ಮಡಿಕೇರಿ ಜು.5 : ಕರಿಕೆ ಪ್ರೌಢ ಶಾಲೆಯಲ್ಲಿ ಭಾಗಮಂಡಲ ವಲಯ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಶಾಲೆಯ ಆವರಣದಲ್ಲಿ ಅರಣ್ಯ ಅಧಿಕಾರಿಗಳು, ಪಂಚಾಯಿತಿ ಸಿಬ್ಬಂದಿಗಳು, ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಎಸ್.ಡಿ.ಎಂ.ಸಿ ಸಿಬ್ಬಂದಿಗಳು, ಪ್ರಮುಖರಾದ ಶಿವ, ಗಿರಿ, ರಾಜೇಶ್, ಸಚಿನ್ ಬಿರೇದಾರ್ ಪಾಲ್ಗೊಂಡು ವಿವಿಧ ತಳಿಯ ಸಸಿಗಳನ್ನು ನೆಟ್ಟರು. ಈ ಸಂದರ್ಭ ಆರ್‍ಎಪ್‍ಓ ರಾವೀಂದ್ರ ಮಾತನಾಡಿ, ಸಸಿಗಳನ್ನು ನೆಡುವ ಜೊತೆ ಜೊತೆಗೆ ವಿದ್ಯಾರ್ಥಿಗಳು ಪರಿಸರದ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಬೇಕೆಂದು ಕರೆ ನೀಡಿದರು.
ಲೇಖಕ: admin
ಮಡಿಕೇರಿ ಜು.5 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 36.43 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 65.83 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 393.32 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 956.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.78 ಮಿ.ಮೀ. ಕಳೆದ ವರ್ಷ ಇದೇ ದಿನ 101.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 617.89 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1412.59 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 34.87 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 54.83 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 279.49 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 778.59 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 25.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 40.87 ಮಿ.ಮೀ.…
ಮಡಿಕೇರಿ ಜು.5 : ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲೆಯವರಾದ ಚಾಮೆರ ದೇವಯ್ಯ (ಚಂದನ್) ಇದೀಗ ಮೇಜರ್ ಆಗಿ ಬಡ್ತಿ ಹೊಂದಿದ್ದಾರೆ. ಇವರು ಮೂಲತಃ ಮಂಕ್ಯದವರಾಗಿದ್ದು, ಶನಿವಾರಂಸತೆಯಲ್ಲಿ ನೆಲೆಸಿದ್ದ, ಇದೀಗ ಬೆಂಗಳೂರಿನಲ್ಲಿರುವ ಚಾಮೆರ ಪ್ರಕಾಶ್ ಹಾಗೂ ಉಷಾ ದಂಪತಿ ಪುತ್ರ.
ಮಡಿಕೇರಿ ಜು.5 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣೆ ಮತ್ತು ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ಪತ್ರಕರ್ತರಿಗೆ ವಿವಿಧ ಬಗೆಯ ಸ್ಪರ್ಧೆಗಳನ್ನ ಆಯೋಜಿಸಲಾಗಿದೆ. ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ಸಂಚಾಲಕ ಐಮಂಡ ಗೋಪಾಲ್ ಸೋಮಯ್ಯ ಮತ್ತು ಕಾರ್ಯಕ್ರಮ ಸಂಚಾಲಕ ಸಂಚಾಲಕ ಮಂದನೆರವಂಡ ಯುಗ ದೇವಯ್ಯ, ಕಾಲೇಜು ವಿದ್ಯಾರ್ಥಿಗಳಿಗೆ ಸಾಕ್ಷ್ಯಚಿತ್ರ, ಸಾರ್ವಜನಿಕರಿಗೆ ರೀಲ್ಸ್ ಮತ್ತು ಪತ್ರಕರ್ತರಿಗೆ ಛಾಯಾಗ್ರಹಣ ಹಾಗೂ ಛಾಯಾಚಿತ್ರ ಸ್ಪರ್ಧೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಸಾಕ್ಷ್ಯ ಚಿತ್ರ ಸ್ಪರ್ಧೆ :: ಕೊಡಗು ವಿಶ್ವವಿದ್ಯಾನಿಲಯದ ಅಧಿನ ಕಾಲೇಜು ವಿದ್ಯಾರ್ಥಿಗಳಿಗೆ ಸಾಕ್ಷ್ಯಚಿತ್ರ ಸ್ಪರ್ಧೆ ಏರ್ಪಡಿಸಲಾಗಿದ್ದು, ಕೊಡಗಿನಲ್ಲಿ “ಮುಂಗಾರು” ಎಂಬ ವಿಷಯ ವಸ್ತು ನೀಡಲಾಗಿದೆ. ಸಾಕ್ಷ್ಯ ಚಿತ್ರದ ಅವಧಿ 5 ನಿಮಿಷ ಮೀರುವಂತಿಲ್ಲ. ಒಂದು ಕಾಲೇಜಿನಿಂದ ಎಷ್ಟು ಎಂಟ್ರಿಗಳನ್ನು ಬೇಕಾದರೂ ನೀಡಬಹುದು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ವಿಜೇತರಿಗೆ 5000 ರೂ ನಗದು, ದ್ವಿತೀಯ 3000 ರೂ ನಗದು ಹಾಗೂ…
ನಾಪೋಕ್ಲು ಜು.5 : ಮರಂದೋಡ ಗ್ರಾಮದಲ್ಲಿ ಕಾಡಾನೆಗಳ ಉಪಟಳ ದಿಂದ ಗ್ರಾಮಸ್ಥರು ನಲುಗುವಂತಾಗಿದೆ. ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ತೋಟಗಳಿಗೆ ನುಗ್ಗಿ ಕಾಫಿ, ಅಡಿಕೆ, ತೆಂಗು, ಬಾಳೆ, ಅನಾನಾಸು ಗಿಡಗಳನ್ನು ಧ್ವಂಸ ಪಡಿಸುತ್ತಿವೆ ಎಂದು ಗ್ರಾಮಸ್ಥರು ಅವಲತ್ತುಕೊಂಡಿದ್ದಾರೆ. ಮರಂದೋಡ ಗ್ರಾಮದ ಹಲವು ತೋಟಗಳಿಗೆ ನುಗ್ಗಿರುವ ಕಾಡಾನೆಗಳು ಕಾಫಿ, ಬಾಳೆ ಗಿಡಗಳನ್ನು ದ್ವಂಸಪಡಿಸಿ ರಸ್ತೆಗಳಲ್ಲಿ ಎಳೆದೊಯ್ದಿರುವ ದೃಶ್ಯಗಳು ಕಂಡುಬಂದಿವೆ. ಗ್ರಾಮದ ಚೋಯಮಾಡಂಡ ಪೂರ್ಣಚ್ಚ ಅವರ ಮನೆಯ ಬಳಿ ಅಡ್ಡಾಡಿ ಕಿಟಕಿ ಒಳಗಿನಿಂದ ಮಕ್ಕಳ ಸಮವಸ್ತ್ರವನ್ನು ಕಿತ್ತು ಎಸೆದು ತುಳಿದಿರುವುದಾಗಿ ಪೂಣಚ್ಚ ತಿಳಿಸಿದರು. ಇದರಿಂದಾಗಿ ಸಂಜೆ ಕತ್ತಲಾಗುತ್ತಿದ್ದಂತೆ ರಸ್ತೆ ಹಾಗೂ ಗ್ರಾಮದ ದಾರಿಗಳಲ್ಲಿ ಅಡ್ಡಾಡುವ ಕಾಡಾನೆಗಳಿಂದ ಕಾರ್ಮಿಕರು ಶಾಲಾ ವಿದ್ಯಾರ್ಥಿಗಳು ಗ್ರಾಮಸ್ಥರು, ಮನೆಗಳಿಂದ ಹೊರಗೆ ಬರಲು ಜೀವ ಭಯದಿಂದ ತತ್ತರಿಸಿ ಕಂಗಲಾಗಿದ್ದಾರೆ. ಭತ್ತದ ಬಿತ್ತನೆಗಾಗಿ ಗದ್ದೆಗಳನ್ನು ಸಿದ್ಧಪಡಿಸಲಾಗಿದ್ದು ಬಿತ್ತನೆಗೂ ಮುನ್ನವೇ ಆನೆಗಳು ಗದ್ದೆಗಳಲ್ಲಿ ಅಡ್ಡಾಡಿವೆ.ಬಿತ್ತನೆ ಮುಗಿದ ನಂತರ ಮತ್ತೆ ಕಾಡಾನೆಗಳು ಪೈರುಗಳನ್ನು ಧ್ವಂಸ ಮಾಡುವ ಆತಂಕವಿದ್ದು ಭತ್ತದ ಕೃಷಿ ಮಾಡುವುದು…
ಮಡಿಕೇರಿ ಜು.4 : ರಾಜ್ಯ ಚುನಾವಣಾ ಆಯೋಗವು ವಿವಿಧ ಕಾರಣಗಳಿಗೆ ತೆರವಾದ/ ಖಾಲಿ ಇರುವ ಕೊಡಗು ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳ 9 ಸದಸ್ಯ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮ ಪಂಚಾಯಿತಿಯ 4, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ 1, ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡುವಿನ 2, ಕಾಂತೂರು ಮೂರ್ನಾಡುವಿನ 1 ಹಾಗೂ ಕಡಗದಾಳುವಿನ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜು.6 ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಜು.12 ಕೊನೆಯ ದಿನವಾಗಿದೆ. ಜು.13 ರಂದು ನಾಮಪತ್ರ ಪರಿಶೀಲನೆ, ಜು.15 ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಳ್ಳಲು ಕೊನೆಯ ದಿನ. ಜು.23 ರಂದು ಮತದಾನ ನಡೆಯಲಿದ್ದು, ಅವಶ್ಯವಿದ್ದರೆ ಮರು ಮತದಾನವು ಜು.25 ರಂದು ನಡೆಯಲಿದೆ. ಜು.26 ರಂದು ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಜು.4 : ಮಂಗಳೂರು ವಿಶ್ವವಿದ್ಯಾನಿಲಯ/ ಕೊಡಗು ವಿಶ್ವವಿದ್ಯಾನಿಲಯದ ಅಧೀನ ಕಾಲೇಜಿನ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಸಿ.ವಿಜಯಲತ ಇವರನ್ನು ಪ್ರೊಫೆಸರ್/ ಗ್ರಂಥಪಾಲಕರಾಗಿ ಪದೋನ್ನತಿ ನೀಡಿ ಆಯ್ಕೆ ಮಾಡಲಾಗಿದೆ. ಇಲ್ಲಿಯ ತನಕ ವಿಶ್ವವಿದ್ಯಾನಿಲಯದ ಬೋಧಕ ವರ್ಗದವರಿಗೆ ಹಾಗೂ ವಿಶ್ವವಿದ್ಯಾನಿಲಯದ ಗ್ರಂಥ ಪಾಲಕರುಗಳಿಗೆ ಮಾತ್ರ ಪ್ರಾದ್ಯಾಪಕರ ಹುದ್ದೆಯನ್ನು ನೀಡುವ ಪದ್ಧತಿ ಇದ್ದು, ಇತ್ತೀಚೆಗೆ ಯು.ಜಿ.ಸಿ ನಿಯಮಗಳಂತೆ ಕಾಲೇಜು ಘಟ್ಟಕ್ಕೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಇತಿಹಾಸದಲ್ಲಿ ಮೊದಲ ಬಾರಿಗೆ ಡಾ.ವಿಜಯಲತ. ಸಿ ಅವರು ಪ್ರೊಫೆಸರ್/ ಗ್ರಂಥಪಾಲಕರು ಆಗಿ ಪದೋನ್ನತಿಯನ್ನು ಹೊಂದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
ಮಡಿಕೇರಿ ಜು.4 : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆ ರಾಜ್ಯ ಮಟ್ಟದ ಸಮನ್ವಯ ಸಂಸ್ಥೆ ಸಹಯೋಗದಲ್ಲಿ ಪೊಲೀಸ್ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕುಶಾಲನಗರ ಶಕ್ತಿಧಾಮ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ ವತಿಯಿಂದ ಮಾದಕ ವಸ್ತು(ಡ್ರಗ್ಸ್) ದುರುಪಯೋಗ ತಡೆಗಟ್ಟುವ ಬಗ್ಗೆ ಜಾಗೃತಿ ಕಾರ್ಯಕ್ರಮವು ಜು.7 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಮನೋ ವೈದ್ಯರಾದ ಡಾ.ಡೆವಿನ್ ಲಿನೇಕರ್ ಕಾರ್ಕಡ, ವಿಕಲಚೇತನರ ಇಲಾಖೆಯ ಕಲ್ಯಾಣಾಧಿಕಾರಿ ವಿಮಲ, ರಾಜ್ಯ ಮಟ್ಟದ ಸಮನ್ವಯ ಸಂಸ್ಥೆಯ ನಿರ್ದೇಶಕರು ಹಾಗೂ ದಾವಣಗೆರೆ ದೊಡ್ಡಬಾತಿ ತಪೋವನ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಡಾ.ವಿ.ಎಂ.ಶಶಿಕುಮಾರ್, ರಾಜ್ಯಮಟ್ಟದ ಸಮನ್ವಯ ಸಂಸ್ಥೆಯ ಯೋಜನೆಯ ಸಂಯೋಜಕರಾದ ಶೈಲಶ್ರೀ, ಕುಶಾಲನಗರ ಶಕ್ತಿಧಾಮದ ಯೋಜನೆಯ ಸಂಯೋಜಕರಾದ ಕೆ.ಒ.ಪ್ರಭು, ಇತರರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಜು.4 : ಪ್ರಸಕ್ತ ಸಾಲಿನ ಜುಲೈ ಆವೃತ್ತಿಯ ಸ್ನಾತಕ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ ಹಾಗೆಯೇ ಸ್ನಾತಕೋತ್ತರ ಎಂ.ಎ, ಎಂ.ಎ-ಪತ್ರಿಕೋದ್ಯಮ. ಎಂ.ಕಾಂ, ಎಂ.ಬಿ.ಎ, ಎಂ.ಲಿಬ್, ಎಂ.ಎಸ್ಸಿ , ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ ಹಾಗೂ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮಡಿಕೇರಿ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಈ ಅವಕಾಶವನ್ನು ಎಲ್ಲಾ ಉದ್ಯೋಗ ಆಕಾಂಕ್ಷಿಗಳು ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ತೆರೆದ ಶಿಕ್ಷಣದ ಮೂಲಕ ಪದವಿ ಪಡೆಯಬಹುದಾಗಿದೆ ಎಂದು ಮುಕ್ತ ವಿಶ್ವ ವಿದ್ಯಾಲಯ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ. ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಎ+ ಮಾನ್ಯತೆ ಪಡೆದ ದೂರ ಶಿಕ್ಷಣ ನೀಡುವ ವಿಶ್ವ ವಿದ್ಯಾನಿಲಯವಾಗಿದೆ. ಯು.ಜಿ.ಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ ಭೌತಿಕ ಶಿಕ್ಷಣ(ರೆಗ್ಯುಲರ್) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (ಮುಕ್ತ ವಿವಿ)…
ಮಡಿಕೇರಿ ಜು.4 : ಮಹಿಳೆಯರು ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಲು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಮತ್ತು ಸಾವಿತ್ರಿಬಾಯಿ ಪುಲೆ ಅವರ ಪಾತ್ರ ಅತಿ ಮುಖ್ಯ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ.ಸೌಮ್ಯ ಹೇಳಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಮಹಿಳೆಯರು ಶಿಕ್ಷಣದಿಂದ ವಂಚಿತರಾಗಿದ್ದರು, ಸ್ವಾತಂತ್ರ್ಯ ನಂತರ ಅಂಬೇಡ್ಕರ್ ಅವರ ಸಂವಿಧಾನ ಮತ್ತು ಸಾವಿತ್ರಿಬಾಯಿ ಪುಲೆ ಶಿಕ್ಷಣ ನೀತಿಯಿಂದ ಮಹಿಳೆಯರು ಶಿಕ್ಷಣ ಪಡೆಯಲು ಮುಂದಾದರು, ಸಮಾಜದಲ್ಲಿ ಪುರುಷರೊಂದಿಗೆ ಉತ್ತಮ ಸ್ಥಾನಮಾನ ಪಡೆದು ವಿದೇಶಗಳಲ್ಲಿ ಉನ್ನತ ವಿದ್ಯಾಭ್ಯಾಸ ಮಾಡಿ ದೇಶದ ಉನ್ನತ ಹುದ್ದೆಗಳನ್ನು ಪಡೆಯುತ್ತಿದ್ದಾರೆ ಎಂದು ನುಡಿದರು. ಮಹಿಳೆ ಎಂದರೆ ಕೇವಲ ಮನೆಯ ಕೆಲಸಕ್ಕೆ ಸೀಮಿತವಾಗಿರದೆ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಹಾಗೂ ದೊಡ್ಡ ಗುರಿಯೊಂದಿಗೆ ಸಾಧನೆ ಮಾಡಿ ಪ್ರತಿಯೊಂದು ಕ್ಷೇತ್ರದಲ್ಲೂ ಸಹ ತಮ್ಮದೇ ಆದ…






