ಮಡಿಕೇರಿ ಜು.6 : ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಚೇರಂಗಾಲ ಗ್ರಾಮದ ಮತ್ತಾರಿ ಸೇತುವೆ ಮಳೆಯಿಂದ ಮುಳುಗಡೆಯಾಗಿದೆ. ಈ ಭಾಗದಲ್ಲಿ ಒಟ್ಟು 15 ಮನೆಗಳಿದ್ದು, 65 ಮಂದಿ ವಾಸವಾಗಿದ್ದಾರೆ. ಹಾನಿ ಪ್ರದೇಶವನ್ನು ಮಡಿಕೇರಿ ತಹಶೀಲ್ದಾರ್ ಕಿರಣ್ ಗೌರಯ್ಯ ಅವರು ಇಂದು ಪರಿಶೀಲಿಸಿದರು. ಹಾಗೆಯೇ ಭಾಗಮಂಡಲ ತ್ರಿವೇಣಿ ಸಂಗಮ, ಭಾಗಮಂಡಲ -ನಾಪೋಕ್ಲು ರಸ್ತೆಗೆ ಬಂದಿರುವ ನೀರಿನ ಮಟ್ಟವನ್ನು ವೀಕ್ಷಿಸಿದರು. ಭಾಗಮಂಡಲ ಗ್ರಾಮದಲ್ಲಿರುವ ಕಾಶಿ ಮಠದಲ್ಲಿ ಕಾಳಜಿ ಕೇಂದ್ರ ನಡೆಸಲು ಸಿದ್ಧತೆ ಯಾಗಿದ್ದು, ಹೆಚ್ಚಿನ ಮಳೆ ಆದಲ್ಲಿ ಸಂತ್ರಸ್ತರನ್ನು ಕಾಳಜಿ/ ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾಗಮಂಡಲ – ನಾಪೋಕ್ಲು ರಸ್ತೆಯ ಮೇಲೆ ಅಂದಾಜು 2 ಅಡಿ ನೀರು ಬಂದಿದೆ. ಗೃಹ ರಕ್ಷಕ ದಳದ ತಂಡವು ಬೋಟ್ ಸೇರಿದಂತೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್ ಹೇಳಿದ್ದಾರೆ. ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮದ ಬಿ ಕೆ ಚಂದಪ್ಪ ಎಂಬುವವರ ವಾಸದ ಮನೆಯ ಎರಡು ಗೋಡೆಗಳು ಕುಸಿದು ಹಾನಿಯಾಗಿದೆ. ಈ ಸಂಬಂಧ ಗ್ರಾಮ…
ಲೇಖಕ: admin
ಮಡಿಕೇರಿ ಜು.6 : ಮಡಿಕೇರಿ, ಮದೆನಾಡು ಮತ್ತು ಕೊಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಈ ಭಾಗದ ರಾಷ್ಟ್ರೀಯ ಹೆದ್ದಾರಿಗೆ ಹಾನಿಯಾಗುವ ಸಾಧ್ಯತೆಗಳು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾಗಿರುವ ಹೆದ್ದಾರಿ ವಿಭಾಗದ ಅಧಿಕಾರಿಗಳು ಮದೆನಾಡು ಬಳಿ ರಸ್ತೆಯ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಂಡಿದ್ದಾರೆ. ಹೆದ್ದಾರಿ ಬದಿ ನೀರು ಸರಾಗವಾಗಿ ಚರಂಡಿಯಲ್ಲಿ ಹರಿಯುವಂತೆ ಮಾಡಲಾಗಿದೆ. ಹೆದ್ದಾರಿಯ ಸುರಕ್ಷತೆಗಾಗಿ ಹಲವು ನಿರ್ವಹಣಾ ಕಾರ್ಯವನ್ನು ಹೆದ್ದಾರಿ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ವಿಭಾಗದ ಎಇಇ ನಾಗರಾಜು ತಿಳಿಸಿದ್ದಾರೆ. ಮಡಿಕೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಕಳೆದ ವರ್ಷವೂ ಮಳೆಹಾನಿಯಿಂದ ವಾಹನಗಳ ಸಂಚಾರಕ್ಕೆ ತೊಡಕ್ಕುಂಟಾಗಿತ್ತು.
ಮಡಿಕೇರಿ ಜು.6 : ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತಗಳನ್ನು ತಡೆಯಲು ಅಗತ್ಯ ಇರುವ ಕಡೆಗಳಲ್ಲಿ ‘ಸೈನ್‍ಬೋರ್ಡ್’ (ಸೂಚನಾ ಫಲಕ) ಅಳವಡಿಸುವಂತೆ ಸಂಬಂಧಪಟ್ಟ ವಿಭಾಗದ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊಡಗು ಜಿಲ್ಲೆಗೆ ರಾಜ್ಯ, ಅಂತರ ರಾಜ್ಯಗಳಿಂದ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಸ್ಥಳೀಯರು ಸೇರಿದಂತೆ ಯಾರಿಗೂ ಯಾವುದೇ ರೀತಿ ತೊಂದರೆಯಾಗದಂತೆ ಗಮನಹರಿಸುವುದು ಅತ್ಯಗತ್ಯ. ಪ್ರತಿಯೊಬ್ಬರ ಜೀವ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಅಪಘಾತ ತಡೆಯುವಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು. ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸೈನ್ ಬೋರ್ಡ್ ಅಳವಡಿಸುವ ಸಂಬಂಧ ಪೊಲೀಸ್ ಇಲಾಖೆಯಿಂದ ಸ್ಥಳದ ಮಾಹಿತಿ ಪಟ್ಟಿ ಪಡೆದು ಕೂಡಲೇ ಸೈನ್‍ಬೋರ್ಡ್‍ನ್ನು ಆದ್ಯತೆ ಮೇಲೆ ಅಳವಡಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಈಗಾಗಲೇ…
ಮಡಿಕೇರಿ ಜು.6 : ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಬೆಂಗಳೂರು ಇವರು ಮಾನ್ಯ ಗೌರವಾನ್ವಿತ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಿದಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಈ ರಿಯಾಯಿತಿಯು 2023 ರ ಸೆಪ್ಟೆಂಬರ್, 9 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಜು.6 : ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ಜು.8 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ಅರ್ಹರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಟಿ.ಪುಟ್ಟರಂಗಸ್ವಾಮಿ ಅವರು ಕೋರಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನ್ಯಾಯಾಧೀಶರು ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ ಎಂದು ತಿಳಿಸಿದರು. ಲೋಕ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ…
ಮಡಿಕೇರಿ ಜು.6 : ಕೊಡಗು ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯದ ಜವಾಹರ ನವೋದಯ ವಿದ್ಯಾಲಯದ 2023 ನೇ ಸಾಲಿನ ಸಿಬಿಎಸ್‍ಇ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, 10 ಮತ್ತು 12 ನೇ ತರಗತಿಗಳಲ್ಲಿ ವಿದ್ಯಾರ್ಥಿಗಳು 100 ಕ್ಕೆ 100 ಉತ್ತೀರ್ಣರಾಗಿದ್ದಾರೆ ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ತಿಳಿಸಿದ್ದಾರೆ. ಫಲಿತಾಂಶದಲ್ಲಿ ವಿದ್ಯಾಲಯವು ಕೊಡಗು ಜಿಲ್ಲೆಯಲ್ಲಿ ಎಂದಿನಂತೆ ಮುನ್ನಡೆ ಸಾಧಿಸಿದೆ. ಹನ್ನೆರಡನೇ ತರಗತಿಯಲ್ಲಿ 70 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರೆ. 54 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಎಸ್.ಯು.ಸಾತ್ವಿಕ ಶೇ.94.4(ಪ್ರಥಮ), ಎಸ್.ಪಿ.ವೈಶಿಣಿ ಶೇ.90.8 (ದ್ವಿತೀಯ), ಬಿ.ಎಚ್.ಸಾಕ್ಷಿ ಶೇ.90(ತೃತೀಯ) ಸ್ಥಾನ ಪಡೆದಿದ್ದಾರೆ. ಹಾಗೆಯೇ ವಾಣಿಜ್ಯ ವಿಭಾಗದಲ್ಲಿ ಬಿ.ಜಿ.ದುರ್ಗೇಶ್ ಶೇ.95.4(ಪ್ರಥಮ), ಎಚ್.ಪಿ.ರಕ್ಷಯ ಶೇ.94 (ದ್ವಿತೀಯ), ಎಂ.ಕಾವೇರಿ ಶೇ.90 (ತೃತೀಯ) ಸ್ಥಾನ ಪಡೆದಿದ್ದಾರೆ. ಹತ್ತನೇ ತರಗತಿಯಲ್ಲಿ 77 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 68 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 39 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕೆ.ಜೆ.ನಿಧಿ…
ಮಡಿಕೇರಿ ಜು.6 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜು.12 ರಂದು ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ ಮತ್ತು ಜು.17 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಜು.6 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಜು.7 ರಂದು ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ 24 ಗಂಟೆಗಳಲ್ಲಿ ದಾಖಲೆಯ 8 ಇಂಚಿಗೂ ಅಧಿಕ ಮಳೆಯಾಗಿದೆ. ತಲಕಾವೇರಿ ಮತ್ತು ಭಾಗಮಂಡಲ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿ ನಾಪೋಕ್ಲು ರಸ್ತೆಯನ್ನು ಆವರಿಸಿದೆ. ಶ್ರೀಭಗಂಡೇಶ್ವರ ದೇವಾಲಯದ ಆವರಣ ಮತ್ತು ಮಡಿಕೇರಿ ರಸ್ತೆಗೆ ಪ್ರವಾಹದ ನೀರು ಬರುವ ಸಾಧ್ಯತೆಗಳಿದೆ. ಜನ ಸಂಚಾರ ಕಷ್ಟಸಾಧ್ಯವಾಗಿದ್ದು, ಅಧಿಕಾರಿಗಳು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದಾರೆ. ದಕ್ಷಿಣ ಕೊಡಗಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮರಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ::: ಮರ ಬಿದ್ದು ಹಾನಿ ::: ಸುಂಟಿಕೊಪ್ಪದ ಕಂಬಿಬಾಣೆ ಗ್ರಾಮದಲ್ಲಿ ಮರಿಯಾ ಲಲಿತ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ವಿದ್ಯುತ್ ಕಂಬಗಳು ಕೂಡ ಬಿದ್ದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೊಸ್ಕೇರಿ ಗ್ರಾ.ಪಂ ವ್ಯಾಪ್ತಿಯ…
ಬೆಂಗಳೂರು: ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ, ಗುರುವಾರ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಪ್ರಕಟಿಸಿದರು. ತಮ್ಮ ಕಾರ್ಯಾವಧಿಯಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಷಯ-ವಿಚಾರಗಳ ಚರ್ಚೆಯಲ್ಲಿ ಸದನದ ಸರ್ವಸದಸ್ಯರು ಹೆಚ್ಚು ಪಾಲ್ಗೊಳ್ಳುವಂತಾಗಲಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಕೆಲಸವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದರು.
ಮಡಿಕೇರಿ ಜು.6 : ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮದಲ್ಲಿರುವ ಗೋಮಾಳ ಮತ್ತು ಅಯ್ಯಪ್ಪ ದೇವರ ಬನಬನದ ಜಾಗವನ್ನು ಖಾಸಗಿ ಸಂಸ್ಥೆಯೊಂದು ಅತಿಕ್ರಮಣ ಮಾಡಿಕೊಂಡಿದೆ ಎಂದು ಆರೋಪಿಸಿರುವ ಕರವಲೆ ಭಗವತಿ ಮಹಿಷ ಮರ್ಧಿನಿ ದೇವಾಲಯ ಸಮಿತಿ ಹಾಗೂ ಗ್ರಾಮದ ಪ್ರಮುಖರು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯ ಸಮಿತಿ ಸದಸ್ಯ ಎಂ.ಬಿ.ದೇವಯ್ಯ, ಗೋಮಾಳದ ಜಾಗ ಖಾಸಗಿ ವ್ಯಕ್ತಿಗಳ ಪಾಲಾಗದಂತೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಭಾಗದಲ್ಲಿ ಬೆಟ್ಟಗುಡ್ಡವನ್ನು ಸಮತಟ್ಟು ಮಾಡಿ ಅರಣ್ಯವನ್ನು ನಾಶ ಮಾಡಲಾಗಿದ್ದು, ಸುಮಾರು 6 ಏಕರೆ ಜಾಗವನ್ನು ಒತ್ತುವರಿ ಮಾಡಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಗೋಮಾಳದ ಸುತ್ತಲು ಇದ್ದ ರಾಜಕಡಂಗ(ಅರಮನೆ ಕಡಂಗ)ವನ್ನು ಮಣ್ಣು ಮುಚ್ಚಿ ಸಮತಟ್ಟು ಮಾಡಲಾಗಿದೆ. ಸರ್ಕಾರಕ್ಕೆ ಸಂಬಂಧಿಸಿದ ಆಸ್ತಿಯನ್ನು ಅತಿಕ್ರಮಿಸಿಕೊಂಡಿದ್ದಾರೆ. ಗೋಮಾಳದಲ್ಲಿ ನೂತನವಾಗಿ ಗೋಶಾಲೆ ನಿರ್ಮಾಣ ಮಾಡಲಾಗಿದ್ದು, ಗೋವುಗಳನ್ನು ಮೇಯಲು ಬಿಡಲಾಗುತ್ತಿತ್ತು. ಆದರೆ, ಅತಿಕ್ರಮಣದಿಂದ ಕಾಡುಮರಗಳು ನಾಶವಾಗಿವೆ.…






