ಮಡಿಕೇರಿ, NEWS DESK ಏ.18 : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಇಂಗ್ಲಿಷ್ ವಿಭಾಗದ ಜಾಯ್ಸ್ ಲಿಟರರಿ ಕ್ಲಬ್ ವತಿಯಿಂದ, ಹಳೆಯ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಪುಸ್ತಕಗಳನ್ನು ಮೀರಿ ನೈಜ ಪ್ರಪಂಚಕ್ಕಾಗಿ ಕೌಶಲ್ಯಗಳು ಎಂಬ ಎರಡು ದಿನಗಳ ಕೌಶಲ್ಯ ಕಾರ್ಯಾಗಾರವು ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು. ದ್ವಿತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳಾದ ಚೋಂದಮ್ಮ, ಸಪ್ನ ಹಾಗೂ ಲಿಖಿತ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಬಳಿಕ ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕರಾದ ಪೂಣಚ್ಚ ಕೆ.ಎಂ. ಅವರು ಸ್ವಾಗತ ಭಾಷಣ ಮಾಡಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಹಾಗೂ ಜಾಯ್ಸ್ ಲಿಟರರಿ ಕ್ಲಬ್ ಅಧ್ಯಕ್ಷೆ ಪ್ರೊ. ನಯನ ಕಶ್ಯಪ್ ಅವರು ಪ್ರಾಸ್ತಾವಿಕ ನುಡಿಯಲ್ಲಿ “ವಿದ್ಯಾರ್ಥಿಗಳು ಪಾಠದ ಜೊತೆಗೆ ವಿವಿಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದು ಬಹಳ ಮುಖ್ಯ ಎಂದು ತಿಳಿಸಿದರು. ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ, ಜೀವನ ಕೌಶಲ್ಯಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.” ಅತಿಥಿಯಾಗಿ ಭಾಗವಹಿಸಿದ್ದ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರು ಮಾತನಾಡಿ,…
ಲೇಖಕ: admin
ಮಡಿಕೇರಿ, NEWS DESK ಏ.18 : ಜಿಲ್ಲೆಯಲ್ಲಿ ಆಟೋ ದರ ಹಾಗೂ ಮಾಂದಲ್ ಪಟ್ಟಿಗೆ ತೆರಳುವ ಬಾಡಿಗೆ ವಾಹನ ದರ ಪರಿಷ್ಕರಣೆ ಸಂಬAಧ ‘ಉಪ ಸಮಿತಿ’ ರಚಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ಹನ್ನೆರಡು ವರ್ಷಗಳ ಹಿಂದೆ ಆಟೋ ದರ ಪರಿಷ್ಕರಣೆ ಮಾಡಲಾಗಿದ್ದು, ಈಗಿರುವ ದರವನ್ನು ಸ್ವಲ್ಪವಾದರೂ ಹೆಚ್ಚಿಸಬೇಕು ಎಂದು ಆಟೋ ಚಾಲಕರು/ಮಾಲಿಕರ ಸಂಘದ ಅಧ್ಯಕ್ಷರಾದ ಮೇದಪ್ಪ ಅವರು ಸಭೆಯಲ್ಲಿ ಕೋರಿದರು. ಆಟೋ ವಾಹನ ಬಿಡಿಭಾಗಗಳ ಬೆಲೆ ಹಾಗೂ ಇಂಧನ ದರ ಹೆಚ್ಚಳವಾಗಿರುವ ಹಿನ್ನೆಲೆ ಆಟೋ ಚಾಲಕರ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಆದ್ದರಿಂದ ದರ ಹೆಚ್ಚಳ ಮಾಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆಟೋ ದರ ಪರಿಷ್ಕರಣೆ ಸಂಬAಧ ಉಪ ಸಮಿತಿ ವರದಿ ಆಧರಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.…
ಮಡಿಕೇರಿ ಏ.17 NEWS DESK : ತರಬೇತಿ ಶಿಬಿರಗಳಲ್ಲಿ ಕಲಿತದ್ದನ್ನು ಮಕ್ಕಳು ಶಿಬಿರದ ನಂತರವೂ ಅಭ್ಯಾಸ ಮಾಡಬೇಕೆಂದು ಮೂರು ಬಾರಿ ಒಲಂಪಿಕ್ಸ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಹಿರಿಯ ಹಾಕಿ ಆಟಗಾರ ಮನೆಯಪಂಡ ಸೋಮಯ್ಯ ಕರೆ ನೀಡಿದರು. ಮಡಿಕೇರಿಯ ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಸ್ನರಣಾರ್ಥ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತಿರುವ ಮಕ್ಕಳ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರಕ್ಕೆ ಆಗಮಿಸಿ ಮಕ್ಕಳಿಗೆ ಹಿತವಚನ ನುಡಿದರು. ಕ್ರಿಕೆಟ್ ಆಟಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆಯಾದರೂ ಕೊಡಗು ಜಿಲ್ಲೆಯಲ್ಲಿ ಹಾಕಿ ಆಟ ಪ್ರಥಮವಾಗಿದೆ. ಈ ಶಿಬಿರದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹಾಕಿ ಆಟದಲ್ಲಿ ತೊಡಗಿಸಿರುವದು ಹೆಮ್ಮೆಯ ಸಂಗತಿ. ಶಿಬಿರzಲ್ಲಿ ತರಬೇತುದಾರರು ಹೇಳಿಕೊಡುವದನ್ನು ಗಮನವಿಟ್ಟು ಕಲಿಯಬೇಕು. ಯೋಗ ತರಬೇತಿ ಕೂಡುತ್ತಿದ್ದು, ಅದು ಆರೋಗ್ಯಕ್ಕೆ ಉತ್ತಮ. ಶಿಬಿರದ ಬಳಿಕವೂ ಮಕ್ಕಳು ಅಭ್ಯಾಸ ಮುಂದುವರೆಸಬೇಕೆಂದು ಕಿವಿ ಮಾತು ಹೇಳಿದರು. ಪದ್ಮಶ್ರೀ ಪ್ರಶಸ್ತಿ ಪಡೆದ, ವಿಶ್ವಕಪ್ ಗೆದ್ದ ತಂಡದಲ್ಲಿದ್ದ ಹಾಗೂ ಪ್ರಸ್ತುತ ಭಾರತ ತಂಡದಲ್ಲಿ ಆಡುತ್ತಿರುವ ಆಟಗಾರರ…
ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಹಾಗೂ ಇತರ ಕೃಷಿ ಪರಿಕರಗಳ ಆಳವಡಿಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳು ಮಧುವನ, ಪಾಲಿಹೌಸ್ ಹಾಗೂ ತೆರೆದ ಸಭಾಂಗಣವನ್ನು ಉದ್ಘಾಟಿಸಿದರು. ಕೇಂದ್ರದಲ್ಲಿ ಬೆಳೆದ ಅರ್ಕಾ ಸುಪ್ರೀಮ್, ಅರ್ಕಾ ಕೂರ್ಗ್ ಬಟರ್ಫ್ರೂಟ್ ಸೇರಿದಂತೆ ವಿವಿಧ ಹಣ್ಣು-ಹಂಪಲುಗಳು, ಕ್ರಷಿಯನ್ನು ಬಾಧಿಸುವ ವಿವಿಧ ಕೀಟಗಳು,ಸಾವಯವ ಗೊಬ್ಬರಗಳು, ಪೋಷಕಾಂಶಗಳು, ಹಣ್ಣಿನ ಗಿಡಗಳು ಹಾಗೂ ಕೃಷಿಕರ ತಾಜಾ ಜೇನು ಪ್ರದರ್ಶನಕ್ಕಿಡಲಾಗಿತ್ತು. ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ಮುರಳಿಧರ ಬಿ.ಎಂ. ಸ್ವಾಗತಿಸಿ, ಸಂಸ್ಥೆಯ 80ನೇ ವರ್ಷದ ಸ್ಥಾಪನಾ ಹಿನ್ನೆಲೆ ಕುರಿತು ಮಾಹಿತಿ ನೀಡಿದರು. ಈ ವರ್ಷ ಒಂದು ಲಕ್ಷಕ್ಕೂ ಹೆಚ್ಚು ತೋಟಗಾರಿಕಾ ಗಿಡಗಳು, 60 ಸಾವಿರ ಬಟರ್ಫ್ರೂಟ್ ಗಿಡಗಳು ಹಾಗೂ 10 ಸಾವಿರ ಕೊಡಗಿನ ಕಿತ್ತಳೆ ಗಿಡಗಳನ್ನು ಮಾರಾಟ ಮಾಡಿ ಸುಮಾರು ರೂ.1.20 ಕೋಟಿ ಆದಾಯ ಗಳಿಸಿರುವುದಾಗಿ ತಿಳಿಸಿದರು. ಬೆಂಗಳೂರು…
ವಿರಾಜಪೇಟೆ ಏ.17 NEWS DESK : ಪ್ರತಿಯೊಬ್ಬರು ರಕ್ತದಾನವನ್ನು ಸಾಮಾಜಿಕ ಜವಾಬ್ದಾರಿ ಎಂದು ಅರಿತುಕೊಳ್ಳಬೇಕು ಎಂದು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ಮುಖ್ಯಸ್ಥರಾದ ಡಾ.ಕರುಂಬಯ್ಯ ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಎನ್.ಎಸ್.ಎಸ್ ಘಟಕ, ರೆಡ್ ರಿಬ್ಬನ್ ಕ್ಲಬ್ ಹಾಗೂ ಮಡಿಕೇರಿಯ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಜಿಲ್ಲಾಸ್ಪತ್ರೆ ಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಾಮಾಜಿಕ ಜವಾಬ್ದಾರಿ ಹಾಗೂ ಆರೋಗ್ಯ ಜಾಗೃತಿ ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿ ಹಂತದಿಂದಲೇ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಯುವಜನರು ಪಣ ತೊಡಬೇಕು ಎಂದರು. ಇಂದು ವಿಶ್ವ ಹಿಮೋಫಿಲಿಯ ದಿನವಾಗಿದ್ದು, ಹಿಮೋಫಿಲಿಯ ಪೀಡಿತರಿಗೆ ಚುಚ್ಚು ಮದ್ದನ್ನು ನೀಡುವ ಕಾರ್ಯವು ನಡೆಯುತಿದೆ. ಜನರು ಆರೋಗ್ಯ ಜಾಗೃತಿಯನ್ನು ವಹಿಸಬೇಕು. ರಕ್ತದಾನವನ್ನು ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು, ರಕ್ತ ಡೊತ್ತಡ ಇನ್ನೂ ಮುಂತಾದ ಸಮಸ್ಯೆಗಳನ್ನು ತಡೆಗಟ್ಟು ಸಾಧ್ಯವಾಗುತ್ತದೆ…
ಮಡಿಕೇರಿ ಏ.17 NEWS DESK : ವಿರಾಜಪೇಟೆ ವಿದ್ಯುತ್ ವಿತರಣಾ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ 33 ಕೆವಿ ಸಿದ್ದಾಪುರ ಮಾರ್ಗದಲ್ಲಿ ಏಪ್ರಿಲ್, 18 ರಂದು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನಿರ್ವಾಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಿದ್ದಾಪುರ, ಕರಡಿಗೋಡು, ಗುಹ್ಯ, ಮಾಲ್ದಾರೆ, ನೆಲ್ಲಿಹುದಿಕೇರಿ, ಇಂಜಿಲಗೆರೆ, ಆರೆಂಜ್‍ಕೌಂಟಿ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.
ಮಡಿಕೇರಿ ಏ.17 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನವೆಂಬರ್, 04 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5755 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5729 ಪ್ರಕರಣಗಳು ಇತ್ಯರ್ಥಗೊಂಡಿದೆ. 2025-26ನೇ ಆರ್ಥಿಕ ಸಾಲಿನಲ್ಲಿ 336 ಪ್ರಕರಣಗಳು ದಾಖಲಾಗಿ, 313 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 26 ಪ್ರಕರಣಗಳು ಇತ್ಯರ್ಥದ ಹಂತದಲ್ಲಿದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ. 5,15,000 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2025-26ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನ ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರು…
ಮಡಿಕೇರಿ ಏ.17 NEWS DESK : ಯುವ ಪೀಳಿಗೆ ಇತರ ಜಿಲ್ಲೆಯಲ್ಲಿ ಉದ್ಯೋಗ ಪಡೆದರೂ, ಎಷ್ಟೇ ಹಣ, ಕೀರ್ತಿ ಗಳಿಸಿದರೂ ತಮ್ಮ ಬಾಲ್ಯ, ಬೆಳೆದ ಪರಿಸರ ಮತ್ತು ಆಸರೆಯಾದ ಊರನ್ನು ಮರೆಯಬಾರದು ಎಂದು ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಎಸ್.ಸುರೇಶ್ ನಂಜಪ್ಪ ಸಲಹೆ ನೀಡಿದ್ದಾರೆ. ಬೆಂಗಳೂರು ಕೊಡವ ಸಮಾಜದ ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಕಾವೇರಿ ಪ್ಲೆಸ್‍ಮೆಂಟ್‍ಸೆಲ್ ಹಾಗೂ ಅಡೆಕ್ಕೊ ಇಂಡಿಯಾ ಸಂಸ್ಥೆ ಸಹಯೋಗದೊಂದಿಗೆ ಕಾಲೇಜಿನ ಸಭಾಂಗಣದಲ್ಲಿ ನಡೆದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹುಟ್ಟಿದ ಊರು ನಮಗೆ ಸಂಸ್ಕಾರ, ಸಂಸ್ಕೃತಿ ಮತ್ತು ಬದುಕಿನ ಪಾಠ ಕಲಿಸಿಕೊಡುತ್ತದೆ. ಆ ಊರಿನ ಮಣ್ಣಿನ ಋಣ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವು ಎಷ್ಟೇ ಹಣ, ಕೀರ್ತಿ ಪಡೆದರೂ ಅವಕಾಶವಿದ್ದಾಗ ಕೊಡಗಿನ ಅಭಿವೃದ್ಧಿಗೆ ಅಥವಾ ಇಲ್ಲಿನ ಜನರ ಸಹಾಯಕ್ಕೆ ನಿಲ್ಲುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಚಿರಿಯಪಂಡ ಎಸ್.ಸುರೇಶ್ ನಂಜಪ್ಪ ಕರೆ ನೀಡಿದರು.…
ಬೆಂಗಳೂರು, ಏ.17 NEWS DESK : ಭ್ರಷ್ಟಾಚಾರ ನಿರ್ಮೂಲನೆ ಮತ್ತು ಆಡಳಿತ ಸುಧಾರಣೆಯಲ್ಲಿ ಮಹತ್ತರ ಪಾತ್ರ ವಹಿಸಿರುವ ‘ಕರ್ನಾಟಕ ಲೋಕಾಯುಕ್ತ’ ಸಂಸ್ಥೆಯು ತನ್ನ ಯಶಸ್ವಿ ನಾಲ್ಕು ದಶಕಗಳ ಪಯಣವನ್ನು ಪೂರೈಸಿದ್ದು, ಈ ಅಂಗವಾಗಿ 2026ರ ಏಪ್ರಿಲ್ 18, ಶನಿವಾರದಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಉದ್ಘಾಟನೆ ನೆರವೇರಿಸಲಿದ್ದಾರೆ. ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಲೋಕಾಯುಕ್ತರಾದ ಬಿ.ಎಸ್. ಪಾಟೀಲ್, ಉಪಲೋಕಾಯುಕ್ತರುಗಳಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ಘನ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ಜರುಗಲಿದೆ. ಈ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಅವರು ಲೋಕಾಯುಕ್ತ ನಿಯತಕಾಲಿಕೆಯನ್ನು ಬಿಡುಗಡೆ ಮಾಡುವ ಜೊತೆಗೆ ಚುನಾಯಿತ ಪ್ರತಿನಿಧಿಗಳ ಆಸ್ತಿ ಮತ್ತು ಹೊಣೆಗಾರಿಕೆಗಳ ಹೊಸ ಪೋರ್ಟಲ್ ಹಾಗೂ ಆನ್‍ಲೈನ್ ತನಿಖಾ ಮಾಡ್ಯೂಲ್‍ಗೆ ಚಾಲನೆ ನೀಡಲಿದ್ದಾರೆ. ಇದೇ…
ಮಡಿಕೇರಿ ಏ.17 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ವತಿಯಿಂದ ವಿರಾಜಪೇಟೆಯ ರೋಟರಿ ಶಾಲೆಯಲ್ಲಿ ಆಯೋಜಿತವಾಗಿದ್ದ ಕಾರ್ಯಕ್ರಮವನ್ನು ಏ.26 ಕ್ಕೆ ಮುಂದೂಡಲಾಗಿದೆಯೆಂದು ಸಂಘದ ಪ್ರಧಾನ ಕಾರ್ಯದರ್ಶಿ ರಂಜಿತ್ ಪುದಿಯತಂಡ ತಿಳಿಸಿದ್ದಾರೆ. ರೋಟರಿ ಶಾಲೆಯಲ್ಲಿ ಇದೇ ಏ.5 ರಂದು ಕಾರ್ಯಕ್ರಮವನ್ನು ಆಯೋಜಿತವಾಗಹಿತ್ತಾದರು, ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ನಡೆಸಲು ಸಾಧ್ಯವಾಗಿಲ್ಲ. ಇದೀಗ ಕಾರ್ಯಕ್ರಮವನ್ನು ಏ.26 ರಂದು ಆಯೋಜಿಸಲು ನಿರ್ಧರಿಸಲಾಗಿದೆಯೆಂದು ಮಾಹಿತಿ ನೀಡಿದ್ದಾರೆ.






