ಮಡಿಕೇರಿ ಜು.7 : ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಸರ್ಕಾರದ ಆದೇಶದನ್ವಯ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿ ಆಗಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಜು.30 ರೊಳಗೆ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೋಂ-ಸ್ಟೇ ನೋಂದಣಿಗೆ ನಿಗಧಿಪಡಿಸಲಾಗಿರುವ ದಿನಾಂಕದೊಳಗೆ ನೋಂದಣಿ ಮಾಡಿಕೊಳ್ಳದ ಹೋಂ-ಸ್ಟೇಗಳನ್ನು ರದ್ದುಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ಡಾ.ಯತೀಶ ಉಲ್ಲಾಳ ತಿಳಿಸಿದ್ದಾರೆ. 2015-20ನೇ ಸಾಲಿನಲ್ಲಿ ಹೋಂ-ಸ್ಟೇ ನಡೆಸಲು ಪರವಾನಿಗೆ ನೀಡಿರುವ ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿದ್ದು, ಅಂತಹ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸಬೇಕು ಹಾಗೂ ಹೋಂ-ಸ್ಟೇಗಳ ನೋಂದಣಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿ ಪ್ರಕಟಿಸಿದ್ದು, ಅಂತರ್ಜಾಲ ತಾಣ http://karnatakatourism.org/ ಅಥವಾ https://kttf.karnatakatourism.org/ ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಿದೆ. ಆನ್‍ಲೈನ್‍ನಲ್ಲಿ ಹೋಂ-ಸ್ಟೇ ನೋಂದಣಿ ಮಾಡಲು ಭಾವಚಿತ್ರ, ಆಧಾರ್ ಕಾರ್ಡ್, ಹೋಂ-ಸ್ಟೇ ಹೊರಾಂಗಣ, ಒಳಾಂಗಣ,…
ಲೇಖಕ: admin
ಮಡಿಕೇರಿ ಜು.7 : ಕೊಡಗು ಜಿಲ್ಲೆಯಲ್ಲಿ ಯುವ ಜನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಂಪನ್ಮೂಲಕ್ಕೆ ತಕ್ಕಂತೆ ಉದ್ಯೋಗ ಸೃಷ್ಟಿ ಮಾಡಿ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ವೆಂಕಟ್ ರಾಜಾ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರವಾಸೋದ್ಯಮ ಕ್ಷೇತ್ರದ ಜೊತೆಗೆ, ಆಹಾರ ಉತ್ಪಾದನೆ, ಹಾಸ್ಪಿಟಾಲಿಟಿ, ಕೃಷಿ ಕೌಶಲ್ಯ, ವಾಣಿಜ್ಯ, ಹೀಗೆ ವಿವಿಧ ರೀತಿಯ ವೃತ್ತಿ ಕೌಶಲ್ಯ ತರಬೇತಿಯನ್ನು ಯುವಜನರಿಗೆ ನೀಡಿ, ಉದ್ಯೋಗ ಒದಗಿಸುವಂತಾಗಬೇಕು. ಆ ನಿಟ್ಟಿನಲ್ಲಿ ಉದ್ಯೋಗಾಧಾರಿತ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ನೀಡಿದರು. ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾಮಾಜಿಕ ಅರಣ್ಯ, ಹಿಂದುಳಿದ ವರ್ಗ, ಹೀಗೆ ಹಲವು ಇಲಾಖೆಗಳ ವ್ಯಾಪ್ತಿಯಲ್ಲಿ ವೃತ್ತಿಪರ ತರಬೇತಿಯನ್ನು ನೀಡಿ ಉದ್ಯೋಗ ಕಲ್ಪಿಸಲು ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವ್ಯಾಸಂಗ ಮಾಡುತ್ತಿರುವ ಪ್ರಶಿಕ್ಷಣಾರ್ಥಿಗಳ ಸಂಖ್ಯೆ ಹಾಗೂ ಲಭ್ಯವಿರುವ ಕೋರ್ಸ್‍ಗಳ ಮಾಹಿತಿಯನ್ನು ಜಿಲ್ಲಾ…
ಮಡಿಕೇರಿ ಜು.7 : ಇತ್ತೀಚಿನ ವರ್ಷಗಳಲ್ಲಿ ಕೆಲವು ಯುವಜನರು ಮಾದಕ ವಸ್ತುಗಳ ಚಟಕ್ಕೆ ದಾಸರಾಗುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಇದನ್ನು ನಿಯಂತ್ರಣ ಮಾಡಬೇಕಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ತಿಳಿಸಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆ ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಸಹಯೋಗದಲ್ಲಿ ಪೊಲೀಸ್ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕುಶಾಲನಗರ ಶಕ್ತಿಧಾಮ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ ವತಿಯಿಂದ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ಬಳಿ ಇರುವ ಸಭಾಂಗಣದಲ್ಲಿ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಮಾದಕ ವಸ್ತು ಬಳಕೆ ನಿಯಂತ್ರಣ ಕುರಿತು ಶುಕ್ರವಾರ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. `ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ಮಾದಕ ವಸ್ತುಗಳಿಗೆ ಸಂಬಂಧಿಸಿದಂತೆ 35 ರಿಂದ 40 ಪ್ರಕರಣಗಳನ್ನು ಪತ್ತೆ ಹಚ್ಚಿ, 67 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.’ ಯುವ ಜನರು ಮಾದಕ ವಸ್ತುಗಳ ಚಟಕ್ಕೆ ತುತ್ತಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ…
ಮಡಿಕೇರಿ ಜು.7 : ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯಿತಿಗೆ ಖಾಯಂ ಸಿಬ್ಬಂದಿಗಳನ್ನು ನೇಮಿಸದಿದ್ದಲ್ಲಿ ಪಂಚಾಯಿತಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕೆದಮುಳ್ಳೂರು ಗ್ರಾ.ಪಂ ಸದಸ್ಯ ಎಂ.ಎಂ.ಪರಮೇಶ್ವರ್ ಎಚ್ಚರಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಹಂಗಾಮಿ ಕಾರ್ಯದರ್ಶಿಯಾಗಿ ಪಿ.ಎಸ್.ಸತೀಶ್ ಎಂಬುವವರನ್ನು ನೇಮಿಸಲಾಗಿತ್ತು. ಇವರು ವಾರದಲ್ಲಿ ಮೂರು ದಿನದಂತೆ ಗ್ರಾ.ಪಂ ಕಚೇರಿಗೆ ಆಗಮಿಸಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ, ಏಕಾಏಕಿ ವರ್ಗಾವಣೆ ಮಾಡಲಾಗಿದೆ. ಈ ಹಿನ್ನೆಲೆ ಕಚೇರಿ ಕೆಲಸಗಳು ವಿಳಂಬವಾಗುವುದರ ಜತೆಗೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಆದಷ್ಟು ಶೀಘ್ರದಲ್ಲಿ ಪಿಡಿಒ, ಕಾರ್ಯದರ್ಶಿ ಹಾಗೂ ಕರವಸೂಲಿಗಾರರನ್ನು ನೇಮಕ ಮಾಡದಿದ್ದಲ್ಲಿ ಕೆದಮುಳ್ಳುರು ಗ್ರಾ.ಪಂ ಅಧ್ಯಕ್ಷರು ಸೇರಿದಂತೆ ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಕೆದಮುಳ್ಳೂರು ಗ್ರಾ.ಪಂ ಅಧ್ಯಕ್ಷೆ ಶೀಲಾ ಮೇದಪ್ಪ, ಉಪಾಧ್ಯಕ್ಷೆ ಎಂ.ಬಿ.ಮೀನಾಕ್ಷಿ, ಸದಸ್ಯರಾದ ಎಂ.ಜೆ.ಮುತ್ತಪ್ಪ, ಪಿ.ಜೆ.ಜಯಂತಿ ಉಪಸ್ಥಿತರಿದ್ದರು.
ಕುಶಾಲನಗರ ಜು.7 : ಅರಣ್ಯ ಬೆಳೆಸಲು ವನ ಮಹೋತ್ಸವ ಕಾರ್ಯಕ್ರಮ ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಗಿಡ ನೆಡುವ ಕಾರ್ಯಕ್ಕೆ ಸಹಕರಿಸುವ ಮೂಲಕ ಹಸರು ಪರಿಸರ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ಹೇಳಿದರು. ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ವಿಭಾಗ ಮತ್ತು ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ಕಾವೇರಿ ಪರಿಸರ ಬಳಗ, ಲಯನ್ಸ್ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ, ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆಯ ಸಹಯೋಗದಲ್ಲಿ ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ “ನಮ್ಮ ನಡೆ ಹಸಿರೆಡೆಗೆ'( ಗ್ರೋ ಗ್ರೀನ್ ) ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :2023 ರ ಅಂಗವಾಗಿ 250 ಅರಣ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಭೂಮಿಯಲ್ಲಿ ಶೇ. 33…
ಮಡಿಕೇರಿ ಜು.7 : ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ವೆಂಕಟರಾಟ್ ರಾಜಾ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಭೇಟಿಯಾಗಿ ಅಭಿನಂದಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಕನ್ನಡ ಶಲ್ಯವನ್ನು ಮತ್ತು ಕನ್ನಡದ ಪುಸ್ತಕವನ್ನು ಜಿಲ್ಲಾಧಿಕಾರಿಗೆ ನೀಡುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು 81ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಶ್ರವಣಬೆಳಗೊಳದಲ್ಲಿ ನಡೆದ ಸಂದರ್ಭದಲ್ಲಿ ತಾವು ಸಕ್ರಿಯವಾಗಿ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದನ್ನು ನೆನಪಿಸಿಕೊಂಡಿದ್ದಲ್ಲದೆ ಕನ್ನಡದ ಎಲ್ಲಾ ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ಇರುವುದಾಗಿ ತಿಳಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿಎಸ್.ಐ ಮುನಿರ್ ಅಹ್ಮದ್ ಮತ್ತು ಶ್ರೀಮತಿ ರೇವತಿ ರಮೇಶ್ ಉಪಸ್ಥಿತರಿದ್ದರು.
ಮಡಿಕೇರಿ ಜು.7 : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯಮಟ್ಟದ ಸಮನ್ವಯ ಸಮಿತಿ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಿಶೇಷ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಕುಶಾಲನಗರದ ಶಕ್ತಿಧಾಮ ಮದ್ಯ ವ್ಯಸನಿಗಳ ಸಮಗ್ರ ಪುನಶ್ಚೇತನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಬಗ್ಗೆ ಇಂದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಾರ್ಯಾಗಾರ ನಡೆಯಿತು. ನಗರದ ಜಿಲ್ಲಾ ಪೊಲೀಸ್ ಕಚೇರಿಯ ಕಿರು ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಮನೋವೈದ್ಯರಾದ ಡಾ.ಡೆವಿನ್ ಲಿನೇಕರ್ ಕಾರ್ಕಡ, ಶೈಲಶ್ರೀ ಹಾಗೂ ಕುಶಾಲನಗರದ ಶಕ್ತಿಧಾಮ ಪುನರ್ ವಸತಿ ಕೇಂದ್ರದ ಯೋಜನಾ ಸಂಯೋಜಕ ಕೆ.ಒ.ಪ್ರಭು ಮಾದಕ ವಸ್ತುಗಳ ವ್ಯಸನ ಹಾಗೂ ಅವುಗಳಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳು ಮತ್ತು ಮದ್ಯ ವ್ಯಸನಿಗಳ ಪುನರ್ ವಸತಿಯ ಬಗ್ಗೆ ಮಾತನಾಡಿದರು. ಈ ಸಂದರ್ಭ ಅಪರ ಜಿಲ್ಲಾ ವರಿಷ್ಠಾಧಿಕಾರಿ ಕೆ.ಎಸ್.ಸುಂದರ ರಾಜ್, ಜಿಲ್ಲಾ ವಿಕಲ ಚೇತನ ಕಲ್ಯಾಣ ಇಲಾಖೆಯ ಅಧಿಕಾರಿ ವಿಮಲ, ಹಾಗೂ ಜಿಲ್ಲೆಯ ಪೊಲೀಸ್ ಅಧಿಕಾರಿ…
ಮಡಿಕೇರಿ ಜು.7 : ಕರ್ನಾಟಕ ರಾಜ್ಯ ಬಜೆಟ್ ಘೋಷಣೆಯಾಗಿದೆ. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಲು ಕಟ್ಟಡ ದುರಸ್ತಿ ಸೇರಿದಂತೆ ಇತರ ಸೌಲಭ್ಯಗಳ ಅಭಿವೃದ್ಧಿಗಾಗಿ ಅನುದಾನ ಘೋಷಿಸಲಾಗಿದೆ. ತಜ್ಞರ ಸಮಿತಿ ನೇಮಕ ಮಾಡಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹಾಗೂ ಹೊಸ ಶಿಕ್ಷಣ ನೀತಿ 2020ನ್ನು ಕೈಬಿಟ್ಟು ರಾಜ್ಯಕ್ಕೆ ಪ್ರತ್ಯೇಕ ನೀತಿಯೊಂದನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ, ಜೊತೆಗೆ, ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಅನುದಾನವನ್ನು ಹೆಚ್ಚಿಸಲಾಗಿದೆ. ಸರ್ಕಾರದ ಈ ನಿರ್ಧಾರಗಳನ್ನು ಎಐಡಿಎಸ್ಓ ಸ್ವಾಗತಿಸುತ್ತದೆ ಎಂದು ಎಐಡಿಎಸ್ಓ ಜಿಲ್ಲಾ ಸಂಚಾಲಕ ಸುಭಾಷ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇದು, ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ಸಾರ್ವಜನಿಕ ಶಿಕ್ಷಣದ ಉಳಿವಿಗಾಗಿ ಎನ್.ಇ.ಪಿ ವಿರೋಧಿಸಿ ರಾಜ್ಯದ ವಿದ್ಯಾರ್ಥಿ ಹಾಗೂ ಜನ ಚಳುವಳಿಗೆ ಸಂದ ಜಯವಾಗಿದೆ. ರಾಜ್ಯದಲ್ಲಿ ರೂಪಿಸಲಾಗುವ ಹೊಸ ಶಿಕ್ಷಣ ನೀತಿಯು ಶಿಕ್ಷಣದ ಖಾಸಗೀಕರಣ, ವ್ಯಾಪಾರೀಕರಣ, ಕೋಮುವಾದೀಕರಣಕ್ಕೆ ಎಡೆಕೊಡದೆ ಪ್ರಜತಾಂತ್ರಿಕವಾಗಿಯೂ, ಧರ್ಮನಿರಪೇಕ್ಷವಾಗಿಯೂ ಇರುವುದೆಂಬ ಅಪೇಕ್ಷೆ ಇದೆ. ಇವುಗಳ ಅನುಷ್ಠಾನವನ್ನು ಸರ್ಕಾರವು ಏಕಪಕ್ಷಿಯವಾಗಿ ನಡೆಸದೆ ರಾಜ್ಯದ ಶಿಕ್ಷಣ ತಜ್ಞರು, ಪಾಲಕರು…
ಮಡಿಕೇರಿ ಜು.7 – ಮಡಿಕೇರಿ ನ್ಯಾಯಾಲಯದ ವಕೀಲ ಕೃಷ್ಣಮೂತಿ೯ ಅವರಿಗೆ ಅನಾಮಧೇಯರಿಂದ ಬೆದರಿಕೆ ಪತ್ರ ಬಂದಿರುವ ಪ್ರಕರಣವನ್ನು ಖಂಡಿಸಿರುವ ಮಡಿಕೇರಿ ವಕೀಲರ ಸಂಘವು ಕೂಡಲೇ ದುಷ್ಕಮಿ೯ಗಳನ್ನು ಬಂಧಿಸುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ. ವಕೀಲ ಕೖಷ್ಣಮೂತಿ೯ ಅವರಿಗೆ ಅನಾಮಧೇಯರಿಂದ ಬೆದರಿಕೆ ಪತ್ರವೊಂದು ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣಮೂತಿ೯ ಅವರು ಮಡಿಕೇರಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬೆದರಿಕೆ ಪತ್ರ ಬಂದಿರುವ ಪ್ರಕರಣದ ಬಗ್ಗೆ ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಅವರು ಆಡಳಿತ ಮಂಡಳಿ ಸಭೆಯಲ್ಲಿ ಚಚಿ೯ಸಿದ್ದು ಪ್ರಕರಣವನ್ನು ಖಂಡಿಸಿದ್ದಾರೆ. ಅಂತೆಯೇ ಕೂಡಲೇ ಪೊಲೀಸರು ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ ಬೆದರಿಕೆ ಪತ್ರ ಬರೆದಿರುವ ದುಷ್ಕಮಿ೯ಗಳನ್ನು ಬಂಧಿಸಬೇಕು ಎಂದೂ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಈ ಹಿಂದೆಯೂ ಕೃಷ್ಣಮೂತಿ೯ ಅವರ ಕಾರ್ ಮೇಲೆ ಚೆಟ್ಟಳ್ಳಿ ಬಳಿ ಗುಂಡಿನ ಧಾಳಿ ನಡೆದಿತ್ತು. ಆ ಪ್ರಕರಣದ ಆರೋಪಿಗಳನ್ನೂ ಕೂಡ ಪೊಲೀಸರು ಇನ್ನೂ ಪತ್ತೆ ಹಚ್ಚಿಲ್ಲ. ಹೀಗಾಗಿ ನ್ಯಾಯವಾದಿ ಕೃಷ್ಣಮೂತಿ೯ ಅವರ ಮೇಲೆ ಪದೇ ಪದೇ…
ನಾಪೋಕ್ಲು ಜು.7 : ಬೆಟ್ಟಗೇರಿ ಶ್ರೀ ಭಗವತಿ ದೇವಾಲಯದ ಜೀರ್ಣೋದ್ಧಾರ ಕಾರ್ಯ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದ ಶ್ರೀ ಮಹಾಗಣಪತಿ ಹೋಮ, ನೂತನ ತೆರೆದ ಬಾವಿಯ ಗಂಗಾ ಪೂಜೆ, ತುಳಸಿ ಪೂಜೆ, ಶ್ರೀ ಭಗವತಿ ದುರ್ಗಾದೇವಿಗೆ ಕಳಶಾಭಿಷೇಕ ಸೇರಿದಂತೆ ವಿವಿಧ ಪ್ರತಿಷ್ಠಾಪನೆ ಪೂಜಾ ಕೈಂಕರ್ಯಗಳು ಜರುಗಿದವು. ಪುರಾತನ ಇತಿಹಾಸವಿರುವ ಶ್ರೀ ಭಗವತಿ ದೇವಸ್ಥಾನಕ್ಕೆ ರಸ್ತೆ ಸಂಪರ್ಕ ಕುಡಿಯುವ ನೀರಿನ ವ್ಯವಸ್ಥೆ ವಿದ್ಯುತ್ ವ್ಯವಸ್ಥೆ, ದೇವಸ್ಥಾನದ ಜೀರ್ಣೋದ್ಧಾರ ದೇವರ ಪುನರ್ ಪ್ರತಿಷ್ಠಾಪನೆ, ದೇವಾಲಯದ ಒಳಾಂಗಣದಲ್ಲಿ ದೇವರ ಅಭಿಷೇಕಕ್ಕೆ ನೂತನ ತೆರೆದ ಬಾವಿ ನಿರ್ಮಿಸಲಾಗಿದೆ. ಶ್ರೀ ಪೌಡಂಡ ಡಾಲಿ ಭೀಮಯ್ಯ ಅವರ ಅಧ್ಯಕ್ಷತೆಯ ದೇವಸ್ಥಾನದ ಆಡಳಿತ ಮಂಡಳಿಯ ಶ್ರಮ ಹಾಗೂ ದಾನಿಗಳ ಸಹಾಯದಿಂದ ದುರ್ಗಮ ಹಾದಿಯಲ್ಲಿ ಶಿಥಿಲಾವಸ್ಥೆಯಲ್ಲಿದ್ದ ದೇವಸ್ಥಾನವನ್ನು ವೈಭವೀಕರಿಸಿ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸುವಲ್ಲಿ ಆಡಳಿತ ಮಂಡಳಿ ಯಶಸ್ವಿಯಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕ ರಾಜಶೇಖರ್ ನೇತೃತ್ವದಲ್ಲಿ ತಂತ್ರಿಗಳಾದ ರಾಧಾಕೃಷ್ಣ ಭಟ್ ಚೊಕ್ಕಾಡಿ ಜೋಗಿಯಡ್ಕ ಸುಳ್ಯ ಸಕಲ ಪೂಜಾ ವಿಧಿ ವಿಧಾನಗಳು ನಡೆದವು.…






