ಸುಂಟಿಕೊಪ್ಪ,ಜೂ.30 : ಏಳು ಗ್ರಾ.ಪಂ ಗಳನ್ನು ಒಳಗೊಂಡು ಸುಮಾರು 25 ಸಾವಿರ ಜನ ಸಂಖ್ಯೆಗೆ ಆಧಾರವಾಗಿರುವ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರದ ನಿಯಮಗಳ ಅಡಿಯಲ್ಲಿ ಮೇಲ್ದರ್ಜೆಗೇರಿಸಲು ಆದ್ಯತೆ ಮೇರೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಶಾಸಕ ಡಾ.ಮಂಥರ್‍ಗೌಡ ಭರವಸೆ ನೀಡಿದರು. ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಶಾಸಕರು ಆಸ್ಪತ್ರೆಯ ಆವರಣ ಸುತ್ತು ಪರಿಶೀಲಿಸಿ, ವೈದ್ಯಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ಆಸ್ಪತ್ರೆಯ ಹಿಂಭಾಗದಲ್ಲಿ ಬೆಳೆದು ನಿಂತಿರುವ ಕಾಡುಗಿಡ ಗಂಟಿಗಳನ್ನು ತೆಗೆಯುವಂತೆ ಸೂಚಿಸಿದರಲ್ಲದೆ 3 ದಿನಗಳ ಗಡವು ನೀಡಿ, ಜನರ ಆರೋಗ್ಯ ಕಾಪಾಡಬೇಕಿರುವ ಆರೋಗ್ಯ ಕೇಂದ್ರ ಹೀಗಿರುವುದು ಎಷ್ಟು ಸರಿಯೆಂದು ಅಸಾಮಾಧಾನ ವ್ಯಕ್ತಪಡಿಸಿದರು. ಸ್ವತಃ ವೈದ್ಯರಾಗಿರುವ ಶಾಸಕ ಡಾ.ಮಂಥರ್ ಗೌಡ ಆಸ್ಪತ್ರೆಯಲ್ಲಿನ ಹೊರರೋಗಿಗಳು ಮತ್ತು ಒಳ ರೋಗಿಗಳನ್ನು ಮಾತನಾಡಿಸಿ, ಅವರಲ್ಲಿ ಜ್ವರದಿಂದ ಬಳಲುತ್ತಿರುವವರ ಸ್ಥಿತಿ ಗತಿ ಏನೆಂಬುದನ್ನು ತಿಳಿದರು. ಇದೇ ಆರೋಗ್ಯ ಇಲಾಖೆಯ ಸಿಬ್ಬಂದಿಗಳಲ್ಲಿ ಅನಾರೋಗ್ಯ ಇರುವುದರ ಕುರಿತು ಮಾಹಿತಿ ಪಡೆದು, ಆರೋಗ್ಯ ಕೇಂದ್ರ ಅಶುಚಿತ್ವ ಕುರಿತು ಜಿಲ್ಲಾ ಕುಟುಂಬ ಕಲ್ಯಾಣ ಮತ್ತು…
ಲೇಖಕ: admin
ಮಡಿಕೇರಿ ಜೂ.30 : ಜಿಲ್ಲಾಡಳಿತ, ಎನ್‍ಡಿಆರ್‍ಎಫ್ ತಂಡ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರಾಕೃತಿಕ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಜುಲೈ, 1 ರಂದು ಬೆಳಗ್ಗೆ 11 ಗಂಟೆಗೆ ತಾಲ್ಲೂಕಿನ ಕೆ.ನಿಡುಗಣೆ ಪಂಚಾಯತ್ ವ್ಯಾಪ್ತಿಯ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಅಣಕು ಕಾರ್ಯಾಚರಣೆ ನಡೆಯಲಿದೆ. ಆದ್ದರಿಂದ ಹೆಬ್ಬೆಟ್ಟಗೇರಿ ಗ್ರಾಮದಲ್ಲಿ (ಕುಮಾರಸ್ವಾಮಿ ಬಡಾವಣೆಗೆ ಹೋಗುವ ರಸ್ತೆ) ನಡೆಯುವ ಅಣಕು ಕಾರ್ಯಾಚರಣೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ.
ಮಡಿಕೇರಿ ಜೂ.30 : ಇದೇ ಜು.1 ರಿಂದ 7 ರವರೆಗೆ ವನ ಮಹೋತ್ಸವ ಸಪ್ತಾಹ ಕಾರ್ಯಕ್ರಮ ಜರುಗಲಿದ್ದು, ಜು.1 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಆವರಣದಲ್ಲಿ ವನ ಮಹೋತ್ಸವ ಸಪ್ತಾಹ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಲಿದ್ದಾರೆ.
ಮಡಿಕೇರಿ ಜೂ.30 : ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆಯು ಜು.1 ರಂದು ಮಧ್ಯಾಹ್ನ 12.30 ಯಿಂದ 01.30 ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹಾಗೆಯೇ ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಜು.1 ರಂದು ಮಧ್ಯಾಹ್ನ 4 ರಿಂದ 05 ಗಂಟೆವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.
ಮಡಿಕೇರಿ ಜೂ.30 : ‘ಕುಂಡಾಮೇಸ್ತ್ರಿ’ ಯೋಜನೆಯ ಮೂಲಕ ಮಡಿಕೇರಿಗೆ ನೀರು ಸರಬರಾಜು ಮಾಡುವ ಜವಾಬ್ದಾರಿಯನ್ನು ಒಂದು ವರ್ಷಗಳ ಕಾಲ ಕರ್ನಾಟಕ ರಾಜ್ಯ ನೀರು ಸರಬರಾಜು ಮಂಡಳಿ(ಕೆಯುಡಬ್ಲುಎಸ್)ಗೆ ವಹಿಸಿಕೊಡುವ ಮಹತ್ವದ ನಿರ್ಣಯವನ್ನು ನಗರಸಭಾ ಸಾಮಾನ್ಯ ಸಭೆಯಲ್ಲಿ ಕೈಗೊಂಡಿದೆ. ಮಡಿಕೇರಿ ನಗರಸಭೆಯ ಸಭಾಂಗಣದಲ್ಲಿ ಚುನಾವಣಾ ನಂತರ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರ ಉಪಸ್ಥಿತಿಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತಲ್ಲದೆ, ಕೆಯುಡಬ್ಲ್ಯುಎಸ್‍ನ ಕುಡಿಯುವ ನೀರು ಸಂಪರ್ಕ ವ್ಯವಸ್ಥೆಯ 20 ಕೋಟಿ ವೆಚ್ಚದ ಯೋಜನೆಗೆ ಇದೇ ಸಂದರ್ಭ ಒಪ್ಪಿಗೆಯನ್ನು ನೀಡಲಾಯಿತು. ನಗರಸಭೆಯ ಎಸ್‍ಡಿಪಿಐ ಸದಸ್ಯ ಮನ್ಸೂರ್ ಮಾತನಾಡಿ, ಕುಂಡಾಮೇಸ್ತ್ರಿ ಯೋಜನೆಯಡಿ ಎರಡು 300 ಹೆಚ್‍ಪಿ ಪಂಪ್‍ಗಳು ಹದಗೆಟ್ಟು , ಮಡಿಕೇರಿ ನಗರದ ನಿರು ಸರಬರಾಜು ವ್ಯವಸ್ಥೆ ಕೆಲ ದಿನಗಳ ಕಾಲ ಹದಗೆಟ್ಟಿತ್ತೆಂದು ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭ ಸದಸ್ಯ ಕೆ.ಎಸ್.ರಮೇಶ್ ಅವರು, ಕುಂಡಾ ಮೇಸ್ತ್ರಿ ಯೋಜನೆಯಡಿ ಕೂಟುಹೊಳೆಗೆ ನೀರು ಪಂಪ್ ಮಾಡುವ ಎರಡು ಮೋಟಾರುಗಳು ಹಾಳಾಗಿದ್ದರು, ಅದನ್ನು ಅಧಿಕಾರಿಗಳು ಮತ್ತು…
ಮಡಿಕೇರಿ ಜೂ.30 : ವಿಶ್ವ 9 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕಾರಾಗೃಹದಲ್ಲಿ ಬಂದಿನಿವಾಸಿಗಳಿಗೆ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾ ಕಾರಾಗೃಹದ ಅಧೀಕ್ಷಕ ಸಂಜಯ್ ಜಿತ್ತಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಟಿ.ಡಿ.ಪುಟ್ಟರಂಗಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ಪಾಲ್ಗೊಂಡಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವ ಪಲ್ಲೇದ್, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‍ನ ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸಹ ಕಾರ್ಯದರ್ಶಿ ಎಚ್.ಆರ್.ಮುತ್ತಪ್ಪ, ಸ್ಥಾನಿಕ ಆಯುಕ್ತರಾದ ಅಜ್ಜಮಕ್ಕಡ ವಿನು ಕುಮಾರ್, ಕಾರ್ಯದರ್ಶಿ ಸ್ಥಳೀಯ ಸಂಸ್ಥೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ಧನಲಕ್ಷ್ಮಿ, ಯೋಗ ತರಬೇತಿದಾರರಾದ ಅಲಿಮ ಪಿ.ಎಚ್, ವಾಟೆಕಾಡು ಹಿರಿಯ ಪ್ರಾಥಮಿಕ ಶಾಲೆ ಸ್ಕೌಟ್ ಮಾಸ್ಟರ್ ಶಿಕ್ಷಕರು…
ಮಡಿಕೇರಿ ಜೂ.30 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಮಟ್ಟದಲ್ಲಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಹೊರತಂದಿರುವ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕವನ್ನು ಬಿಡುಗಡೆ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆ ಮಾಡಿ ಜಿಲ್ಲಾ ಮಟ್ಟದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಚಟುವಟಿಕೆ ಮತ್ತಿತರ ಬಗ್ಗೆ ಮಾಹಿತಿ ಪಡೆದರು. ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಜಿಲ್ಲೆಯಲ್ಲಿ 10 ಸಾವಿರಕ್ಕೂ ಹೆಚ್ಚು ಮಕ್ಕಳು ಸ್ವಚ್ಛತೆ, ಪರಿಸರ ಹೀಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿವಿಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇ ಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಹಾಗೂ ಗೈಡ್ಸ್ ಆಯುಕ್ತರಾದ ರಾಣಿ ಮಾಚಯ್ಯ, ಪ್ರಧಾನ ಕಾರ್ಯದರ್ಶಿ ಎಂ.ಎಂ.ವಸಂತಿ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸ್ಥಾನಿಕ ಆಯುಕ್ತರಾದ ಎಚ್.ಆರ್.ಮುತ್ತಪ್ಪ,…
ಮಡಿಕೇರಿ ಜೂ.30 : ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಮಡಿಕೇರಿ ನಗರದ ಹೃದಯ ಭಾಗ ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಬಿಳಿಗೇರಿ ಗ್ರಾ.ಪಂ ಮಾಜಿ ಸದಸ್ಯ ಮಂಡುವಂಡ ರಮೇಶ್ ಅಯ್ಯಪ್ಪ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಇಂದಿರಾ ಕ್ಯಾಂಟೀನ್ ನ್ನು ಪುನಶ್ಚೇತನಗೊಳಿಸಲು ಪಣ ತೊಟ್ಟಿದೆ. ಜಿಲ್ಲೆಯಲ್ಲೂ ಶಾಸಕರುಗಳಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕ್ಯಾಂಟೀನ್ ಗೆ ಕಾಯಕಲ್ಪ ನೀಡುವುದರೊಂದಿಗೆ ಬಡವರ ಅನುಕೂಲಕ್ಕಾಗಿ ಜಿಲ್ಲಾಸ್ಪತ್ರೆ ಬಳಿ ಮತ್ತೊಂದು ಇಂದಿರಾ ಕ್ಯಾಂಟೀನ್ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕೆಲವು ವರ್ಷಗಳ ಹಿಂದೆ ನಗರದ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಆರಂಭಗೊಂಡು ಬಡವರಿಗೆ ಕಡಿಮೆ ಖರ್ಚಿನಲ್ಲಿ ಊಟ, ಉಪಹಾರ ದೊರೆಯುತ್ತಿತ್ತು. ಆದರೆ ನಂತರದ ದಿನಗಳಲ್ಲಿ ಇಲ್ಲಿನ ಕಾರ್ಯಚಟುವಟಿಕೆ ಸ್ಥಗಿತಗೊಂಡು ಬಡವರು ಹಾಗೂ…
ಮಡಿಕೇರಿ ಜೂ.30 : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯ ವತಿಯಿಂದ 2023-24 ನೇ ಸಾಲಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ವೈದ್ಯಕೀಯ ಶುಶ್ರೂಷಕಿ(ಸ್ಟಾಪ್ ನರ್ಸ್) ಹುದ್ದೆಗೆ ಜುಲೈ, 5 ರಂದು ಬೆಳಗ್ಗೆ 10 ರಿಂದ ನೇರ ಸಂದರ್ಶನ ನಡೆಯಲಿದೆ. ಸ್ಟಾಪ್ ನರ್ಸ್ ಹುದ್ದೆಯು ತಾತ್ಕಾಲಿಕವಾಗಿದ್ದು, ತಿಂಗಳಿಗೆ ರೂ. 34,125 ವೇತನ ನೀಡಲಾಗುತ್ತದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಜುಲೈ, 05 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30 ಗಂಟೆವರೆಗೆ ಹಾಜರಾಗುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ವಿದ್ಯಾಲಯದ ವೆಬ್‍ಸೈಟ್ nvsjnv_kodagu ಹಾಗೂ ದೂ.ಸಂ.9447368470, 9380802179 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಜೂ.30 : ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸುಂಟಿಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜು.1 ರಂದು ಬೆಳಿಗ್ಗೆ 10:30 ಗಂಟೆಗೆ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಹಿಂದುಳಿದ ವರ್ಗದ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷರಾದ ಟಿ ಕೆ ಸಾಯಿ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಹಿರಿಯ ಸಲಹೆಗಾರರಾದ ಟಿ.ಪಿ ರಮೇಶ್ ಅವರ ಗೌರವ ಉಪಸ್ಥಿತಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ವಿಘ್ನೇಶ್ ಎಂ ಭೂತನಕಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಎ.ಮುರುಳಿಧರ್, ಮುಖ್ಯ ಭಾಷಣಕಾರರಾಗಿ ಸಂಘದ ಗೌರವ ಸಲಹೆಗಾರರಾದ ಶ್ರೀಧರ್ ನೆಲ್ಲಿತ್ತಾಯ, ಅತಿಥಿಗಳಾಗಿ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವೇಣುಗೋಪಾಲ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಸ್.ಜಾನ್ ಪಾಲ್ಗೊಳ್ಳಲಿದ್ದಾರೆ. ಪತ್ರಿಕಾ ದಿನಾಚರಣೆಯ ಅಂಗವಾಗಿ ಹಿರಿಯ ಪತ್ರಕರ್ತರಿಂದ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಹಿರಿಯ ಪತ್ರಕರ್ತರಾದ ಜಿ.ಕೆ…






