ಸುಂಟಿಕೊಪ್ಪ,ಜು.8: ಸುಂಟಿಕೊಪ್ಪ ನಿವಾಸಿ ವಸಂತ ಸ್ಟೋರಿನ ಮಾಲಿಕ ಹಾಗೂ ಹಿರಿಯ ಪತ್ರಿಕಾ ವಿತರಕ ಎಂ.ಎ.ವಸಂತ ಅವರ ಮನೆ ಮುಂಭಾಗದ ತಡೆಗೋಡೆ ಗಾಳಿ ಮಳೆಗೆ ಕುಸಿದು ಬಿದ್ದಿದ್ದು, ನಷ್ಟ ಸಂಭವಿಸಿದೆ ಎಂದು ಎಂ.ಎ.ವಸಂತ ಗ್ರಾ.ಪಂ ಮತ್ತು ಕಂದಾಯ ಇಲಾಖೆಗೆ ದೂರು ಸಲ್ಲಿಸಿದ್ದಾರೆ. ರಾತ್ರಿ ಸುರಿದ ಗಾಳಿಮಳೆಗೆ 7ನೇ ಹೊಸಕೋಟೆ ಗ್ರಾಮದ ಅಶೋಕ ಎಸ್ಟೇಟ್ ಒಳಗಡೆ 2 ವಿದ್ಯುತ್ ಕಂಬಗಳು ಮುರಿದು ಬಿದ್ದು ರಾತ್ರಿಯಿಂದ ವಿದ್ಯುತ್ ಸಂಚಾರ ಸ್ಥಗಿತ ಗೊಂಡಿತ್ತು. ಸ್ಥಳಕ್ಕೆ ಸೆಸ್ಕ್ ಇಲಾಖೆಯ ಸಿಬ್ಬಂದಿ ತೆರಳಿ ಕಂಬಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದರು.
ಲೇಖಕ: admin
ಮಡಿಕೇರಿ ಜು.8: ಮಡಿಕೇರಿ ರೋಟರಿ ಸಂಸ್ಥೆಯ 73ನೇ ಅಧ್ಯಕ್ಷೆಯಾಗಿ ಗೀತಾ ಗಿರೀಶ್ ಅಧಿಕಾರ ಸ್ವೀಕರಿಸಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕಾರಿ ಸ್ವೀಕರಿಸಿದ್ದು, ಕಾರ್ಯದರ್ಶಿಯಾಗಿ ಎಂ.ಕೆ.ಶರತ್ ಕರ್ತವ್ಯ ನಿರ್ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿರಾಜಪೇಟೆ ಸ್ಥಾಪನಾ ಅಧಿಕಾರಿ ರೋಟರಿಯನ್ ಡಾ. ಎಸ್.ವಿ.ನರಸಿಂಹನ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ.ನಯನಾ ಕಶ್ಯಪ್, ರೋಟರಿ ಸಹಾಯಕ ಗವರ್ನರ್ ಡಿ.ಎಮ್.ತಿಲಕ್, ರೋಟರಿ ಝೋನಲ್ ಲೆಫ್ಟಿನೆಂಟ್ ಎಸ್.ಎಸ್.ಸಂಪತ್ ಕುಮಾರ್ ಪಾಲ್ಗೊಂಡಿದ್ದರು. ವನಮಹೋತ್ಸವದ ಪ್ರಯುಕ್ತ ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯರಿಗೆ ಗಿಡಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ರೋಟರಿ ಬುಲೆಟಿನ್ ಬಿಡುಗಡೆ ಮಾಡಲಾಯಿತು.
ಮಡಿಕೇರಿ ಜು.8 : ಸುಂಟಿಕೊಪ್ಪ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಹೇರೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಕೃಷಿ ಫಸಲನ್ನು ನಾಶ ಮಾಡಿದೆ. ಸ್ಥಳೀಯ ಕೃಷಿಕ ಅರುಣ್ ಚೆಂಗಪ್ಪ ಎಂಬುವವರ ತೋಟಕ್ಕೆ ನಿತ್ಯ ಆನೆಗಳು ಲಗ್ಗೆ ಇಡುತ್ತಿದ್ದು, ಕಾಫಿ, ಬಾಳೆ, ಅಡಿಕೆ ಗಿಡಗಳನ್ನು ನೆಲಸಮ ಮಾಡಿವೆ. ಕೈಗೆ ಬಂದ ತ್ತುತ್ತು ಬಾಯಿಗೆ ಬರಲಿಲ್ಲ ಎನ್ನುವ ರೀತಿಯಲ್ಲಿ ಕೃಷಿ ಫಸಲನ್ನು ತಿಂದು ತೇಗುತ್ತಿವೆ. ಒಂದೆಡೆ ಪ್ರಾಕೃತಿಕ ಅಸಮಾತೋಲನ, ಮತ್ತೊಂದೆಡೆ ವನ್ಯಜೀವಿಗಳ ದಾಳಿಯಿಂದ ಅಪಾರ ನಷ್ಟವಾಗುತ್ತಿದೆ ಎಂದು ಬೆಳೆಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳು ತೋಟಗಳು ಮಾತ್ರವಲ್ಲದೆ ಮನೆ ಬಾಗಲಿಗೆ ಬರುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಆತಂಕದಿಂದಲೇ ಸಂಚರಿಸಬೇಕಾದ ಅನಿವಾರ್ಯತೆ ಇದೆ. ತಕ್ಷಣ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ. ವಿಶೇಷ ಆಸಕ್ತಿ ತೋರಿ ಹೇರೂರು ಗ್ರಾಮದಲ್ಲಿ ಬೀಡುಬಿಟ್ಟಿರುವ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಬೇಕು ಮತ್ತು ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್‌ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್‌ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.
ಮಡಿಕೇರಿ ಜು.8 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಜನ್ಮದಿನವನ್ನು ಜು.9 ರಂದು ಭಾಗಮಂಡಲದ ಕೋರಂಗಾಲದಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಮುಖರಾದ ಸುನೀಲ್ ಪತ್ರಾವೋ ಹಾಗೂ ಹಾರಿಸ್ ಪದಕಲ್ ತಿಳಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಪೊನ್ನಣ್ಣ ಅವರು, ಸಸಿ ನೆಡುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣಗೊಳಿಸಲಿರುವರು. ನಂತರ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿಸಲಿದ್ದಾರೆ. 10 ಗಂಟೆಗೆ ಕೋರಂಗಾಲದ ಅಟಲ್ ಬಿಹಾರಿ ವಾಜಪೇಯಿ ವಸತಿಯ ಶಾಲೆಯ ಮಕ್ಕಳೊಂದಿಗೆ ಜನ್ಮದಿನದ ಆಚರಣೆ ನಡೆಯಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.
ಮಡಿಕೇರಿ ಜು.8 : ನಗರಸಭಾ ಸದಸ್ಯ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆ ಪ್ರಕರಣವನ್ನು ನಗರಸಭೆಯ ಎಸ್‍ಡಿಪಿಐ ಸದಸ್ಯರುಗಳಾದ ಅಮೀನ್ ಮೊಹಿಸಿನ್, ಮನ್ಸೂರ್, ಬಶೀರ್ ಅಹಮ್ಮದ್, ಮೇರಿ ವೇಗಸ್ ಹಾಗೂ ನೀಮಾ ಅರ್ಷಾದ್ ತೀವ್ರವಾಗಿ ಖಂಡಿಸಿದ್ದಾರೆ. ಜನರಿಂದ ಆಯ್ಕೆಯಾದ ಜನಪ್ರತಿನಿಧಿಯೊಬ್ಬರನ್ನು ಕ್ಷುಲಕ ಕಾರಣಕ್ಕಾಗಿ ಹಲ್ಲೆ ಮಾಡಿರುವುದು ಅಪರಾಧವಾಗಿದ್ದು, ತಪ್ಪಿತಸ್ಥರ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. ನಗರದ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕೆ ಹೊರತು ಕಾನೂನನ್ನು ಯಾರೂ ಕೈಗೆತ್ತಿಕೊಳ್ಳಬಾರದು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ನಗರಸಭಾ ಸದಸ್ಯರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಎಸ್‍ಡಿಪಿಐ ಸದಸ್ಯರು ಒತ್ತಾಯಿಸಿದ್ದಾರೆ.
ಮಡಿಕೇರಿ ಜು.8 : ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಕೊಡಮಾಡುವ “ವಿಕಾಸ ಶ್ರೀ ಪ್ರಶಸ್ತಿ” ಗೆ ನಗರದ ಸ್ನೇಹಶ್ರಾಯ ಯೂತ್ ಟ್ರಸ್ಟ್‌ನ ನಿರ್ದೇಶಕ ಸಿ.ವಿ.ವಿಶ್ವನಾಥ್ ಭಾಜನರಾಗಿದ್ದಾರೆ. ಜಿಲ್ಲೆಯಲ್ಲಿ ಕಳೆದ 9ವರ್ಷಗಳಿಂದ ಮಾನಸಿಕ ಅಸ್ವಸ್ಥರು ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಗುರುತಿಸಿ ಸಿ.ವಿ.ವಿಶ್ವನಾಥ್ ಈ ಪ್ರಶಸ್ತಿಯನ್ನು ನೀಡಿದೆ. ಜು.12 ರಂದು ಮೈಸೂರಿನ ಕಲಾಭವನದಲ್ಲಿ ನಡೆಯಲಿರುವ ದಿ.ಕೆ.ಹೆಚ್.ರಾಮಯ್ಯ ಅವರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಡಿಕೇರಿ ಜು.8 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಆರ್.ದಿನೇಶ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಟಿ.ಎಂ.ಧರ್ಮಜ ಉತ್ತಪ್ಪ ಅವರ ಶಿಫಾರಸ್ಸಿನ ಮೇರೆಗೆ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಗೌಡ ಅವರು ದಿನೇಶ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಪಕ್ಷ ಸಂಘಟನೆಯೊಂದಿಗೆ ಜಿಲ್ಲೆಯ ಕಾರ್ಮಿಕ ವರ್ಗದ ಕುಂದು ಕೊರತೆಗಳನ್ನು ಅವಲೋಕಿಸಿ ಪಕ್ಷ ಮತ್ತು ಸರ್ಕಾರದ ಗಮನ ಸೆಳೆಯುವುದಾಗಿ ದಿನೇಶ್ ತಿಳಿಸಿದ್ದಾರೆ.
ಕುಶಾಲನಗರ ಜು.8: ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡ- ಮರಗಳನ್ನು ಬೆಳೆಸುವ ಮೂಲಕ ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಪಣ ತೊಡಬೇಕಾಗಿದೆ ಎಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸತೀಶ್ ಕಾಳೇಗೌಡ ಹೇಳಿದರು. ಕರ್ನಾಟಕ ಅರಣ್ಯ ಇಲಾಖೆಯ ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಕುಶಾಲನಗರ ಕಾವೇರಿ ಪರಿಸರ ಬಳಗ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ಕಾಲೇಜಿನ ಎನ್.ಎಸ್.ಎಸ್.ಘಟಕ ಹಾಗೂ ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆಯ ಸಹಯೋಗದಲ್ಲಿ ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ “ನಮ್ಮ ನಡೆ ಹಸಿರೆಡೆಗೆ'( ಗ್ರೋ ಗ್ರೀನ್ ) ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :2023 ರ ಅಂಗವಾಗಿ 350 ಅರಣ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರವನ್ನು ರಕ್ಷಣೆ ಮಾಡುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದ್ದು,…
ಮಡಿಕೇರಿ ಜು.8 : ಮಡಿಕೇರಿ ನಗರಸಭಾ ಸದಸ್ಯ ಅಪ್ಪಣ್ಣ ಅವರ ಮೇಲೆ ಗುಂಪು ಹಲ್ಲೆ ಮಾಡಿರುವ ಕ್ರಮವನ್ನು ಕೊಡವಾಮೆರ ಕೊಂಡಾಟ ಸಂಘಟನೆ ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ದ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡವಾಮೆರ ಕೊಂಡಾಟ ಸಂಘಟನೆ ಈ ರೀತಿಯ ಘಟನೆ ಮರುಕಳಿಸದಂತೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಒಬ್ಬ ನಗರಸಭಾ ಸದಸ್ಯನ ಮೇಲೆ ತನ್ನ ವಾರ್ಡ್ ವ್ಯಾಪ್ತಿಯಲ್ಲಿ ರಕ್ಷಣೆ ಇಲ್ಲದೆ ಹೋದರೆ ಸಾಮಾನ್ಯರ ಪಾಡೇನು ಎಂದು ಪ್ರಶ್ನಿಸಿದ ಸಂಘಟನೆಯ ಪ್ರಮುಖರು ಮುಂದಿನ ದಿನಗಳಲ್ಲಿ ಕ್ಷುಲ್ಲಕ ವಿಚಾರಗಳೇ ಬೇರೆ ಬೇರೆ ಆಯಾಮಗಳಿಗೆ ತಿರುವು ಪಡೆದುಕೊಂಡು, ಜಿಲ್ಲೆಯಲ್ಲಿ ಗೊಂದಲ ಮತ್ತು ಅಶಾಂತಿಯ ವಾತಾವರಣ ಸೃಷ್ಟಿಯಾಗುವುದನ್ನು ತಡೆಯಬೇಕಾದರೆ ಪೋಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಆಗ್ರಹಿಸಿದೆ.






