ಲೇಖಕ: admin

ಮಡಿಕೇರಿ ಜೂ.28 : ಮಣಿಪುರದಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಕೊಡಗು ಜಿಲ್ಲಾ ಕ್ರೈಸ್ತ ಸಮುದಾಯದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಸಂತ ಮೈಕಲರ ದೇವಾಲಯದಲ್ಲಿ ಜಮಾಯಿಸಿದ ಕ್ರೈಸ್ತ ಬಾಂಧವರು, ಚರ್ಚ್‍ನಲ್ಲಿ ಹಿಂಸಾಚಾರ ಕೊನೆಯಾಗಲು ಕೈಗೆ ಕಪ್ಪು ಪಟ್ಟಿ ಧರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಾಲಯದಿಂದ ಇಂದಿರಾಗಾಂಧಿ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿದರು. ಮೆರವಣಿಗೆಯುದ್ದಕ್ಕೂ ಮಣಿಪುರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅಲ್ಲಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆಗೆ ಆಗ್ರಹಿಸಿದರು. ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಹಿಂಸಾಚಾರ ಅಂತ್ಯಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಮೆರವಣಿಗೆಯಲ್ಲಿ ಶವಪೆಟ್ಟಿಗೆಯನ್ನು ಹೊತ್ತೊಯ್ಯುವ ಮೂಲಕ ದೌರ್ಜನ್ಯವನ್ನು ಖಂಡಿಸಲಾಯಿತು. ಈ ಸಂದರ್ಭ ಮಾತನಾಡಿದ ಕ್ರೈಸ್ತ ಮುಖಂಡ ಸುನಿಲ್ ಪತ್ರಾವೊ, ಮಣಿಪುರದಲ್ಲಿ ನಿರಂತರವಾಗಿ ಕ್ರೈಸ್ತರು, ಅವರ ಪ್ರಾರ್ಥನಾ ಮಂದಿರ, ಆಸ್ತಿಪಾಸ್ತಿಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ. ಅಲ್ಲಿನ ಚುನಾಯಿತ ಸರ್ಕಾರ ರಾಜ್ಯಧರ್ಮ ಪಾಲಿಸಲು ನಿಷ್ಕ್ರಿಯವಾಗಿದೆ. ಒಂದು ಕಣ್ಣಿಗೆ ಸುಣ್ಣ…

Read More

ಮಡಿಕೇರಿ ಜೂ.28 : ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಅರಕಲಗೋಡು ತಾಲ್ಲೂಕು ದಡ್ಡದಳ್ಳಿ ಗ್ರಾಮದ ನಿವಾಸಿ ಮಂಜು ಮಂಜುನಾಥ್ (25) ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯ ಶನಿವಾರಸಂತೆ ಹಾಗೂ ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳು ಕಳ್ಳತನವಾಗಿರುವ ಬಗ್ಗೆ ದೂರು ಬಂದಿದ್ದ ಹಿನ್ನೆಲೆ ಪೊಲೀಸರು ಆರೋಪಿಯ ಪತ್ತೆಗಾಗಿ ತನಿಖೆ ಕೈಗೊಂಡಿದ್ದರು. ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್‌ಪಿ ಆರ್.ಪಿ.ಗಂಗಾಧರಪ್ಪ ಹಾಗೂ ಶನಿವಾರಸಂತೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಪರಶಿವಮೂರ್ತಿ.ಎಸ್ ಅವರು ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆ ನಡೆಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ. ::: ಮಾಹಿತಿ ನೀಡಿ ::: ಯಾವುದೇ ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಜಿಲ್ಲಾ ಪೊಲೀಸ್ ಅಥವಾ ಸಮೀಪದ ಪೊಲೀಸ್…

Read More

ಸುಂಟಿಕೊಪ್ಪ ಜೂ.28 : ಪ್ರವಾಸಿಗರ ಟೆಂಪೋ ಟ್ರಾವಲರ್ ಹಾಗೂ ಕೂಲಿ ಕಾರ್ಮಿಕರನ್ನು ಕರೆತರುತ್ತಿದ್ದ ಜೀಪ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪ ಗದ್ದೆಹಳ್ಳ ತಿರುವಿನಲ್ಲಿ ನಡೆದಿದೆ. ಮಡಿಕೇರಿಯ ಅಬ್ಬಿಪಾಲ್ಸ್ ಸಮೀಪದ ತೋಟದಿಂದ ಕಾರ್ಮಿಕರನ್ನು ಸುಂಟಿಕೊಪ್ಪದ ಕಡೆಗೆ ಕರೆದುಕೊಂಡು ಬರುತ್ತಿದ್ದ ಜೀಪ್ ಹಾಗೂ ಮೈಸೂರಿನಿಂದ ಭಾಗಮಂಡಲ, ತಲಕಾವೇರಿಗೆ ಪ್ರವಾಸಿಗರು ಬರುತ್ತಿದ್ದ ಟೆಂಪೋ ಟ್ರಾವಲರ್ ನಡುವೆ ಡಿಕ್ಕಿ ಸಂಭವಿಸಿತು. ಘಟನೆಯಲ್ಲಿ ಜೀಪ್ ನಲ್ಲಿದ್ದ ಸುಂಟಿಕೊಪ್ಪದ ಕಾರ್ಮಿಕರಾದ ಮಂಜುನಾಥ, ರಾಮ, ಜೀಪ್ ಚಾಲಕ ಎನ್.ಮಂಜೇಶ, ಅಸ್ಸಾಂ ಮೂಲದ ಕಾರ್ಮಿಕರಾದ ನಿಸಾಬುಲ್, ಅಬುಸಮ, ಇಜಾರಿ, ಅಕ್ಲೀಮ್, ಅನಾರ್ ಹುಸೈನ್ ಹಾಗೂ ನೂರ್ ಜಾನ್ ಅವರುಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಟೆಂಪೋ ಟ್ರಾವಲರ್ ವಾಹನದಲ್ಲಿದ್ದ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಎಎಸ್‌ಐ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ…

Read More

ಮಡಿಕೇರಿ ಜೂ.28 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 21.33 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.93 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 289.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 648.24 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.97 ಮಿ.ಮೀ. ಕಳೆದ ವರ್ಷ ಇದೇ ದಿನ 25.15 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 438.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 879.48 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 18.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 216.74 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ ಕಳೆದ ವರ್ಷ 581.41 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ…

Read More

ಮಡಿಕೇರಿ ಜೂ.28 :  ನಮ್ಮ ಕೊಡಗು ಚಾರಿಟೇಬಲ್ ಟ್ರಸ್ಟ್  ವತಿಯಿಂದ ಕೊಡಮಾಡುವ 2023ನೇ ಸಾಲಿನ ಕೊಡಗು ಸೇವಾ ರತ್ನ ಪ್ರಶಸ್ತಿಗೆ ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಯ ಅಧ್ಯಕ್ಷ ವಿನು ಮತ್ತು ಬನವಾಸಿ ಕನ್ನಡಿಗ ಬಳಗದ ಜೈ ಕಿರಣ್, ಕಿರಣ್ಮಯಿ ಶರ್ಮ ಮತ್ತು ಶಮಂತ್ ಹೊಸಹೊಳಲು ಆಯ್ಕೆಯಾಗಿದ್ದಾರೆ. ಮಡಿಕೇರಿಯ ನಗರದ ರಾಜ್‍ದರ್ಶನ್ ಹೊಟೇಲ್ ಸಭಾಂಗಣದಲ್ಲಿ ನಡೆದ ನಮ್ಮ ಕೊಡಗು ಟ್ರಸ್ಟ್ ನ 5ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸಾಧಕರಿಗೆ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ಕೊಡಗು ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ  ನೌಶಾದ್ ಜನ್ನತ್ತ್ ಮಾತನಾಡಿ, ಕೊಡಗಿನಲ್ಲಿ ನಡೆದ  ಪ್ರಾಕೃತಿಕ ವಿಕೋಪದ ನಂತರ ಸಂತ್ರಸ್ತರು, ಆದಿವಾಸಿಗಳು, ಸರಕಾರಿ ಶಾಲೆ, ರಕ್ತ ಪೂರೈಕೆ ಮುಂತಾದ ಸಮಾಜ ಸೇವೆಯನ್ನು ಮಾಡುತ್ತಿರುವವರನ್ನು ಗುರುತಿಸಿ ಕೊಡಗು ಸೇವಾ ರತ್ನ ಪ್ರಶಸ್ತಿ ನೀಡುತ್ತಾ ಬಂದಿದ್ದು, ಈ ಬಾರಿ ನಾಲ್ವರಿಗೆ ನೀಡಲಾಗಿದೆ ಎಂದು ತಿಳಿಸಿದರು.

Read More

ಮಡಿಕೇರಿ ಜೂ.27 : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ, ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್/ ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಸಂಬಂಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ದ ಕೊನೆಯ ಸೆಮಿಸ್ಟರ್‍ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) 3 ವರ್ಷ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್ (ಪಿಜಿಡಿ-ಪಿಪಿಟಿ) 2 ವರ್ಷ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ(ವಿಜ್ಞಾನ), ಐಟಿಐ (ಫಿಟ್ಟರ್, ಟರ್ನರ್, ಮೆಕಾನಿಸ್ಟ್) ಮತ್ತು ಬಿಎಸ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು/ಹಾಜರಾದವರು…

Read More

ಮಡಿಕೇರಿ ಜೂ.28 : ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆ ಕಾರ್ಯಕ್ರಮವು ಶ್ರೀ ಶಕ್ತಿ ಅಸೋಷಿಯೇಷನ್, ಶಕ್ತಿದಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ, ಜ್ಞಾನ ಕಾವೇರಿ, ಚಿಕ್ಕಅಳುವಾರ, ಕೊಡಗು ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಯುವಕರು ವ್ಯಸನಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಆದ್ದರಿಂದ ಮಕ್ಕಳಲ್ಲಿ ಯುವಕ ಯುವತಿಯರಲ್ಲಿ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕಾಗಿದೆ. ಹಾಗೂ ಸಮಾಜದಲ್ಲಿ ತುಂಬಾ ವ್ಯಸನಕ್ಕೆ ಒಳಗಾದವರನ್ನು ಶಕ್ತಿಧಾಮ ಕೇಂದ್ರಕ್ಕೆ ದಾಖಲಿಸಿ ವ್ಯಸನಮುಕ್ತ ಚಿಕಿತ್ಸೆ ಪಡೆದುಕೊಳ್ಳಲು ಸಲಹೆ ನೀಡಿದರು. ಕೂಡ್ಲೂರು ಗ್ರಾಮಾಂತರ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪಿ.ಮೋಹನ್‍ರಾಜು ಅವರು ಮಾತನಾಡಿ ಮಾದಕ ವಸ್ತು ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮಗಳು ಬೀರುತ್ತದೆ. ಯುವಕ ಯುವತಿಯರು ಆಕರ್ಷಣೆ ಫ್ಯಾಸನ್, ಮೋಜು ಮಸ್ತಿಗಾಗಿ ಈ ವಸ್ತುಗಳ ಸೇವನೆಗೆ ಹೆಚ್ಚಾಗಿ ಬಲಿಯಾಗಿ ತಮ್ಮ ಜೀವನವನ್ನು ಹಾಳು…

Read More

ಮಡಿಕೇರಿ ಜೂ.27 : ಬೆಂಗಳೂರು ಕಟ್ಟಿದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಬೆಂಗಳೂರು ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾ ಒಕ್ಕಲಿಗರ ಸಂಘ ಮತ್ತು ಕೊಡಗು ಗೌಡ ಸಮಾಜಗಳ ಸಹಕಾರದಲ್ಲಿ ನಗರದ ಕೊಡಗು ಗೌಡ ಸಮಾಜದಲ್ಲಿ ಮಂಗಳವಾರ ನಡೆದ ನಾಡಪ್ರಭು, ಆದರ್ಶ ಆಡಳಿತಗಾರ ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು. ನಾಡಪ್ರಭು ಕೆಂಪೇಗೌಡರು ಕೆರೆ-ಕಟ್ಟೆಗಳು, ದೇವಸ್ಥಾನಗಳು, ಸ್ಮಾರಕಗಳನ್ನು ನಿರ್ಮಾಣ ಮಾಡಿ ಬೆಂಗಳೂರನ್ನು ಇಡೀ ವಿಶ್ವದಲ್ಲೇ ಮಾದರಿ ನಗರವಾಗಿ ನಿರ್ಮಿಸಿದರು ಎಂದು ನುಡಿದರು. ಕೆಂಪೇಗೌಡರ ಆಡಳಿತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಎಲ್ಲರಿಗೂ ಮಾದರಿಯಾದ ಆಡಳಿತವನ್ನು ನೀಡಿದ್ದಾರೆ. ಕೆಂಪೇಗೌಡರ ಆಡಳಿತ ಮತ್ತು ದೂರದೃಷ್ಟಿಯ ಬಗ್ಗೆ ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದು ನುಡಿದರು. `ಬಜೆಟ್ ಅಧಿವೇಶನ ನಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ…

Read More

ಮಡಿಕೇರಿ ಜೂ.27 : ನಾಡಿನ ಜೀವನದಿ, ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೇಟಿ ನೀಡಿ ಮಳೆಗಾಗಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಕಾವೇರಿಗೆ ಸಂಕಲ್ಪ ಕುಂಕುಮಾರ್ಚನೆ ಮೂಲಕ ವಿಶೇಷ ಪೂಜೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ನೆರವೇರಿಸಿದರು. ನಾಡಿನಲ್ಲಿ ಉತ್ತಮ ಮಳೆಯಾಗಿ ಸುಭೀಕ್ಷೆ ತರುವಂತಾಗಬೇಕು. ಹೆಚ್ಚಿನ ಮಳೆಯಿಂದ ಕೃಷಿ ಚಟುವಟಿಕೆ ಗರಿಗೆದರಬೇಕು. ಉತ್ತಮ ಮಳೆಯಾಗಿ ಆಹಾರ ಬೆಲೆಗಳು ಇಳಿಕೆ ಆಗಬೇಕು ಎಂದು ಸಚಿವರು ವಿಶೇಷ ಪ್ರಾಥನೆ ಸಲ್ಲಿಸಿದರು. ಇದೇ ಮೊದಲ ಬಾರಿಗೆ ತಲಕಾವೇರಿಗೆ ಭೇಟಿ ನೀಡಿದ್ದು, ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ರಾಜ್ಯ ಸಮೃದ್ಧವಾಗಲಿ ಎಂದು ತಾಯಿ ಕಾವೇರಿ ಮಾತೆಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು. ಶಾಸಕ ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಡಾ.ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಇತರರು…

Read More

ಮಡಿಕೇರಿ ಜೂ.27 : ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹಾಗೂ ಹುಲಿ ದಾಳಿಯಿಂದ ಜಿಲ್ಲೆಯ ಜನತೆ ಸಂಕಷ್ಟ ಅನುಭವಿಸುತ್ತಿದ್ದು, ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚಿಸಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ವನ್ಯ ಪ್ರಾಣಿಗಳ ಹಾವಳಿ ತಡೆಯುವಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ನಿರ್ದೇಶನ ನೀಡಿದರು. ಕಾಡಾನೆ ಹಾವಳಿ ಹಾಗೂ ಹುಲಿ ದಾಳಿ ನಿಯಂತ್ರಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿಸಲಾಗುವುದು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾಡಾನೆ ಹಾವಳಿ…

Read More