ಲೇಖಕ: admin

ಮಡಿಕೇರಿ ಜು.11  :  ಚೆಟ್ಟಳ್ಳಿಯ ಎಸ್.ಎ.ಎಸ್ ಡಯೋಗ್ನೋಸ್ಟಿಕ್ ಕೇಂದ್ರದಲ್ಲಿ ಜು.12 ರಂದು  ಮೂಳೆ ಖನಿಜಾಂಶ ಸಾಂದ್ರತೆಯ ಉಚಿತ ತಪಾಸಣಾ ಶಿಬಿರ  ನಡೆಯಲಿದೆ. ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಶಿಬಿರ ನಡೆಯಲಿದ್ದು, 35 ವಷ೯ ಮೀರಿದ ನಾಗರಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರಾದ ಶ್ರೀ ಲಕ್ಷ್ಮಿ ಕ್ಲಿನಿಕ್, ಎಸ್ ಎ ಎಸ್ ಡಯೋಗ್ನೋಸ್ಟಿಕ್ ಕೇಂದ್ರ,ಎನ್. ಐ.ಎಂ.ಎ. ಕೊಡಗು ಸಂಸ್ಥೆ  ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ  97310 23896 ಸಂಪರ್ಕಿಸಬಹುದಾಗಿದೆ.

Read More

ಬೆಂಗಳೂರು ಜು.11 : ಅಪಘಾತಗಳ ಮೂಲಕವೇ ಸುದ್ದಿಯಲ್ಲಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಇಲ್ಲಿಯವರೆಗೆ ನಡೆದ ಅಪಘಾತಗಳಲ್ಲಿ ಒಟ್ಟು 100 ಮಂದಿ ಮೃತಪಟ್ಟಿದ್ದಾರೆ. ಸುಮಾರು 335 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ವಿಧಾನಸಭಾ ಅಧಿವೇಶನದಲ್ಲಿ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಪಘಾತಗಳ ಕುರಿತು ವಿವರಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣ ಮಾಡಿಲ್ಲ. ಬಹಳಷ್ಟು ನ್ಯೂನತೆಗಳೊಂದಿಗೆ ದಶಪಥ ನಿರ್ಮಾಣ ಮಾಡಲಾಗಿದೆ. ರಸ್ತೆ ತಿರುವುಗಳಿಗೆ, ವೇಗ ಮಿತಿ ಇಳಿಕೆಗೆ ಯಾವುದೇ ಸೂಚನಾ ಫಲಕಗಳಿಲ್ಲ. ವೇಗವಾಗಿ ವಾಹನ ಓಡಿಸಿ ಬಂದಾಗ ಅಪಘಾತಗಳಾಗುತ್ತಿವೆ ಎಂದು ಅಭಿಪ್ರಾಯಪಟ್ಟರು.

Read More

ಮಡಿಕೇರಿ ಜು.11 : ಮಡಿಕೇರಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮುಂದಿನ ಒಂದು ವರ್ಷದ ಅವಧಿಗೆ ಬಿಜೆಪಿಯ ಎಸ್.ಸಿ.ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಥಾಯಿ ಸಮಿತಿ ಸದಸ್ಯರುಗಳು ಸತೀಶ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಿದರು. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ್ ಸೇರಿದಂತೆ ಸದಸ್ಯರುಗಳು ಸತೀಶ್ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ::: ಅಭಿವೃದ್ಧಿಗೆ ಸಹಕಾರ ::: ನಗರದ 23 ವಾರ್ಡ್ಗಳ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವುದರೊಂದಿಗೆ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವುದಾಗಿ ಸತೀಶ್ ಇದೇ ಸಂದರ್ಭ ಭರವಸೆ ನೀಡಿದರು.

Read More

ಮಡಿಕೇರಿ ಜು.11 : ಮಡಿಕೇರಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮುಂದಿನ ಒಂದು ವರ್ಷದ ಅವಧಿಗೆ ಬಿಜೆಪಿಯ ಎಸ್.ಸಿ.ಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಥಾಯಿ ಸಮಿತಿ ಸದಸ್ಯರುಗಳು ಸತೀಶ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಿದರು. ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ್ ಸೇರಿದಂತೆ ಸದಸ್ಯರುಗಳು ಸತೀಶ್ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ::: ಅಭಿವೃದ್ಧಿಗೆ ಸಹಕಾರ ::: ನಗರದ 23 ವಾರ್ಡ್ಗಳ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವುದರೊಂದಿಗೆ ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡುವುದಾಗಿ ಸತೀಶ್ ಇದೇ ಸಂದರ್ಭ ಭರವಸೆ ನೀಡಿದರು.

Read More

ಮಡಿಕೇರಿ ಜು.11 : ಮಳೆಯಿಂದ ತೀರ ಹದಗೆಟ್ಟಿದ್ದ ಮಾಂದಲಪಟ್ಟಿ ವ್ಯೂ ಪಾಯಿಂಟ್ ರಸ್ತೆಯನ್ನು ನಂದಿಮೊಟ್ಟೆ ಜೀಪು ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಶ್ರಮದಾನ ಮೂಲಕ ಕಲ್ಲು ಮಣ್ಣು ಹಾಕಿ ದುರಸ್ತಿಪಡಿಸಲಾಯಿತು. ಈ ಸಂದರ್ಭ ಚಾಲಕರಾದ ಶರಣು ಅಯ್ಯಪ್ಪ, ಪುಷ್ಪರಾಜ್, ಮನು , ದರ್ಶನ್, ಚರಣ್ ಮತ್ತಿತರರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಜು.11 : ಎರಡು ಕುರಿಗಳ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಹುಣಸೂರು ತಾಲ್ಲೂಕಿನ ರಾಮಪಟ್ಟಣದಲ್ಲಿ ನಡೆದಿದೆ. ಒಂದು ಕುರಿ ಸಾವನ್ನಪ್ಪಿದ್ದು, ಮತ್ತೊಂದು ಕುರಿಗೆ ಗಾಯಗಳಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಭೇಟಿ ನೀಡಿದ್ದು, ಚಿರತೆ ಸೆರೆಗೆ ಕ್ರಮ ಕೈಗೊಂಡಿದ್ದಾರೆ.

Read More

ಕುಶಾಲನಗರ, ಜು.11: ಉತ್ತರ ಕೊಡಗಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚುನಾವಣಾ ಅರಿವು ಮೂಡಿಸಲು ಹಾಗೂ ವಿದ್ಯಾರ್ಥಿ ಸಂಘದ ರಚನೆಗಾಗಿ ಶಾಲಾ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಶಾಲಾ ಸಂಸತ್ ಚುನಾವಣೆ ನಡೆಸಲಾಯಿತು. ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ನಡೆಯಲಿರುವ ಸಾರ್ವಜನಿಕ ಚುನಾವಣೆ ಮಾದರಿಯಲ್ಲಿ ಶಾಲೆಯಲ್ಲಿ ಸಂಸತ್ತು ಚುನಾವಣೆ ಭಾಗಬಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಮತಗಟ್ಟೆಯ ಅಧ್ಯಕ್ಷಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.  ವಿದ್ಯಾರ್ಥಿ ಸಂಘದ ರೆಕ್ಟರ್ , ಸಾಕ್ಷರತಾ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಎಸ್.ಎಂ.ಗೀತಾ, ಶಿಕ್ಷಕ ಕೆ.ಗೋಪಾಲಕೃಷ್ಣ, ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಬಿ.ಎಸ್.ಅನ್ಸಿಲಾ ರೇಖಾ ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು. ಮಕ್ಕಳು ಇವಿಎಂ ಮತಯಂತ್ರದ ಮೂಲಕ ಮತ ಚಲಾಯಿಸಿ ಶಾಲಾ ಸಂಸತ್ತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಿರುವುದು ಎಲ್ಲರ ಗಮನ ಸೆಳೆಯಿತು. ಶಾಲಾ ಸಂಸತ್ತು ರಚನೆ ಮಾಡಿ ಚುನಾವಣೆ ಪ್ರಕ್ರಿಯೆ ಅರಿತುಕೊಳ್ಳಲು ಅತ್ಯಾಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಉಪಕರಣಗಳ ಬಳಕೆಯ ಮೂಲಕ…

Read More

ಮಡಿಕೇರಿ ಜು.11 :  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ  ನೀಡಲಾಯಿತು. ಮಣಿಪಾಲದ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಆಡಿಟೋರಿಯಂನಲ್ಲಿ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟಿಸಿದರು. ಕರ್ನಾಟಕದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು. ಕೊಡಗು ಜಿಲ್ಲೆಯಿಂದ ಎಸ್.ಎಸ್.ಎಲ್.ಸಿಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿನಿ ಮಡಿಕೇರಿಯ ಬಿ.ಎಸ್.ರಫೀಕ್ ಅಹಮದ್ ಅವರ ಪುತ್ರಿ ರಿದಾ ಸುಮನ್ ಬಿ.ಆರ್(98.4) ಹಾಗೂ ಪಿ.ಯು.ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿ ಕುಶಾಲನಗರದ ಕುಡೆಕಲ್ ಗಣೇಶ್ ಅವರ ಪುತ್ರಿ ಶಿವಾನಿ ಕೆ.ಜಿ(93.87) ಸನ್ಮಾನಕ್ಕೆ…

Read More

ನಾಪೋಕ್ಲು  ಜು.11 :  ನಾಪೋಕ್ಲು ಗ್ರಾ.ಪಂ ಗೆ ಒಳಪಟ್ಟ ಚೆರಿಯ ಪರಂಬು ಗ್ರಾಮದಲ್ಲಿ ರಸ್ತೆಯನ್ನು ಹಗೆದು ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡಿ ಮಾಡಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಪಂಚಾಯಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಗ್ರಾಮಸ್ಥ ಅಬ್ದುಲ್ ಕರೀಮ್ ಕಳೆದ ಹಲವಾರು ವರ್ಷಗಳಿಂದ ಚೆರಿಯಪರಂಬು ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯವನ್ನು ಒದಗಿಸಲು ಪಂಚಾಯಿತಿ ವಿಫಲವಾಗಿದೆ. ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಗೆ ಪರ್ಯಾಯ ಚರಂಡಿ ವ್ಯವಸ್ಥೆ ನಿರ್ಮಿಸದೆ ಇರುವ ಕಾರಣ ಪಟ್ಟಣದ ಮಾರುಕಟ್ಟೆ ಹಾಗೂ ಪದವಿ ಪೂರ್ವ ಕಾಲೇಜು ಕಡೆಯಿಂದ ಬರುವ ಕೆಸರು ಮಿಶ್ರಿತ ಮಳೆ ನೀರು ನಮ್ಮ ಗ್ರಾಮಕ್ಕೆ ತೆರಳುವ ರಸ್ತೆಯಲ್ಲೇ ಮದ್ಯದಲ್ಲೇ ಹರಿಯುತ್ತಿದೆ.ಇದರಿಂದ ಬರುವ ಮಣ್ಣು ರಸ್ತೆಯಲ್ಲೇ ಶೇಖರಣೆಗೊಂಡು ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸಲು ಭವಣೆ ಪಡುವ ಪರಿಸ್ಥಿತಿನಿರ್ಮಾಣವಾಗಿದೆ.ಇದನ್ನು ದುರಸ್ಥಿ ಪಡಿಸಲು ಕೆಲವು ದಿನಗಳ ಹಿಂದೆ ಪಂಚಾಯಿತಿಯ ಗಮನಕ್ಕೆ ತಂದ ಹಿನ್ನಲೆ ಶನಿವಾರ ಚರಂಡಿ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಆದರೆ ರಸ್ತೆಯನ್ನೇ ಹಗೆದು ಅವೈಜ್ಞಾನಿಕವಾಗಿ ಚರಂಡಿ ನಿರ್ಮಿಸುತ್ತಿರುವ…

Read More

ಮಡಿಕೇರಿ ಜು.11 :  ಸಿದ್ದಾಪುರ ಗುಹ್ಯ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಪಕ್ಕದಲ್ಲಿ ಇರುವ ಏಂಜಲ್ ಫೀಡ್ ಜ್ಯೋತಿ ಪೊನ್ನಪ್ಪ ಅವರ ತೋಟದಲ್ಲಿ ಹಾಡಹಗಲೇ  ಧಿಡೀರನೆ ಆನೆ  ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದೆ. ಇತ್ತೀಚೆಗೆ ಗುಹ್ಯ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕೂಲಿ ಕಾರ್ಮಿಕರು, ಶಾಲಾ ಮಕ್ಕಳು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ತಕ್ಷಣವೆ ಆನೆಗಳನ್ನು ಕಾಡಿಗಟ್ಟುವ  ಕೆಲಸ ಆಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.  ವರದಿ : ಗುಹ್ಯಸುರೇಶ್  

Read More