ಮಡಿಕೇರಿ ಜು.5 : ರಾಷ್ಟ್ರೀಯ ಮೋಟಾರ್ ರ‍್ಯಾಲಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಭಿನ್ ರೈ ಅವರನ್ನು ರೋಟರಿ ಜಿಲ್ಲೆ 3181 ನ ನಿಯೋಜಿತ ಗವನ೯ರ್ ವಿಕ್ರಂದತ್ತ ಮತ್ತು ಗಣ್ಯರು ಮಿಸ್ಟಿ ಹಿಲ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಇತ್ತೀಚಿಗೆ ಅರುಣಾಚಲ ಪ್ರದೇಶದಲ್ಲಿ ಆಯೋಜಿತ ರಾಷ್ಟ್ರೀಯ ಮೋಟಾರ್ ರ‍್ಯಾಲಿಯ 4 ವಿಭಾಗಗಳಲ್ಲಿ ಅಭಿನ್ ರೈ ಪ್ರಥಮ ಸ್ಥಾನ ಪಡೆದಿದ್ದರು. ಈವರೆಗೆ ಯುವಸಾಧಕ ಅಭಿನ್ ರೈ ಗೆ ಮೋಟಾರ್ ರ‍್ಯಾಲಿ ಸ್ಪಧೆ೯ಗಳಲ್ಲಿ 25 ಪ್ರಥಮ ಸ್ಥಾನ ದೊರಕಿದೆ. ಅಭಿನ್ ರೈ ಮಿಸ್ಟಿ ಹಿಲ್ಸ್ ನ ನೂತನ ಕಾಯ೯ದಶಿ೯ ರತ್ನಾಕರ್ ರೈ, ನಮಿತಾ ರೈ ದಂಪತಿ ಪುತ್ರ.
ಲೇಖಕ: admin
ಮಡಿಕೇರಿ ಜು. 5 : ಭರವಸೆಯೊಂದಿಗೆ ಅವಕಾಶಗಳನ್ನು ಸಮಥ೯ವಾಗಿ ಬಳಸಿಕೊಂಡು ಜನಸೇವೆಗೆ ಮುಂದಾಗಬೇಕಾದ ಸಂದಭ೯ ಇಂದಿನ ದಿನಗಳಲ್ಲಿದೆ ಎಂದು ರೋಟರಿ ಜಿಲ್ಲೆ 3181 ನ ನಿಯೋಜಿತ ಗವನ೯ರ್ ವಿಕ್ರಂದತ್ತ ಹೇಳಿದ್ದಾರೆ. ನಗರದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ರೈ , ಕಾಯ೯ದಶಿ೯ ರತ್ನಾಕರ್ ರೈ ಮತ್ತು ತಂಡಕ್ಕೆ ಪದಗ್ರಹಣ ನೆರವೇರಿಸಿ ಮಾತನಾಡಿದ 2024 -25 ನೇ ರೋಟರಿ ವಷ೯ದ ಗವನ೯ರ್ ವಿಕ್ರಂದತ್ತ, ರೋಟರಿಯಂಥ ಜಾಗತಿಕ ಸಮಾಜಸೇವಾ ಸಂಸ್ಥೆಯ ಬಗ್ಗೆ ಜನರು ಅಪಾರವಾದ ನಂಬಿಕೆ, ಭರವಸೆಗಳನ್ನು ಇಟ್ಟುಕೊಂಡಿದ್ದಾರೆ. ಈ ನಂಬಿಕೆಗೆ ಚ್ಯುತಿಬಾರದಂತೆ ರೋಟರಿ ಸದಸ್ಯರು ಸಾಕಷ್ಟು ಛಲ, ಭರವಸೆಯೊಂದಿಗೆ ತಮಗಿರುವ ಅವಕಾಶಗಳನ್ನು ಸಮಥ೯ವಾಗಿ ಉಪಯೋಗಿಸಿಕೊಂಡು ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಸಕ್ರಿಯರಾಗುವಂತೆ ಕರೆ ನೀಡಿದರು. ಎಲ್ಲರೂ ಸ್ವಾಮಿ ವಿವೇಕಾನಂದ, ಮದರೆ ಥೆರೆಸಾ ಅವರಂಥೆ ಮಹಾನ್ ವ್ಯಕ್ತಿಯಾಗಲು ಸಾಧ್ಯವಿಲ್ಲ. ಹೀಗಿದ್ದರೂ ಪ್ರತಿಯೋವ೯ರು ರೋಟರಿಯಂಥ ಬೖಹತ್ ಸಮಾಜ ಸೇವಾ ಸಂಸ್ಥೆಗಳ ಮೂಲಕ ತಮ್ಮ ಕೈಲಾದಷ್ಟು ಸಹಾಯವನ್ನು ಸಮಾಜದಲ್ಲಿ ಅಗತ್ಯವುಳ್ಳವರಿಗೆ ನೀಡಬಹುದಾಗಿದೆ ಎಂದೂ…
ವಿರಾಜಪೇಟೆ ಜು.5 : ವಿರಾಜಪೇಟೆ ವಿವೇಕ ಜಾಗೃತ ಬಳಗ, ಸರ್ವೋದಯ ಶಿಕ್ಷಣ ಮಹಾವಿದ್ಯಾಲಯ ಹಾಗೂ ಮುರಾರ್ಜಿ ದೇಸಾಯಿ ವಸತಿ ಶಾಲೆ ತಿತಿಮತಿ ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಸದ್ಗತಿ ದಿನದ ಪ್ರಯುಕ್ತ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣಾ ಶಿಬಿರ ನಡೆಯಿತು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರುಗಳಾದ ನೇತ್ರ ತಜ್ಞ ಡಾ. ವಿಕ್ರಂ ಮತ್ತು ತಂಡ, ತಾಲೂಕು ಆಸ್ಪತ್ರೆ ವಿರಾಜಪೇಟೆ ವೈದ್ಯರುಗಳಾದ ಡಾ. ಸೌಮ್ಯಶ್ರಿ ಮತ್ತು ಡಾ.ಸತ್ಯಜಿತ್ ರಾಜ್ ತಪಾಸಣೆ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸರ್ವೋದಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ವಾಣಿ, ವಿದ್ಯಾರ್ಥಿಗಳು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. ವಿವೇಕ ಜಾಗೃತ ಬಳಗದ ಅಧ್ಯಕ್ಷರಾದ ಶಶಿಕಲಾ ಭಾಸ್ಕರ್, ತಿತಿಮತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಹೆಚ್.ಆರ್. ಷಡಕ್ಷರಿ ಹಾಗೂ ಸರ್ವೋದಯ ಎಜುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಸೂರ್ಯ ಕುಮಾರಿ, ಮುಖ್ಯ ಗ್ರಂಥಪಾಲಕ ಕೆ.ಎಸ್.ರಾಜಶೇಖರ್ ಹಾಜರಿದ್ದರು. ವಿದ್ಯಾರ್ಥಿಗಳು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು…
ವಿರಾಜಪೇಟೆ ಜು.5 : ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳಲ್ಲಿ ಶಿಸ್ತು ಬದ್ಧ, ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿರುವುದು ಕೊಡಗು ಜಿಲ್ಲೆ ಮಾತ್ರ ಎಂದು ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಹೇಳಿದರು. ಕಾಕೋಟುಪರಂಬು ಕೃಷಿ ಪತ್ತಿನ ಸಹಕಾರ ಸಂಘದ ರೂ.45 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಹಿಂದೆ ನಮ್ಮ ಪೂರ್ವಜರು ಕಟ್ಟಿ ಬೆಳೆಸಿದ ಸಹಕಾರಿ ಸಂಸ್ಥೆಗಳು ಇಂದಿಗೂ ಉತ್ತಮವಾಗಿದೆ ಎಂದರೆ ನಾವು ಅವರಿಗೆ ನೀಡುತ್ತಿರುವ ಗೌರವ ಎಂದರು. ಜಿಲ್ಲೆಯ ಒಂದೆರಡು ಸಹಕಾರಿ ಸಂಸ್ಥೆಗಳನ್ನು ಹೊರತುಪಡಿಸಿದರೆ ಉಳಿದ ಎಲ್ಲಾ ಸಹಕಾರಿ ಸಂಸ್ಥೆಗಳು ಅವ್ಯವಹಾರ ಹಾಗೂ ಹಣ ದುರುಪಯೋಗ ಇಲ್ಲದೆ ಪ್ರಗತಿ ಸಾಧಿಸಿದೆ ಎಂದು ಶ್ಲಾಘಿಸಿದರು. ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಮಾತನಾಡಿ, ಸ್ವತಂತ್ರ ಪೂರ್ವದಲ್ಲಿಯೇ ಆರಂಭಗೊಂಡ ಸಹಕಾರಿ ಕ್ಷೇತ್ರ ಗ್ರಾಮೀಣ ಭಾಗದಲ್ಲಿ ಪ್ರಗತಿ ಸಾಧಿಸಿ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಪೈಪೆÇೀಟಿ ನೀಡುತ್ತಿರುವುದು ಅವರುಗಳಿಗೆ ನುಂಗಲಾರದ ತುತ್ತಾಗಿದೆ. ಸರಿಯಾದ ಸಮಯಕ್ಕೆ ಸಾಲ ಮರುಪಾವತಿ ಮಾಡಿದರೆ ಸಹಕಾರ ಸಂಘಗಳು ಉಳಿದುಕೊಳ್ಳಲು ಸಹಕಾರಿಯಾಗುತ್ತದೆ…
ಕುಶಾಲನಗರ ಜು.5 : ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡ- ಮರಗಳನ್ನು ಬೆಳೆಸಿ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಉತ್ತಮ ಪರಿಸರ ವ್ಯವಸ್ಥೆಯೊಂದಿಗೆ ಭವಿಷ್ಯಕ್ಕಾಗಿ ನೀರು ಮತ್ತು ಜೀವ ವೈವಿಧ್ಯ ಸಂರಕ್ಷಣೆ ಮಾಡಲು ಸಮುದಾಯದ ಸಹಕಾರ ಅಗತ್ಯ ಎಂದು ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಹೇಳಿದರು. ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ವಿಭಾಗ ಮತ್ತು ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಿಸರ್ಗ ಇಕೋ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಶಾಲಾವರಣದಲ್ಲಿ “ನಮ್ಮ ನಡೆ ಹಸಿರೆಡೆಗೆ'( ಗ್ರೋ ಗ್ರೀನ್ ) ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :2023 ರ ಅಂಗವಾಗಿ 100 ಅರಣ್ಯ ಸಸಿ ನೆಡುವ ಕಾರ್ಯಕ್ಕೆ…
ಮಡಿಕೇರಿ ಜು.5 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ರಾಜ್ಯ ಮಟ್ಟದ ಕಾವ್ಯ ಮತ್ತು ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದ್ದು, ಜು.9 ರಂದು ಬೆಂಗಳೂರಿನ ಚಾಮರಾಜಪೇಟೆ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭದ ಅಂಗವಾಗಿ ರಾಜ್ಯ ಮಟ್ಟದ ಕವಿಗೋಷ್ಠಿ ಏರ್ಪಡಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮೂವತ್ತು ಮಂದಿ ಕವಿ ಕವಯತ್ರಿಯರು ಅವಕಾಶ ಪಡೆದಿದ್ದಾರೆ. ಈ ಪೈಕಿ ಕೊಡಗು ಜಿಲ್ಲೆಯಿಂದ ಈರಮಂಡ ಹರಿಣಿ ವಿಜಯ್ ಆಯ್ಕೆಯಾಗಿದ್ದಾರೆ ಎಂದು ಖಿದ್ಮಾ ಫೌಂಡೇಶನ್‍ನ ರಾಜ್ಯ ಸಂಚಾಲಕ ಅಮೀರ್ ಬನ್ನೂರು ತಿಳಿಸಿದ್ದಾರೆ.
ಮಡಿಕೇರಿ ಜು.5 : ಹಾಕತ್ತೂರು ಗ್ರಾಮದ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕೂಲಿ ಕಾರ್ಮಿಕ ನಂಜುಂಡ(40) ಜೂ.27 ರಂದು ಮನೆಯಿಂದ ಹೊರ ಹೊದವರು ವಾಪಸು ಬಾರದೇ ಕಾಣೆಯಾಗಿರುವ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂಜುಂಡ ಕನ್ನಡ, ತಮಿಳು, ಹಿಂದಿ ಭಾಷೆ ಮಾತನಾಡುವವರಾಗಿದ್ದು, 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ತೆಳ್ಳಗಿನ ಶರೀರ ಹೊಂದಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ 08272-228777 ಅಥವಾ ಪೊಲೀಸ್ ಅಧೀಕ್ಷಕರು 08272-229000 ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.
ಮಡಿಕೇರಿ ಜು.5 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದೆ. ಮೋರಿ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯತಪ್ಪಿ ಬಿದ್ದು ಮಳೆ ನೀರಿನಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲ್ಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸುರೇಶ್ ಗಟ್ಟಿ (52) ಎಂಬುವವರೇ ಸಾವನ್ನಪಿರುವ ದುರ್ದೈವಿ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ದಕ್ಷಿಣ ಕನ್ನಡ ವ್ಯಾಪ್ತಿಯಲ್ಲಿ ಗಾಳಿ, ಮಳೆ ವ್ಯಾಪಕವಾಗಿದ್ದು, ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ.
ಮಡಿಕೇರಿ ಜು.5 : ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 2023-24ನೇ ಸಾಲಿನ ʻಕನ್ನಡ ಪ್ರವೇಶʼ, ʻಕಾವʼ, ʻಜಾಣʼ ಹಾಗೂ ʻರತ್ನʼ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ʻಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನʼ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು 2023ರ ಆಗಸ್ಟ್ 31 ಕೊನೆಯ ದಿನವಾಗಿದೆ. 2023ರ ಸೆಪ್ಟೆಂಬರ್ 15ರ ವರೆಗೆ ದಂಡ ಶುಲ್ಕ ರೂ. 50-00ಅನ್ನು ಹೆಚ್ಚುವರಿಯಾಗಿ ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು 25ರೂ. ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಇರುವ ಮಾರಾಟ ಮಳಿಗೆಯಲ್ಲಿ ದಿನಾಂಕ 1-07-2023 ರಿಂದ ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವ ಸೌಲಭ್ಯವನ್ನು ಪರಿಷತ್ತು ಕಲ್ಪಿಸಿದೆ. ಅರ್ಜಿ ನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ…
ಮಡಿಕೇರಿ ಜು.5 : ಹುಚ್ಚು ನಾಯಿ ಕಚ್ಚಿ ಬಾಲಕ ಸೇರಿದಂತೆ 9 ಮಂದಿಗೆ ಗಾಯವಾಗಿರುವ ಘಟನೆ ಪಿರಿಯಾಪಟ್ಟಣದ ಈಡಿಗರ ಬೀದಿಯ ಬಳಿ ನಡೆದಿದೆ. 10 ವರ್ಷದ ಬಾಲಕನ ಕಾಲು ಮತ್ತು ತೊಡೆ ಭಾಗಕ್ಕೆ ತೀವ್ರವಾಗಿ ಕಚ್ಚಿದ ಪರಿಣಾಮ ಗಂಭೀರ ಗಾಯಗಳಾಗಿವೆ. ಉಳಿದ 8 ಮಂದಿಯ ಮೇಲೂ ನಾಯಿ ದಾಳಿ ಮಾಡಿದ್ದು, ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪಿರಿಯಾಪಟ್ಟಣದ ವ್ಯಾಪ್ತಿಯಲ್ಲಿ ಹುಚ್ಚು ನಾಯಿ ಮತ್ತು ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಪುರಸಭೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.






