ಮಡಿಕೇರಿ ಜು.4 : ಕೊಡಗು ಜಿಲ್ಲೆಯ ಗಡಿ ಗ್ರಾಮ ಕರಿಕೆಯ ಅನಪಾರೆ ಗ್ರಾಮದ ನಿವಾಸಿ ಲಿಬೀನ್ (25) ಜ್ವರದಿಂದ ಸಾವನ್ನಪ್ಪಿದ್ದು, ಇಲಿಜ್ವರದ ಶಂಕೆ ವ್ಯಕ್ತವಾಗಿದೆ. ಆದರೆ ಇಲಿಜ್ವರದ ಕುರಿತು ಖಾತ್ರಿಯಾಗಿಲ್ಲವೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕರಿಕೆಯ ಬಾಲನ್ ಹಾಗೂ ಲತಾ ದಂಪತಿಯ ಪುತ್ರ ಲಿಬೀನ್ ಪಕ್ಕದ ರಾಜ್ಯ ಕೇರಳಕ್ಕೆ ಕೆಲಸಕ್ಕೆಂದು ಪ್ರತಿದಿನ ಹೋಗಿ ಬರುತ್ತಿದ್ದರಂತೆ. ಇತ್ತೀಚೆಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಕೇರಳದ ಪರಿಯಾರಮ್ ಮೆಡಿಕಲ್ ಕಾಲೇಜ್ ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು ಎಂದು ತಿಳಿದು ಬಂದಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜು.3 ರಂದು ಲಿಬೀನ್ ಮೃತಪಟ್ಟಿದ್ದರು. ಇಲಿಜ್ವರ ಸಾವಿಗೆ ಕಾರಣ ಎನ್ನುವ ಸುದ್ದಿ ಹಬ್ಬಿದ ಹಿನ್ನೆಲೆ ಆರೋಗ್ಯಾಧಿಕಾರಿಗಳು ಕರಿಕೆಯ ಲಿಬೀನ್ ನಿವಾಸಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆದರೆ ಮನೆಯವರಿಗೆ ಹಾಗೂ ಅಕ್ಕಪಕ್ಕದ ನಿವಾಸಿಗಳಿಗೆ ಯಾವುದೇ ಜ್ವರದ ಲಕ್ಷಣ ಕಂಡು ಬಂದಿಲ್ಲ ಎಂದು ಡಾ.ಕೆ.ಎಂ.ಸತೀಶ್ ಕುಮಾರ್ ಪತ್ರಿಕೆಗೆ ತಿಳಿಸಿದ್ದಾರೆ. ಕರಿಕೆ ಆರೋಗ್ಯ ಕೇಂದ್ರದಲ್ಲೂ ನಿಗಾ ವಹಿಸಲಾಗಿದೆ, ಈ ರೀತಿಯ ಯಾವುದೇ ಪ್ರಕರಣಗಳು…
ಲೇಖಕ: admin
ಮಡಿಕೇರಿ ಜು.4 : ಮಡಿಕೇರಿಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ನಾಗರಿಕರು ಪರದಾಡುವಂತಾಗಿದ್ದು, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಪೀಪಲ್ಸ್ ಮೂಮೆಂಟ್ ಫಾರ್ ಹ್ಯೂಮನ್ ರೈಟ್ಸ್ ಜಿಲ್ಲಾಧ್ಯಕ್ಷ ಹರೀಶ್ ಜಿ.ಆಚಾರ್ಯ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಲವರು ಪ್ರವಾಸೋದ್ಯಮದಿಂದ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ನಗರದಲ್ಲಿ ವಾಹನ ಪಾರ್ಕಿಂಗ್‍ಗೆ ಸ್ಥಳವಕಾಶಗಳಿಲ್ಲದೇ ಪೊಲೀಸ್ ಇಲಾಖೆಯವರು ಟ್ರಾಫಿಕ್ ನಿಯಂತ್ರಿಸಲು ಹರಸಾಹಸ ಪಡುವಂತಾಗಿದೆ ಎಂದರು. ನಗರದ ಜನರಲ್ ತಿಮ್ಮಯ್ಯ ವೃತ್ತ ಮತ್ತು ನಗರಸಭೆ ಬಳಿ ಇರುವ ಸರ್ಕಲ್‍ಗಳಲ್ಲಿ ವಾಹನ ದಟ್ಟಣೆಯಿಂದ ಪೊಲೀಸ್ ಇಲಾಖೆಯವರಿಗೆ ತುಂಬಾ ಸಮಸ್ಯೆಯಾಗುತ್ತಿದ್ದು, ಮಳೆಯಿಂದ ರಕ್ಷಿಸಿಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ವಾಹನಗಳನ್ನು ನಿಯಂತ್ರಿಸುವಂತಾಗಿದೆ. ಇಷ್ಟೆಲ್ಲ ಕೊಡಗಿಗಾಗಿ ಖರ್ಚು ಮಾಡುವ ಇಲಾಖೆಗಳು ಸಿಗ್ನಲ್ ಲೈಟ್ ಅಳವಡಿಸಲು ಮೀನ ಮೇಷ ಎಣಿಸಲು ಕಾರಣವೇನು ಎಂದು ಪ್ರಶ್ನಿಸಿದರು. ನಗರದಲ್ಲಿ ಸಿಗ್ನಲ್ ಲೈಟ್ ಅಳವಡಿಸಲು ನಗರಸಭೆ, ಪೊಲೀಸ್ ಇಲಾಖೆ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಹರೀಶ್ ಆಚಾರ್ಯ, ಪ್ರತಿ…
ಮಡಿಕೇರಿ ಜು.4 : ನಾಪೋಕ್ಲು ಪೊಲೀಸ್ ಠಾಣಾ ಸರಹದ್ದಿನ ಕೊಟ್ಟಮುಡಿ ಜಂಕ್ಷನ್ ಬಳಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಟ್ಟಮುಡಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಮಡಿಕೇರಿ ನಿವಾಸಿಗಳಾದ ಮೊಹಮ್ಮದ್ ಹ್ಯಾರಿಸ್ (40) ಹಾಗೂ ಹ್ಯಾರಿಸ್ (37) ಎಂಬುವವರನ್ನು ಬಂಧಿಸಿದ್ದಾರೆ. ಇವರ ಬಳಿಯಿಂದ 225 ಗ್ರಾಂ ಗಾಂಜಾ ಮತ್ತು 4 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ಉಪ ವಿಭಾಗದ ಡಿವೈಎಸ್‌ಪಿ ಎಂ.ಜಗದೀಶ್, ಗ್ರಾಮಾಂತರ ವೃತ್ತದ ಸಿಪಿಐ ಅನೂಪ್ ಮಾದಪ್ಪ, ನಾಪೋಕ್ಲು ಪಿಎಸ್‌ಐ ಈ.ಮಂಜುನಾಥ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ದಾಳಿ ನಡೆಸಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾದಕ ವಸ್ತು ಮಾರಾಟದ ಕುರಿತು ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.…
ಮಡಿಕೇರಿ ಜು.4 : ಮೂರ್ನಾಡು ಚೆಸ್ಕಾಂ ವಿದ್ಯುತ್ ನಿಗಮದ ಕಿರಿಯ ಅಭಿಯಂತರರು ಹಾಗೂ ಲೈನ್‍ಮೆನ್ ಕಳೆದ ಒಂದು ವರ್ಷದಿಂದ ಮುತ್ತಾರ್ಮುಡಿ ಗ್ರಾಮದ ಮನೆಗಳಿಗೆ ಸರಿಯಾಗಿ ವಿದ್ಯುತ್ ಸರಬರಾಜು ಮಾಡದೆ ಕರ್ತವ್ಯಲೋಪ ಎಸಗುತ್ತಿದ್ದಾರೆ ಎಂದು ಮುತ್ತಾರ್ಮುಡಿ ಗ್ರಾಮಸ್ಥರು ಆರೋಪಿಸಿದ್ದಾರೆ. ಮುತ್ತಾರ್ಮುಡಿ ಗ್ರಾಮಸ್ಥರ ಪರವಾಗಿ 54 ಗ್ರಾಮಸ್ಥರ ಸಹಿ ಸಹಿತ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರಾದ ತೆಕ್ಕಡೆ ಆರ್.ಸುನಂದ ಹಾಗೂ ಪಾರೆಮಜಲು ದಿನೇಶ್ ಗ್ರಾಮದ ಸಮಸ್ಯೆಗಳ ಬಗ್ಗೆ ವಿವರಿಸಿದರು. ಮೂರ್ನಾಡು ಪಟ್ಟಣದಿಂದ ಕೇವಲ 2ಕಿ.ಮೀ ಅಂತರದಲ್ಲಿರುವ ಮುತ್ತಾರ್ಮುಡಿ ಗ್ರಾಮಕ್ಕೆ ಮೂರ್ನಾಡಿನಿಂದ ಬರುವ ಕಂಬ ಮತ್ತು ವಿದ್ಯುತ್ ತಂತಿಗಳಿಗೆ ಅಡಚಣೆ ಆಗುವ ಮರದ ಕೊಂಬೆ, ರೆಂಬೆಗಳನ್ನು ಕತ್ತರಿಸದೆ ಜೋತು ಬಿದ್ದ ತಂತಿಗಳನ್ನು ಸರಿಪಡಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ವಿದ್ಯುತ್ ಕಂಬಗಳಲ್ಲಿ ಬೆಂಕಿ ಕಾಣಿಸಿಕೊಂಡಾಗÀ, ಕಂಬದಿಂದ ತಂತಿ ತುಂಡಾದಾಗ, ರಸ್ತೆ ಬದಿಯ ಕಂಬಕ್ಕೆ ವಾಹನಗಳು ಡಿಕ್ಕಿಯಾದಾಗ ಮತ್ತು ತುರ್ತು ಸಂದರ್ಭಗಳಲ್ಲಿ…
ಮಡಿಕೇರಿ ಜು.4 : ಶಾಲಾ ಮಕ್ಕಳು ಶಿಸ್ತನ್ನು ಬೆಳೆಸಿಕೊಳ್ಳಬೇಕು. ಬಹಳ ಮುಖ್ಯವಾಗಿ ಶಾಲೆಯಲ್ಲಿ ಉತ್ತಮವಾಗಿ ಓದಬೇಕು ಮತ್ತು ಬಾಲ್ಯದಿಂದಲೇ ವಿವಿಧ ಕಲೆ, ಸಾಹಿತ್ಯದಲ್ಲಿ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಹೇಳಿದರು. ಅರಣ್ಯ ಇಲಾಖೆ ಮಡಿಕೇರಿ ಪ್ರಾದೇಶಿಕ ವಿಭಾಗ ಮತ್ತು ಸಾಮಾಜಿಕ ಅರಣ್ಯ ವಲಯ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಾಟೆಕಾಡುವಿನಲ್ಲಿ ನಡೆದ ‘ನನ್ನ ಗಿಡ, ನನ್ನ ಹೆಮ್ಮೆ’ ಶೀರ್ಷಿಕೆಯಡಿ ವನಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಲೆಯು ಮಕ್ಕಳನ್ನು ಸೌಹಾರ್ಧರನ್ನಾಗಿ ಬೆಳೆಸಲು ಪೂರಕವಾಗಿದೆ. ಮಕ್ಕಳು ಪೋಷಕರಿಗೆ ಸಮಾಜಕ್ಕೆ ಉತ್ತಮ ವ್ಯಕ್ತಿಗಳಾಗಿ ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಆಶಯಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕರ ಕಚೇರಿಯ ಡಿವೈಪಿಸಿ ಸೌಮ್ಯ ಮಾತನಾಡಿ, ಶಾಲಾ ಮಕ್ಕಳು ಪರಿಸರದ ಕಾಳಜಿಯನ್ನು ವೃದ್ಧಿಸಿಕೊಳ್ಳಬೇಕು ಮನೆಗಳಲ್ಲಿ ಸಸಿಗಳನ್ನು ನೆಟ್ಟು ಬೆಳೆಸಬೇಕು. ಪರಿಸರದ ಮೇಲಿನ ಕಾಳಜಿಯು ನಿರಂತರವಾಗಿರಬೇಕು…
ಕಡಂಗ ಜು.4 : ಎಸ್‍ವೈಎಸ್ ಆಮಿಲ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಸಮಸ್ತದ 97ನೇ ಸ್ಥಾಪಕ ದಿನದ ಪ್ರಯುಕ್ತ ರಕ್ತ ದಾನ ಶಿಬಿರ ನಡೆಯಿತು. ವಿರಾಜಪೇಟೆ ಶಾಫಿ ಜುಮಾಮಸೀದಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ರಕ್ತ ನಿಧಿ ಕೇಂದ್ರ ಹಾಗೂ ಎಸ್ ವೈ ಎಸ್ ಆಮಿಲ ಕೊಡಗು ಜಿಲ್ಲಾ ಸಮಿತಿ ವತಿಯಿಂದ ರಕ್ತದಾನ ಶಿಬಿರವನ್ನು ವಿರಾಜಪೇಟೆ ಮದರಸ ಸಭಾಂಗಣದಲ್ಲಿ ನಡೆಸಲಾಯಿತು. ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆ ಮುಖ್ಯಸ್ಥ ಡಾ.ಕರುಂಬಯ್ಯ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಂತರ ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು. ವಿರಾಜಪೇಟೆ ಹಾಗೂ ಸುತ್ತಮುತ್ತಲಿನ ಯುವರು ರಕ್ತದಾನ ಮಾಡಿದರು. ದಾನಿಗಳಿಗೆ ಅಭಿನಂದನಾ ಪತ್ರವನ್ನು ನೀಡಲಾಯಿತು. ಶಿಬಿರದಲ್ಲಿ ಎಸ್ ವೈ ಎಸ್ ಮುಖ್ಯಸ್ಥ ಸಿಪಿಎಂ ಬಶೀರ್ ಹಾಜಿ , ವಿರಾಜಪೇಟೆ ಶಾಫಿ ಜುಮಾ ಮಸೀದಿ ಕಾರ್ಯದರ್ಶಿ ಆಲಿ, ಅಬ್ದುಲ್ ರಹವುಫ್, ಷರೀಫ್ ಮುಂತಾದ ಗಣ್ಯರು ಹಾಜರಿದ್ದರು. ವರದಿ : ನೌಫಲ್ ಕಡಂಗ
ಮಡಿಕೇರಿ ಜು.4 : ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕಲ್ಲಹಳ್ಳ ವಲಯ ಅರಣ್ಯ ಇಲಾಖೆಯಿಂದ ವಿಜಯಲಕ್ಷ್ಮಿ ಪ್ರೌಢಶಾಲೆಯ ಪರಿಸರ ಸಂಘದ ಸಹಕಾರದೊಂದಿಗೆ ವಿದ್ಯಾಸಂಸ್ಥೆಯ ಆವರಣದಲ್ಲಿ ಮೂವತ್ತಕ್ಕೂ ಹೆಚ್ಚು ವಿವಿಧ ಸಸಿಗಳನ್ನು ನೆಡಲಾಯಿತು. ವಿದ್ಯ ಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಮಾತನಾಡಿ, ಸಸಿಗಳನ್ನು ನೆಡುವ ಜೊತೆ ಜೊತೆಗೆ ವಿದ್ಯಾರ್ಥಿಗಳು ಪರಿಸರದ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಿ ನೆಟ್ಟ ಗಿಡದ ಪಾಲನೆ ಪೋ ಷಣೆಯನ್ನು ಪ್ರತಿ ಮಾಡಬೇಕೆಂದು ಕರೆ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣಗಣಪತಿ ಮಾತನಾಡಿ, ಅರಣ್ಯ ಪ್ರದೇಶದಲ್ಲಿ ತೇಗದ ತೊಪುಗಳನ್ನು ಬೆಳೆಸುವ ಬದಲಾಗಿ ವಿವಿಧ ಪ್ರಬೇಧಗಳ ಮರಗಳನ್ನು ಬೆಳೆಸಿದರೆ ಪ್ರಾಣಿ ಪಕ್ಷಗಳಿಗೆ ಪೂರಕ ವಾತಾವರಣ ಸೃಷ್ಟಿ ಮಾಡಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯ ಸಂಸ್ಥೆಯ ಸಹ ಕಾರ್ಯದರ್ಶಿ ಪೊಡಮಾಡ ಮೋಹನ್, ಪ್ರಾಂಶುಪಾಲ ಪ್ರಭು, ಅರಣ್ಯ ಇಲಾಖೆ ಉಪವಲಯ ಅರಣ್ಯ ಅಧಿಕಾರಿಗಳಾದ ಯೋಗೇಶ್, ಬಸಪ್ಪ, ವೀರಶ್ ಪಾಟೀಲ್, ಪ್ರೌಢಶಾಲಾ ವಿಭಾಗ ಪರಿಸರ ಸಂಘದ ಸಂಚಾಲಕ ರಾಘವೇಂದ್ರ, ಶಿಕ್ಷಕರಾದ ಸುಬ್ಬಯ್ಯ. ತಿಮ್ಮರಾಜು,…
ಮಡಿಕೇರಿ ಜು.4 : ನೀರಗುಂದ ಗ್ರಾಮದ ಮಹಿಳೆ ದಿವ್ಯಶ್ರೀ (30) ಮತ್ತು ಮೂರು ವರ್ಷದ ಪುತ್ರಿ ಜೂ.27 ರಿಂದ ಕಾಣೆಯಾಗಿದ್ದು, ಇದುವರೆಗೂ ಪತ್ತೆಯಾಗಿಲ್ಲ ಎಂದು ಪತಿ ನಿಂಗರಾಜು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕನ್ನಡ ಭಾಷೆ ಮಾತನಾಡ ಬಲ್ಲ ಮಹಿಳೆ 157 ಸೆಂ.ಮೀ ಎತ್ತರ ಇದ್ದು, ಗೋದಿ ಮೈ ಬಣ್ಣ, ದುಂಡು ಮುಖ, ಕಪ್ಪು ಕೂದಲು, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಮಹಿಳೆಯನ್ನು ಕಂಡವರು ಶನಿವಾರಸಂತೆ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಡಿಕೇರಿ ಜು.4 : ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಮುಂಬೈ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ ನಡೆದಿದೆ. ಅಂದೇರಿ ವೆಸ್ಟ್ ಮುಂಬೈನ್ ನ ನಿವಾಸಿ ಸೀಮಾ (50) ಮೃತ ದುರ್ದೈವಿಯಾಗಿದ್ದಾರೆ. ಇವರ ಪತಿ ಸುಧೀರ ಚಂದಾಲಿಯಾ (53) ಹಾಗೂ ಕಾರು ಚಾಲಕ ಉಡುಪಿ ಜಿಲ್ಲೆಯ ಕುಂಜಿಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ರಫೀಕ್ (28) ಗೆ ತೀವ್ರ ಗಾಯಗಳಾಗಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಡಿಕೇರಿ ಕಡೆಯಿಂದ ಸುಂಟಿಕೊಪ್ಪದ ರೆಸಾರ್ಟ್ ಗೆ ಆಗಮಿಸುತ್ತಿದ್ದ ಕಾರಿಗೆ ಕುಶಾಲನಗರ ಭಾಗದಿಂದ ಮಡಿಕೇರಿಯತ್ತ ತೆರಳುತ್ತಿದ್ದ ಲಾರಿ (ಎಪಿ-39 ಯುಬಿ-3679) ಡಿಕ್ಕಿಯಾಗಿದ್ದು, ಮಹಿಳೆ ಸ್ಥಳದಲ್ಲೆ ಮೃತಪಟ್ಟರು. ಘಟನೆ ಸಂದರ್ಭ ಬಾರ್ ಮತ್ತು ಸ್ಥಳದಲ್ಲಿ ನಿಲ್ಲಿಸಿದ್ದ ಕೆಲವು ಬೈಕ್ ಗಳಿಗೂ ಹಾನಿಯಾಗಿದೆ. ಸುಧೀರ ಹಾಗೂ ಸೀಮಾ ದಂಪತಿ ತಮ್ಮ ಪುತ್ರನನ್ನು ಉಡುಪಿಯ ಕಾಲೇಜ್ ವೊಂದಕ್ಕೆ ದಾಖಲಿಸಿ ನಂತರ ಮೊಹಮ್ಮದ್ ರಫೀಕ್ ಎಂಬುವವರ ಕಾರಿನಲ್ಲಿ ಸುಂಟಿಕೊಪ್ಪಕ್ಕೆ ಆಗಮಿಸಿದ್ದರು. ರೆಸಾರ್ಟ್ ನಲ್ಲಿ ತಂಗಿ ಮಡಿಕೇರಿಯ ಪ್ರವಾಸಿತಾಣಗಳನ್ನು…
ಮಡಿಕೇರಿ ಜು.4 : ಜೆಸಿಐ ಭಾರತದ ವಲಯ 14ರ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕವು ವಿವಿಧ ವಿಭಾಗಗಳಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜೆಸಿಐ ಬೀರೂರು ಘಟಕದ ಆತಿಥ್ಯದಲ್ಲಿ ಬೀರೂರಿನ ಶ್ರೀ ತರಳಬಾಳು ಕಲ್ಯಾಣ ಮಂಟಪದಲ್ಲಿ ನಡೆದ ಜೆಸಿಐ ಭಾರತದ ವಲಯ 14ರ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಾಂತ್ಯ ಬಿ ವಿಭಾಗದ, ವೈಯಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಅತ್ಯುತ್ತಮ ಘಟಕಾಧಿಕಾರಿ ಪ್ರಶಸ್ತಿಯನ್ನು ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ ಪಡೆದುಕೊಂಡರು. ಅತ್ಯುತ್ತಮ ಘಟಕ ವಿಭಾಗದಲ್ಲಿ ವಿಜೇತರಾದರು, ಅತ್ಯುತ್ತಮ ಕಾರ್ಯಕ್ರಮ ವಿಭಾಗದಲ್ಲಿ ರನ್ನರ್ ಪ್ರಶಸ್ತಿ ಪಡೆದುಕೊಂಡರು, , ವಲಯ ವಿಭಾಗದಲ್ಲಿ ಘಟಕ ಅಧ್ಯಕ್ಷ ನೀತ್ ಅಯ್ಯಪ್ಪ ಗೆ ವಿದ್ಯರತ್ತ ಪುರಸ್ಕಾರ್ ನೀಡಿ ಸನ್ಮಾನಿಸಲಾಯಿತು. 2ನೇ ವಲಯ ಆಡಳಿತ ಮಂಡಳಿ ಸಭೆಯನ್ನು ಆಯೋಜಿಸಿದಕ್ಕೆ ಘಟಕಕ್ಕೆ ವಿಶೇಷ ಮನ್ನಣೆ ಪ್ರಶಸ್ತಿಯನ್ನು ನೀಡಿದರು. ಘಟಕ ಅಧ್ಯಕ್ಷರಿಗೆ ವಿಶೇಷ ಮನ್ನಣೆ ಪ್ರಶಸ್ತಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿಯನ್ನು…






