ಲೇಖಕ: admin

ಮಡಿಕೇರಿ ಜೂ.28 : ಮಂಗಳೂರು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವಿದ್ಯಾರ್ಥಿ ಎನ್.ಪ್ರಿಣಿತ್ ಸುಬ್ಬಯ್ಯ ಮಂಡಿಸಿದ ‘ಎಲೆಕ್ಟ್ರೋ ಅನಾಲಿಟಿಕಲ್ ಮೆಥಡಾಲಜಿ ಫಾರ್ ದಿ ಡಿಟರ್ಮಿನೇಶನ್ ಆಫ್ ಎಲೆಕ್ರೋಆಕ್ಟಿವ್ ಸ್ಪೀಸೀಸ್ ಯೂಸಿಂಗ್ ಕೆಮಿಕಲಿ ಮಾಡಿಫೈಡ್ ಕಾರ್ಬನ್ ಪೇಸ್ಟ್ ಎಲೆಕ್ಟೋಡ್’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‍ಡಿ ಪದವಿ ನೀಡಿ ಗೌರವಿಸಿದೆ. ಹಾಗೆಯೇ ಮಂಗಳೂರು ವಿಶ್ವವಿದ್ಯಾನಿಲಯದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ವಿದ್ಯಾರ್ಥಿ ಎನ್.ಹರೀಶ ಮಂಡಿಸಿದ ‘ಡೆವಲಪ್ಮೆಂಟ್ ಆಫ್ ಎಲೆಕ್ಟ್ರೋಕೆಮಿಕಲ್ ಸೆನ್ಸಾರ್ ಫಾರ್ ದ ಎಲೆಕ್ಟ್ರೋಕ್ಯಾಟಲೈಟಿಕ್ ಇನ್ವೆಸ್ಟಿಗೇಶನ್ ಆಫ್ ಬಯಲಾಜಿಕಲಿ ಆಕ್ಟಿವ್ ಮಾಲಿಕ್ಯೂಲ್ಸ್’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್‍ಡಿ ಪದವಿ ನೀಡಿ ಗೌರವಿಸಿದೆ. ಇವರು ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜೆ.ಜಿ.ಮಂಜುನಾಥ ಅವರ ಮಾರ್ಗದರ್ಶನದಲ್ಲಿ ತಮ್ಮ ಪ್ರಬಂಧ ಮಂಡಿಸಿದ್ದರು. ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಡಿಕೇರಿ ಜೂ.28 : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಜೂನ್, 30 ರಂದು ಬೆಳಗ್ಗೆ 11 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ವಿಜಯ ತಿಳಿಸಿದ್ದಾರೆ.   

Read More

ಮಡಿಕೇರಿ ಜೂ.28 : ಅಂಚೆ ಅದಾಲತ್‍ನ ಸಭೆಯು ಜೂನ್, 30 ರಂದು ಬೆಳಗ್ಗೆ 11.30 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ ಸಿದ್ದಾಪುರ ರಸ್ತೆ ಅಶೋಕಪುರದಲ್ಲಿ ನಡೆಯಲಿದೆ ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಜೂ.28 : ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್  ತಿಳಿಸಿದ್ದಾರೆ.

Read More

ಮಡಿಕೇರಿ ಜೂ.28 : ಗ್ರಾಹಕರ ವ್ಯಾಜ್ಯಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಜು.8 ರಂದು ಲೋಕ್ ಅದಾಲತ್ ನಡೆಯಲಿದೆ. ಆ ದಿನದಂದು ಸಂಬಂಧಪಟ್ಟವರು ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ಗುರುತಿಸಿಕೊಂಡು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ಆಡಳಿತಾಧಿಕಾರಿ ಹಾಗೂ ಸಹಾಯಕ ರಿಜಿಸ್ಟ್ರಾರ್ ಶಾರದ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.28 : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಗಮನಕ್ಕೆ ತರುವಂತಹ ಪತ್ರಗಳು, ಅರೆ ಸರ್ಕಾರಿ ಪತ್ರಗಳು, ಇನ್ನಿತರ ಯಾವುದೇ ಮುಖ್ಯವಾದ ಪತ್ರಗಳನ್ನು ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ, ಕೆಎಸ್‍ಆರ್‍ಟಿಸಿ ಬಸ್ ಡಿಪೋ ಹತ್ತಿರ, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೆಂಕಟ್ ರಾಜಾ ತಿಳಿಸಿದ್ದಾರೆ.

Read More

ಮಡಿಕೇರಿ ಜೂ.28 : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2023-24 ನೇ ಸಾಲಿನಲ್ಲಿಯೂ ಜಾರಿಯಲ್ಲಿರುತ್ತದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಬನಾ ಎಂ.ಶೇಕ್   ತಿಳಿಸಿದ್ದಾರೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹೇಳಿದ್ದಾರೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದ್ದು, ವಿಮಾ ಮೊತ್ತವು ಒಂದೇ ಆಗಿದೆ ಎಂದು ವಿವರಿಸಿದ್ದಾರೆ. ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ…

Read More

ಮಡಿಕೇರಿ ಜೂ.28 : ಪ್ರಕೃತಿಯ ಬಗ್ಗೆ ಮಕ್ಕಳಿಗೆ ಕಾಳಜಿ ಮತ್ತು ಪ್ರೀತಿ ಹೆಚ್ಚಾಗಬೇಕಾದರೆ ವರ್ಷಕ್ಕೊಮ್ಮೆಯಾದರೂ ಶಿಕ್ಷಣ ಸಂಸ್ಥೆಗಳಿಂದ ಹಾಗೂ ಅರಣ್ಯ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ಕಾಡು ಪರಿಚಯಿಸುವ ಕೆಲಸವಾಗಬೇಕು ಎಂದು ಸಮಾಜ ಸೇವಕ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು. ವಿರಾಜಪೇಟೆ ತಾಲ್ಲೋಕು ಪತ್ರಕರ್ತರ ಸಂಘದ ವತಿಯಿಂದ ನಗರದ ಕಾವೇರಿ ಕಾಲೇಜಿನಲ್ಲಿ ಏರ್ಡಿಸಲಾಗಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿ ಒಂದು ಅದ್ಭುತವಾದ ಶಕ್ತಿ. ಇಂದಿನ ಯುವಜನತೆ ಪ್ರಕೃತಿಯ ಮಹತ್ವವನ್ನು ಚೆನ್ನಾಗಿ ಅರಿಯಬೇಕು. 1950 ರ ಸುಮಾರಿಗೆ ಮುನ್ಷಿಯವರು ವನಮಹೋತ್ಸವ ಕಾರ್ಯಕ್ರಮವನ್ನು ಆರಂಭ ಮಾಡಿದರು. ಮಳೆಗಾಲದ ಆರಂಭದಲ್ಲಿ ಗಿಡಗಳನ್ನು ನೆಡುವುದರಿಂದ ಚೆನ್ನಾಗಿ ಬೆಳೆದು ಪ್ರಕೃತಿಯ ಶಕ್ತಿಯನ್ನು ಹೆಚ್ಚಿಸುತ್ತವೆ. ಕಾಡು ಇಂದು ಅಲ್ಪಪ್ರಮಾಣದಲ್ಲಿ ನಮ್ಮ ನಡುವೆ ಇದೆ. ಮಕ್ಕಳಿಗೆ ಕಾಡಿನ ಬಗ್ಗೆ ಆಸಕ್ತಿ ಮೂಡಿಸುವುದರಿಂದ ಭವಿಷ್ಯದಲ್ಲಿ ನಾವು ಪ್ರಕೃತಿಯ ರಕ್ಷಣೆಯ ಹೊಣೆಗಾರಿಕೆಯನ್ನು ಅವರಿಗೆ ಕಲಿಸಬಹುದು ಎಂದು ಅಭಿಪ್ರಾಯಪಟ್ಟರು. ಸಾಮಾಜಿಕ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಮಧುಕುಮಾರ್ ಮಾತನಾಡಿ, ವನಮಹೋತ್ಸವವನ್ನು ಹಮ್ಮಿಕೊಳ್ಳುವುದರ…

Read More

ವಾಷಿಂಗ್ಟನ್ : ‘ಕಾಂತಾರ’ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದರು. ರಿಷಬ್ ಶೆಟ್ಟಿ ತಮ್ಮ ಪತ್ನಿ ಪ್ರಗತಿ ಶೆಟ್ಟಿ ಜೊತೆಗೂಡಿ ವಾಷಿಂಗ್ಟನ್‌ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ ತೆರಳಿ ಪ್ರಶಸ್ತಿ ಸ್ವೀಕರಿಸಿದರು. ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಹನಿಯೊಳಗೊಂದು ಸಾಗರವೇ ಇರುವಂತೆ, ಕನ್ನಡವನ್ನು ಹೃದಯದಲ್ಲಿಟ್ಟುಕೊಂಡು ದೂರದ ಅಮೇರಿಕಾದಲ್ಲಿ ನೆಲೆಸಿರುವ ಸಹಸ್ರಾರು ಹೆಮ್ಮೆಯ ಕನ್ನಡಿಗರ ಸಮ್ಮುಖದಲ್ಲಿ – ಸಹ್ಯಾದ್ರಿ ಕನ್ನಡ ಸಂಘದ ವತಿಯಿಂದ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿದ್ದಾರೆ. ಈ ಪ್ರೀತಿ ಮತ್ತು ಪ್ರೋತ್ಸಾಹಕ್ಕೆ ನಾನು ಸದಾ ಆಭಾರಿ ಎಂದು ಟ್ವಿಟರ್ ಮೂಲಕ ರಿಷಬ್ ಶೆಟ್ಟಿ ಧನ್ಯವಾದ ಸಲ್ಲಿಸಿದ್ದಾರೆ.

Read More

ನಾಪೋಕ್ಲು ಜೂ.29 : ಕಲ್ಪನೆಗಳಿಗೆ ಸೃಜನಶೀಲತೆಯ ಅಕ್ಷರ ಸೇರಿಸಿದಾಗ ಕಾವ್ಯವಾಗುತ್ತದೆ. ಕಾವ್ಯ ಮನೋವಿಕಾಸಕ್ಕೆ ಕಾರಣವಾಗುತ್ತದೆ ಎಂದು ಮಡಿಕೇರಿ ಮೆಡಿಕಲ್ ಕಾಲೇಜು ನಿವೃತ್ತ ಆಡಳಿತ ಅಧಿಕಾರಿ ಬಿದ್ದಾಟಂಡ ಮೇರಿ ನಾಣಯ್ಯ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಸಹಯೋಗದಲ್ಲಿ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ನಡೆದ “ಮಳೆಗಾಲದ ಕವಿಗೋಷ್ಠಿ” ಸಮಾರಂಭವನ್ನು ಜ್ಯೋತಿ ಬೆಳಗಿಸಿ ಕವನ ವಾಚಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಶ್ರೇಯಸ್ಸನ್ನು ಕಾಣುವಂತಾಗಬೇಕೆಂದು ಹೇಳಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುದಿಯ ನೆರವನ ರೇವತಿ ರಮೇಶ್ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಜಿಲ್ಲೆಯಲ್ಲಿ ಮಹಿಳಾ ಬರಹಗಾರರು ವಿರಳವಾಗಿದ್ದು, ಮಹಿಳೆಯರನ್ನು ಸಾಹಿತ್ಯ ಕ್ಷೇತ್ರದಲ್ಲಿ ಪ್ರೋತ್ಸಾಹಿಸಿ ಗುರುತಿಸುವ ಉದ್ದೇಶದಿಂದ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘವನ್ನು ಕಟ್ಟಲಾಯಿತು ಪ್ರತಿ ತಿಂಗಳು ಸಂಘದ ವತಿಯಿಂದ ಸಾಹಿತ್ಯ ಬರವಣಿಗೆ ಇಂತಹ ಕಾರ್ಯಕ್ರಮಗಳನ್ನು ಜಿಲ್ಲೆಯ ಎಲ್ಲೆಡೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.…

Read More