ಲೇಖಕ: admin

ಮಡಿಕೇರಿ ಜು.7 :  ನಿಷೇಧಿತ ಕೇರಳದ ಲಾಟರಿ ಯನ್ನು ಅಕ್ರಮವಾಗಿ  ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆ ನೆಹರು ನಗರದ ನಿವಾಸಿ ಗಪೂರ್ ಬಂಧಿತ ವ್ಯಕ್ತಿ. ನಾಪೋಕ್ಲು ಸಮೀಪದ ಹಳೆತಾಲೂಕುವಿನಲ್ಲಿರುವ ಗ್ಯಾರೇಜ್ ಒಂದರ ಮುಂಭಾಗದಲ್ಲಿ ಅಕ್ರಮವಾಗಿ ನಿಷೇಧಿತ ಕೇರಳರಾಜ್ಯದ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧ ಶ್ರೇಣಿಯ 1,520 ರೂ.ಮೌಲ್ಯದ 38 ಕೇರಳರಾಜ್ಯದ ಲಾಟರಿ ಮತ್ತು ಮಾರಾಟ ಮಾಡಿದ 370 ರೂಗಳೊಂದಿಗೆ ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಉಪಅಧೀಕ್ಷಕ ಸುಂದರ್ ರಾಜ್ ನಿರ್ದೇಶನದಂತೆ, ಉಪ ವಿಭಾಗದ ಡಿವೈಎಸ್ಪಿ ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವರದಿ :ಝಕರಿಯ ನಾಪೋಕ್ಲು  

Read More

ನಾಪೋಕ್ಲು  ಜು.7 :  ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಭಾಗಮಂಡಲ ಸೇರಿದಂತೆ ಕಾವೇರಿ ನದಿಯ ತಪ್ಪಲಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಪೋಕ್ಲು ಬಳಿಯ ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬಂದಿದೆ. ನಾಪೋಕ್ಲು ವಿಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಬರೆಕುಸಿತ ಮತ್ತು ಕೆಲವೆಡೆ ತೋಟಗಳಲ್ಲಿ ಮರದ ಕೊಂಬೆಗಳು ಬಿದ್ದು ವಿದ್ಯುತ್ ಪೂರೈಕೆಯಲ್ಲಿ ವ್ಯತೆಯ ಕೂಡ ಉಂಟಾಗಿದೆ. ಸಮೀಪದ ಬಲಮುರಿ ಗ್ರಾಮದಲ್ಲಿರುವ ಸಣ್ಣ ಸೇತುವೆ ಕಾವೇರಿ ನದಿ ಪ್ರವಾಹದಿಂದ ಮುಳುಗಡೆಯಾಗಿದೆ. ಅದರಂತೆ ಕೊಳಕೇರಿ ಗ್ರಾಮದಲ್ಲಿರುವ ಚಪ್ಪೆಂಡಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳುವ ರಸ್ತೆಯ ಬದಿಯಲ್ಲಿರುವ ಬರೆ ಕುಸಿದಿದ್ದು ಪಕ್ಕದಲ್ಲಿರುವ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದೆ. ನಾಪೋಕ್ಲು ಸುತ್ತಮುತ್ತಲಿನ ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಕೊಳಕೇರಿ ಚೆರಿಯಪರಂಬು, ಕೈಕಾಡು, ಹೊದವಾಡ ಸೇರಿದಂತೆ ವ್ಯಾಪ್ತಿಯ ಎಲ್ಲಾ ಗ್ರಾಮಳಲ್ಲಿರುವ ಹೊಳೆ,ತೊರೆ, ಹಳ್ಳ ಕೊಳ್ಳೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ವರದಿ :ಝಕರಿಯ ನಾಪೋಕ್ಲು  

Read More

ಬೆಂಗಳೂರು ಜು.7 : ಕೊಯಮತ್ತೂರು ವೃತ್ತದ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸಿ.ವಿಜಯಕುಮಾರ್(45) ಅವರು ಇಂದು ಬೆಳಗ್ಗೆ ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಯಮತ್ತೂರು ನಗರದ ರೆಡ್ ಫೀಲ್ಡ್ ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಕುರಿತು ತನಿಖೆ ಮುಂದುವರೆದಿದೆ. ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಕಾರಣ ಎನ್ನುವ ಸಂಶಯ ವ್ಯಕ್ತವಾಗಿದೆ. ವಿಜಯಕುಮಾರ್ ಅವರು ಇದೇ ಜನವರಿ 6ರಂದು ಕೊಯಮತ್ತೂರು ಪೊಲೀಸ್ ಉಪ ಮಹಾನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿದ್ದರು.

Read More

ಬೆಂಗಳೂರು: ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಹೇಳಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ಜನತೆಯೇ ನನ್ನ ಪಾಲಿನ ಜನಾರ್ಧನರು, ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಹೇಳಿದ್ದಾರೆ. ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆಂದು ತಿಳಿಸಿದ್ದಾರೆ. ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ ಎಂದು ಹೇಳಿದ್ದಾರೆ.

Read More

ಮಡಿಕೇರಿ ಜು.7 :  ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮನೆಯ ಹಿಂಭಾಗದಲ್ಲಿದ್ದ ತಡೆಗೋಡೆ ಕುಸಿದು ಮನೆಗೆ ಹಾನಿಯಾದ ಘಟನೆ ಮಡಿಕೇರಿ ನಗರದ ರಾಣಿಪೇಟೆಯಲ್ಲಿ ನಡೆದಿದೆ. ರಾಣಿಪೇಟೆಯ ನಿವಾಸಿ ಸಲಾಲುದ್ದೀನ್ ಎಂಬುವವರ ಮನೆ ತಡೆಗೋಡೆ ಕುಸಿತದಿಂದ ಅಡುಗೆ ಕೋಣೆ, ಬಾತ್ ರೂಂ ಸಂಪೂರ್ಣ ಕುಸಿದು ನಷ್ಟ ಉಂಟಾಗಿದೆ. ಅದೃಷ್ಟಾವಶಾತ್  ಮನೆಯಲ್ಲಿದ್ದ ಐದು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಎನ್‌ಡಿಆರ್‌ಎಫ್ ಮತ್ತು ಸ್ಥಳೀಯ ಅಧಿಕಾರಿಗಳ ಭೇಟಿ ಪರಿಶೀಲನೆ ಪರಿಶೀಲನೆ ನಡೆಸಿದರು.

Read More

ಮಡಿಕೇರಿ ಜು.7 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 83.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 57.06 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 535.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1081.90 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 140.50 ಮಿ.ಮೀ. ಕಳೆದ ವರ್ಷ ಇದೇ ದಿನ 77.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 845.67 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1588.02 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 59.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 42.32 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 385.97 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 869.64 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 51.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 51.70 ಮಿ.ಮೀ.…

Read More

ಮಡಿಕೇರಿ ಜು.7 : ಧಾರಾಕಾರ ಮಳೆಗೆ ಮನೆಯ ಮೇಲೆ ಗುಡ್ಡ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳದ ಸಜಿಪಮುನ್ನೂರು ಸಮೀಪದ ನಂದಾವರದಲ್ಲಿ ನಡೆದಿದೆ. ನಂದಾವರ ನಿವಾಸಿ ಮಹಮ್ಮದ್ ಎಂಬುವವರ ಪತ್ನಿ ಝರೀನಾ(46) ಮೃತ ದುರ್ದೈವಿ. ಮಣ್ಣಿನಡಿ ಸಿಲುಕಿದ್ದ ಪುತ್ರಿ ಶಫಾ(20) ಅವರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಒಂದು ವಾರದಿಂದ ಬಂಟ್ವಾಳ ಭಾಗದಲ್ಲಿ ಭಾರೀ ಗಾಳಿ, ಮಳೆಯಾಗುತ್ತಿದ್ದು, ವಿವಿಧೆಡೆ ಹಾನಿ ಸಂಭವಿಸಿದೆ.

Read More

ಮಡಿಕೇರಿ ಜು.7 : ಕರ್ನಾಟಕ ಸರಕಾರದ ಮುಖ್ಯ ವಿದ್ಯುತ್ ಪರಿವೀಕ್ಷಕರಾಗಿ ಕೊಡಗಿನ ತೀತಿರ ರೋಶನ್ ಅಪ್ಪಚ್ಚು   ಪದೋನ್ನತಿ ಹೊಂದಿದ್ದು, ಇದರೊಂದಿಗೆ ವಿದ್ಯುತ್ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರದ ಇಂಧನ ಸಚಿವಾಲಯದ ಅಧೀನದಲ್ಲಿ ಬರುವ ವಿದ್ಯುತ್ ಪರಿವೀಕ್ಷಣಾ ಇಲಾಖೆಯ ಪ್ರಭಾರ ಮುಖ್ಯ ವಿದ್ಯುತ್ ಪರಿವೀಕ್ಷಕರಾಗಿದ್ದ ತೀತಿರ ರೋಷನ್ ಅಪ್ಪಚ್ಚು ಅವರನ್ನು ಸರ್ಕಾರ ಇದೀಗ ಮುಖ್ಯ ವಿದ್ಯುತ್ ಪರಿವೀಕ್ಷಕರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಇದರೊಂದಿಗೆ ವಿದ್ಯುತ್ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳಾಗಿ ನೇಮಕಗೊಳಿಸಿದ್ದಾರೆ. ವಿದ್ಯುತ್ ಇಲಾಖೆಯಲ್ಲಿ ರಾಜ್ಯಕ್ಕೆ ಇದು ಏಕೈಕ ಹುದ್ದೆಯಾಗಿದ್ದು ಇಲಾಖೆಯ ಮುಖ್ಯಸ್ಥರಾಗಿದ್ದಾರೆ. ಹುದಿಕೇರಿಯ ಜಿಎಂಪಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ವಿದ್ಯಾಭ್ಯಾಸ ಆರಂಭಿಸಿದ ರೋಶನ್ ಅಪ್ಪಚ್ಚು ನಂತರ ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾಭ್ಯಾಸ ಮುಗಿಸಿದ್ದರು. ಚಿಕ್ಕಮಗಳೂರಿನ ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪಡೆದ ಇವರು ಕೋಲ್ಕತಾದ ಮೆಂಬರ್ ಆಫ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್, ಮತ್ತು ದೆಹಲಿಯ ಮೆಂಬರ್ ಆಫ್ ಇಂಡಿಯನ್ ಸೊಸೈಟಿ…

Read More

ಸೋಮವಾರಪೇಟೆ ಜು.7 : ತೋಳೂರುಶೆಟ್ಟಳ್ಳಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗಣಪತಿ ಕ್ಲಾತ್ ಎಂಪೋರಿಯಂನ ಮಾಲೀಕ ಡಿ.ಎಸ್.ಕುಮಾರ್ ಟಿ-ಶರ್ಟ್ ಹಾಗೂ ಶಾಲಾ ಸಮವಸ್ತ್ರವನ್ನು ಉಚಿತವಾಗಿ ನೀಡಿದರು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಸರಿತಾ, ಶಾಲಾ ಮುಖ್ಯ ಶಿಕ್ಷಕಿ ವಾರಿಜಮಣಿ, ಶಿಕ್ಷಕ ರವಿ, ಚೈತ್ರ, ಎಸ್‍ಡಿಎಂಸಿ ಸದಸ್ಯರಾದ ಪ್ರೇಮ, ಪೋಷಕರಾದ ಶೀಲಾ, ದೇವಿಕ, ಮಂಜುಳ, ಅನಿತ, ಶಿವಕುಮಾರ್, ಸುಬ್ರಮಣಿ, ಗೌರಿ, ಕಾವೇರಿ ಇದ್ದರು. 

Read More

ಸೋಮವಾರಪೇಟೆ ಜು.7 : ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಸಪ್ತಾಹ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮನೋವೈದ್ಯರಾದ ಡಾ.ಡೆವಿನ್ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗಬಾರದು. ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ದುಶ್ಚಟಗಳನ್ನು ವಿದ್ಯಾರ್ಥಿ ಜೀವನದಲ್ಲಿ ಬೆಳೆಸಿಕೊಂಡರೆ ಇಡೀ ಬದುಕು ನರಕವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದರು. ಮನಶಾಸ್ತ್ರಜ್ಞ ಮೋಹನ್, ಮುಖ್ಯ ಶಿಕ್ಷಕ ಯಶ್‍ವಂತ್‍ಕುಮಾರ್, ಸಹ ಶಿಕ್ಷಕರು ಇದ್ದರು. ಇದೇ ಸಂದರ್ಭ ಟೆಲಿಮನಸ್ ಎಂಬ ವಿನೂತನ ಯೋಜನೆಯ ಟೋಲ್ ಫ್ರೀ ನಂಬರ್ ಇರುವ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ತಡೆಗಟ್ಟುವಲ್ಲಿ ಯುವ ಜನರ ಪಾತ್ರ ಕುರಿತು ಪ್ರಬಂಧ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Read More