ಮಡಿಕೇರಿ ಜು.7 : ನಿರಂತರ ಮಳೆಯಿಂದ ಮಡಿಕೇರಿ ಹೊರವಲಯದ ಜನಪ್ರಿಯ ಪ್ರವಾಸಿತಾಣ ಅಬ್ಬಿ ಜಲಪಾತ ದುಮ್ಮಿಕ್ಕಿ ಹರಿಯುತ್ತಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಪ್ರಕೃತಿಯ ಸೊಬಗನ್ನು ಸವಿಯುತ್ತಿದ್ದಾರೆ.
ಲೇಖಕ: admin
ಮಡಿಕೇರಿ ಜು.7 : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಡಿಕೇರಿ ನಗರದ ವಿವಿಧ ಬಡಾವಣೆಗಳಲ್ಲಿ ಸಾರ್ವಜನಿಕರ ಆಸ್ತಿಗೆ ಹಾನಿಯಾಗಿದೆ. ಹಾನಿ ಪ್ರದೇಶಗಳಿಗೆ ನಗರಸಭಾ ಅಧ್ಯಕ್ಷೆ ಅನಿತಾಪೂವಯ್ಯ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಯ ಗೋಡೆಗೆ ತಡೆಗೋಡೆ ಕುಸಿದ ರಾಣಿಪೇಟೆ, ಜಲಾವೃತಗೊಂಡು ಹಾನಿಗೊಳಗಾದ ಪ್ರದೇಶ ಹಾಗೂ ರಸ್ತೆಗಳನ್ನು ಪರಿಶೀಲಿಸಿದರು. ತೋಡು ಮತ್ತು ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವ ಮೂಲಕ ಹೆಚ್ಚಿನ ಅಪಾಯವನ್ನು ತಪ್ಪಿಸಲಾಗುವುದು ಎಂದು ತಿಳಿಸಿದರು. ಬೆಟ್ಟಗುಡ್ಡ ಮತ್ತು ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಮನವಿ ಮಾಡಿದರು. ಹಾನಿಗೊಳಗಾದ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲು ಎನ್‌ಡಿಆರ್‌ಎಫ್ ತಂಡದ ಸಹಕಾರ ಪಡೆದರು. ವಿವಿಧ ವಾರ್ಡ್ಗಳ ಭೇಟಿ ಸಂದರ್ಭ ಉಪಾಧ್ಯಕ್ಷೆ ಸವಿತಾ ರಾಕೇಶ್, ಪೌರಾಯುಕ್ತ ವಿಜಯ, ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಜು.7 : ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ 24 ಗಂಟೆಗಳಲ್ಲಿ 14 ಇಂಚು ಮಳೆಯಾಗಿದೆ. ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಚೇರಂಗಾಲ ಗ್ರಾಮದ ಮತ್ತಾರಿ ಸೇತುವೆ ಮಳೆಯಿಂದ ಮುಳುಗಡೆಯಾಗಿದೆ. ಈ ಭಾಗದಲ್ಲಿ ಒಟ್ಟು 15 ಮನೆಗಳಿದ್ದು, 65 ಮಂದಿ ವಾಸವಾಗಿದ್ದಾರೆ. ಹಾನಿ ಪ್ರದೇಶವನ್ನು ಮಡಿಕೇರಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಪರಿಶೀಲಿಸಿದರು. ಹಾಗೆಯೇ ಭಾಗಮಂಡಲ ತ್ರಿವೇಣಿ ಸಂಗಮ, ಭಾಗಮಂಡಲ -ನಾಪೋಕ್ಲು ರಸ್ತೆಗೆ ಬಂದಿರುವ ನೀರಿನ ಮಟ್ಟವನ್ನು ವೀಕ್ಷಿಸಿದರು. ಭಾಗಮಂಡಲ ಗ್ರಾಮದಲ್ಲಿರುವ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ನಡೆಸಲು ಸಿದ್ಧತೆ ಯಾಗಿದ್ದು, ಹೆಚ್ಚಿನ ಮಳೆ ಆದಲ್ಲಿ ಸಂತ್ರಸ್ತರನ್ನು ಕಾಳಜಿ/ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾಗಮಂಡಲ – ನಾಪೋಕ್ಲು ರಸ್ತೆಯ ಮೇಲೆ ಅಂದಾಜು 2 ಅಡಿ ನೀರು ಬಂದಿದೆ. ಗೃಹ ರಕ್ಷಕ ದಳದ ತಂಡವು ಬೋಟ್ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್ ಹೇಳಿದ್ದಾರೆ. ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ…
ಮಡಿಕೇರಿ ಜು.7 : ಮಡಿಕೇರಿ ನಗರದ ಶ್ರೀಕುಂದುರುಮೊಟ್ಟೆ ದೇವಾಲಯದ ದಸರಾ ಸಮಿತಿ ಸದಸ್ಯ ಜಗದೀಶ್ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.
ಮಡಿಕೇರಿ ಜು.7 : ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಕೆಲವು ಯುವಕರನ್ನು ನಗರಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಹೋಗುತ್ತಿದ್ದ ನನ್ನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ ಎಂದು ಅಪ್ಪಣ್ಣ ಅವರು ನೀಡಿದ ದೂರಿನ ಹಿನ್ನೆಲೆ ಮೋನಿಶ್ ಸೇರಿದಂತೆ ಕೆಲವು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಸುರಿದ ಧಾರಾಕಾರ ಮಳೆಗೆ ನಮಗೆ ಸೇರಿದ ಐಟಿಐ ಜಂಕ್ಷನ್ ಬಳಿಯ ಕ್ಯಾಂಟೀನ್ ಗೆ ನೀರು ನುಗ್ಗಿತ್ತು. ಈ ಸಂದರ್ಭ ವಾರ್ಡ್ ಸದಸ್ಯ ಅಪ್ಪಣ್ಣ ಅವರಿಗೆ ದೂರು ನೀಡಿದರೂ ಯಾವುದೇ ಸ್ಪಂದನೆ ನೀಡಿಲ್ಲ. ಕೊನೇ ಗಳಿಗೆಯಲ್ಲಿ ಬಂದ ಅಪ್ಪಣ್ಣ ಅವರು ಅವಾಚ್ಯ ಶಬ್ಧ ಬಳಸಿದ ಕಾರಣ ಕಲಹ ಏರ್ಪಟ್ಟಿದೆ ಎಂದು ಮೋನಿಶ್ ಆರೋಪಿಸಿದ್ದಾರೆ. ಉಭಯ ಕಡೆಯಿಂದ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಪ್ಪಣ್ಣ ಅವರು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯನ್ನು ಮಡಿಕೇರಿ ಕೊಡವ ಸಮಾಜ ತೀವ್ರವಾಗಿ ಖಂಡಿಸಿದ್ದು,…
ಮಡಿಕೇರಿ ಜು.7 : ವೈಲ್ಡ್ ಲೈಫ್ ಸೊಸೈಟಿಯ ಹುಣುಸೂರು ಕಚೇರಿಯ ಹಿರಿಯ ಅಧಿಕಾರಿ ಕೆ.ಎಸ್.ಲೋಕೇಶ್(54) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕೊಡಗು ಜಿಲ್ಲೆಯ ದುಬಾರೆ ಬಳಿಯ ರಂಗಸಮುದ್ರ ಗ್ರಾಮದ ನಿವಾಸಿಯಾಗಿರುವ ಇವರು ಶುಕ್ರವಾರ ಬೆಳಗ್ಗೆ ಮನೆಯಲ್ಲೇ ಕುಸಿದು ಬಿದ್ದರು. ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರು ಮೃತಪಟ್ಟಿರುವುದು ದೃಢಪಟ್ಟಿತು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸಂಜೆ ರಂಗಸಮುದ್ರದಲ್ಲಿ ನಡೆಯಿತು.
ಬೆಂಗಳೂರು: ನಾನು ಪೂರ್ಣ ಪ್ರಮಾಣದ 3,27,747 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದೇನೆ. ಇದು ನಮ್ಮ ಗ್ಯಾರಂಟಿ ಬಜೆಟ್. ನಾವು ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದರು. ಬಜೆಟ್ನಲ್ಲೂ 5 ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಿದ್ದೇವೆ. ರಾಜ್ಯ ಆರ್ಥಿಕವಾಗಿ ದಿವಾಳಿ ಆಗದಂತೆ ನೋಡಿಕೊಂಡಿದ್ದೇವೆ. 1.30 ಕೋಟಿ ಕುಟುಂಬದ ಯಜಮಾನಿಗೆ ‘ಗೃಹಲಕ್ಷ್ಮೀ’ ಹಣ ನೀಡುತ್ತೇವೆ. ಜುಲೈ 16ರಿಂದ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ. ಆಗಸ್ಟ್ನಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ. ಆಗಸ್ಟ್ 15 ಅಥವಾ 16ರಂದು ಮನೆ ಯಜಮಾನಿ ಖಾತೆಗೆ ಹಣ ಹಾಕಲಾಗುವುದು…
ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 14ನೇ ಬಜೆಟ್ ಮಂಡಿಸಿದ್ದು, ಈ ಹಿಂದೆಯೂ 13 ಬಾರಿ ಬಜೆಟ್ ಮಂಡಿಸಿ ಭಾಗ್ಯ ರಾಮಯ್ಯ ಎಂದೇ ಖ್ಯಾತಿ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್‌ನಲ್ಲಿ ಯಾವ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದಾರೆ. ಈ ಮುಖಾಂತರ ತಿಳಿಯಿರಿ. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಬೆಂಬಲ: •ಕೃಷಿ ಭಾಗ್ಯ ಯೋಜನೆ 100 ಕೋಟಿ ರೂ. ವೆಚ್ಚದಲ್ಲಿ ಮರುಜಾರಿ. • ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ. • ಜಾನುವಾರುಗಳ ಆಕಸ್ಮಿಕ ಸಾವಿನ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಮರುಜಾರಿ. ಮೀನುಗಾರಿಕೆಗೆ ಉತ್ತೇಜನ: • ಮೀನುಗಾರ ಮಹಿಳೆಯರಿಗೆ ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿ 50,000 ರೂ. ಗಳಿಂದ 3 ಲಕ್ಷ ರೂ. ಗಳಿಗೆ ಹೆಚ್ಚಳ. • ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದ ಡೀಸೆಲ್ ಮಿತಿ 2 ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲು 250 ಕೋಟಿ ರೂ. ನೆರವು. •…
ಮಡಿಕೇರಿ ಜು.7 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರದ ಕಾರ್ಯಕ್ರಮಗಳ ಸಂಬಂಧ ಪ್ರತಿ ಪಂಚಾಯತಿಗಳ ನೋಟಿಸ್ ಬೋರ್ಡ್‍ನಲ್ಲಿ ಅಳವಡಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಪ್ರಕರಣಗಳ ಬಗ್ಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಸಮಿತಿ ಸದಸ್ಯರಾದ ಮುತ್ತಪ್ಪ ಶನಿವಾರಸಂತೆ ಹೋಬಳಿಯ ದುಂಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹೆಮ್ಮನೆ ಗ್ರಾಮದಲ್ಲಿ ಸರ್ವೆ ನಂ. 999/39 ಬೀ ಪರಿಶಿಷ್ಟ ಜಾತಿ ಕುಟುಂಬಗಳಿಗೆ 25 ಸೆಂಟ್ ಜಾಗವನ್ನು ಘೋಷಣೆ ಮಾಡಿತ್ತು, ಆದರೆ ಈ ಗ್ರಾಮದಲ್ಲಿ 3 ತಿಂಗಳು ಕಳೆದರೂ ಸರ್ವೆ ಕಾರ್ಯ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು, ಜಿಲ್ಲಾಧಿಕಾರಿ ಅವರು ಸರ್ವೆ ಕಾರ್ಯ ಯಾಕೆ ಪ್ರಾರಂಭ ಆಗಿಲ್ಲ, ಸೋಮವಾರದೊಳಗೆ ಸರ್ವೆ ಕಾರ್ಯ ಕೈಗೊಳ್ಳುವಂತೆ ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಹೇಳಿದರು. ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಮಾತನಾಡಿ ಪ್ರಾಕೃತಿಕ ವಿಕೋಪದಿಂದ ಹಲವು…
ಮಡಿಕೇರಿ ಜು.7 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಇಂದು ಮಂಡನೆಯಾಗಿರುವ ಬಜೆಟ್ ಬಡವರು, ಮಧ್ಯಮ ವರ್ಗ ಹಾಗೂ ರೈತಪರವಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ಎ.ಎಸ್.ಟಾಟು ಮೊಣ್ಣಪ್ಪ ಶ್ಲಾಘಿಸಿದ್ದಾರೆ. ಕೊಡಗಿನ ಬಹುದಿನಗಳ ಬೇಡಿಕೆಯಾದ ಹೈಟೆಕ್ ಆಸ್ಪತ್ರೆಯ ಕನಸು ನನಸಾಗಲಿದ್ದು, ಈ ಯೋಜನೆಯನ್ನು ಘೋಷಿಸಿದ ಮುಖ್ಯಮಂತ್ರಿಗಳಿಗೆ ಜಿಲ್ಲೆಯ ಜನರ ಪರವಾಗಿ ಕಾಂಗ್ರೆಸ್ ಪಕ್ಷ ಕೃತಜ್ಞತೆ ಸಲ್ಲಿಸುತ್ತದೆ. ಅಲ್ಲದೆ ಕಾಫಿ ಬ್ರಾಂಡ್ ಯೋಜನೆ ಮೂಲಕ ಕಾಫಿ ಬೆಳೆಗಾರರಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಅನುದಾನ ಮೀಸಲಿಡಲಾಗಿದೆ. ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿರುವ ಸರ್ಕಾರ ಖಾಸಗಿ ಸಹಭಾಗಿತ್ವದೊಂದಿಗೆ ಜನಪ್ರಿಯ ಪ್ರವಾಸಿತಾಣಗಳಲ್ಲಿ ಯಾತ್ರಿ ನಿವಾಸ ಅಥವಾ ವಸತಿ ನಿಲಯಗಳನ್ನು ನಿರ್ಮಿಸಲು ಮುಂದಾಗಿದೆ. ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಪ್ರಸಿದ್ಧ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಇದೆಲ್ಲವೂ ಕೊಡಗು ಜಿಲ್ಲೆಯ…






