ಮಡಿಕೇರಿ ಜು.3 : ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ತಿಳಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅತಿ ಹೆಚ್ಚು ಅಂಕ ಪಡೆದ ದ್ವಿತೀಯ ಪಿ.ಯು.ಸಿ ಹಾಗೂ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಮತ್ತು ಫಲಿತಾಂಶ ಬರಲು ಕಾರಣರಾದ ಶಿಕ್ಷಕರಿಗೆ ಸನ್ಮಾನ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸನ್ಮಾನಿಸಿ ಮಾತನಾಡಿದರು. ಸಮಾಜದಲ್ಲಿ ಇಂದು ಜನರು ಯಾವುದೇ ಕಟ್ಟುಪಾಡುಗಳಿಲ್ಲದೆ ಜೀವನ ನಡೆಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಡಾ.ಬಿ.ಆರ್.ಅಂಬೇಡ್ಕರ್ ಮುಂದಾಳತ್ವದಲ್ಲಿ ರಚನೆಯಾದ ಸಂವಿಧಾನ. ನಮ್ಮ ಬದುಕಿನಲ್ಲಿ ಸಂವಿಧಾನ ಬಹಳಷ್ಟು ಮುಖ್ಯವಾಗಿದ್ದು, ಜನಪ್ರತಿನಿಧಿಯಾಗಿ ಸಮುದಾಯದ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ಜೊತೆಯಾಗಿರುತ್ತೇನೆ ಎಂದು ಭರವಸೆ ನೀಡಿದರು. ದೀಪಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು, ಜೀವನದಲ್ಲಿ ಸಾಧನೆ ಮಾಡಬೇಕೆಂದರೆ ಶಿಕ್ಷಕರ ಮಾರ್ಗದರ್ಶನ ಮುಖ್ಯ. ವಿದ್ಯಾರ್ಥಿಗಳು…
ಲೇಖಕ: admin
ಮಡಿಕೇರಿ ಜು.3 : ವಿಧಾನ ಪರಿಷತ್‌ನ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣ ಕಮಕನೂರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿ, ಶುಭ ಹಾರೈಸಿದರು.
ಬೆಂಗಳೂರು ಜು.3 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರ ಜಿಲ್ಲಾಡಳಿತ ರವೀಂದ್ರ ಕಲಾ ಕ್ಷೇತ್ರದಲ್ಲಿ ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ವೇದಿಕೆಯಲ್ಲಿ ನಾಡೋಜ ಡಾ.ಗೋ.ರು.ಚನ್ನಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಡಾ.ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ವಿರಾಜಪೇಟೆ ಜು.3 : ಸರಕಾರದ ಯೋಜನೆಗಳನ್ನು ಗ್ರಾಮಸ್ಥರು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು, ಆಗ ಮಾತ್ರ ಯೋಜನೆಯ ಉದ್ದೇಶ ನೆರವೇರಲು ಸಾಧ್ಯವಾಗುತ್ತದೆ ಎಂದು ಆರ್ಜಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಣಿ ಹೇಳಿದರು. ವಿರಾಜಪೇಟೆ ಬಳಿಯ ಆರ್ಜಿ ಗ್ರಾ.ಪಂ ವ್ಯಾಪ್ತಿಯ ಪೆರುಂಬಾಡಿ ಮತ್ತು ಆರ್ಜಿ ಗ್ರಾಮಸ್ಥರಿಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಸ್ಯೆಯ ಬಗ್ಗೆ ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿ ಸ್ವಚ್ಚತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಇದು ಗಾಂಧಿಜೀ ಅವರ ಕನಸಾಗಿತ್ತು ಎಂದ ಮಣಿ ಅವರು ಮೊದಲು ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಇತ್ತು. ಈಗ ಪಂಚಾಯಿತಿ ಸಮಿತಿಯನ್ನು ರಚನೆ ಮಾಡಿದ ನಂತರ ನೀರಿನ ಸಮಸ್ಯೆ ಇಲ್ಲ. ನೀರಿನ ಬಗ್ಗೆ ಸಾರ್ವಜನಿಕರಲ್ಲಿ ಪ್ರಮಾಣಿಕತೆ ಇರಬೇಕು. ನಾವುಗಳು ಅಂತರ್ಜಲ ನೀರನ್ನು ಉಳಿಸುವ ಮೂಲಕ ಪ್ರಕೃತಿಯನ್ನು ಉಳಿಸಿ ಬೆಳಸಬೇಕು. ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಪ್ರತಿಯೋಬ್ಬರು ಕಡಿಮೆ ಮಾಡಬೇಕೆಂದು ಸಭೆಗೆ ತಿಳಿಸಿದರು. ಸಭೆಯಲ್ಲಿದ್ದ ಪೆರುಂಬಾಡಿ ಗ್ರಾಮದ ಬಿ.ಆರ್.ಅನೀಲ್ ಕುಮರ್[ಹರೀಶ್] ಮಾತನಾಡಿ, ವಿರಾಜಪೇಟೆ ಪುರಸಭೆಯವರು ಟ್ಯಾಕ್ಟರ್‍ನಲ್ಲಿ ಪಟ್ಟಣದ ಕಸವನ್ನು…
ಮಡಿಕೇರಿ ಜು.3 : ಗುಡ್ಡೆಹೊಸೂರು-ಹಾರಂಗಿ ರಸ್ತೆಯ ಜಮೀನಿನಲ್ಲಿ ಮೂರು ವರ್ಷದ ಗಂಡು ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಮಹಮ್ಮದ್ ಫಿರ್ ಎಂಬವರಿಗೆ ಸೇರಿದ ತೋಟದಲ್ಲಿ ಚಿರತೆಯ ಮೃತದೇಹಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಉರುಳಿಗೆ ಸಿಲುಕಿ ಚಿರತೆ ಮೃತ ಪಟ್ಟಿರಬಹುದೆಂದು ಶಂಕಿಸಲಾಗಿದೆ.
ಮಡಿಕೇರಿ ಜು.4 : ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 21.58 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 66.11 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 342.28 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 845.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.50 ಮಿ.ಮೀ. ಕಳೆದ ವರ್ಷ ಇದೇ ದಿನ 117.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 537.26 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1236.49 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.83 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 30.73 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 240.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 692.44 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 50 ಮಿ.ಮೀ.…
ಮಡಿಕೇರಿ ಜು.1 : ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಸರಕಾರದ ಮೂಲಕ ರಾಜ್ಯದ ಹಲವು ವೈದ್ಯರಿಗೆ ಶ್ರೇಷ್ಠ ವೈದ್ಯ ಪ್ರಶಸ್ತಿಯನ್ನು ನೀಡಲಾಗಿದ್ದು, ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆಯಾಗಿರುವ ಮುಕ್ಕಾಟಿರ ಡಾ.ಗ್ರೀಷ್ಮ ಬೋಜಮ್ಮ ಅವರಿಗೂ ಈ ಪ್ರಶಸ್ತಿ ಲಭ್ಯವಾಗಿದೆ. ಉತ್ತಮ ಪ್ರಸೂತಿ ತಜ್ಞೆ ಎಂದು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗೂಂಡೂರಾವ್ ಪ್ರಶಸ್ತಿ ಪ್ರದಾನ ಮಾಡಿದರು. ಡಾ.ಗ್ರೀಷ್ಮಾ ಬೋಜಮ್ಮ ಅವರು ಕಳೆದ 2007ರಿಂದ ಗೋಣಿಕೊಪ್ಪಲು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಶ್ರೀಮಂಗಲ ಪ.ಪೂ ಕಾಲೇಜಿನ ಮಾಜಿ ಪ್ರಾಂಶುಪಲರಾದ ಕಟ್ಟೇರ ಎನ್.ಮೇದಪ್ಪ ಹಾಗೂ ಶಿಕ್ಷಕಿ ದಿವಂಗತ ಉಷಾಬಾಯಿ ಅವರ ಪುತ್ರಿ ಹಾಗೂ ಗೋಣಿಕೊಪ್ಪಲುವಿನಲ್ಲಿ ಖಾಸಗಿ ಆಸ್ಪತ್ರೆ ನಡೆಸುತ್ತಿರುವ ಮೂಳೆ ತಜ್ಞ ಮುಕ್ಕಾಟಿರ ಡಾ.ಸಂಜಯ್ ಪೊನ್ನಪ್ಪ ಅವರ ಪತ್ನಿ.
ಚೆಯ್ಯಂಡಾಣೆ, ಜು.3 : ಸರಕಾರಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿರಾಜಪೇಟೆ ವಲಯ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಸ್ಥಳೀಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಉತ್ತಪ್ಪ ಭರತ್ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ವಿರಾಜಪೇಟೆ ವಲಯ ಆರ್ ಎಫ್ ಓ ಕಳ್ಳಿರ ದೇವಯ್ಯ, ಫಾರೆಸ್ಟರ್ ಗಳಾದ ಅನಿಲ್, ಆನಂದ, ಅರುಣಾ ಹಾಗೂ ಕ್ಯಾಂಪ್ ಸಿಬ್ಬಂದಿಗಳಾದ ಸುರೇಶ್, ಭರತ್, ನಾಣಯ್ಯ, ಆರೋಗ್ಯ ಕೇಂದ್ರದ ಸಹಾಯಕಿ ರೋಹಿಣಿ, ಲ್ಯಾಬ್ ಟೆಕ್ನಿಷಿಯನ್ ಲೀಲಾವತಿ, ಸಿಬ್ಬಂದಿಗಳು ಹಾಜರಿದ್ದರು. ವರದಿ : ಅಶ್ರಫ್
ಸುಂಟಿಕೊಪ್ಪ ಜು.3 : ವಿದ್ಯಾರ್ಥಿಗಳು ಉತ್ಸಾಹ ಭರಿತರಾಗಿ ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರೆ, ತಮ್ಮ ಗುರಿಯನ್ನು ಲಾಭದಾಯಕವಾಗಿ ಮುಟ್ಟಲು ಸಾಧ್ಯವಾಗಲಿದೆ ಎಂದು ಸ್ವಸ್ಥ ಶಾಲೆಯ ಸಿ.ಬಿ.ಆರ್ ಸಂಯೋಜಕ ವ್ಯಕ್ತಿ ಮುರುಗೇಶ್ ಹೇಳಿದರು. ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭಿಕ ಉತ್ಸಾಹ ವ್ಯಕ್ತಿತ್ವ ವಿಕಸನ ಉಪನ್ಯಾಸದ ಕಾರ್ಯಕ್ರಮದಲ್ಲಿ ಸ್ವಸ್ಥ ಶಾಲೆಯ ಸಿ.ಬಿ.ಆರ್ ಸಂಯೋಜಕ ಶೈಕ್ಷಣಿಕ ಪೂರಕವಾದ ಹತ್ತು ಹಲವು ಚಟುವಟಿಕೆಗಳನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಿರ್ಮಿಸಿ ಪ್ರದರ್ಶಿಸಿದರು. ಯಾವುದೇ ಒಂದು ಗುರಿಯನ್ನು ತಲುಪ ಬೇಕಾದರೆ ಅಥವಾ ಕನಸನ್ನು ನನಸು ಮಾಡಿಕೊಳ್ಳಬೇಕಾದರೆ ಆರಂಭದಲ್ಲಿ ಉತ್ಸಾಹ ಉರುಪನ್ನು ಹೊಂದಿರಬೇಕು ಎಂದರು. ಜಾನಪದ ಗೀತೆಗಳನ್ನು ಹಾಡುವುದರ ಮೂಲಕ ವಿದ್ಯಾರ್ಥಿಗಳನ್ನು ಮನರಂಜಿಸಿದರು. ಕ್ರೀಡಾಪಟು ಸಚಿನ್ ತೊಂಡಲ್ಕರ್, ಲತಾ ಮಂಜೆಸ್ಕರ್, ಎ.ಆರ್.ರಹೆಮಾನ್ ಮುಂತಾದ ಸಾಧಕರ ಸಾಧನೆಯ ಬಗ್ಗೆ ವಿದ್ಯಾರ್ಥಿಗಲಿಗೆ ಮಾಹಿತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾರ್ಥಿಗಳು ತರಗಗತಿ ಕೋಣೆಯಲ್ಲಿ ಗ್ರಹಿಕಾ ಸಾಮರ್ಥವನ್ನು ಉತ್ತಮಗೊಳಿಸಿಕೊಳ್ಳಲು ಅವರುಗಳಿಗೆ ಸೂಕ್ತ ತರಬೇತಿಯ ಅವಶ್ಯಕವಾಗಿರುತ್ತದೆ. ವಿದ್ಯಾರ್ಥಿಗಳು ಆಸಕ್ತರಹಿತರಾಗಿ ಪಾಠಪ್ರವಚನಗಳ ಬಗ್ಗೆ ಒಲವನ್ನು ಹೊಂದಿದ್ದರೆ ಅವರುಗಳ ವಿದ್ಯಾರ್ಥಿ ಜೀವನವು…
ಸೋಮವಾರಪೇಟೆ ಜು.2 : ಅವಿರತ ಸಂಸ್ಥೆ ವತಿಯಿಂದ ಕಿರಗಂದೂರು ಸರ್ಕಾರಿ ಮಾದರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ವಿತರಿಸಿದರು. ಸಂಸ್ಥೆಯ ಸದಸ್ಯರಾದ ಸಾಹಿತಿ ಹಾಗು ವೈದ್ಯ ಶಾಲಿನಿ ಹಾಗು ನಿವೃತ್ತ ಶಿಕ್ಷಕ ಲಕ್ಷö್ಮಪ್ಪ ಅವರುಗಳು ನೋಟ್‌ಬುಕ್ ವಿತರಿಸಿದರು. ನಂತರ ನಿವೃತ್ತ ಶಿಕ್ಷಕ ಲಕ್ಷ್ಮಪ್ಪ ಮಾತನಾಡಿ, ಪಠ್ಯ ಪುಸ್ತಕಗಳನ್ನು ಸರ್ಕಾರ ವಿತರಿಸುತ್ತದೆ. ಬರೆಯುವ ಪುಸ್ತಕಗಳನ್ನು ನೀಡುತ್ತಿಲ್ಲ. ಇಂದಿಗೂ ಸಾಕಷ್ಟು ಬಡ ಮಕ್ಕಳಿಗೆ ಮಸ್ತಕಗಳನ್ನು ತೆಗೆದುಕೊಳ್ಳುವುದಕ್ಕೆ ಕಷ್ಟದ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಕಳೆದ ಹಲವು ವರ್ಷಗಂದ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ನೀಡುತ್ತಿದ್ದೇವೆ ಎಂದರು. ಇತ್ತಿಚಿನ ದಿನಗಳಲ್ಲಿ ಬಹುತೇಕ ಸರ್ಕಾರಿ ಶಾಲೆಗಳು ಮುಚ್ಚುವಂತಹ ಸ್ಥಿತಿಯಲ್ಲಿವೆ. ಸರ್ಕಾರಿ ಶಾಲೆಯಲ್ಲಿ ಓದಿದಂತಹ ಸಾಕಷ್ಟು ವಿದ್ಯಾರ್ಥಿಗಳು ಒಳ್ಳೆಯ ಹುದ್ದೆಗಳನ್ನು ಆಲಂಕರಿಸಿದ್ದಾರೆ. ವಿದ್ಯಾವಂತರಾದ ನಾವುಗಳು ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಸೇರಿಸಲು ಮತ್ತು ಆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ. ಅವಿರತ ಸಂಸ್ಥೆ ಕಳೆದ ಹದಿನೈದು ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಮಾಡುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರೌಢಶಾಲೆಯ…






