ಲೇಖಕ: admin

ವಿರಾಜಪೇಟೆ ಜು.6 : ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಹುಟ್ಟು ಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಮತ್ತು ಮಳೆಗಾಲದ ತುರ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಗುತ್ತದೆ ಎಂದು ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಮಾಹಿತಿ ನೀಡಿದರು. ನಗರ ಕಾಂಗ್ರೆಸ್ ಸಮಿತಿ ವಿರಾಜಪೇಟೆ ಘಟಕದ ವತಿಯಿಂದ ಶಾಸಕರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಅಲ್ಲದೇ ಸಾಮಾಜಿಕ ತಳಹದಿಯ ಮೇಲೆ ಕಾರ್ಯಕ್ರಮ ರೂಪಿಸಬೇಕು ಎಂಬ ಮನೋಭಾವದಿಂದ ಜು.9 ರಂದು ರವಿವಾರದಂದು ಪುರಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಮಳೆಗಾಲದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆ ಮಾಡಲು ದಿನದ 24*7 ಯುವಕರ ಕಾರ್ಯಪಡೆಯನ್ನು ಸಿದ್ದಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಪುರಸಭೆ ಸದಸ್ಯರ ಮುಂದಾಳತ್ವದಲ್ಲಿ ಎಎಸ್‍ಪಿ ತುರ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಗಿದ್ದು, 9ರಂದು ಅಧಿಕೃತವಾಗಿ ಕಾರ್ಯಪಡೆಗೆ ಚಾಲನೆ ನೀಡುವುದರೊಂದಿಗೆ ಘಟಕದ ಲೋಗೋ ಬಿಡುಗಡೆಗೊಳಿಸಿ ಹೆಲ್ಪ್‍ಲೈನ್ ಸಂಖ್ಯೆ…

Read More

ಮಡಿಕೇರಿ ಜು.6 :  ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಮತ್ತು ಜಿಲ್ಲೆಗೆ ಆರೆಂಜ್ ಆಲರ್ಟ್ ಘೋಷಣೆ ಮಾಡಿರುವುದರಿಂದ  ಜು.7 ರಂದು  ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

Read More

ಸೋಮವಾರಪೇಟೆ, ಜು.6 : ಉತ್ತರ ಕೊಡಗಿನ ಮಾದಾಪುರ ಬಳಿಯ ಗರಗಂದೂರು ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಕೊಡಗು ಅರಣ್ಯ ವೃತ್ತದ ಸೋಮವಾರಪೇಟೆ ಅರಣ್ಯ ವಲಯ ಅರಣ್ಯಾಧಿಕಾರಿ ಕಚೇರಿ, ಜಿಲ್ಲಾ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ಸೋಮವಾರಪೇಟೆ ಲಯನ್ಸ್ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿಯ ವತಿಯಿಂದ ‘ನನ್ನ ಗಿಡ ನನ್ನ ಹೆಮ್ಮೆ’ ಯೋಜನೆಯಡಿ ವನ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಸಸಿ ನೆಡುವ ಸಪ್ತಾಹದಲ್ಲಿ 50 ಗಿಡಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. “ಅರಣ್ಯ ಸಂರಕ್ಷಣೆ ಮತ್ತು ವನ ಮಹೋತ್ಸವ”ದ ಮಹತ್ವ ಕುರಿತು ಮಾಹಿತಿ ನೀಡಿ ಪರಿಸರ ರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಕರ್ನಾಟಕ ರಾಜ್ಯ ಪರಿಸರ‌ ಪ್ರಶಸ್ತಿ ಪುರಸ್ಕೃರಾದ  ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ, ಪರಿಸರ ಪ್ರೇಮಿ, ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ , ಪರಿಸರ ಸಂರಕ್ಷಣೆ ಇಂದು ತೀರಾ ಅಗತ್ಯವಾಗಿದ್ದು, ಪರಿಸರ ಸಂರಕ್ಷಣೆ…

Read More

ಬೆಂಗಳೂರು ಜು.6 :   ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಬಾಬೂಜಿ ಅವರ ಪ್ರತಿಮೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಈ ಸಂದರ್ಭ  ಹಾಜರಿದ್ದರು.

Read More

ದೆಹಲಿ ಜು.6 : ದಶಮತ್ ರಾವತ್ ಎಂಬ ವ್ಯಕ್ತಿಯ ಮೇಲೆ ಪ್ರವೇಶ್ ಶುಕ್ಲಾ ಎಂಬಾತ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬoಧಿಸಿದoತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂತ್ರಸ್ತ ವ್ಯಕ್ತಿ ದಶಮತ್ ರಾವತ್ ಅವರ ಪಾದಪೂಜೆ ಮಾಡಿ ಸಂತೈಸಿದ್ದಾರೆ. ಈ ಫೋಟೋಗಳು ಈಗ ವೈರಲ್ ಆಗಿದೆ. ಆರೋಪಿ ಪ್ರವೇಶ್ ಶುಕ್ಲಾನನ್ನು ಈಗಾಗಲೇ ಬಂಧಿಸಿದ್ದು, ಈತನ ಅಕ್ರಮ ಮನೆಗಳನ್ನು ಧ್ವಂಸಗೊಳಿಸಲಾಗಿದೆ.

Read More

ಮಡಿಕೇರಿ ಜು.6  : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 58.12 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 68.01 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 451.44 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1024.84 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 87.28 ಮಿ.ಮೀ. ಕಳೆದ ವರ್ಷ ಇದೇ ದಿನ 98.28 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 705.17 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1510.87 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.08 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 48.73 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 326.57 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 827.32 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 57.03 ಮಿ.ಮೀ.…

Read More

ಮಡಿಕೇರಿ ಜು.6 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 8 ಇಂಚಿಗೂ ಅಧಿಕ ಮಳೆಯಾಗಿದೆ. ದಕ್ಷಿಣ ಕೊಡಗಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮರಗಳು ಮತ್ತು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಂಟಿಕೊಪ್ಪದ ಕಂಬಿಬಾಣೆ ಗ್ರಾಮದಲ್ಲಿ ಮರಿಯಾ ಲಲಿತ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ವಿದ್ಯುತ್ ಕಂಬಗಳು ಕೂಡ ಬಿದ್ದಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೊಸ್ಕೇರಿ ಗ್ರಾ.ಪಂ ವ್ಯಾಪ್ತಿಯ ಅರೆಕಾಡು ಗ್ರಾಮದ ನೇತಾಜಿ ನಗರ ಬಡಾವಣೆಯಲ್ಲಿ ಗುರುರಾಜ್ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಡಿಕೇರಿ, ಕೊಯನಾಡು, ಸಂಪಾಜೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೊಯನಾಡು ಬಳಿ ಹೆದ್ದಾರಿಗೆ ಹಾನಿಯಾಗುವ ಸಾಧ್ಯತೆ ಕಂಡು ಬಂದಿದೆ. ತಲಕಾವೇರಿ ಮತ್ತು ಭಾಗಮಂಡಲ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿ ನದಿ ನೀರು ರಸ್ತೆಯನ್ನು ಆವರಿಸುತ್ತಿದೆ. ಮರ ಮತ್ತು ವಿದ್ಯುತ್ ಕಂಬಗಳು ಬೀಳುತ್ತಿರುವುದರಿಂದ ವಿದ್ಯುತ್…

Read More

ಮಡಿಕೇರಿ ಜು.6 :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತೀಯ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರ 37ನೇ ಪರಿನಿರ್ವಾಣ ಕಾರ್ಯಕ್ರಮವನ್ನು ಗುರುವಾರ ಸರಳವಾಗಿ ಆಚರಿಸಲಾಯಿತು. ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬಾಬು ಜಗಜೀವನ್ ರಾಂ ಅವರು ಕೇಂದ್ರದಲ್ಲಿ ಆಹಾರ ಸಚಿವರಾಗಿ ‘ಹಸಿರು ಕ್ರಾಂತಿ’ ಜಾರಿಗೊಳಿಸಿದರು ಎಂದು ಹೇಳಿದರು. ಬಡವರ ಏಳಿಗೆಗೆ ಶ್ರಮಿಸಿದ ಬಾಬು ಜಗಜೀವನ್ ರಾಂ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಆಹಾರ, ಕಾರ್ಮಿಕ, ರಕ್ಷಣಾ ಸಚಿವರಾಗಿ ಹಲವು ಮಹತ್ತರ ಕಾರ್ಯಗಳನ್ನು ಕೈಗೊಂಡು ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ನುಡಿದರು. ಹೆಚ್ಚುವರಿ ಪೊಲೀಸ್…

Read More

ಮಡಿಕೇರಿ ಜು.6 : ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆ ಸೇರಿದಂತೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.

Read More

ಮಡಿಕೇರಿ ಜು.5 : ಪಾನಮತ್ತ ಕಾರ್ಮಿಕನೊಬ್ಬ ತನ್ನ ಪತ್ನಿ ಹಾಗೂ ಮಗುವಿನ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೋಕೇರಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಭರತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಪ್ರೇಮ ಹಾಗೂ ಮಗುವನ್ನು ನಾಪೋಕ್ಲು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ ಸಮೀಪದ ಕೋಕೇರಿ ಗ್ರಾಮದ ತೋಟದ ಲೈನ್ ಮನೆಯಲ್ಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿರುವ ಭರತ್ ಪಾನಮತ್ತನಾಗಿ ಬಂದು ಊಟದ ವಿಚಾರಕ್ಕೆ ಕಲಹ ನಡೆಸಿ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More