ಲೇಖಕ: admin

ವಿರಾಜಪೇಟೆ ಜು.10 : ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್ ಅವರು ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ಎಸ್‍ಎಸ್‍ಎಲ್‍ಸಿಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ವಿಷಯ ಶಿಕ್ಷಕರಿಗೆ ವಿಧಾನ ಪರಿಷತ್ ಸದಸ್ಯರ ಉಪಸ್ಥಿತಿಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲು ಅನುಮತಿ ಪಡೆಯಲಾಯಿತು. ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರು ಹಾಗೂ ಸಹಶಿಕ್ಷಕರ ಸಂಘದ ರಾಜ್ಯ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Read More

ಮಡಿಕೇರಿ ಜು.10 :  ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಅಂಗವಾಗಿ, ಬೆಳ್ಳಿಮಹೋತ್ಸವ ಆಚರಣಾ ಸಮಿತಿ, ಬೆಳ್ಳಿ ಮಹೋತ್ಸವ ಕ್ರೀಡಾ ಸಮಿತಿ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ   ಏರ್ಪಡಿಸಲಾಗಿದ್ದ ಪತ್ರಕರ್ತರ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಆದರ್ಶ್ ಅದ್ಕಲೇಗಾರ್, ನವೀನ್ ಡಿಸೋಜ ಚಾಂಪಿಯನ್ನಾಗಿ ಹೊರಹೊಮ್ಮಿದರು. ಸಿಂಗಲ್ಸ್ ವಿಭಾಗದಲ್ಲಿ 16 ತಂಡಗಳು ಭಾಗವಹಿಸಿದ್ದರೆ, ಡಬಲ್ಸ್‍ನಲ್ಲಿ 10 ತಂಡಗಳು ಪಾಲ್ಗೊಂಡಿತ್ತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯದಲ್ಲಿ ಸೆಮಿಫೈನಲ್ಸ್ ಹಂತಕ್ಕೆ ಸಿಂಗಲ್ಸ್ ವಿಭಾಗದಲ್ಲಿ ಆದರ್ಶ್ ಅದ್ಕಲೇಗಾರ್, ನವೀನ್ ಡಿಸೋಜಾ, ಲೋಕೇಶ್ ಕಾಟಕೇರಿ, ವಿನು ಕುಶಾಲಪ್ಪ ಅರ್ಹತೆ ಪಡೆದುಕೊಂಡರು. ಡಬಲ್ಸ್ ವಿಭಾಗದಲ್ಲಿ ಆದರ್ಶ್ ಅದ್ಕಲೇಗಾರ್-ನವೀನ್ ಡಿಸೋಜ, ಲೋಕೇಶ್ ಕಾಟಕೇರಿ-ವಿನು ಕುಶಾಲಪ್ಪ, ವಿನೋದ್-ಸುಬ್ರಮಣಿ, ಪ್ರಜ್ವಲ್-ಇಸ್ಮಾಯಿಲ್ ಕಂಡಕೆರೆ ತಂಡ ಪ್ರವೇಶ ಪಡೆಯಿತು. ಸಿಂಗಲ್ಸ್ ವಿಭಾಗದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ವಿನುಕುಶಾಲಪ್ಪರನ್ನು ಲೋಕೇಶ್ ಕಾಟಕೇರಿ ಮಣಿಸಿ ಫೈನಲ್ ಪ್ರವೇಶಿಸಿದರೆ, ನವೀನ್ ಡಿಸೋಜರನ್ನು ಆದರ್ಶ್ ಅದ್ಕಲೇಗಾರ್ ಮಣಿಸಿ ಫೈನಲ್ ಪ್ರವೇಶಿಸಿದರು. ಫೈನಲ್ ಪಂದ್ಯದಲ್ಲಿ…

Read More

ಮಡಿಕೇರಿ ಜು.10 : ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ, ಮಡಿಕೇರಿ ನಗರ ಬಂಟರ ಮಹಿಳಾ ಘಟಕ ಮತ್ತು ಗಾಳಿಬೀಡು ಹೋಬಳಿ ಬಂಟರ ಸಂಘದ ಸಹಕಾರದೊಂದಿ ಜು.30 ರಂದು ಗಾಳಿಬೀಡಿನಲ್ಲಿ ಮುಂಗಾರಿನ ಸಂಸ್ಕೃತಿಯನ್ನು ಪ್ರತಿಬಂಬಿಸುವ ‘ಆಟಿಡೊಂಜಿ ದಿನ ಕೆ¸ರ್‍ದ ಗೊಬ್ಬು’ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ ಅಸೋಸಿಯೇಷನ್ ಅಧ್ಯಕ್ಷ ಬಿ.ಜೆ. ವಸಚಿತ್ ರೈ ಈ ಬಗ್ಗೆ ಮಾಹಿತಿ ನೀಡಿ, ಇಂದಿನ ಪೀಳಿಗೆಗೆ ನಮ್ಮ ಸಾಂಪ್ರದಾಯಿಕ ಬದುಕಿನ ಪರಿಚಯ ಮಾಡಿಕೊಡುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿದ್ದೇವೆ. ಕಾರ್ಯಕ್ರಮ ಗಾಳಿಬೀಡಿನ ಹೊರಮಲೆ ಶಿವಪ್ರಸಾದ್‍ರವರ ಭತ್ತದ ಗದ್ದೆಯಲ್ಲಿ ನಡೆಯಲಿದೆಯೆಂದು ತಿಳಿಸಿದರು. ಅಸೋಸಿಯೇಷನ್ ಉಪಾಧ್ಯಕ್ಷ ಶರತ್ ಶೆಟ್ಟಿ ಕಾರ್ಯಕ್ರಮದ ವಿವರ ನೀಡಿ, ಕೆಸರು ಗದ್ದೆಯಲ್ಲಿ ಪುರುಷರಿಗೆ ಹ್ಯಾಂಡ್ ಬಾಲ್(7+2), 100 ಮೀಟರ್ ಓಟ(ವಿವಿಧ ವಿಭಾಗದಲ್ಲಿ), ಹಗ್ಗಜಗ್ಗಾಟ, ದಂಪತಿ ಓಟಗಳನ್ನು ಆಯೋಜಿಸಲಾಗಿದೆ. ಮಹಿಳೆಯರಿಗೆ 100 ಮೀಟರ್ ಓಟ, ಹಗ್ಗಜಗ್ಗಾಟ, ನಿಂಬೆ ಚಮಚ, ಪಾಸಿಂಗ್ ಬಾಲ್, ಮಕ್ಕಳಿಗೆ 100 ಮೀ. ಓಟ ಹಾಗೂ ಕೆಸರುಗದ್ದೆಯಲ್ಲಿ ವಿವಿಧ…

Read More

ಮಡಿಕೇರಿ ಜು.10 : ಚಿನ್ನಾಭರಣ ಮಳಿಗೆಯಲ್ಲಿ ನಕಲಿ ಆಭರಣವನ್ನಿಟ್ಟು 22.4 ಗ್ರಾಂ. ತೂಕದ ಅಸಲಿ ಚಿನ್ನಾಭರಣವನ್ನು ಕದ್ದೊಯ್ದ ಚಿತ್ರದುರ್ಗ ಮೂಲದ ಇಬ್ಬರು ಮಹಿಳಾ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಶಾಲನಗರದ ರಥಬೀದಿಯಲ್ಲಿರುವ ಶೀತಲ್ ಜ್ಯುವೆಲ್ಲರಿಗೆ ಜೂ.5 ರಂದು ಆಗಮಿಸಿದ ಇಬ್ಬರು ಬುರ್ಖಾಧಾರಿ ಮಹಿಳೆಯರು ಹಾಗೂ ಒಬ್ಬ ಯುವಕ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಮಳಿಗೆಯ ಸಿಬ್ಬಂದಿಗಳ ಗಮನವನ್ನು ಬೇರೆಡೆ ಸೆಳೆದು, ಅಸಲಿ ಆಭರಣವನ್ನು ಲಪಟಾಯಿಸಿ, ನಕಲಿ ಆಭರಣವನ್ನು ಇಟ್ಟು ವಂಚಿಸಿ ಪರಾರಿಯಾಗಿದ್ದರು. ಈ ಬಗ್ಗೆ ದೂರು ದಾಖಲಿಸಿಕೊಂಡ ಕುಶಾಲನಗರ ಪೊಲೀಸರು ತನಿಖೆ ಕೈಗೊಂಡು ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಪಾಮರಹಳ್ಳಿ ಗ್ರಾಮದ ಕೈರುನ್ (46) ಹಾಗೂ ಜೈರಾಭಿ (36) ಎಂಬುವವರನ್ನು ಬಂಧಿಸಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‍ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ಪಿಐ ಬಿ.ಜಿ.ಮಹೇಶ್ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಉತ್ತಮವಾಗಿ ಕಾರ್ಯನಿರ್ವಹಿಸಿ ಪ್ರಕರಣವನ್ನು ಭೇದಿಸಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್…

Read More

ಮಡಿಕೇರಿ ಜು.10 :  ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿ, 241.4 ಗ್ರಾಂ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪಂಚವಳ್ಳಿ ನಿವಾಸಿಗಳಾದ ಸದ್ದಾಂ ಹುಸೇನ್ (35) ಹಾಗೂ ಜಾಬಿಯ ಉಲ್ಲಾಖಾನ್ (40) ಎಂಬುವವರೇ ಬಂಧಿತ ಆರೋಪಿಗಳು. ಮೂರ್ನಾಡುವಿನಿಂದ-ಕೊಂಡಂಗೇರಿಗೆ ಹೋಗುವ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ಉಪ ವಿಭಾಗದ ಡಿವೈಎಸ್‍ಪಿ ಎಂ.ಜಗದೀಶ್, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಪಿಐ ಯು.ಉಮೇಶ್ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ. ::: ಮಾಹಿತಿ ನೀಡಿ ::: ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ…

Read More

ಮಡಿಕೇರಿ ಜು.10 :  ಮನೆಯ ಆವರಣದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಮಾಯಮುಡಿ ಗ್ರಾಮದ ದಾಸ ಕಾಲೋನಿ ನಿವಾಸಿ ಸುಜಯ್ (29)ಬಂಧಿತ ಆರೋಪಿ. ತನ್ನ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು 49 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಿರಾಜಪೇಟೆ ಉಪ ವಿಭಾಗ ಡಿವೈಎಸ್‍ಪಿ ಆರ್.ಮೋಹನ್‍ಕುಮಾರ್, ಗೋಣಿಕೊಪ್ಪ ವೃತ್ತ ಸಿಪಿಐ ಗೋವಿಂದರಾಜು, ಪಿಎಸ್‍ಐ ಕೆ.ಪಿ.ದಿಕ್ಷೀತ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರ ಕರ್ತವ್ಯ ನಿಷ್ಠೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

Read More

ಬೆಂಗಳೂರು :  ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಗದಗ್ ನಿಂದ ತೆರಳಿರುವ 23 ಮಂದಿ ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 km ದೂರದಲ್ಲಿರುವ ಪಂಚತಾರ್ನಿ ಟೆಂಟ್ ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಿದ್ದು, ಈ ಹಿನ್ನೆಲೆಯಲ್ಲಿ ಕೂಡಲೇ ರಕ್ಷಣಾ ಕಾರ್ಯ ಕೈಗೊಂಡು, ಎಲ್ಲರನ್ನೂ ಸುರಕ್ಷಿತವಾಗಿ ವಾಪಸು ಕರೆತರುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

Read More

ಮಡಿಕೇರಿ ಜು.10 : ಕೊಡಗಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಬೆಳಗ್ಗೆ ಮತ್ತು ಮಧ್ಯಾಹ್ನ ಬಿಸಿಲಿನ ವಾತಾವರಣ ಕಂಡು ಬಂದಿತ್ತು. ಮುಂದಿನ 2-3 ದಿನಗಳಲ್ಲಿ ರಾಜ್ಯದಾದ್ಯಂತ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ. ಅದರ ನಂತರ, 2023 ರ ಜು.13 ರಿಂದ 15 ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 98 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 818.51 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1281.69 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.65 ಮಿ.ಮೀ. ಕಳೆದ ವರ್ಷ ಇದೇ ದಿನ 134.53 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1273.12 ಮಿ.ಮೀ, ಕಳೆದ ವರ್ಷ…

Read More

ಮಡಿಕೇರಿ ಜು.10 : ಕುಶಾಲನಗರ  ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಆಗಮಿಸಿ ವಿದ್ಯಾರ್ಥಿಗಳು ಪದವಿ ಜೊತೆಗೆ ಸ್ನಾತಕೋತ್ತರ ಶಿಕ್ಷಣದ ಕಡೆ ಗಮನಹರಿಸಬೇಕು, ಪಠ್ಯ ಪುಸ್ತಕ ಗಳಿಗೆ ಮಾತ್ರ ಸೀಮಿತರಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಬಹುಮುಖ ಪ್ರತಿಭಾವಂತರಾಗಬೇಕು ಎಂದರು. ಕೊಡಗು ವಿಶ್ವ ವಿದ್ಯಾಲಯದ ಜೀವ ರಾಸಾಯನ ಶಾಸ್ತ್ರ ಪ್ರಾಧ್ಯಾಪಕರು ಹಾಗೂ ನಿರ್ದೇಶಕ ಪ್ರೊ. ಕೆ.ಕೆ.ಧರ್ಮಪ್ಪ   ಮಾತನಾಡಿ, ಇದು ಸ್ಪರ್ಧಾತ್ಮಕ ಯುಗ. ವಿದ್ಯಾರ್ಥಿಗಳು ಆರೋಗ್ಯಕರ ಸ್ಪರ್ಧಾ ಮನೋಭಾವದಿಂದ ಅಧ್ಯಯನ ಮಾಡಬೇಕು ಎಂದರು. ನಿವೃತ್ತ ಪ್ರಾಂಶುಪಾಲ ಹೆಚ್.ಬಿ.ಲಿಂಗಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತಿನ ಜೀವನಕ್ಕೆ ಹೆಚ್ಚು ಒತ್ತುಕೊಡಬೇಕೆಂದರು. ಮಾಜಿ ಜಿ.ಪಂ ಸದಸ್ಯ ವಿ.ಕೆ.ಶಶಿಧರ್ ಮಾತನಾಡಿ, ವಿದ್ಯಾರ್ಥಿಗಳು ಜಾತಿ, ಮತ, ಧರ್ಮ, ಲಿಂಗ, ಭಾಷೆ, ಪ್ರಾದೇಶಿಕತೆ ಮುಂತಾದ ಸಂಕುಚಿತ ಮನೋಭಾವಕ್ಕೆ ಎಡೆಗೊಡದೆ ವಿಶ್ವ ಮಾನವರಾಗಿ ಬದುಕಬೇಕು ಎಂದರು. ಪ್ರಾಂಶುಪಾಲ  ಬಿ.ಎಂ.ಪ್ರವೀಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಮಿತಿ ಸಂಚಾಲಕ ಡಾ. ಬಿ.ಡಿ.ಹರ್ಷ  ವಾರ್ಷಿಕ ವರದಿಯನ್ನು ವಾಚಿಸಿದರು.…

Read More

ನಾಪೋಕ್ಲು ಜು.10 : ಕಕ್ಕಬೆ ಗ್ರಾ.ಪಂ ವ್ಯಾಪ್ತಿಯ ಮರಂದೋಡು ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳು ಚಂಡೀರ ಗಪ್ಪುಗಣಪತಿಯವರ ಅಡಿಕೆ ತೋಟಕ್ಕೆಕೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ನಷ್ಟ ಉಂಟುಮಾಡಿವೆ. ಇದೇ ರೀತಿಯಾಗಿ ಗ್ರಾಮದ ಕಾಫಿ ಬೆಳೆಗಾರರಾದ ಚಂಡೀರ ಜಗದೀಶ್, ರನ್ನು ಉತ್ತಪ್ಪ, ದೇವರಾಜ್, ಪೂಣಚ್ಚ ಸೇರಿದಂತೆ ಇತರರ ತೋಟಗಳಿಗೂ ಕಾಡಾನೆಗಳು ನುಗ್ಗಿ ಕಾಫಿ ,ಅಡಿಕೆ, ತೆಂಗು, ಕರಿಮೆಣಸು,ಬಾಳೆ ಸೇರಿದಂತೆ ಕೃಷಿ ಉತ್ಪನ್ನ ಗಿಡಗಳನ್ನು ಧ್ವಂಸ ಮಾಡಿ ಬೆಳೆಗಳನ್ನು ನಾಶ ಪಡಿಸಿ ನಷ್ಟ ಸಂಭವಿಸಿದೆ. ಚೆಯ್ಯಂಡಾಣೆ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದಲ್ಲಿ ಕಾಡಾನೆಗಳ ಉಪಟಳ ದಿಂದ ಗ್ರಾಮಸ್ಥರು ನಲುಗುವಂತಾಗಿ ಕಳೆದ ಕೆಲವು ದಿನಗಳಿಂದ ಕಾಡಾನೆಗಳ ಹಿಂಡು ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕಾಡಾನೆಗಳ ಉಪಟಳದಿಂದ ಕಾರ್ಮಿಕರು ಕೆಲಸಕ್ಕೆ ತೆರಳು ಹಿಂದೇಟು ಹಾಕುತ್ತಿದ್ದು, ಮನೆಯಲ್ಲಿ ಕೂರುವ ಪ್ಪರಿಸ್ಥಿತಿ ಉದ್ಭವಿಸಿದೆ. ಆದ್ದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಗಳ ಸ್ಥಳಾಂತರ ಅಥವಾ ಪರ್ಯಾಯ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ತಪ್ಪಿದಲ್ಲಿ ಕಕ್ಕಬೆ ಪಟ್ಟಣದಲ್ಲಿ ಹುಣಸೂರು -…

Read More