.12 : ಕೊಡಗಿನ ಪ್ರತಿ ಮನೆಯಲ್ಲಿ ಓರ್ವ ಸದಸ್ಯರನ್ನು ರಾಜ್ಯ ಮತ್ತು ಕೇಂದ್ರ ಸರಕಾರಿ ಉದ್ಯೋಗಿಯನ್ನಾಗಿ ಮಾಡುವ ಅಗತ್ಯತೆ ಹೆಚ್ಚಿದೆ. ಕೊಡಗಿನ ಯುವಕರು ಕ್ರೀಡೆಯ ಮೂಲಕವೇ ಪೊಲೀಸ್ ಇಲಾಖೆಯಲ್ಲಿ ಹೆಚ್ಚಿನ ಅವಕಾಶವನ್ನು ಪಡೆದುಕೊಳ್ಳಬಹುದು. ಆದರೆ ದುರಾದೃಷ್ಟವಶಾತ್ ಕೊಡಗಿನ ಯುವ ತಲೆಮಾರು ಸರಕಾರಿ ಉದ್ಯೋಗವನ್ನು ಪಡೆದುಕೊಳ್ಳುವ ಬಗ್ಗೆ ತಾತ್ಸಾರ ಮನೋಭಾವನ್ನು ಹೊಂದಿದ್ದಾರೆ. ಈ ಕುರಿತು ನಮ್ಮೊಳಗೆ ನಾವು ನಮ್ಮನ್ನು ಪರಾಮರ್ಶೆಗೆ ಒಳಪಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಡಾ.ರೂಪಾ ಅಭಿಪ್ರಾಯಪಟ್ಟರು. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಐಕ್ಯೂಎಸಿ, ಪ್ಲೇಸ್ ಮೆಂಟ್ ಮತ್ತು ಸ್ಕಿಲ್ ಡೆವಲಪ್ಮೆಂಟ್ ಕೋಶ( ವಿಭಾಗದ)ಗಳ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಮಾಹಿತಿ ಕೇಂದ್ರದ ಸಹಯೋಗದಲ್ಲಿ ನಡೆಸಲಾದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸರಕಾರಿ ಮತ್ತು ಖಾಸಗಿ ಔದ್ಯೋಗಿಕ ಅವಕಾಶಗಳ ಕುರಿತು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಐಕ್ಯೂಎಸಿ ಕೋಶದ ಸಂಯೋಜಕ ಡಾ. ಆರ್.ರಾಜೇಂದ್ರ ಮಾತನಾಡಿ, ವಿವಿಧ…
ನಾಪೋಕ್ಲು ಜು.20 : ನಾಪೋಕ್ಲುವಿನಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದರೂ ಸೂಕ್ತ ಸೌಲಭ್ಯವಿಲ್ಲದೆ ಜನ ಸಾಮಾನ್ಯರಿಗೆ ಪ್ರಯೋಜನವಾಗುತ್ತಿಲ್ಲ. ಗ್ರಾಮೀಣ ಪ್ರದೇಶಗಳಿಂದ ಬರುವ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ. ಸಮುದಾಯ ಆರೋಗ್ಯ ಕೇಂದ್ರದ ಸಮಸ್ಯೆಗಳನ್ನು ಬಗೆಹರಿಸಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ನಾಪೋಕ್ಲು ಕೊಡವ ಸಮಾಜದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಆಗ್ರಹಿಸಿದ ಗ್ರಾಮಸ್ಥರು, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಎರಡು ಅಂತಸ್ತಿನ ಕಟ್ಟಡವಿದೆ. ಆದರೆ ಅಗತ್ಯಕ್ಕೆ ತಕ್ಕಷ್ಟು ಸೌಲಭ್ಯಗಳಿಲ್ಲ. 32 ಸಿಬ್ಬಂದಿಗಳಿದ್ದರೂ ವೈದ್ಯರ ಕೊರತೆಯು ಕಾಡುತ್ತಿದೆ. ನಾಪೋಕ್ಲು ಹೋಬಳಿಯ ಸುಮಾರು 27 ಗ್ರಾಮಗಳ ಮಂದಿ ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬರುತ್ತಿದ್ದು, ಸೂಕ್ತ ಸೌಕರ್ಯವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಗಮನಹರಿಸಬೇಕು ಎಂದು ಒತ್ತಾಯಿಸಿದರು. ಕಂದಾಯ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿದೆ ಎಂದು ಆರೋಪಿಸಿದರು. ಕಸ ವಿಲೇವಾರಿಯ ಸಮಸ್ಯೆ ತಲೆದೋರಿದೆ ಸಮರ್ಪಕ ನಿರ್ವಹಣೆ ಆಗುತ್ತಿಲ್ಲ ಕೂಡಲೇ ಜಾಗ ಗುರುತಿಸಿ ಸಮಸ್ಯೆ ಪರಿಹರಿಸಬೇಕು. ಮಾದಕ ವಸ್ತುಗಳ ಅಕ್ರಮ ಮಾರಾಟವು…
ನಾಪೋಕ್ಲು ಜು.12 : ಜೀವನದಲ್ಲಿ ಪ್ರತಿಯೊಂದು ಕ್ಷಣವು ಅತ್ಯಮೂಲ್ಯವಾದದ್ದು, ಸಮಯವನ್ನು ವ್ಯರ್ಥ ಮಾಡದೆ ಅನುಭವಿಸಿ ಸಂಭ್ರಮಿಸುವುದರ ಮೂಲಕ ಸಾಧನೆ ಮಾಡಿ ಉನ್ನತಿಯನ್ನು ಹೊಂದಬೇಕು ಎಂದು ಕರ್ನಾಟಕ ಜನಪದ ಪರಿಷತ್ ಕೊಡಗು ಜಿಲ್ಲಾಧ್ಯಕ್ಷ, ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಹೇಳಿದರು. ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಸಾಂಸ್ಕೃತಿಕ ಮತ್ತು ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರಲ್ಲೂ ಅಪಾರವಾದ ಶಕ್ತಿ ಇದೆ. ಅಸಾಧ್ಯವಾದದನ್ನು ಸಾಧ್ಯ ಮಾಡಿಕೊಂಡು ಹೆಜ್ಜೆ ಗುರುತು ಮೂಡಿಸಿ ಮಾದರಿಯಾಗಬೇಕು ಎಂದ ಅವರು ಗುರುಹಿರಿಯರಿಗೆ ಹಾಗೂ ಸೈನಿಕರನ್ನು ಗೌರವಿಸುವುದರ ಮೂಲಕ ಸತ್ಪ್ರಜೆಯಾಗಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿ, ಹಾಡು ಹಾಡುವುದರ ಮೂಲಕ ಮನೋರಂಜನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಕಾವೇರಿ ಪ್ರಕಾಶ್ ವಹಿಸಿದ್ದು, ವೇದಿಕೆಯಲ್ಲಿ ಅತಿಥಿಗಳಾಗಿ ಜನಪದ ಪರಿಷತ್ ಕಾರ್ಯದರ್ಶಿ ಅಂಬೆಕಲ್ ಕುಶಾಲಪ್ಪ, ಮಡಿಕೇರಿ ರೋಟರಿ ಕ್ಲಬ್, ಮಿಸ್ಟ್…
ಮಡಿಕೇರಿ ಜು.12 : ವಿರಾಜಪೇಟೆ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿರುವ ಎಂ.ಪ್ರಕಾಶ್ ಅವರನ್ನು ಕೊಡಗು ಅನುದಾನ ರಹಿತ ಶಾಲೆಯ ಒಕ್ಕೂಟದ ವತಿಯಿಂದ ಅಭಿನಂದಿಸಿದಲಾಯಿತು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಕೋಟ್ರಂಗಡ ಹಾಗೂ ಕಾನೂನು ಸಲಹೆಗಾರ ಎಂ.ಎಸ್ ಪೂವಯ್ಯ ಪುಷ್ಪ ಗುಚ್ಚ ನೀಡಿ ಅಭಿನಂದಿಸಿದರು.
ಮಡಿಕೇರಿ ಜು.11 : ಕೊಡಗು ಜಿಲ್ಲೆಯಲ್ಲಿ ರಿವರ್ ರ‍್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಿವರ್ ರ‍್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು. ವರ್ಷದಿಂದ ವರ್ಷಕ್ಕೆ ಕೊಡಗು ಜಿಲ್ಲೆಗೆ ಪ್ರವಾಸಿಗರು ದುಬಾರೆ, ಬರಪೊಳೆ, ಕುಮಾರಳ್ಳಿ, ಮಾಂದಲ್‍ಪಟ್ಟಿ, ಅಬ್ಬಿ ಜಲಪಾತ, ರಾಜಾಸೀಟು ಹೀಗೆ ವಿವಿಧ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಆಗಮಿಸಲಿದ್ದಾರೆ. ಪ್ರವಾಸಿಗರಿಗೆ ಯಾವುದೇ ರೀತಿಯ ಕಹಿ ಘಟನೆ ಉಂಟಾಗದಂತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಜೊತೆ ಅನುಚಿತವಾಗಿ ವರ್ತಿಸಿದರೆ ಇಡೀ ಕೊಡಗು ಜಿಲ್ಲೆಗೆ ಕೆಟ್ಟ ಹೆಸರು ಬರಲಿದೆ. ಇದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶಕ್ಕೆ ತೊಂದರೆಯಾಗಲಿದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು. ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಜೊತೆಗೆ ಸೌಜನ್ಯ, ವಿನಯ, ವಿನಮ್ರತೆಯಿಂದ ನಡೆದುಕೊಳ್ಳಬೇಕು. ಇದರಿಂದ ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲು ಸಾಧ್ಯ. ಇದರಿಂದ ಉದ್ಯೋಗಗಳು ಹೆಚ್ಚಾಗಲಿದೆ ಎಂದು ತಿಳಿಸಿದರು.…
ಮಡಿಕೇರಿ ಜು.11 : ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಛಿಸುವ ರೈತರ ಸಂಶೋಧನೆ ಸಾಧನೆಗಳು ಮೂಲ ಸ್ವರೂಪವಾದದ್ದು ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಈ ಪ್ರಶಸ್ತಿಗೆ ನಾಮನಿರ್ದೇಶನ ಸಲ್ಲಿಸ ಬಯಸುವ ರೈತ/ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜುಲೈ, 24 ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. .ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ತಿಳಿಸಿದ್ದಾರೆ.
ಮಡಿಕೇರಿ ಜು.11 : ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತದೆ. ಪ್ರತಿ ವರ್ಷದಂತೆ ಈ ವರ್ಷವೂ (2023-24) ಸಹ ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ನೋಂದಣಿ ಶುಲ್ಕ ಸಾಮಾನ್ಯ ರೈತ/ ರೈತ ಮಹಿಳೆಯರಿಗೆ 100 ರೂ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಮಹಿಳೆಯರಿಗೆ 25 ರೂ, ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧೆ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ. ತಾಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದಾಗಿದೆ. ಮತ್ತು ಜಿಲ್ಲಾ ಮಟ್ಟದಲ್ಲಿ…
ಮಡಿಕೇರಿ ಜು.11 : ಕೊಡಗು ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಣಿತ್ ನೇಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವರ್ಣಿತ್ ನೇಗಿ ಅವರು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿ.ಪಂ.ಸಿಇಒ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಜಂಟಿ ನಿರ್ದೇಶಕರಾಗಿ, ಹುಣಸೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಛತ್ತೀಸ್ಗಢ ಮೂಲದವರಾದ ವರ್ಣಿತ್ ನೇಗಿ ಸುರತ್ಕಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಟೆಕ್(ಸಿವಿಲ್) ಪದವಿ ಪಡೆದಿದ್ದಾರೆ.






