ಲೇಖಕ: admin

ಮಡಿಕೇರಿ ಜು.11 : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2023-24 ನೇ ಸಾಲಿನಲ್ಲಿಯೂ ಜಾರಿಯಲ್ಲಿರುತ್ತದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬನಾ ಎಂ.ಶೇಕ್  ತಿಳಿಸಿದ್ದಾರೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹೇಳಿದ್ದಾರೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ ಎಂದು  ವಿವರಿಸಿದ್ದಾರೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ…

Read More

ಮಡಿಕೇರಿ ಜು.11 : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ವತಿಯಿಂದ ಸರ್ಕಾರದ ನಿರ್ದೇಶನದಂತೆ ಕೊಡಗು ಜಿಲ್ಲಾಡಳಿತದ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಉದ್ದೇಶಿತ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ನಿರ್ಮಾಣ ಕಾರ್ಯ ಕೈಗೊಳ್ಳುವ ನಿಟ್ಟಿನಲ್ಲಿ ಉತ್ತಮ ವಾಸ್ತುಶಿಲ್ಪಿ ವಿನ್ಯಾಸದೊಂದಿಗೆ ಕೊಡಗಿನ ಭೌಗೋಳಿಕ ಪರಿಸರ ಹಾಗೂ ಹವಾಮಾನಕ್ಕೆ ಅನುಗುಣವಾಗಿ ಕಟ್ಟಡದ ವಿನ್ಯಾಸ ರೂಪಿಸಿ ಸುಸ್ಸಜ್ಜಿತ ವಿಜ್ಞಾನ ಕೇಂದ್ರ ನಿರ್ಮಿಸಲಾಗುವುದು ಎಂದು ಜಿಲ್ಲಾ ವಿಜ್ಞಾನ ಕೇಂದ್ರದ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಮಿನಿ ತಾರಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ರೂಪುರೇಷೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಲು ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿಜ್ಞಾನ ಕೇಂದ್ರದ ಸಮಿತಿ ಸದಸ್ಯರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಯೋಜನೆಯಂತೆ ಕೆಸ್ಟೆಪ್ಸ್ ವತಿಯಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ…

Read More

ಮಡಿಕೇರಿ ಜು.11 : ಕುತಂತ್ರದಿಂದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪುಷ್ಪ ನಮನ ಸಲ್ಲಿಸಿತು. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿದರು. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಕೊಡವ ಜನಾಂಗೀಯ ಬುಡಕಟ್ಟು ಜನಾಂಗಕ್ಕೆ ಎಸ್‍ಟಿ ಟ್ಯಾಗ್ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಭದ್ರತೆ ಒದಗಿಸಬೇಕು, ಟಿಪ್ಪು ಸಂಚಿನಿಂದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವ ನರಮೇಧವನ್ನು ಯುಎನ್‍ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು. ಸಿಎನ್‍ಸಿ ಪ್ರಮುಖರಾದ ಕಲಿಯಂಡ ಪ್ರಕಾಶ್, ಪಟ್ಟಮಾಡ ಕುಶ, ಅರೆಯಡ ಗಿರೀಶ್, ಮಂದಪಂಡ ಮನೋಜ್, ಕಾಟುಮಣಿಯಂಡ ಉಮೇಶ್ ಮತ್ತಿತರರು ಪುಷ್ಪ ನಮನ ಸಲ್ಲಿಸಿದರು. ಎನ್.ಯು.ನಾಚಪ್ಪ ಅವರು ಹಿರಿಯರ ಸ್ಮರಣಾರ್ಥ ಗಾಳಿಯಲ್ಲಿ ಗುಂಡು…

Read More

ಮಡಿಕೇರಿ ಜು.11 : ಸಂಪಾಜೆ ವಲಯದ ಡಬ್ಬಡ್ಕ ಪಟ್ಟಿಘಾಟ್ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ವಿನಾಶದಂಚಿನಲ್ಲಿರುವ ಮಲಬಾರ್ ದೈತ್ಯ ಅಳಿಲು ಹಾಗೂ ಹಾರುವ ಅಳಿಲುಗಳನ್ನು ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸಿದ ಪ್ರಕರಣವನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಬಯಲಿಗೆಳೆದಿದೆ. ವನ್ಯ ಜೀವಿಗಳನ್ನು ಕೆಲವರು ಬೇಟೆಯಾಡಿರುವ ಬಗ್ಗೆ ಸಂಪಾಜೆ ವಲಯ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭಿಸಿತ್ತು. ಅದರಂತೆ ಆರೋಪಿಗಳಾದ ದಬ್ಬಡ್ಕ ಗ್ರಾಮದ ಮದನ್ ಕುಮಾರ್(38), ಗಣಪತಿ ಬಿನ್ ಮಾಚಯ್ಯ(50) ಹಾಗೂ ಪ್ರಸನ್ನ ಕುಮಾರ್(35) ಎಂಬುವವರ ಮನೆಗಳ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದರು. ಈ ಸಂದರ್ಭ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ 2 ವನ್ಯಜೀವಿಗಳ ಮಾಂಸವನ್ನು ಪಾತ್ರೆ ಸಹಿತ ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ ಪೂವಯ್ಯ ಮತು ವಲಯ ಅರಣ್ಯಾಧಿಕಾರಿ ಮಧುಸೂದನ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ನಿಸಾರ್ ಮಹಮ್ಮದ್,…

Read More

ಮಡಿಕೇರಿ ಜು.11 : ಊರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಹೋದ ವ್ಯಕ್ತಿ ಕಾಣೆಯಾಗಿರುವುದಾಗಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಾಜೆ ಗ್ರಾಮದ ಅರಮನೆತೋಟ ಕಾಲೋನಿ ನಿವಾಸಿ ಮಂಜುನಾಥ (37) ಜು.10 ರಂದು ಮಧ್ಯಾಹ್ನ ಊರದ ಮರಗೋಡು ಗ್ರಾಮಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಇದುವರೆಗೂ ಮನೆಗೆ ಬಂದಿರುವುದಿಲ್ಲ. ಮನೆಗೆ ಕರೆಮಾಡಿ ವಿಚಾರಿಸಿದಾಗ ಬಂದಿರುವುದಿಲ್ಲ ಎಂಬುದಾಗಿ ತಿಳಿಸಿದ್ದು, ಅಲ್ಲದೆ ಮೊಬೈಲ್ ಫೋನ್ ಸ್ವೀಚ್ ಆಫ್ ಆಗಿದೆ ಎಂದು ಮಂಜುನಾಥ ಅವರ ಪತ್ನಿ ಎಂ.ಎಂ.ಆಶಾ ದೂರಿನಲ್ಲಿ ತಿಳಿಸಿದ್ದಾರೆ. ಮಂಜುನಾಥ್ ಕನ್ನಡ, ತುಳು, ಮಲಯಾಳ, ಕೊಡವ ಭಾಷೆ ಮಾತನಾಡುವವರಾಗಿದ್ದು, 5.6 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಧೃಡಕಾಯ ಶರೀರ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಡಿಕೇರಿ ಪೊಲೀಸ್ ಠಾಣೆ-08272-228777, ಪೊಲೀಸ್ ಅಧೀಕ್ಷಕರು -08272-229000 ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ ಜು.11 : ಕೊಡವ ಎಂ.ಎ.ಸ್ನಾತಕೋತ್ತರ ವಿಭಾಗ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಕೊಡವ ಮಕ್ಕಡ ಕೂಟದ ಸಹಯೋಗದಲ್ಲಿ ಜು.15 ರಂದು ನಾಲ್ಕು ಕೊಡವ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಲೇಖಕಿ ಐಚಂಡ ರಶ್ಮಿ ಮೇದಪ್ಪ (ತಾಮನೆ-ಕೈಪಟ್ಟಿರ) ಬರೆದಿರುವ ಕೊಡವ ಮಕ್ಕಡ ಕೂಟದ 67ನೇ ಪುಸ್ತಕ “ಚೆರ್ ಕತೆ ಮತ್ತು ಚೆರ್ ನಾಟಕ”, ಲೇಖಕಿ ಕರವಂಡ ಸೀಮಾ ಗಣಪತಿ (ತಾಮನೆ-ಮಡೆಯಂಡ) ಬರೆದಿರುವ ಕೊಡವ ಮಕ್ಕಡ ಕೂಟದ 68ನೇ ಪುಸ್ತಕ “ಕವನ ಪೊಟ್ಟಿ”, ಕೊಡವ ಎಂ.ಎ ವಿದ್ಯಾರ್ಥಿಗಳಾದ ಬೊಪ್ಪಂಡ ಶ್ಯಾಮ್ ಪೂಣಚ್ಚ, ಲೆ.ಕರ್ನಲ್ ಬಿ.ಎಂ.ಪಾರ್ವತಿ (ಬಲ್ಯಡಿಚಂಡ), ಐಚಂಡ ರಶ್ಮಿ ಮೇದಪ್ಪ, ಪುತ್ತರಿರ ವನಿತ ಮುತ್ತಪ್ಪ (ತಾಮನೆ-ಮನೆಯಪಂಡ), ಆಪಾಡಂಡ ಎನ್.ಹೇಮಾವತಿ(ಜಾನ್ಸಿ-ತಾಮನೆ-ಬೊಳ್ಳಾರ್‍ಪಂಡ), ಬೊಳ್ಳಜಿರ ಅಯ್ಯಪ್ಪ, ಚೌಂಡಿರ ಶಿಲ್ಪ ಪೊನ್ನಪ್ಪ (ತಾಮನೆ-ಚಿಕ್ಕಂಡ), ಬೊಳ್ಳಜಿರ ಯಮುನ ಅಯ್ಯಪ್ಪ (ತಾಮನೆ-ಮನ್ನೆರ) ಕರವಂಡ ಸೀಮಾ ಗಣಪತಿ ಬರೆದ ಕೊಡವ ಮಕ್ಕಡ ಕೂಟದ 69ನೇ ಪುಸ್ತಕ “ದೇವತೆಯಡ ಮತ್ತು ಕೇಳಿಪೋನಯಿಂಗಡ…

Read More

ಮಡಿಕೇರಿ ಜು.11 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಗೌರಮ್ಮ ದತ್ತಿ ಕಾರ್ಯಕ್ರಮವಾಗಿ ಕಥೆಗಾರ್ತಿ ಕೊಡಗಿನ ಗೌರಮ್ಮ ಅವರ ಹೆಸರಿನಲ್ಲಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಕಥೆ ಬರೆಯುವ ಸ್ಪರ್ಧೆ ನಡೆಯಲಿದೆ. ಸಣ್ಣ ಕತೆಗಳ ಗೌರಮ್ಮ ದತ್ತಿ ಸ್ಪರ್ಧೆ* ಯು ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಬೆಳವಣಿಗೆ ಉಂಟಾಗಲು ಮತ್ತು ಆಸಕ್ತಿ ಮೂಡಲು ಇದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಮತ್ತು ಕನ್ನಡ ನಾಡು, ನುಡಿ, ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಜಿಲ್ಲೆಯ ಶಾಲೆ ಕಾಲೇಜುಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. *ಕೊಡಗು ಜಿಲ್ಲೆಯ ಪ್ರೌಡಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. • ಸ್ಥಳದಲ್ಲೆ ಕತೆ ರಚಿಸತಕ್ಕದ್ದು. • ಎ4 ಅಳತೆಯ ಹಾಳೆಯಲ್ಲಿ 2 ಪುಟ ಮೀರದಂತೆ ಕತೆ ರಚಿಸತಕ್ಕದ್ದು. • ಕತೆ ಬರೆಯಲು ಹಾಳೆಯನ್ನು ಸ್ಥಳದಲ್ಲಿ ನೀಡಲಾಗುವುದು. • ಕತೆಯ ವಿಷಯದ ಆಯ್ಕೆಗೆ…

Read More

ಮಡಿಕೇರಿ ಜು.11 : ಆನ್ ಲೈನ್ ಮಾರುಕಟ್ಟೆ ಅವಲಂಬಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ಸೇರಿದಂತೆ ಯುವ ಜನಾಂಗ ಇ-ಕಾಮರ್ಸ್ ಕುರಿತು ಹೆಚ್ಚಿನ ಜ್ಞಾನ ಪಡೆದುಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ವಿಫುಲ ಅವಕಾಶಗಳಿವೆ ಎಂದು ಉದ್ಯಮಿ ಬಾಲಾಜಿ ಕಶ್ಯಪ್  ಕರೆ ನೀಡಿದರು. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ‘ಇ-ಕಾಮರ್ಸ್ ಎಂಡ್ ಇಟ್ಸ್ ಡೈವರ್ಸಿಫಿಕೇಶನ್’ ಕುರಿತು ನಡೆದ ಒಂದು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಯುವಕರು ತಾವೇ ಉತ್ಪನ್ನಗಳನ್ನು ತಯಾರಿಸಿ ಅದಕ್ಕೆ ತಮ್ಮದೇ ಆದ ಬ್ರಾಂಡ್ ಸೃಷ್ಟಿಸಿ ಮಾರಾಟ ಮಾಡಲು ಆನ್ ಲೈನ್ ಮಾರುಕಟ್ಟೆ ಉತ್ತಮ ವೇದಿಕೆ ಎಂದು ಅಭಿಪ್ರಾಯಪಟ್ಟರು. ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್, ನಮ್ಮ ಯಾತ್ರಿ ಮುಂತಾದ ಇ-ಕಾಮರ್ಸ್ ತಾಣಗಳು ವಿವಿಧ ಉತ್ಪನ್ನ ಹಾಗೂ ಸೇವೆಗಳಿಗೆ ನ್ಯಾಯಬದ್ದ ಸಂಭಾವನೆ ದೊರಕಿಸುವಲ್ಲಿ ಅನುಕೂಲ ಮಾಡಿಕೊಡುವುದರಿಂದ, ಇಂತಹಾ ಅವಕಾಶಗಳನ್ನು ಯುವ ಉದ್ಯಮಿಗಳು ಸಮರ್ಪಕವಾಗಿ ಬಳಸಿಕೊಂಡರೆ ಇಂದಿನ ಪೈಪೋಟಿ ಆಧಾರಿತ ಮಾರುಕಟ್ಟೆಯಲ್ಲೂ…

Read More

ಮಡಿಕೇರಿ ಜು.11 : ನಗರದ ಐಟಿಐ ಜಂಕ್ಷನ್‍ನಲ್ಲಿ ಧನಲಕ್ಷ್ಮಿ ಎಂಬವರಿಗೆ ಸೇರಿದ ಅಂಗಡಿ ಮಳಿಗೆಯ ಜಾಗಕ್ಕೆ ವಾರದ ಒಳಗಾಗಿ ಫಾರಂ ನಂ.3 ದಾಖಲೆಯನ್ನು ನಗರಸಭೆ ಒದಗಿಸಬೇಕು. ಇಲ್ಲವಾದಲ್ಲಿ ನೊಂದ ಮಹಿಳೆಗೆ ನ್ಯಾಯ ಒದಗಿಸಲು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಮಡಿಕೇರಿ ನಗರಸಭೆಯ ಮಾಜಿ ಉಪಾಧ್ಯಕ್ಷ ಕೆ.ಎಂ.ಗಣೇಶ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧನಲಕ್ಷ್ಮಿ ಅವರಿಗೆ ಸೇರಿದ ಜಾಗದ ದಾಖಲೆ ಗೊಂದಲ ಮುಂದುವರೆದಿದೆ, ಈ ನಡುವೆ ಇತ್ತೀಚೆಗೆ ನಗರಸಭಾ ಸದಸ್ಯರೊಬ್ಬರ ಮೇಲೆ ಹಲ್ಲೆ ಕೂಡ ನಡೆದಿದ್ದು, ಇದನ್ನು ಖಂಡಿಸುತ್ತೇನೆ. ಕಂದಾಯ ಇಲಾಖೆ ಜಾಗಕ್ಕೆ 2017ರಲ್ಲೆ ಜಾಗಕ್ಕೆ ಪಟ್ಟೆಯನ್ನು ನೀಡಿದೆ. ಹೀಗಿದ್ದೂ ನಗರಸಭೆಯಿಂದ ಫಾರಂ ನಂ.3 ರನ್ನು ನೀಡಲು ವಿಳಂಬ ಧೋರಣೆ ತಳೆಯಲಾಗುತ್ತಿದೆ ಎಂದು ಆರೋಪಿಸಿದರು. ಐಟಿಐ ಜಂಕ್ಷಣ್ ಬಳಿಯಲ್ಲಿ 1975 ರಲ್ಲೆ ಮಣಿ ಎಂಬವರು ಅಂಗಡಿಯನ್ನಿರಿಸಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಆ ಸಂದರ್ಭವೆ ಅವರು ಅಂದಿನ ಪುರಸಭೆಗೆ ಜಾಗಕ್ಕೆ ಸಂಬಂಧಿಸಿದಂತೆ ಟಿಟಿ ದಂಡವನ್ನು ಪಾವತಿಸಿದ್ದರು. ಇವರಿಗೆ 2017 ರಲ್ಲಿ ಕಂದಾಯ ಇಲಾಖೆ…

Read More

ಮಡಿಕೇರಿ ಜು.11 : ಹೈದಾರಬಾದ್‍ನಲ್ಲಿ ನಡೆದ 12ನೇ ರಾಷ್ಟ್ರೀಯ ವೋವಿನಮ್ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಸೋಮವಾರಪೇಟೆಯ ಕುವೆಂಪು ಶಾಲೆ ವಿದ್ಯಾರ್ಥಿನಿ ಜಿ.ಎಸ್.ಮಾನಸ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಇವರಿಗೆ ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ತರಬೇತುದಾರ ಎನ್.ಸಿ.ಸುದರ್ಶನ್ ತರಬೇತಿ ನೀಡಿದ್ದಾರೆ.

Read More