ಸೋಮವಾರಪೇಟೆ ಏ.26 : ಸೋಮವಾರಪೇಟೆ ಪಟ್ಟಣದಲ್ಲಿ ವರ್ಷದ ಮೊದಲ ಮಳೆ ತಂಪೆರೆದಿದೆ. ಬಿಸಿಲ ತಾಪದಿಂದ ಪರದಾಡುತ್ತಿದ್ದ ಜನರಿಗೆ ಸಾಧಾರಣ ಮಳೆ ನೆಮ್ಮದಿ ತಂದಿದೆ. ಗ್ರಾಮೀಣ ಭಾಗದಲ್ಲಿ ಬಹುತೇಕ ಕಡೆ ಹತ್ತಿಪ್ಪತ್ತು ಸೆಂಟ್ಸ್ನಷ್ಟು ಮಳೆಯಾಗಿದ್ದು, ಕಾಫಿ ಬೆಳೆಗಾರರು ಆತಂಕಗೊಂಡಿದ್ದಾರೆ. ವಿಳಂಬವಾಗಿದ್ದರೂ ಒಂದು ಇಂಚಿನಷ್ಟು ಮೊದಲ ಮಳೆಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದರು. ಅನೇಕರು ದೇವರಿಗೆ ಹರಕೆ ಹೊತ್ತಿದ್ದರು. ಶಾಂತಳ್ಳಿ ಹೋಬಳಿಯ ಕೂತಿ, ಹರಪಳ್ಳಿ, ಶನಿವಾರಸಂತೆ ಭಾಗದ ಕೆಲ ಭಾಗದಲ್ಲಿ ಒಂದು ಇಂಚಿನಷ್ಟು ಮಳೆ ಸುರಿದಿರುವುದು ಬಿಟ್ಟರೆ, ಉಳಿದ ಭಾಗದಲ್ಲಿ ಕಡಿಮೆ ಮಳೆ ಸುರಿದಿದೆ. ಹತ್ತಿಪ್ಪತ್ತು ಸೆಂಟ್ ನಷ್ಟು ಮಳೆಬಿದ್ದ ಕಡೆ ಅರ್ಧಂಬರ್ಧ ಹೂ ಅರಳಿ ಭಾರೀ ಪ್ರಮಾಣದಲ್ಲಿ ಫಸಲು ನಷ್ಟವಾಗುತ್ತದೆ ಎಂದು ಕಾಫಿ ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಲೇಖಕ: admin
ಸೋಮವಾರಪೇಟೆ ಏ.25 : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು. ದೇವಾಲಯದಲ್ಲಿ ಅಭಿಷೇಕ ಅರ್ಚನೆಯೊಂದಿಗೆ, ಪ್ರಧಾನ ಅರ್ಚಕ ಚಿತ್ರ ಕುಮಾರ್ ಭಟ್ ನೇತೃತ್ವದಲ್ಲಿ ಗುರು ಪೂಜಾ ವಿಧಿ ವಿಧಾನಗಳು ನಡೆದವು. ದೇವಾಲಯದ ಅಧ್ಯಕ್ಷ ಎಸ್. ಆರ್. ಶ್ರೀನಿವಾಸ್, ಕಾರ್ಯದರ್ಶಿ ಎಸ್. ಡಿ. ವಿಜೇತ್, ಪದಾಧಿಕಾರಿಗಳಾದ ಸತೀಶ್, ಎಸ್. ಎನ್. ಸೋಮಶೇಖರ್, ಮೋಹನ್ ರಾಮ್, ದಿನೇಶ್ ಹಾಲೇರಿ, ರವಿಶಂಕರ್, ದೇವಿ ಬಳಗದ ಅಧ್ಯಕ್ಷೆ ವಿಮಲ ರಾಜ್ ಗೋಪಾಲ್ ಇದ್ದರು.
ಮಡಿಕೇರಿ ಏ.25 : ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾ.ಪಂ ವ್ಯಾಪ್ತಿಯ ಪಾಲೇಮಾಡು ಕಾನ್ಶಿರಾಂ ನಗರದ ನಿವಾಸಿಗಳು ಏ.27 ರಿಂದ ಅರೆಬೆತ್ತಲೆ ಪ್ರತಿಭಟನೆ ಆರಂಭಿಸಲು ನಿರ್ಧರಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕಳೆದ 30 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಆಡಳಿತ ವ್ಯವಸ್ಥೆ ಯಾವುದೇ ಸ್ಪಂದನೆ ನೀಡದ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ಹೋರಾಟಗಾರರ ಪರವಾಗಿ ಸ್ಥಳೀಯ ನಿವಾಸಿ ಎಂ.ಎಸ್.ಆನoದ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ ಮತ್ತಿತರ ದುರ್ಬಲ ವರ್ಗದ 260 ಕುಟುಂಬಗಳು ವಾಸ ಮಾಡುತ್ತಿರುವ ನಿವೇಶನದ ಹಕ್ಕುಪತ್ರದ ಲೋಪದೋಷಗಳನ್ನು ಸರಿಪಡಿಸಬೇಕು ಹಾಗೂ ಮೂಲಭೂತ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿ ಗ್ರಾಮದಲ್ಲೇ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಈ ಬೇಡಿಕೆಗಳ ಕುರಿತು ಸೂಕ್ತ ಭರವಸೆ ನೀಡಬೇಕು. ತಪ್ಪಿದಲ್ಲಿ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆಯನ್ನು ಕೂಡ ನೀಡಲಾಗಿತ್ತು. ಆದರೆ ಬಡವರ ಹೋರಾಟಕ್ಕೆ ಬೆಲೆ ಇಲ್ಲ ಎಂಬಂತೆ ಇಲ್ಲಿಯವರೆಗೆ ಯಾರೂ ನಮ್ಮನ್ನು ವಿಚಾರಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ. ಮಹಿಳೆಯರು, ಪುರುಷರು, ಮಕ್ಕಳಾದಿಯಾಗಿ ಧರಣಿ ನಡೆಸುತ್ತಿದ್ದರೂ…
ಮಡಿಕೇರಿ ಏ.25 : ವಿಧಾನಸಭಾ ಚುನಾವಣೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ.ಪಿ.ಬೋಪಣ್ಣ ಪರ ಬಿರುಸಿನ ಪ್ರಚಾರ ನಡೆಯಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ನಗರದ ವಿವಿಧ ಮನೆ ಮನೆಗಳಿಗೆ ತೆರಳಿ ಮತಯಾಚಿಸಿದರು. ಪಕ್ಷದ ಯೋಜನೆಗಳ ಕುರಿತು ಜನರಿಗೆ ತಿಳಿಸಿದರು. ಅಭ್ಯರ್ಥಿಯ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು. ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ, ಕಾರ್ಯದರ್ಶಿ ಪೃಥ್ವಿ, ಮಾಜಿ ಅಧ್ಯಕ್ಷ ಎಂ.ಕೆ.ಅಪ್ಪಯ್ಯ, ಪ್ರಮುಖರಾದ ಥೋಮಸ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಏ.25 : ಕುಶಾಲನಗರ ಉಪ-ಕೇಂದ್ರದಿಂದ ಹೊರಹೋಗುವ ಸೋಮವಾರಪೇಟೆ 33ಕೆವಿ ವಿದ್ಯುತ್ ವಿತರಣಾ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಏ.27 ಮತ್ತು 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಸೋಮವಾರಪೇಟೆ ವಿದ್ಯುತ್ ಉಪಕೇಂದ್ರದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗೌಡಳ್ಳಿ, ಶಾಂತಳ್ಳಿ, ಐಗೂರು, ಕರ್ಕಳ್ಳಿ, ಸೋಮವಾರಪೇಟೆ, ಗಣಗೂರು, ಬಾಣಾವಾರ, ಅಬ್ಬೂರುಕಟ್ಟೆ, ದೊಡ್ಡಮಳ್ತೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಮಡಿಕೇರಿ ಏ.25 : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಸಂಬಂಧ ಮತದಾನವು ಮೇ, 10 ರಂದು ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ಮತಗಟ್ಟೆಗಳಲ್ಲಿ ನಡೆಯಲಿದೆ. ಜಿಲ್ಲೆಯಲ್ಲಿ ಪಾರದರ್ಶಕ, ಸುಗಮ ಮತ್ತು ಶಾಂತಿಯುತವಾಗಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಮತದಾನ ನಡೆಸುವ ಸಂಬಂಧ ಮತ್ತು ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಕಲಂ 126 ರಡಿ ವ್ಯಾಖ್ಯಾನಿಸಿದ ಅಂಶಗಳಂತೆ, ದಂಡ ಪ್ರಕ್ರಿಯಾ ಸಂಹಿತೆ 1973 ರ ಸೆಕ್ಷನ್ 144 ಮತ್ತು ದಂಡ ಪ್ರಕ್ರಿಯಾ ಸಂಹಿತೆ (ತಿದ್ದುಪಡಿ) 2005 ರ ಸೆಕ್ಷನ್ 144(ಎ)ರಡಿ ದತ್ತವಾದ ಅಧಿಕಾರದಂತೆ ಮೇ, 08 ರ ಸಂಜೆ 6 ಗಂಟೆಯಿಂದ ಮೇ, 11 ರ ಸಂಜೆ 6 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ. ಈ ಅವಧಿಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿ/ ಕಾರ್ಯಕರ್ತರು ಮನೆ ಮನೆಗೆ ತೆರಳಿ…
ಮಡಿಕೇರಿ ಏ.25 : ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಹಿನ್ನೆಲೆಯಲ್ಲಿ ಮತದಾರರ ಶಿಕ್ಷಣ ಹಾಗೂ ಜಾಗೃತಿ ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಸ್ವೀಪ್ ಸಮಿತಿ, ಮಡಿಕೇರಿಯಲ್ಲಿನ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏಪ್ರಿಲ್, 30 ರಂದು ಸಂಜೆ 6.30 ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ (ಮ್ಯಾನ್ಸ್ ಕಾಂಪೌಂಡ್) ನೂರಾರು ಜನರು ನಿಗದಿತ ಸ್ಥಳದಲ್ಲಿ ಸಾಲಾಗಿ ನಿಂತು ‘ಮೊಬೈಲ್ ಲೈಟ್ ಬೆಳಗಿಸಿ ನಾನು ವೋಟ್ ಹಾಕುವೆ’ ಎಂಬ ಸಂದೇಶ ಸಾರುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿನೂತನ ರೀತಿಯಲ್ಲಿ ಆಯೋಜಿಸಿರುವ ಮತದಾರರ ಶಿಕ್ಷಣ, ಅರಿವು ಹಾಗೂ ಜಾಗೃತಿ ಕಾರ್ಯಕ್ರಮದ ಸಂದರ್ಭದಲ್ಲಿ ವಿಶೇಷವಾಗಿ ಸಂಜೆ 7.15 ರಿಂದ 30 ನಿಮಿಷಗಳ ಕಾಲ ಸರಿಗಮಪ ಲಿಟಲ್ ಚಾಂಪ್ ರಿಯಾಲಿಟಿ ಶೋ ನಲ್ಲಿ ಪ್ರಥಮ ಸ್ಥಾನ ಪಡೆದ ಪ್ರಗತಿ ಬಡಿಗೇರ್ ಹಾಗೂ ಅವರ ತಂದೆ ಬಸವರಾಜ ಬಡಿಗೇರ್ ಸಹೋದರಿ ಪ್ರತಿಕ್ಷಾ…
ಮಡಿಕೇರಿ ಏ.25 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಶಂಕರಾಚಾರ್ಯರ’ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ನಾಗರಾಜು, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ಸುರೇಶ್ ಕುಮಾರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಬಾಲರಾಜ್ ರಂಗರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್ ಇತರರು ಇದ್ದರು. ಶ್ರೀ ಶಂಕರಾಚಾರ್ಯರು ವಿದ್ಯೆಗೆ ಹೆಚ್ಚಿನ ಒತ್ತು ನೀಡಿದ್ದರು, ವಿದ್ಯೆಯು ಆತ್ಮಜ್ಞಾನ ನಮ್ಮ ತನದ ಅರಿವೇ ವಿದ್ಯೆ ಆಗಿದೆ ಎಂಬುದನ್ನು ತಿಳಿಸಿದ್ದಾರೆ ಎಂದು ಗಣ್ಯರು ಪ್ರತಿಪಾದಿಸಿದರು. ಭಾರತೀಯ ಪ್ರಜ್ಞಾ ಪರಂಪರೆಯಲ್ಲಿ ಶಿಖರಪ್ರಾಯವಾಗಿ ಕಾಣಿಸಿಕೊಂಡವರು ಆಚಾರ್ಯ ಶಂಕರರು ಭಾರತೀಯ ಚಿಂತನೆಯ ಮೂಲವೆನಿಸಿರುವ ವೇದಗಳ ಸಾರ ಬಗ್ಗೆ ಪ್ರತಿಪಾದಿಸಿದ್ದಾರೆ. ಜ್ಞಾನವೇ…
ಮಡಿಕೇರಿ ಏ.25 : ಕೊಡಗು ಜಿಲ್ಲೆಯಲ್ಲಿ ಗ್ರಾಮೀಣ ಭಾರತ ಆರೋಗ್ಯ ಯೋಜನೆಯ ಆಸ್ಪತ್ರೆಯಲ್ಲಿ (ಆರ್‍ಐಹೆಚ್‍ಪಿ) ಅತ್ಯಾಧುನಿಕ ಸಿಟಿ ಸ್ಕ್ಯಾನ್ ಕೇಂದ್ರ ಸ್ಥಾಪಿಸಲು ಭಾರತದ ಪ್ರಮುಖ ವಿಶೇಷತೆಯ ಕಾಫಿ ಉತ್ಪಾದಿಸುವ ಟಾಟಾ ಕಾಫಿ ಲಿಮಿಟೆಡ್ ಹಣಕಾಸು ನೆರವು ನೀಡಿದೆ. ಈ ‘ಆರ್‍ಐಹೆಚ್‍ಪಿ’ಯಲ್ಲಿ ರೋಗಿಗಳಿಗೆ ಗುಣಮಟ್ಟದ ಮತ್ತು ಉತ್ತಮವಾದ ವೈದ್ಯಕೀಯ ಸೇವೆ ಒದಗಿಸುವ ಗುರಿ ಹೊಂದಿದೆ. ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಮತ್ತು ಟಾಟಾ ಕಾಫಿ ಲಿಮಿಟೆಡ್ ಬೆಂಬಲಿತ ದಿ ಕೂರ್ಗ್ ಫೌಂಡೇಷನ್‍ನಿಂದ ಸೌಲಭ್ಯಗಳು ಮತ್ತು ಸೇವೆಗಳ ವಿಸ್ತರಣೆ ಸಾಧ್ಯವಾಗಿದೆ. ಅಮೆರಿಕ ಮೂಲದ ಲಾಭರಹಿತ ಸಂಸ್ಥೆ ‘ಕೊಡವ ಕೂಟ’ವು ಕೊಡಗು ಜಿಲ್ಲೆಯಲ್ಲಿ ಸಮುದಾಯ ಅಭಿವೃದ್ಧಿ ಯೋಜನೆಗಳಿಗೆ ಬೆಂಬಲ ನೀಡುತ್ತಿರುವ ಕೂರ್ಗ್ ಫೌಂಡೇಷನ್‍ಗೆ ನೀಡಿರುವ ಗಣನೀಯ ಮತ್ತು ಉದಾರ ಕೊಡುಗೆಯ ನೆರವಿನಿಂದಾಗಿ ಈ ಸಿಟಿ ಸ್ಕ್ಯಾನ್ ಕೇಂದ್ರ ಸ್ಥಾಪಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ. 1964ರಲ್ಲಿ ಸಾರ್ವಜನಿಕ ಟ್ರಸ್ಟ್ ಪ್ರಾರಂಭಿಸಿದ ಗ್ರಾಮೀಣ ಭಾರತ ಆರೋಗ್ಯ ಯೋಜನೆ ಆಸ್ಪತ್ರೆಯು 48 ಹಾಸಿಗೆಗಳ ಸೌಲಭ್ಯ ಹೊಂದಿದೆ. ಈ ಆಸ್ಪತ್ರೆಯು ಹಿಂದಿನ ವರ್ಷ…
ನಾಪೋಕ್ಲು ಏ.25 : ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗಿರುವ ಬೆನ್ನಲ್ಲೇ ನಾಪೋಕ್ಲು ಸುತ್ತಮುತ್ತಲಿನ ಪ್ರದೇಶಗಳಿಗೆ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆಯಾಗಿದೆ. ಮಂಗಳವಾರ ಮಧ್ಯಾಹ್ನ ನಾಪೋಕ್ಲು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಕೈಕಾಡು, ಬೇತು, ಚೆರಿಯಪರಂಬು, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಕಕ್ಕಬ್ಬೆ ಸೇರಿದಂತೆ ವಿಭಾಗದ ಅಲವು ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಿಸಿಲ ಬೇಗೆ ಹೆಚ್ಚಿದ್ದು, ಬಹುತೇಕ ತೋಟಗಳಲ್ಲಿ ಕಾಫಿಗಿಡ, ಕಾಳುಮೆಣಸು ಬಳ್ಳಿಗಳು ಬಿಸಿಲಿನ ತಾಪಕ್ಕೆ ಬಾಡಿ ಹೋಗಿದ್ದವು. ಪ್ರಸಕ್ತ ಸಾಲಿನಲ್ಲಿ ಸಮಯಕ್ಕೆ ಸರಿಯಾಗಿ ಮಳೆಬಾರದೆ ಪರಿತಪಿಸುತ್ತಿದ್ದ ರೈತರಲ್ಲಿ ಮಳೆಯಿಂದ ಮಂದಹಾಸ ಮೂಡಿದೆ. ನಾಪೋಕ್ಲು ವಿಭಾಗದಲ್ಲಿ ಮಳೆ ಇಲ್ಲದೆ ಕೃಷಿ ಚಟುವಟಿಕೆಗಳಿಗೆ ಮತ್ತು ಕುಡಿಯುವ ನೀರಿಗೂ ಜನರು ಸಮಸ್ಯೆಗಳನ್ನು ಎದುರಿಸುವಂತಾಗಿತ್ತು. ಪವಿತ್ರ ಕಾವೇರಿ ನದಿ ಸೇರಿದಂತೆ ವ್ಯಾಪ್ತಿಯ ಇನ್ನಿತರ ನದಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಸಮಸ್ಯೆ ಸ್ವಲ್ಪಮಟ್ಟಿಗೆ ದೂರವಾದಂತಾಗಿದೆ. ಒಂದು ಇಂಚು ಮಳೆಯಿಂದ ನಾಪೋಕ್ಲು ವಿಭಾಗದ ಜನರಲ್ಲಿ ಮುಂದೆ…






