ಲೇಖಕ: admin

ಸೋಮವಾರಪೇಟೆ ಜು.11 : ತಾಲ್ಲೂಕು ಕಚೇರಿಯಲ್ಲಿ ಕೆಲ ಅಧಿಕಾರಿಗಳು ಸಿಬ್ಬಂದಿಗಳಿಂದ ರೈತರ ಶೋಷಣೆ ಆಗುತ್ತಿದೆ ಎಂದು ಆರೋಪಿಸಿರುವ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ರೈತರು ತಕ್ಷಣವೇ ಅಧಿಕಾರಿಗಳನ್ನು ವರ್ಗಾವಣೆಗೊಳಿಸುವಂತೆ ಆಗ್ರಹಿಸಿದ್ದಾರೆ. ಸಾಮಾಜಿಕ ಹೋರಾಟಗಾರ ಬಿ.ಪಿ.ಅನಿಲ್ ಕುಮಾರ್, ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಲಿಂಗೇರಿ ರಾಜೇಶ್, ಕರವೇ ತಾಲ್ಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಕಾಫಿ ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಎಂ.ಸಿ.ಮುದ್ದಪ್ಪ ಹಾಗೂ ರೈತ ಮುಖಂಡರ ನೇತೃತ್ವದಲ್ಲಿ ಸೋಮವಾರಪೇಟೆ ತಾಲ್ಲೂಕು ಆಡಳಿತ ಸೌಧ ಜಮಾಯಿಸಿದ ಪ್ರತಿಭಟನಕಾರರು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವಂತೆ ಪಟ್ಟು ಹಿಡಿದರು. ಅರ್ಧ ಗಂಟೆಗಳ ಕಾಲ ತಹಶೀಲ್ದಾರ್ ಸ್ಥಳಕ್ಕೆ ಬರದೆ ಇದ್ದಾಗ, ಆಕ್ರೋಶಗೊಂಡ ಪ್ರತಿಭಟನಾಕಾರರು ಕಚೇರಿಗೆ ಬೀಗ ಜಡಿಯುವುದಾಗಿ ಎಚ್ಚರಿಕೆ ನೀಡಿದರು. ಇನ್ಸ್‍ಪೆಕ್ಟರ್ ರಾಮಚಂದ್ರನಾಯಕ್ ತಹಸೀಲ್ದಾರ್‍ರನ್ನು ಕರೆತಂದರು. ಪೊಲೀಸ್ ಬಂದೋಬಸ್ತ್‍ನಲ್ಲಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಕಚೇರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು, ಬ್ರೋಕರ್‍ಗಳ ಹಾವಳಿ, ಬಡ ರೈತರ ಪೋಡಿ ದುರಸ್ತಿ…

Read More

ನಾಪೋಕ್ಲು ಜು.10 : ಕಾಡಾನೆಗಳ ನಿರಂತರ ಉಪಟಳದಿಂದ ಬೇಸತ್ತ ಸಮೀಪದ ಚೆಯ್ಯಂಡಾಣೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು ಸೋಮವಾರ ವಿರಾಜಪೇಟೆ – ನಾಪೋಕ್ಲು ಮುಖ್ಯ ರಸ್ತೆಯ ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿದರು.  ಕಾಡಾನೆಗಳ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಚೆಯ್ಯಂಡಾಣೆ-ನಾಪೋಕ್ಲು ಮುಖ್ಯರಸ್ತೆಯಲ್ಲಿ ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 10 ಗಂಟೆಯಿಂದ 12 ಗಂಟೆ ವರೆಗೆ ಎರಡು ಗಂಟೆಗಳ ಕಾಲ  ಸಂಪರ್ಕ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಅರಣ್ಯ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳು ಆಗಮಿಸುವಂತೆ ಪಟ್ಟು ಹಿಡಿದರು.    ಕಾಡಾನೆಗಳ ನಿರಂತರ ಧಾಳಿಯಿಂದ ಕಾಫಿ, ಬಾಳೆ, ಅಡಿಕೆ ತೋಟಗಳು ನಾಶವಾಗುತ್ತಿವೆ. ಭತ್ತದ ಗದ್ದೆಗಳಲ್ಲಿ ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ.ಕಾರ್ಮಿಕರು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ವನ್ಯಜೀವಿ ದಾಳಿಯಿಂದ ಗ್ರಾಮಸ್ಥರು ನಲುಗುತ್ತಿದ್ದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಅಧಿಕಾರಿಗಳು  ಕೃಷಿಕರ ಸಮಸ್ಯೆಗೆ ಸ್ಪಂದಿಸಬೇಕು ಮತ್ತು 10 ಆನೆಗಳ ಸ್ಥಳಾಂತರಕ್ಕೆ  ಮೇಲಧಿಕಾರಿಗಳ ಅನುಮತಿ ಪಡೆದು ತಕ್ಷಣ…

Read More

ಮಡಿಕೇರಿ ಜು.10 : ರೋಟರಿ ಮಡಿಕೇರಿ ವುಡ್ಸ್ ನ 2023-24 ನೇ ಸಾಲಿನ ನೂತನ ಅಧ್ಯಕ್ಷ ರೋಟರಿಯನ್ ಕೆ.ವಸಂತ ಕುಮಾರ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜು.12 ರಂದು ನಡೆಯಲಿದೆ. ಅಂದು ಸಂಜೆ 6.30 ಗಂಟೆಗೆ ಮಡಿಕೇರಿ ರೋಟರಿ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಜಿಲ್ಲಾ ಯೋಜನಾ ಜಿಲ್ಲಾಧ್ಯಕ್ಷ ರೋಟರಿಯನ್ ಸತೀಶ್ ಬೋಳಾರ್, ರೋಟರಿ ವಲಯ 6ರ ಸಹಾಯಕ ಗವರ್ನರ್ ರೋಟರಿಯನ್ ಡಿ.ಎಂ.ತಿಲಕ್ ಪೊನ್ನಪ್ಪ ಹಾಗೂ ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಜು.10 : ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿರುವ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ನಗರದಲ್ಲಿ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಚೆಸ್ಕಾಂ ನಿಗಮದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಏಕಾಏಕಿ ವಿದ್ಯುತ್ ಬಿಲ್ ಏರಿಕೆ ಮಾಡುವ ಮೂಲಕ ನಷ್ಟದಲ್ಲಿರುವ ರೈತರು ಮತ್ತು ಬೆಳೆಗಾರರ ನೋವಿನ ಮೇಲೆ ಬರೆ ಎಳೆಯಲಾಗುತ್ತಿದೆ. ತಕ್ಷಣವೇ ವಿದ್ಯುತ್ ಬಿಲ್ ಅನ್ನು ಇಳಿಕೆ ಮಾಡಬೇಕು. ಈ ಸಮಸ್ಯೆ ನಿವಾರಣೆಗೆ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಜಿಲ್ಲೆಯಲ್ಲಿ ನಿರಂತರವಾಗಿ ವಿದ್ಯುಚ್ಚಕ್ತಿ ಸಮಸ್ಯೆ ತಲೆದೋರಿದೆ. ಕಳೆದ 20 ವರ್ಷಗಳಿಂದ ಎದುರಾಗಿರುವ ಸಮಸ್ಯೆಗೆ ಇಂದಿಗೂ ಪರಿಹಾರ ದೊರೆತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತೋಟಗಳಲ್ಲಿ ಜಂಗಲ್ ಕ್ಲಿಯರಿಂಗ್ ಮಾಡದೇ ಇರುವುದರಿಂದ…

Read More

ಮಡಿಕೇರಿ ಜು.10 : ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ವಾಹನಗಳು ನಿಯಮಾನುಸಾರ ಹಾಗೂ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶಾನುಸಾರ ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳಡಿಯಲ್ಲಿ ನಿಗದಿಪಡಿಸಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗುತ್ತದೆ. ಶಾಲಾ ವಾಹನಗಳಲ್ಲಿ ಚಾಲ್ತಿಯಲ್ಲಿರುವ ಜಿಪಿಎಸ್ ಅಳವಡಿಕೆ ಕಡ್ಡಾಯವಾಗಿದ್ದು, ವಾಹನದ ನಾಲ್ಕು ಕಡೆಗಳಲ್ಲಿ ಶಾಲೆಯ ಹೆಸರು ಮತ್ತು ದೂರವಾಣಿ ಸಂಖ್ಯೆ ನಮೂದಿಸಿರಬೇಕು. ಚಾಲ್ತಿಯಲ್ಲಿರುವ ಸ್ಪೀಡ್ ಗವರ್ನರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಅಗ್ನಿನಂದಕ ಮತ್ತು ಹ್ಯಾಮರ್ ಹೊಂದಿರಬೇಕು. ರಿಫ್ಲೆಕ್ಟಿವ್ ಟೇಪ್ ಅಳವಡಿಸಿರಬೇಕು. ನಿಗದಿತ ಸಾಮಥ್ರ್ಯಕ್ಕೆ ಮೀರಿ ಮಕ್ಕಳನ್ನು ಕರೆದೊಯ್ಯಬಾರದು. ವಾಹನದಲ್ಲಿ ಒಬ್ಬರು ಸಹಾಯಕರು ಇರಬೇಕು. ಹಾಗೂ ಕಡ್ಡಾಯವಾಗಿ ಚಾಲ್ತಿಯಲ್ಲಿರುವ ವಾಹನದ ದಾಖಲೆಗಳಾದ ಅರ್ಹತಾ ಪ್ರಮಾಣ ಪತ್ರ, ವಿಮಾ ಪ್ರಮಾಣ ಪತ್ರ, ವಾಯು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರ ಮತ್ತು ತೆರಿಗೆ ಚೀಟಿಗಳನ್ನು ಶಾಲಾ ವಾಹನಗಳಲ್ಲಿ ಇಟ್ಟುಕೊಂಡಿರಬೇಕಾಗಿರುತ್ತದೆ. ಹಾಗೂ ಚಾಲಕರು ಮತ್ತು ಸಹಾಯಕರು ಪೂರ್ಣ ಸಮವಸ್ತ್ರದಲ್ಲಿದ್ದು, ಚಾಲಕರು ಚಾಲ್ತಿಯಲ್ಲಿರುವ ಡಿಎಲ್ ಹೊಂದಿರಬೇಕಾಗುತ್ತದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದ ಶಾಲಾ ಬಸ್‍ಗಳ ತೀವ್ರವಾದ…

Read More

ಮಡಿಕೇರಿ ಜು.10 : 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ/ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರ ಆನ್‍ಲೈನ್ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ. ಅದರಂತೆ ಕೊಡಗು ಜಿಲ್ಲೆಯಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ /ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರುಗಳಿಗೆ ಆನ್‍ಲೈನ್ ಕೌನ್ಸಿಲಿಂಗ್ ಜು.11 ರ ಬೆಳಗ್ಗೆ 10 ಗಂಟೆಯಿಂದ ಜುಲೈ, 17 ರವರೆಗೆ ನಡೆಯಲಿದೆ. ವೇಳಾಪಟ್ಟಿಯನುಸಾರ ಸಂಬಂಧಿಸಿದ ಶಿಕ್ಷಕರು ನಿಗಧಿತ ದಿನಾಂಕದಂದು ಕೌನ್ಸಿಲಿಂಗ್‍ಗೆ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ  ತಿಳಿಸಿದ್ದಾರೆ.

Read More

ಮಡಿಕೇರಿ ಜು.10 : ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆ ಸುಂಟಿಕೊಪ್ಪದ ಮಂಜುನಾಥಯ್ಯ ಮೀನಾಕ್ಷಮ್ಮ ಮಂಟಪ ಸಭಾಂಗಣದಲ್ಲಿ ನಡೆಯಿತು. ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯ ವರದಿ ಮತ್ತು ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು. ಮುಂದಿನ ದಿನಗಳಲ್ಲಿ ಮೊಗೇರ ಸಮಾಜವನ್ನು ಬಲಿಷ್ಠಗೊಳಿಸಲು ಎಲ್ಲಾ ಗ್ರಾಮದಲ್ಲೂ ಸಮಿತಿ ರಚಿಸುವಂತೆ ಮತ್ತು ಮೊಗೇರ ಜನಾಂಗಕ್ಕೆ ವಸತಿ ಸೌಲಭ್ಯ ಕಲ್ಪಿಸಲು ಕೈಗೊಳ್ಳಬೇಕಾದ ವಿಚಾರದ ಬಗ್ಗೆ ಗಂಭೀರವಾದ ಚರ್ಚೆ ನಡೆಸಲಾಯಿತು. ಜಿಲ್ಲಾ ಸಮಿತಿ ಮತ್ತು ಎಲ್ಲಾ ತಾಲೂಕು ಸಮಿತಿಯನ್ನು ಪುನರ್ ರಚಿಸುವಂತೆ ತೀರ್ಮಾನ ಕೈಗೊಳ್ಳಲಾಯಿತು. ವೇದಿಕೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಬಿ.ಶಿವಪ್ಪ, ಗೌರವ ಅಧ್ಯಕ್ಷ ಪಿ.ಎಂ.ರವಿ, ಜಿಲ್ಲಾ ಉಪಾಧ್ಯಕ್ಷ ದೇವಪ್ಪ, ಕುಶಾಲನಗರ ತಾಲೂಕು ಅಧ್ಯಕ್ಷ ಗಣೇಶ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಉಮೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್, ಖಜಾಂಚಿ ಮಂಜು ಬರಡಿ, ಉಪಾಧ್ಯಕ್ಷ ಕೃಷ್ಣ ಹಾಜರಿದ್ದರು. ನೂತನ ಆಡಳಿತ ಮಂಡಳಿ ರಚನೆ : ಮೊಗೇರ ಸೇವಾ ಸಮಾಜದ…

Read More

ಮಡಿಕೇರಿ ಜು.10 : ಜಿಲ್ಲೆಯಲ್ಲಿ ಸುಮಾರು 2075 ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳವನ್ನು ಬಿತ್ತನೆ ಮಾಡಿರುತ್ತಾರೆ. ಆದರೆ ಇದೀಗ ಮುಸುಕಿನ ಜೋಳಕ್ಕೆ ಹೆಬ್ಬಾಲೆ, ಕೂಡಿಗೆ ಮತ್ತು ಮರೂರು ಗ್ರಾಮಗಳ ಸುತ್ತಮುತ್ತ ಬಿತ್ತನೆ ಮಾಡಿದ ಮುಸುಕಿನ ಜೋಳದಲ್ಲಿ ಸೈನಿಕ ಹುಳು ಈ ವರ್ಷ ಈಗಾಗಲೇ ಕಾಣಿಸಿಕೊಂಡಿದ್ದು, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಶಭಾನಾ ಎಂ ಶೇಖ್, ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ತಜ್ಞ ಡಾ.ವೀರೇಂದ್ರ ಕುಮಾರ್‍ಕೆ.ವಿ ಮತ್ತು ಕೃಷಿ ಇಲಾಖೆಯ ಕೃಷಿ ಅಧಿಕಾರಿ ನವ್ಯ ನಾಣಯ್ಯ ಇವರನ್ನು ಒಳಗೊಂಡ ತಂಡ ಕುಶಾಲನಗರ ತಾಲ್ಲೂಕಿನ ಮರೂರು ಗ್ರಾಮದ ಮಹೇಶ್ ಮತ್ತು ಕಪನಪ್ಪನವರ ಮುಸುಕಿನ ಜೋಳದ ಗದ್ದೆಗಳಿಗೆ ಭೇಟಿ ಕೊಟ್ಟು, ಸೈನಿಕ ಹುಳುವಿನ ಭಾದೆಯನ್ನು ಪರೀಶೀಲಿಸಿದರು. ನಂತರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಭಾನಾ ಎಂ ಶೇಖ್ ಅವರು ರೈತರಿಗೆ ಈ ಕೀಟದ ಹತೋಟಿಯ ಬಗ್ಗೆ ಮುಂಜಾಗರೂಕತೆಯನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದರು. ಗೋಣಿಕೊಪ್ಪಲು ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಇಲಾಖೆ, ಕೊಡಗು…

Read More

ಮಡಿಕೇರಿ ಜು.10 : ನಗರಸಭಾ ಸದಸ್ಯ ಹಾಗೂ ಮಕ್ಕಂದೂರು ಕೊಡವ ಸಮಾಜದ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಮಕ್ಕಂದೂರು ಕೊಡವ ಸಮಾಜ ತೀವ್ರವಾಗಿ ಖಂಡಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡವ ಸಮಾಜದ ಅಧ್ಯಕ್ಷ ತಂಬುಕುತ್ತೀರ ಮಧು ಮಂದಣ್ಣ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕ್ಷುಲಕ ಕಾರಣಕ್ಕೆ ಜನಪ್ರತಿನಿಧಿಯೊಬ್ಬರನ್ನು ಹಾಡಹಗಲೇ ರಸ್ತೆಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿರುವುದು ಅಪರಾಧವಾಗಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸದೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷಯಾಗುವಂತೆ ನೋಡಿಕೊಳ್ಳಬೇಕು. ಆ ಮೂಲಕ ಅಪ್ಪಣ್ಣ ಅವರಿಗೆ ನ್ಯಾಯ ಒದಗಿಸಬೇಕು. ತಪ್ಪಿದಲ್ಲಿ ಮೂಲನಿವಾಸಿಗಳು ಒಗ್ಗೂಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಕೊಡಗಿನಲ್ಲಿ ಮೂಲ ನಿವಾಸಿಗಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದ್ದು, ಈ ಬಗ್ಗೆ ಜನಾಂಗ ಬಾಂಧವರು ಗಂಭೀರ ಚಿಂತನೆ…

Read More

ಮಡಿಕೇರಿ ಜು.10 : ವಿರಾಜಪೇಟೆ ವಿಧಾನಸಭಾಕ್ಷೇತದ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಕೊಡವ ಹಾಕಿ ಅಕಾಡೆಮಿ ವತಿಯಿಂದ ಅಭಿನಂದಿಸಿ ಶುಭ ಕೋರಲಾಯಿತು. ವಿರಾಜಪೇಟೆಯಲ್ಲಿನ ಶಾಸಕರ ಕಚೇರಿಯಲ್ಲಿ ಭೇಟಿಯಾದ ಅಕಾಡೆಮಿ ಪದಾಧಿಕಾರಿಗಳು ಹಾಗೂ ಸದಸ್ಯರು, ಅಕಾಡೆಮಿಯ ಲಾಂಛನವುಳ್ಳ ಸ್ಮರಣಿಕೆ ನೀಡಿ ಗೌರವಿಸಿದರು. ಹಾಕಿ ಕ್ರೀಡೆಗೆ ಸಂಬಂಧಿಸಿದಂತೆ ಶಾಸಕರಾಗುವುದಕ್ಕೂ ಮುನ್ನ ಹಲವು ರೀತಿಯ ಸಹಕಾರ ನೀಡಿದ್ದಾರೆ. ಮುಂದೆಯೂ ಸಹಕಾರ ನೀಡುವಂತೆ ಪದಾಧಿಕಾರಿಗಳು ಕೋರಿದರು. ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ, ಉಪಾಧ್ಯಕ್ಷ ಬಡಕಡ ದೀನಾ ಪೂವಯ್ಯ, ಕುಕ್ಕೇರ ಜಯಚಿಣ್ಣಪ್ಪ, ಮಾದಂಡ ಎಸ್.ಪೂವಯ್ಯ, ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್, ಜಂಟಿ ಕಾರ್ಯದರ್ಶಿ ಚೈಯ್ಯಂಡ ಸತ್ಯ ಗಣಪತಿ, ಸಮಿತಿ ಸದಸ್ಯರಾದ ಕಂಬೀರಂಡ ರಾಕಿ ಪೂವಣ್ಣ, ಚೇನಂದ ಸುರೇಶ್ ನಾಣಯ್ಯ, ಕಲಿಯಂಡ ಸಂಪತ್ ಅಯ್ಯಪ್ಪ, ಕುಲ್ಲೇಟಿರ ಅರುಣ್ ಬೇಬ, ಮಾರ್ಚಂಡ ಗಣೇಶ್ ಪೊನ್ನಪ್ಪ, ನೆರ್ಪಂಡ ಹರ್ಷ ಮಂದಣ್ಣ ಈ ಸಂದರ್ಭ ಹಾಜರಿದ್ದರು. 

Read More