ಮಡಿಕೇರಿ ಜು.4 : ಜೆಸಿಐ ಭಾರತದ ವಲಯ 14ರ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕವು ವಿವಿಧ ವಿಭಾಗಗಳಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜೆಸಿಐ ಬೀರೂರು ಘಟಕದ ಆತಿಥ್ಯದಲ್ಲಿ ಬೀರೂರಿನ ಶ್ರೀ ತರಳಬಾಳು ಕಲ್ಯಾಣ ಮಂಟಪದಲ್ಲಿ ನಡೆದ ಜೆಸಿಐ ಭಾರತದ ವಲಯ 14ರ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಾಂತ್ಯ ಬಿ ವಿಭಾಗದ, ವೈಯಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಅತ್ಯುತ್ತಮ ಘಟಕಾಧಿಕಾರಿ ಪ್ರಶಸ್ತಿಯನ್ನು ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ ಪಡೆದುಕೊಂಡರು. ಅತ್ಯುತ್ತಮ ಘಟಕ ವಿಭಾಗದಲ್ಲಿ ವಿಜೇತರಾದರು, ಅತ್ಯುತ್ತಮ ಕಾರ್ಯಕ್ರಮ ವಿಭಾಗದಲ್ಲಿ ರನ್ನರ್ ಪ್ರಶಸ್ತಿ ಪಡೆದುಕೊಂಡರು, , ವಲಯ ವಿಭಾಗದಲ್ಲಿ ಘಟಕ ಅಧ್ಯಕ್ಷ ನೀತ್ ಅಯ್ಯಪ್ಪ ಗೆ ವಿದ್ಯರತ್ತ ಪುರಸ್ಕಾರ್ ನೀಡಿ ಸನ್ಮಾನಿಸಲಾಯಿತು. 2ನೇ ವಲಯ ಆಡಳಿತ ಮಂಡಳಿ ಸಭೆಯನ್ನು ಆಯೋಜಿಸಿದಕ್ಕೆ ಘಟಕಕ್ಕೆ ವಿಶೇಷ ಮನ್ನಣೆ ಪ್ರಶಸ್ತಿಯನ್ನು ನೀಡಿದರು. ಘಟಕ ಅಧ್ಯಕ್ಷರಿಗೆ ವಿಶೇಷ ಮನ್ನಣೆ ಪ್ರಶಸ್ತಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿಯನ್ನು…
ಲೇಖಕ: admin
ಮಡಿಕೇರಿ ಜು.4 : ಉತ್ತಮ ವ್ಯಕ್ತಿತ್ವದ ಜೊತೆಯಾಗಿದ್ದರೆ ಮಾತ್ರ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ.ಬಿ.ರಾಘವ ಅಭಿಪ್ರಾಯಪಟ್ಟರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸ್ನಾತಕ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗ ಆಯೋಜಿಸಿದ ವ್ಯಕ್ತಿತ್ವ ವಿಕಸನ ಮತ್ತು ಸಂವಹನ ಕಲೆ ಎಂಬ ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು. ನಾನು ನನ್ನವರು, ನನ್ನ ತನದಿಂದ ಮುಕ್ತವಾಗಿ ಸಮಾಜಮುಖಿ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕಾಗಿದೆ. ಬುದ್ಧ ತ್ಯಾಗದ ಮೂಲಕ, ಮದರ್ ಥೆರೆಸಾ ಸೇವೆಯ ಮೂಲಕ, ಮಹಮ್ಮದ್ ಫೈಗಂಬರ್ ದಾನದಶೀಲತೆಯ ಮೂಲಕ, ಅಂಬೇಡ್ಕರ್ ಜ್ಞಾನದ ಮೂಲಕ, ಗಾಂಧಿ ಅಹಿಂಸೆಯ ಮೂಲಕ ಸಾಮಾಜಿಕ ವ್ಯಕ್ತಿತ್ವವನ್ನು ರೂಪಿಸಿಕೊಂಡರು.ಇತಿಹಾಸದಲ್ಲಿ ಸ್ಥಾನ ಪಡೆಯಬೇಕಾದರೆ ಸಮಾಜಮುಖಿ ವ್ಯಕ್ತಿತ್ವವನ್ನು ಮೈಗೊಡಿಸಿಕೊಳ್ಳಬೇಕಾಗಿದೆ ಎಂದರು. ಕಾಲೇಜಿನ ಐಕ್ಯೂಎಸ್ ಸಿ ಸಂಯೋಜಕರಾದ ಡಾ. ರಾಜೇಂದ್ರ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಸನಕ್ಕಾಗಿ ವ್ಯಕ್ತಿತ್ವ ವಿಕಸನದಂತಹ ಕಾರ್ಯಕ್ರಮಗಳ ಅಗತ್ಯತೆ ಹೆಚ್ಚು ಇದೆ. ಜಾಗತಿಕವಾಗಿ ಸ್ಫರ್ಧಾತ್ಮಕ ಜಗತ್ತಿನಲ್ಲಿ ಕಾರ್ಯಪ್ರವೃತ್ತರಾಗಲು ಸಂವಹನ ಕಲೆ ತುಂಬಾ…
ಮಡಿಕೇರಿ ಜು.4 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕ್ರಿಶ್ಚಿಯನ್ ಘಟಕದ ವತಿಯಿಂದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ವಿರಾಜಪೇಟೆಯಲ್ಲಿ ಶಾಸಕರನ್ನು ಸನ್ಮಾನಿಸಿದ ಪಕ್ಷದ ಪ್ರಮುಖರು ಸ್ಥಳೀಯ ಸಂಸ್ಥೆ ಮತ್ತು ನಿಗಮ, ಮಂಡಳಿಗಳಲ್ಲಿ ಕ್ರೈಸ್ತರಿಗೆ ಪ್ರಾತಿನಿಧ್ಯ ನೀಡುವಂತೆ ಕೋರಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಜಾನ್ಸನ್ ಪಿಂಟೋ, ಲಾರೆನ್ಸ್, ಮರ್ವಿನ್ ಲೋಬೋ, ಜೋಕಿಂ ರಾಡ್ರಿಗಸ್, ಕೆಪಿಸಿಸಿ ಸದಸ್ಯ ಜೋಸೆಫ್ ಸ್ಯಾಂ, ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಜೊಸೇಫ್ ವಿನ್ಸೆಂಟ್, ಪ್ರಮುಖರಾದ ಜೂಡಿವಾಸ್, ಮಲೆರಿ ಲೋಬೋ, ತೆರೆಝಾ ವಿಕ್ಟರ್ ಮತ್ತಿತರರು ಉಪಸ್ಥಿತರಿದ್ದರು.
ಮಡಿಕೇರಿ ಜು.4 : ಅಸ್ತಿತ್ವಕ್ಕೆ ಬಂದ ಒಂದೇ ವರ್ಷದಲ್ಲಿ ಸ್ವರ್ಣ ಪ್ರಶಸ್ತಿ ಗೆದ್ದ ರೋಟರಿ ಕ್ಲಬ್ ಮಡಿಕೇರಿ ವುಡ್ಸ್ ನ 2023- 24 ನೇ ಸಾಲಿನ ಅಧ್ಯಕ್ಷರಾಗಿ ವಸಂತ್ ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಕಿಗ್ಗಾಲ್ ಆಯ್ಕೆಯಾಗಿದ್ದಾರೆ. ಪ್ರಥಮ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಎಸ್.ಎಸ್.ಸಂಪತ್ ಕುಮಾರ್ ಅವರನ್ನು ರೋಟರಿ ವಲಯ 6ರ ವಲಯ ಸೇನಾನಿಯನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಜು.4 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಅನ್ನದಾನಿ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ ಸೇರಿ ಹಲವರು ಉಪಸ್ಥಿತರಿದ್ದರು.
ಮಡಿಕೇರಿ ಜು.4 : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನ ಅಮ್ಮತ್ತಿಯ ಶ್ರೀ ಮುತ್ತಪ್ಪ ದೇವಾಲಯ ವ್ಯಾಪ್ತಿಯ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಮ್ಮತ್ತಿ ನಿವಾಸಿ ಎನ್.ಎ.ಪೊನ್ನಣ್ಣ (46) ಹಾಗೂ ವಿರಾಜಪೇಟೆ ಸುಂಕದಕಟ್ಟೆ ನಿವಾಸಿ ಹೆಚ್.ಆರ್.ಲೋಹಿತ್ (26) ಅವರನ್ನು 104 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್.ಮೊಹನ್ ಕುಮಾರ್, ಸಿಪಿಐ ಬಿ.ಎಸ್.ಶಿವರುದ್ರಪ್ಪ, ಪಿಎಸ್‌ಐ ಮಂಜುನಾಥ.ಸಿ.ಸಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಶ್ಲಾಘಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಾದಕ ವಸ್ತು ಮಾರಾಟದ ಕುರಿತು ಸಾರ್ವಜನಿಕರು ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಮಡಿಕೇರಿ ಜು.4 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2822.61 ಅಡಿಗಳು. ಕಳೆದ ವರ್ಷ ಇದೇ ದಿನ 2855.24 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 5.20 ಮಿ.ಮೀ., ಕಳೆದ ವರ್ಷ ಇದೇ ದಿನ 23.40 ಮಿ.ಮೀ. ಇಂದಿನ ನೀರಿನ ಒಳಹರಿವು 1110 ಕ್ಯುಸೆಕ್, ಕಳೆದ ವರ್ಷ ಇದೇ ದಿನ 4360 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 12700 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್.
ಮಡಿಕೇರಿ ಜು.4 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 14.62 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 45.16 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 356.90 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 891 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.85 ಮಿ.ಮೀ. ಕಳೆದ ವರ್ಷ ಇದೇ ದಿನ 74.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 569.11 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1310.79 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.08 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 31.32 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 244.62 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 723.76 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 7.92 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 29.87 ಮಿ.ಮೀ.…
ಮಡಿಕೇರಿ ಜು.4 : ಚೆಂಬು ಗ್ರಾಮದ ಊರುಬೈಲು-ಮಾರ್ಪಡ್ಕ ಭಾಗದಲ್ಲಿ ಪ್ರಸ್ತುತ ಇರುವ ಸಂಪರ್ಕ ಸೇತುವೆಯ ಎದುರು ಬದಿ, ಶಿಥಿಲಗೊಂಡ ಹಳೆ ಸೇತುವೆ ಇದ್ದು, ಇದರಿಂದಾಗಿ ಮಳೆಗಾಲದಲ್ಲಿ ಸುಲಲಿತ ನೀರಿನ ಹರಿವಿಗೆ ತೊಂದರೆ ಉಂಟಾಗಿದ್ದು ಪ್ರವಾಹ ಭೀತಿ ಮಾತ್ರವಲ್ಲದೇ ಪ್ರಸ್ತುತ ಇರುವ ಸೇತುವೆಗೆ ಅಪಾಯ ಮತ್ತು ಅಕ್ಕಪಕ್ಕದ ಆಸ್ತಿಗಳಿಗೆ ನೀರು ನುಗ್ಗಿ ಆಸ್ತಿ ಹಾನಿ ಆಗುವ ಆತಂಕವಿತ್ತು. ಇದನ್ನು ಮನಗಂಡ ನೂತನ ಶಾಸಕ ಎ.ಎಸ್ ಪೊನ್ನಣ್ಣ ಸ್ಥಳೀಯ ನಿವಾಸಿಗಳ ಕೋರಿಕೆ ಮೇರೆಗೆ ಕೂಡಲೇ ಸ್ಪಂದಿಸಿ, ಜಿ.ಪಂ ಇಂಜಿನಿಯರ್ ಅವರಿಗೆ ಸೂಚನೆ ನೀಡಿದ ಮೇರೆಗೆ ಇದೀಗ ಹಳೆ ಸೇತುವೆಯ ತೆರುವಿನ ಕಾಮಗಾರಿ ಪೂರ್ಣವಾಗಿದೆ. ಅತ್ಯಂತ ಕ್ಷೀಪ್ರ ಗತಿಯಲ್ಲಿ ಸಾರ್ವಜನಿಕರ ತೊಂದರೆಗೆ ಸ್ಪಂದಿಸಿದ ಪೊನ್ನಣ್ಣ ಅವರ ಕಾರ್ಯವೈಕರಿಗೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಇಸ್ಮಾಯಿಲ್ ಅವರಿಗೆ ಸ್ಥಳೀಯ ನಿವಾಸಿಗಳು ಪ್ರಶಂಸೆ ವ್ಯಕ್ತಪಡಿಸಿ ಧನ್ಯವಾದ ಅರ್ಪಿಸಿದರು. ಕೂಡಲೇ ಸ್ಪಂದಿಸಿದ ಜಿ.ಪಂ ಕಾಮಗಾರಿ ತಂಡಕ್ಕೆ, ಸ್ಥಳೀಯರ ಸಮಸ್ಯೆಯನ್ನು ಶಾಸಕರಿಗೆ ತಲುಪಿಸುವಲ್ಲಿ ಮುತುವರ್ಜಿ ವಹಿಸಿದ ಸೂರಜ್ ಹೊಸೂರು, ವಲಯ…
ಮಡಿಕೇರಿ ಜು.3 : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ನಿಷೇಧಿತ ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ನಲ್ವತ್ತೋಕ್ಲು ಗ್ರಾಮದ ಹೋಂಸ್ಟೇಯೊoದರಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳೆ ನಡೆಸಿದ ಪೊಲೀಸರು ಸ್ಥಳೀಯ ನಿವಾಸಿ 28 ವರ್ಷದ ಯುವಕನೋರ್ವನನ್ನು 130 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳೊಂದಿಗೆ ವಶಕ್ಕೆ ಪಡೆದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ಸಿಪಿಐ ಬಿ.ಎಸ್.ಶಿವರುದ್ರಪ್ಪ, ಪಿಎಸ್‌ಐ ಮಂಜುನಾಥ ಸಿ.ಸಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.






