ನಾಪೋಕ್ಲು ಜೂ.30 : ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಮೂರ್ನಾಡು ಪೊಲೀಸ್ ಠಾಣಾ ಸಿಬ್ಬಂದಿ ಹನುಮಂತಪ್ಪ ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿ ಹದಿಹರೆಯದ ವಯಸ್ಸಿನವರು ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ವಿದ್ಯಾರ್ಜನೆ ಮಾಡಿ ಉತ್ತಮ ಪ್ರಜೆಯಾಗಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ದೇವಕಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಾಣಿ ಶ್ರೀ, ಮೂರ್ನಾಡು ಪೊಲೀಸ್ ಠಾಣಾ ಎಎಸ್ಐ ಅನಿಲ್ ಕುಮಾರ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ದಿಲೀಪ್, ಮಂಜುನಾಥ್ ಆಗಮಿಸಿದರು. ಈ ಸಂದರ್ಭ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಲೇಖಕ: admin
ನಾಪೋಕ್ಲು ಜೂ.30 : ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ ಮೌಲ್ಯಾಧಾರಿತವಾದ ಜೀವನ ನಡೆಸಲು ನೆರವಾಗಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಡಾ. ಸುಲೋಚನಾ ನಾರಾಯಣ ಹೇಳಿದರು. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಕಾ ಮಟ್ಟವನ್ನು ಹಂತಹಂತವಾಗಿ ಬೆಳೆಸುತ್ತಾ ಹೋಗಬೇಕು. ವಿದ್ಯಾರ್ಥಿ ಸಂಘದ ನಾಯಕರು ಎಲ್ಲರನ್ನೂ ಪ್ರತಿನಿಧಿಸುವಂತಿರಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರೆಯುವ ಅವಕಾಶವನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಸಾಗಬೇಕು ಎಂದ ಸುಲೋಚನಾ, ವ್ಯಕ್ತಿ ಗೌರವ ಬಹಳ ಪ್ರಮುಖವಾದದ್ದು. ಸಮಾಜದಲ್ಲಿ ಉತ್ತಮ ಸ್ಥಾನಮಾನವನ್ನು ಹೊಂದಬೇಕಾದರೆ ವ್ಯಕ್ತಿ ಗೌರವವನ್ನು ಕಾಪಾಡಿಕೊಳ್ಳುವುದು ಅಗತ್ಯ. ಜೀವನದಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಶಾರದಾ ಅಪ್ಪಣ್ಣ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಕರ್ತವ್ಯ ಪರರಾಗಿ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕಲಿಯಂಡ ಹ್ಯಾರಿ ಮಂದಣ್ಣ,…
ನಾಪೋಕ್ಲು ಜೂ.30 : ದಾನಿಗಳಿಂದ ಸಂಗ್ರಹಿಸಿದ 13 ಲಕ್ಷ ರೂ.ನಲ್ಲಿ ನಿರ್ಮಿಸಲಾಗಿರುವ ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ಅರುವತ್ತೋಕ್ಲುವಿನ ಶ್ರೀ ಮಹಾ ವಿಷ್ಣು ದೇವಾಲಯದ ನೂತನ ಗೋದಾಮು ಮತ್ತು ಅಡುಗೆ ಕೋಣೆ ಕಟ್ಟಡದವನ್ನು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಪೂಜಾರಿರ ಮಾದಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕಟ್ಟಡದ ಕೆಲಸ ಕಾರ್ಯಗಳಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದಿಸಿ ಶುಭ ಕೋರಿದರು. ದೇವಾಲಯದ ಆಡಳಿತ ಮಂಡಳಿ ಸದಸ್ಯ ಚೆರುಮಾಡಂಡ ಸತೀಶ್ ಸೋಮಣ್ಣ ಮಾತನಾಡಿ, ಕಟ್ಟಡ ನಿರ್ಮಾಣದ ಖರ್ಚು ವೆಚ್ಚಗಳ ಬಗ್ಗೆ ಹಾಗೂ ಮುಂದೆ ದೇವಾಲಯಕ್ಕೆ ಅವಶ್ಯಕವಾಗಿರುವ ಕೆಲಸ ಕಾರ್ಯಗಳ ಬಗ್ಗೆ ಮಾತನಾಡಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ಸಂದರ್ಭ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸಹಕರಿಸಿದ ದಾನಿಗಳಿಗೆ ಹಾಗೂ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರಾದ ತಿಲಾಕ್ಷ ಅವರುಗಳನ್ನು ಫಲ ತಾಂಬೂಲ ಕಿರುಕಾಣಿಕೆ ನೀಡಿ ಗೌರವಿಸಲಾಯಿತು. ಇದಕ್ಕೂ ಮೊದಲು ಬೆಳಗ್ಗೆ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನವನ್ನು ದೇವಾಲಯದ ಅರ್ಚಕ ಪ್ರಸಾದ್ ಭಟ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ದೇವಾಲಯದ…
ನಾಪೋಕ್ಲು ಜೂ.30 : ನಾಪೋಕ್ಲು ಸೇರಿದಂತೆ ಸುತ್ತಮುತ್ತಲಿನ ಮಸೀದಿಗಳಲ್ಲಿ ತ್ಯಾಗ ಬಲಿದಾನದ ಸಂದೇಶ ಸಾರುವ ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಮುಸ್ಲಿಂ ಸಮುದಾಯ ಬಾಂಧವರು ಆಚರಿಸಿದರು . ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಬಕ್ರೀದ್ ಹಬ್ಬವು ಒಂದಾಗಿದೆ. ಬೆಳಿಗ್ಗೆ ಸ್ಥಳೀಯ ಪಟ್ಟಣದ ಮುಯ್ಯದ್ದಿನ್ ಜುಮ್ಮಾ ಮಸೀದಿಯಲ್ಲಿ ಹಬ್ಬದ ಪ್ರಯುಕ್ತ ವಿಶೇಷ ಸಾಮೂಹಿಕ ಪ್ರಾರ್ಥನೆ , ನಮಾಜ್ ನೆರವೇರಿಸಿದರು. ಈ ಸಂದರ್ಭ ಧರ್ಮ ಗುರುಗಳಾದ ಅಶ್ರಫ್ ಅನ್ಸಾರಿ ವಿಶೇಷ ಪ್ರಾರ್ಥನೆ ನೆರವೇರಿಸಿ ಬಳಿಕ ದಿನದ ಮಹತ್ವ ಹಾಗೂ ಧರ್ಮ ಸಂದೇಶ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಮಾತ್ ಆಡಳಿತ ಮಂಡಳಿ ಅಧ್ಯಕ್ಷ ಪಿ.ಎಂ.ಸಲೀಂ ಹ್ಯಾರಿಸ್, ಉಪ ಅಧ್ಯಕ್ಷ ರಶೀದ್, ಕಾರ್ಯದರ್ಶಿ ಅಹಮದ್ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು. ಇದೇ ರೀತಿ ಎಮ್ಮೆಮಾಡು, ಪಡಿಯಾಣಿ, ಕುಂಜಿನ, ಕೊಳಕೇರಿ, ಕೊಟ್ಟಮುಡಿ, ಎಡಪಾಲ, ಕಿಕ್ಕೆರೆ ಸೇರಿದಂತೆ ವಿವಿಧ ಮಸೀದಿಗಳಲ್ಲಿ ನಮಾಜ್, ಪ್ರಾರ್ಥನೆಯೊಂದಿಗೆ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸದಸ್ಯರು ಶ್ರದ್ಧಾ ಭಕ್ತಿಯಿಂದ ಬಕ್ರಿದ್ ಹಬ್ಬವನ್ನು ವೈಶಿಷ್ಟ್ಯವಾಗಿ…
ಮಡಿಕೇರಿ ಜೂ.29 : ತಮಿಳುನಾಡಿನಲ್ಲಿ ಮಾರಾಟ ಮಾಡಲು ಬೆಂಗಳೂರಿನಿಂದ ರಕ್ತ ಚಂದನ ಮರವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಮೂವರನ್ನು ಕೊಳ್ಳೆಗಾಲ ನಗರದ ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿದೆ. ಬೆಂಗಳೂರಿನ ವಿಜಯನಗರದ ನಿವಾಸಿ ಅರುಣ್ ಕುಮಾರ್ (26), ಪಂಡಿತರ ಪಾಳ್ಯ ನಿವಾಸಿ ಆನಂದ್ (46) ಹಾಗೂ ತುಮಕೂರಿನ ಸೋಮೇಶ್ವರಪುರಂನ ಮುಸ್ತಫ ( 52) ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರು ಕಡೆಯಿಂದ ಕೊಳ್ಳೇಗಾಲಕ್ಕೆ ಆಗಮಿಸುತ್ತಿದ್ದಂತೆ ಕಾರನ್ನು ತಡೆದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ 17.04 ಲಕ್ಷ ರೂ. ಮೌಲ್ಯದ ರಕ್ತ ಚಂದನ ಮರದ ತುಂಡುಗಳು, 3 ಮೊಬೈಲ್, 1 ಕಾರು ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.
ಸೋಮವಾರಪೇಟೆ ಜೂ.29 : ಬಕ್ರೀದ್ ಹಬ್ಬವನ್ನು ಸೋಮವಾರಪೇಟೆ ವ್ಯಾಪ್ತಿಯಲ್ಲಿ ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಿಸಿದರು. ಸಮೀಪದ ಕಲ್ಕಂದೂರು ಜುಮಾ ಮಸೀದಿಯಲ್ಲಿ ಖತೀಬರಾದ ಹಸೈನಾರ್ ಮದನಿ ಉಸ್ತಾದ್ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ನಂತರ ಖಬರಸ್ಥಾನದಲ್ಲಿ ಝಿಯಾರತ್ ಪ್ರಾರ್ಥನೆ ನೆರವೇರಿತು. ಹೊಸತೋಟ ಜಾಮಿಯಾ ಮಸೀದಿಯಲ್ಲಿ, ಬಜೆಗುಂಡಿ ಖಿಳಾರಿಯಾ ಮಸೀದಿ, ಪಟ್ಟಣದ ಜಲಾಲಿಯಾ ಮಸೀದಿಗಳಲ್ಲಿ ದಿನದ ಅಂಗವಾಗಿ ವಿಶೇಷ ಪ್ರಾರ್ಥನೆಗಳು ನಡೆದವು.
ಮಡಿಕೇರಿ ಜೂ.29 : ವಿರಾಜಪೇಟೆ ನಗರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಖಾಸಗಿ ಬಸ್ ನಿಲ್ದಾಣದ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ವಿರಾಜಪೇಟೆ ಸುಂಕದಕಟ್ಟೆ ನಿವಾಸಿಗಳಾದ ಎಸ್.ಹರೀಶ್ (48), ಎಸ್.ಸಂತೋಷ್ (39) ಹಾಗೂ ಎಸ್.ಪಿ.ದಿಕ್ಷೀತ್ (23) ಎಂಬುವವರನ್ನು 127 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ಮೋಹನ್ ಕುಮಾರ್, ಸಿಪಿಐ ಬಿ.ಎಸ್.ಶಿವರುದ್ರ, ಪಿಎಸ್‌ಐ ಶ್ರೀಧರ್.ಸಿ.ಎ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ::: ಮಾಹಿತಿ ನೀಡಿ ::: ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡು ಬಂದಲ್ಲಿ…
ಮಡಿಕೇರಿ ಜೂ.29 : ಕಳೆದ ವಿಧಾನಸಭಾ ಚುಣಾವಣೆಯಲ್ಲಿನ ಬಿಜೆಪಿ ಸೋಲಿನ ವಿಮರ್ಶೆ ಮಾಡುತ್ತಲೆ ಇದ್ದಲ್ಲಿ ನಾವು ಅಲ್ಲೆ ಉಳಿದು ಬಿಡುತ್ತೇವೆ. ಸೋಲನ್ನು ಮರೆತು ಮುಂದಿನ ಲೋಕಸಭಾ ಚುನಾವಣೆಯನ್ನು ಗೆಲ್ಲಲು ಶ್ರಮಿಸೋಣ ಎಂದು ಬಿಜೆಪಿ ಪ್ರಮುಖ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಕರೆ ನೀಡಿದ್ದಾರೆ. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ‘ಬಿಜೆಪಿ ಕಾರ್ಯಕರ್ತರ ಸಮಾವೇಶ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಕಾರ್ಯಕರ್ತರು ಬಿಜೆಪಿ ಸೋಲಿನ ವಿಮರ್ಶೆಯಲ್ಲಿ ತೊಡಗಿದ್ದಾರೆ. ಮೊದಲು ಇದಕ್ಕೆ ಪೂರ್ಣವಿರಾಮ ಹಾಕಿ, ಮುಂದೆ ಏನು ಎನ್ನುವುದರತ್ತ ಚಿಂತನೆ ಹರಿಸೋಣವೆಂದು ತಿಳಿಸಿದರು. ಬಿಜೆಪಿ ಸರ್ಕಾರ ಮಾಡಿರುವ ಜನಪರ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವಲ್ಲಿ ನಾವು ವಿಫಲರಾಗಿದ್ದೇವೆ. ಕೇವಲ ‘ಮೋದಿ’ ಹೆಸರನ್ನು ಹೇಳುತ್ತಾ ಹೋದರೆ ಮತ ಬರಲಾರದು. ಮೋದಿ ಅವರು ಈ ರಾಷ್ಟ್ರಕ್ಕೆ ನೀಡಿದ ಕೊಡುಗೆ, ಮಾಡಿರುವ ಮಹತ್ತರ ಕಾರ್ಯಗಳ ಮೇಲೆ ಮತಗಳು ಬರುತ್ತದೆ ಎಂದರು. ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದೆ. ಈ ಗೆಲುವಿನೊಂದಿಗೆ ಕಾಂಗ್ರೆಸ್ ಒಂದು ಗೆರೆ ಎಳೆದಿದೆ. ಮುಂಬರುವ…
ಮಡಿಕೇರಿ ಜೂ.29 : ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳು ಮುಂದಿನ ಸಾಲಿನ ಲೋಕಸಭಾ ಚುನಾವಣೆಯವರೆಗೆ ಮಾತ್ರ ಚಾಲ್ತಿಯಲ್ಲಿರಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ನಡೆದ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸುವ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು. ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಮಾತ್ರ ಜಾರಿಯಾಗಿದ್ದು, ಅದೂ ಸಮರ್ಪಕವಾಗಿಲ್ಲ. ಇನ್ನು ಪ್ರತಿ ಮನೆಯ ಮಹಿಳೆಯರಿಗೆ 2 ಸಾವಿರ ರೂ., ನಿರುದ್ಯೋಗಿಗಳಿಗೆ 3 ಸಾವಿರ, ಪ್ರತಿ ಮನೆಗೆ 200 ಯೂನಿಟ್ ಗ್ಯಾರಂಟಿಗಳು ಇನ್ನೂ ಜಾರಿಯಾಗಿಲ್ಲ, ಇವೆಲ್ಲ ಗೊಂದಲದ ಗೂಡಾಗಿದೆ ಎಂದು ಟೀಕಿಸಿದರು. ಪ್ರತಿ ಪಡಿತರ ಚೀಟಿ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿಯನ್ನು ನೀಡಲು ಇನ್ನೂ ಸಾಧ್ಯವಾಗಿಲ್ಲ. ಆದರೆ ಸಿದ್ದರಾಮಯ್ಯ ಅವರ ಈ ಅಕ್ಕಿ ಯೋಜನೆಯಿಂದ ಇಲ್ಲಿಯವರೆಗೆ ಪಡಿತರದಾರರಿಗೆ ದೊರಕುತ್ತಿದ್ದ 5 ಕೆ.ಜಿ. ಅಕ್ಕಿ ಕೇಂದ್ರದ ಮೋದಿ ನೇತೃತ್ವದ ಸರ್ಕಾರ ನೀಡುತ್ತಿದ್ದುದು…
ಕುಶಾಲನಗರ ಜೂ.29 : ಕುಶಾಲನಗರ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ನೂತನ ಅಧ್ಯಕ್ಷ ರಾಗಿ ಸುನೀತಾ ಮಹೇಶ್, ಕಾರ್ಯದರ್ಶಿಯಾಗಿ ಕೆ.ಎಸ್ ಶರ್ಲಿ , ಖಜಾಂಜಿಯಾಗಿ ರಿಚರ್ಡ್ ಡಿಸೋಜ ಅಧಿಕಾರ ಸ್ವೀಕರಿಸಿದರು. ರೋಟರಿ ಮಾಜಿ ಜಿಲ್ಲಾ ರಾಜ್ಯಪಾಲ ಎಂ.ಎಂ.ಸುರೇಶ್ ಚಂಗಪ್ಪ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಿಳೆಯರಿಗೆ ಅಧ್ಯಕ್ಷ ಸ್ಥಾನ ಲಭಿಸಿದ ಕಾರಣ ಈ ಬಾರಿ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದಂತೆ ಆಗಿದೆ. ಮಹಿಳೆಯರು ತಮ್ಮ ಬುದ್ಧಿ ಶಕ್ತಿ ಪ್ರದರ್ಶಿಸುವ ಮೂಲಕ ಕುಶಾಲನಗರ ರೋಟರಿ ಕ್ಲಬ್ ಅನ್ನು ಇತರೆ ಕ್ಲಬ್ ಗಳಿಗೆ ಮಾದರಿಯಾಗಿ ರೂಪಿಸಬೇಕು ಎಂದು ಹೇಳಿದರು. ರೋಟರಿ ಕ್ಲಬ್ ಸಮಾಜ ಸೇವೆಗೆ ಮಾದರಿಯಾಗಿದೆ. ದುರ್ಬಲ ಹಾಗೂ ಬಡ ವಿದಾರ್ಥಿಗಳ ಏಳಿಗೆಗಾಗಿ ರೋಟರಿ ಸಂಸ್ಥೆ ಶ್ರಮಿಸುತ್ತಿದೆ. ಎಸ್ಎಸ್ಎಲ್ಸಿ, ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಿರುವುದು ಶ್ಲಾಘನೀಯ ಎಂದರು. ಸಹಾಯಕ ರಾಜ್ಯಪಾಲ ಎಂ.ಡಿ…






